Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 9:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನಿಗೆ ದ್ರಾಕ್ಷಾರಸವನ್ನು ನೈವೇದ್ಯವಾಗಿ ಸುರಿಯರು, ಅವರ ಯಜ್ಞಗಳು ಆತನಿಗೆ ಮೆಚ್ಚಿಕೆಯಾಗುವುದಿಲ್ಲ. ಅವರ ಆಹಾರವು ಸತ್ತವರ ಮನೆಯ ಆಹಾರದಂತಿರುವುದು; ಅದನ್ನು ತಿನ್ನುವವರೆಲ್ಲರೂ ಅಶುದ್ಧರಾಗುವರು, ಅದು ಅವರ ಹೊಟ್ಟೆತುಂಬುವುದಕ್ಕೆ ಮಾತ್ರ ಅನುಕೂಲವಾಗುವುದು, ಅದು ಯೆಹೋವನ ಆಲಯಕ್ಕೆ ಬರಲು ಯೋಗ್ಯವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇನ್ನವರು ಸರ್ವೇಶ್ವರಸ್ವಾಮಿಗೆ ನೈವೇದ್ಯವಾಗಿ ದ್ರಾಕ್ಷಾರಸವನ್ನು ಸುರಿಯರು. ಅವರ ಯಜ್ಞಗಳು ಆ ಸ್ವಾಮಿಗೆ ಮೆಚ್ಚುಗೆಯಾಗುವುದಿಲ್ಲ. ಅವರ ಆಹಾರ ಹೆಣದ ಮನೆಯ ಆಹಾರದಂತಿರುವುದು. ಅದನ್ನು ತಿನ್ನುವವರೆಲ್ಲರು ಅಶುದ್ಧರಾಗುವರು. ಅದು ಹೊಟ್ಟೆತುಂಬಲು ಮಾತ್ರ ಸರಿಯೇ ಹೊರತು ದೇವಾಲಯದಲ್ಲಿ ಮಾಡುವ ಅರ್ಪಣೆಗೆ ಸಲ್ಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನಿಗೆ ದ್ರಾಕ್ಷಾರಸವನ್ನು ನೈವೇದ್ಯವಾಗಿ ಸುರಿಯರು, ಅವರ ಯಜ್ಞಗಳು ಆತನಿಗೆ ಮೆಚ್ಚಿಕೆಯಾಗವು; ಅವರ ಆಹಾರವು ಹೆಣದ ಮನೆಯ ಆಹಾರದಂತಿರುವದು, ಅದನ್ನು ತಿನ್ನುವವರೆಲ್ಲರೂ ಅಶುದ್ಧರಾಗುವರು, ಅದು ಹೊಟ್ಟೆತುಂಬುವದಕ್ಕೆ ಮಾತ್ರ ಅನುಕೂಲಿಸುವದು. ಅದು ಯೆಹೋವನ ಆಲಯಕ್ಕೆ ಬಂದಿಲ್ಲವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಇಸ್ರೇಲರು ಯೆಹೋವನಿಗೆ ದ್ರಾಕ್ಷಾರಸದ ಸಮರ್ಪಣೆ ಮಾಡುವದಿಲ್ಲ. ಆತನಿಗೆ ಯಜ್ಞವನ್ನರ್ಪಿಸುವದಿಲ್ಲ. ಅವರ ಯಜ್ಞಗಳು ಸಮಾಧಿಗಳಲ್ಲಿ ಉಣ್ಣುವ ಆಹಾರದಂತಿರುವದು. ಅದನ್ನು ಯಾವನಾದರೂ ಉಂಡಲ್ಲಿ ಅವನು ಅಶುದ್ಧನಾಗುವನು. ಅವರ ರೊಟ್ಟಿಯು ದೇವರ ಆಲಯದೊಳಗೆ ಇಡಲ್ಪಡುವದಿಲ್ಲ. ಅವರೇ ಅದನ್ನು ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರು ದ್ರಾಕ್ಷಾರಸವನ್ನು ಕಾಣಿಕೆಯಾಗಿ ಯೆಹೋವ ದೇವರಿಗೆ ಅರ್ಪಿಸುವುದಿಲ್ಲ. ಅವರ ಬಲಿಗಳು ಆತನಿಗೆ ಮೆಚ್ಚಿಗೆಯಾಗಿರುವುದಿಲ್ಲ. ಅವರ ಬಲಿಗಳು ಅವರಿಗೆ ದುಃಖಿಸುವವರ ರೊಟ್ಟಿಯ ಹಾಗಿರುವುವು. ಅದನ್ನು ತಿನ್ನುವವರೆಲ್ಲರೂ ಅಪವಿತ್ರರಾಗುವರು. ಏಕೆಂದರೆ ಅದು ಅವರ ಹೊಟ್ಟೆ ತುಂಬುವುದಕ್ಕೆ ಮಾತ್ರ ಸರಿಯೇ ಹೊರತು, ಯೆಹೋವ ದೇವರ ಆಲಯಕ್ಕೆ ಸಲ್ಲುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 9:4
33 ತಿಳಿವುಗಳ ಹೋಲಿಕೆ  

ಎಫ್ರಾಯೀಮ್ಯರು ಯಜ್ಞಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸಿ ಮಾಂಸಭೋಜನ ಮಾಡುತ್ತಾರೆ; ಯೆಹೋವನು ಆ ಯಜ್ಞಗಳನ್ನು ಮೆಚ್ಚುವುದಿಲ್ಲ; ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಕ್ಕೆ ದಂಡನೆಮಾಡುವನು; ಅವರು ಐಗುಪ್ತಕ್ಕೆ ಹಿಂದಿರುಗಬೇಕಾಗುವುದು.


ನೀವು ಶೆಬದ ಧೂಪವನ್ನು ಮತ್ತು ದೂರ ದೇಶದ ಒಳ್ಳೆಯ ಬಜೆಯನ್ನು ನನಗೆ ಅರ್ಪಿಸುವುದರಿಂದ ಏನು ಪ್ರಯೋಜನ? ನಿಮ್ಮ ಹೋಮಗಳು ನನಗೆ ಮೆಚ್ಚಿಕೆಯಲ್ಲ, ನಿಮ್ಮ ಯಜ್ಞಗಳು ನನಗೆ ಇಷ್ಟವಿಲ್ಲ.


ನಾವು ಸತ್ತವರಿಗೋಸ್ಕರ ದುಃಖಿಸುವ ಕಾಲದಲ್ಲೆಲ್ಲಾ ಅದರಲ್ಲಿ ಏನೂ ತಿನ್ನಲಿಲ್ಲ; ಅಶುದ್ಧರಾಗಿ ಅದನ್ನು ತೆಗೆದುಹಾಕಲಿಲ್ಲ; ಸತ್ತವರಿಗೋಸ್ಕರ ಅದರಲ್ಲಿ ಏನೂ ಕೊಡಲಿಲ್ಲ; ನಮ್ಮ ದೇವರಾದ ಯೆಹೋವನ ಮಾತಿನಲ್ಲಿ ಲಕ್ಷ್ಯವಿಟ್ಟು ನೀನು ನೇಮಿಸಿದ್ದನ್ನೆಲ್ಲಾ ಅನುಸರಿಸಿದ್ದೇವೆ.


ಆತನು ಒಂದು ವೇಳೆ ಮನಸ್ಸನ್ನು ಬದಲಾಯಿಸಿ, ನಿಮ್ಮ ಕಡೆಗೆ ತಿರುಗಿಕೊಂಡು ನಿಮ್ಮನ್ನು ಆಶೀರ್ವದಿಸಬಹುದು; ನಿಮ್ಮ ದೇವರಾದ ಯೆಹೋವನಿಗೆ ನೀವು ಅರ್ಪಿಸುವ ನೈವೇದ್ಯವನ್ನು ಸ್ವೀಕರಿಸಿ ಸುವರಗಳನ್ನು ದಯಪಾಲಿಸಬಹುದು.


ಇದರಂತೆ ರಾಜಮುಖಂಡ, ಯಜ್ಞ, ಸ್ತಂಭ, ಏಫೋದು, ವಿಗ್ರಹಗಳಿಲ್ಲದೆ ಇಸ್ರಾಯೇಲರು ಬಹಳ ದಿನಗಳು ತಾಳಿಕೊಂಡಿರುವರು.


ಸದ್ದಿಲ್ಲದೆ ಮೊರೆಯಿಡು, ವಿಯೋಗ ದುಃಖವನ್ನು ತೋರಿಸಬೇಡ, ರುಮಾಲನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ಬಾಯನ್ನು ಬಟ್ಟೆಯಿಂದ ಮುಚ್ಚಿಕೊಳ್ಳಬೇಡ, ಗಾರಿಗೆಯನ್ನು ತಿನ್ನಬೇಡ.”


ನಾನೇ ಪರಲೋಕದಿಂದ ಇಳಿದು ಬಂದ ಜೀವವುಳ್ಳ ರೊಟ್ಟಿ. ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಸದಾ ಕಾಲವು ಬದುಕುವನು; ಮತ್ತು ನಾನು ಕೊಡುವ ರೊಟ್ಟಿ ನನ್ನ ದೇಹವೇ, ಅದನ್ನು ಲೋಕದ ಜೀವಕ್ಕಾಗಿ ಕೊಡುವೆನು” ಎಂದು ಹೇಳಿದನು.


ಇನ್ನೊಂದು ಕೆಲಸವನ್ನು ಮಾಡುತ್ತೀರಿ - ಯೆಹೋವನ ಯಜ್ಞವೇದಿಯನ್ನು ನರಳಾಟದಿಂದಲೂ, ಗೋಳಾಟದಿಂದಲೂ ಕಣ್ಣೀರಿನಿಂದಲೂ ತುಂಬಿಸಿ ಮುಚ್ಚುತ್ತೀರಿ; ಆದಕಾರಣ ಆತನು ನಿಮ್ಮ ನೈವೇದ್ಯವನ್ನು ಇನ್ನು ಲಕ್ಷಿಸನು, ನಿಮ್ಮ ಕೈಯಿಂದ ಅದನ್ನು ಪ್ರಸನ್ನನಾಗಿ ಸ್ವೀಕರಿಸನು.


ನೀವು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ, ನಾನು ಅದನ್ನು ಸ್ವೀಕರಿಸುವುದಿಲ್ಲ, ಸಮಾಧಾನದ ಯಜ್ಞವಾಗಿ ನೀವು ಒಪ್ಪಿಸಿದ ಕೊಬ್ಬಿದ ಪಶುಗಳನ್ನು ನೋಡುವುದಿಲ್ಲ.


ಯಾಜಕರೇ, ಗೋಣಿತಟ್ಟನ್ನು ಉಟ್ಟುಕೊಂಡು ಗೋಳಾಡಿರಿ! ಯಜ್ಞವೇದಿಯ ಸೇವಕರೇ, ಗೋಳಾಡಿರಿ. ನನ್ನ ದೇವರ ಸೇವಕರೇ, ಬಂದು ಗೋಣಿತಟ್ಟನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಬಿದ್ದುಕೊಂಡಿರಿ. ಏಕೆಂದರೆ ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ನಿಮ್ಮ ದೇವರ ಆಲಯಕ್ಕೆ ಬಾರದೆ ನಿಂತುಹೋಗಿದೆ.


ನಾನು ಮಾಡಿದಂತೆ ಆಗ ನೀವೂ ಮಾಡುವಿರಿ, ಅಂದರೆ ಬಟ್ಟೆಯಿಂದ ಬಾಯನ್ನು ಮುಚ್ಚಿಕೊಳ್ಳದೆ, ಮನುಷ್ಯರ ರೊಟ್ಟಿಯನ್ನು ತಿನ್ನದೆ ಇರುವಿರಿ,


ಹೋರಿಯನ್ನು ವಧಿಸುವವನು ನರಬಲಿಯನ್ನು ಕೊಡುತ್ತಾನೆ; ಕುರಿಯನ್ನು ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ; ನೈವೇದ್ಯಮಾಡುವವನು ಹಂದಿಯ ರಕ್ತವನ್ನು ಅರ್ಪಿಸುತ್ತಾನೆ; ಧೂಪಹಾಕುವವನು ವಿಗ್ರಹಾರಾಧನೆ ಮಾಡುತ್ತಾನೆ; ಇವರು ಮನಸ್ಸಿಗೆ ಬಂದ ಮಾರ್ಗಗಳನ್ನು ಆರಿಸಿಕೊಂಡು ತಮ್ಮ ಅಸಹ್ಯಕಾರ್ಯಗಳಲ್ಲಿ ಮನಃಪೂರ್ವಕವಾಗಿ ಆನಂದಿಸುತ್ತಾರೆ;


ಕೆಟ್ಟ ಸಂತಾನವೇ, ಹೊಳೆಯ ನುಣುಪಾದ ಕಲ್ಲುಗಳೇ ನಿನಗೆ ಗತಿ, ಅವುಗಳೇ ನಿನ್ನ ಪಾಲು; ಅವುಗಳಿಗೆ ನೀನು ಪಾನದ್ರವ್ಯವನ್ನು ನೈವೇದ್ಯವಾಗಿ ಸುರಿದು, ಧಾನ್ಯದ್ರವ್ಯವನ್ನು ಅರ್ಪಿಸಿದ್ದಿ. ನಾನು ಇದನ್ನೆಲ್ಲಾ ನೋಡಿ ಕೋಪವನ್ನು ಅಡಗಿಸಿಕೊಳ್ಳಲು ಆಗುವುದೇ?


“ನೀನು ಇಸ್ರಾಯೇಲರಿಗೆ ಆಜ್ಞಾಪಿಸಿ ಅವರಿಗೆ, ‘ನನಗೆ ಸುಗಂಧಹೋಮಮಾಡುವುದಕ್ಕಾಗಿ ಇಸ್ರಾಯೇಲರು ನನಗೋಸ್ಕರ ತರುವ ಆಹಾರವನ್ನು ನೇಮಕವಾದ ಕಾಲಗಳಲ್ಲಿ ತಂದು ಎಚ್ಚರಿಕೆಯಿಂದ ಸಮರ್ಪಿಸಬೇಕೆಂದು ಅವರಿಗೆ ಆಜ್ಞಾಪಿಸು.’


ನಪುಂಸಕನಾಗಲಿ, ಬೇರೆ ಯಾವ ಕಳಂಕವಿದ್ದವನಾಗಲಿ ಯೆಹೋವನಿಗೆ ಹೋಮದ್ರವ್ಯಗಳನ್ನು ಸಮರ್ಪಿಸುವುದಕ್ಕೆ ಸನ್ನಿಧಿಗೆ ಬರಬಾರದು. ಅಂಥವನು ದೇಹದಲ್ಲಿ ದೋಷವಿರುವುದರಿಂದ ದೇವರ ಆಹಾರವನ್ನು ಸಮರ್ಪಿಸಲೇಬಾರದು.


“ನೀನು ಆರೋನನಿಗೆ ಹೀಗೆ ಆಜ್ಞಾಪಿಸು, ‘ನಿನ್ನ ಸಂತತಿಯವರ ಎಲ್ಲಾ ತಲಾಂತರಗಳಲ್ಲಿಯೂ ಯಾವ ಅಂಗವಿಕಲನೂ ದೇವರ ಆಹಾರವನ್ನು ಸಮರ್ಪಿಸುವುದಕ್ಕೆ ನನ್ನ ಸನ್ನಿಧಿಗೆ ಬರಬಾರದು; ಅಂಗವಿಕಲನು ಈ ಕಾರ್ಯವನ್ನು ವಹಿಸಿಕೊಳ್ಳಲೇ ಬಾರದು.


ಅವರು ನಿಮ್ಮ ದೇವರ ಆಹಾರವನ್ನು ಸಮರ್ಪಿಸುವವರಾದ ಕಾರಣ ಅವರನ್ನು ದೇವರ ಸೇವಕರೆಂದು ಭಾವಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಯೆಹೋವನೆಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನು ಪರಿಶುದ್ಧರೆಂದು ನೀವು ಭಾವಿಸಬೇಕು.


ಅವರು ದೇವರಿಗೆ ಮೀಸಲಾಗಿರಬೇಕು; ತಾವು ಸೇವಿಸುವ ದೇವರ ಹೆಸರನ್ನು ಅಪಕೀರ್ತಿಗೆ ಗುರಿಪಡಿಸಬಾರದು. ತಮ್ಮ ದೇವರ ಆಹಾರವನ್ನು ಅಂದರೆ ಯೆಹೋವನ ಹೋಮದ್ರವ್ಯಗಳನ್ನು ಅವರು ಸಮರ್ಪಿಸುವವರು ಆಗಿರುವುದರಿಂದ ಪವಿತ್ರರಾಗಿರಬೇಕು.


ಏಕೆಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರ. ಅಂತಹ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರವಾಗಿರುವ ಕಾರಣ ಅದರಿಂದ ದೋಷಪರಿಹಾರ ಆಗುತ್ತದಷ್ಟೆ.


ಯೆಹೋವನು ಮೋಶೆಗೆ ಆಜ್ಞಾಪಿಸಿದ ಹಾಗೆ ಮೇಜಿನ ಮೇಲೆ ರೊಟ್ಟಿಗಳನ್ನು ಕ್ರಮವಾಗಿ ಯೆಹೋವನ ಸನ್ನಿಧಿಯಲ್ಲಿ ಇರಿಸಿದನು.


“ಮನುಷ್ಯನ ಶವ ಸೋಂಕಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.


ಬಳಿಕ ಅವರು ಯೆಹೋವನ ಸಮ್ಮುಖದಲ್ಲಿರುವ ಮೇಜಿನ ಮೇಲೆ ನೀಲಿ ಬಟ್ಟೆಯನ್ನು ಹಾಸಿ ಅದರ ಮೇಲೆ ಮೇಜಿಗೆ ಸೇರಿದ ಪಾತ್ರೆಗಳನ್ನೂ, ಧೂಪಾರತಿಗಳನ್ನೂ, ಹೂಜಿಗಳನ್ನೂ, ಪಾನದ್ರವ್ಯಾರ್ಪಣೆಯ ಬಟ್ಟಲುಗಳನ್ನೂ ಇಡಬೇಕು. ಯಾವಾಗಲೂ ಇರಬೇಕಾದ ರೊಟ್ಟಿಗಳು ಅದರ ಮೇಲೆ ಇರಬೇಕು.


ಒಂದೂವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ ಮೂರು ಸೇರು ಗೋದಿಹಿಟ್ಟನ್ನೂ ಬೆರಸಿ ಧಾನ್ಯಸಮರ್ಪಣೆಗಾಗಿ ಆ ಮೊದಲನೆಯ ಕುರಿಯ ಸಂಗಡ ಅರ್ಪಿಸಬೇಕು. ಪಾನದ್ರವ್ಯಾರ್ಪಣೆಗಾಗಿ ಒಂದು ಪಾವು ದ್ರಾಕ್ಷಾರಸವನ್ನು ಅದರೊಂದಿಗೆ ಅರ್ಪಿಸಬೇಕು.


ಸತ್ತವನಿಗೋಸ್ಕರ ದುಃಖಪಡುವವರನ್ನು ಸಂತೈಸುವುದಕ್ಕಾಗಿ ಯಾರೂ ಕಜ್ಜಾಯವನ್ನು ಹಂಚುವುದಿಲ್ಲ. ತಂದೆಯನ್ನಾಗಲಿ ತಾಯಿಯನ್ನಾಗಲಿ ಕಳಕೊಂಡವರಿಗೆ ಯಾರೂ ಸಮಾಧಾನದಾಯಕ ಪಾನಪಾತ್ರೆಯನ್ನು ನೀಡುವುದಿಲ್ಲ.


ಆದರೆ ದಾನಿಯೇಲನು ರಾಜನ ಭೋಜನ ಪದಾರ್ಥಗಳನ್ನು ತಿಂದು ರಾಜನು ಕುಡಿಯುವ ದ್ರಾಕ್ಷಾರಸವನ್ನು ಕುಡಿದು ತನ್ನನ್ನು ಅಶುದ್ಧ ಮಾಡಿಕೊಳ್ಳಬಾರದೆಂದು ನಿಶ್ಚಯಿಸಿ ಕಂಚುಕಿಯರ ಅಧ್ಯಕ್ಷನಿಗೆ, “ನಾನು ಅಶುದ್ಧನಾಗಲಾರೆ, ಕ್ಷಮಿಸು” ಎಂದು ವಿಜ್ಞಾಪಿಸಿದನು.


ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ಯೆಹೋವನ ಆಲಯದಿಂದ ತೆಗೆಯಲ್ಪಟ್ಟಿದೆ. ಯೆಹೋವನ ಸೇವಕರಾದ ಯಾಜಕರು ಗೋಳಾಡುತ್ತಾರೆ.


ಅತ್ತಿತ್ತ ತಿರುಗಿಕೊಳ್ಳುತ್ತಾರೆ, ದೇವರ ಕಡೆಗೆ ತಿರುಗಿಕೊಳ್ಳುವುದಿಲ್ಲ; ಮೋಸದ ಬಿಲ್ಲಿಗೆ ಸಮಾನರಾಗಿದ್ದಾರೆ. ಅವರ ಮುಖಂಡರು ತಮ್ಮ ನಾಲಿಗೆಯ ಸೊಕ್ಕಿನ ನಿಮಿತ್ತ ಖಡ್ಗದಿಂದ ಹತರಾಗಿ ಬೀಳುವರು; ಅವರ ಸೋಲು ಐಗುಪ್ತದೇಶದ ಹಾಸ್ಯಕ್ಕೆ ಆಸ್ಪದವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು