ಹೋಶೇಯ 9:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಎಫ್ರಾಯೀಮ್ಯರಿಗೆ ಘಾತವಾಗಿದೆ; ಅವರ ವಂಶಮೂಲವು ಒಣಗಿಹೋಗಿದೆ. ಅವರು ಫಲಹೀನರಾಗುವರು; ಹೌದು, ಅವರು ಮಕ್ಕಳನ್ನು ಹೆತ್ತರೂ ಅವರ ಗರ್ಭದ ಪ್ರಿಯಫಲವನ್ನು ಸಾಯಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಎಫ್ರಯಿಮಿಗೆ ಏಟು ಬಿದ್ದಿದೆ; ಅವರ ವಂಶದ ಬೇರು ಬತ್ತಿಹೋಗಿದೆ. ಅವರು ಫಲಹೀನರಾಗಿದ್ದಾರೆ. ಮಕ್ಕಳನ್ನು ಹೆತ್ತರೂ ಅವಳ ಕರುಳ ಕುಡಿಯನ್ನು ಕತ್ತರಿಸಿಹಾಕುವೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಎಪ್ರಾಯೀಮ್ಯರಿಗೆ ಘಾತವಾಗಿದೆ; ಅವರ ವಂಶಮೂಲವು ಒಣಗಿಹೋಗಿದೆ; ಅವರು ಫಲಹೀನರಾಗುವರು; ಹೌದು, ಅವರು ಮಕ್ಕಳನ್ನು ಹೆತ್ತರೂ ಅವರ ಗರ್ಭದ ಪ್ರಿಯಫಲವನ್ನು ಸಾಯಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಎಫ್ರಾಯೀಮ್ ಶಿಕ್ಷಿಸಲ್ಪಡುವುದು. ಅದರ ಬೇರು ಒಣಗುತ್ತಲಿದೆ. ಇನ್ನು ಅವರಿಗೆ ಮಕ್ಕಳಾಗದು. ಒಂದುವೇಳೆ ಮಕ್ಕಳಾದಲ್ಲಿ ಅವರ ದೇಹದಿಂದ ಬರುವ ಆ ಅಮೂಲ್ಯ ಶಿಶುವನ್ನು ನಾನು ಸಾಯಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಎಫ್ರಾಯೀಮು ಹೊಡೆತಕ್ಕೆ ಒಳಗಾಗಿದೆ. ಅವರ ಬೇರು ಒಣಗಿಹೋಗಿದೆ, ಅವರು ಫಲವನ್ನು ಕೊಡುವುದಿಲ್ಲ, ಅವರು ಹೆತ್ತರೂ ಅವರ ಗರ್ಭದ ಪ್ರಿಯಕರವಾದ ಫಲವನ್ನು ಸಹ ನಾನು ಕೊಲ್ಲುವೆನು. ಅಧ್ಯಾಯವನ್ನು ನೋಡಿ |