Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 9:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದಂಡನೆಯ ದಿನಗಳು ಹತ್ತಿರವಾಗಿದೆ, ಮುಯ್ಯಿತೀರಿಸುವ ದಿನಗಳು ಸಮೀಪಿಸಿವೆ. ಅದು ಇಸ್ರಾಯೇಲಿನ ಅನುಭವಕ್ಕೆ ಬಂದೇ ಬರುವವು; ಇಸ್ರಾಯೇಲೇ, ನಿನ್ನ ಅಧರ್ಮವು ಬಹಳವಾಗಿರುವುದರಿಂದಲೂ, ವಿರೋಧವು ಹೆಚ್ಚಾಗಿರುವುದರಿಂದಲೂ, “ಪ್ರವಾದಿಯು ಮೂರ್ಖನು ಮತ್ತು ದೇವರಾತ್ಮ ಪ್ರೇರಿತನು ಹುಚ್ಚನು” ಅಂದುಕೊಳ್ಳುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇಗೋ, ದಂಡನೆಯ ದಿನಗಳು ಸಮೀಪಿಸಿವೆ; ಮುಯ್ಯಿ ತೀರಿಸುವ ದಿನಗಳು ಬಂದಿವೆ. ಇಸ್ರಯೇಲರಿಗೆ ಇದು ತಿಳಿದಿರಲಿ. “ಪ್ರವಾದಿಯು ಹುಚ್ಚನು; ದೇವರಾತ್ಮಪ್ರೇರಿತನು ಮೂರ್ಖನು,” ಎಂದು ಹೇಳಿಕೊಳ್ಳುತ್ತೀರಿ. ಅತ್ಯಧಿಕವಾಗಿರುವ ನಿಮ್ಮ ಅಧರ್ಮ, ಮಿತಿಮೀರಿರುವ ನಿಮ್ಮ ದ್ವೇಷ ಇದಕ್ಕೆ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ದಂಡನೆಯ ದಿನಗಳು ಹತ್ತರಿಸಿವೆ, ಮುಯ್ಯಿತೀರಿಸುವ ದಿವಸಗಳು ಸಮೀಪಿಸಿವೆ; ಇಸ್ರಾಯೇಲಿನ ಅನುಭವಕ್ಕೆ ಬಂದೇ ಬರುವವು; [ಇಸ್ರಾಯೇಲೇ,] ನಿನ್ನ ಅಧರ್ಮವು ಬಹಳವಾಗಿರುವದರಿಂದಲೂ ವಿರೋಧವು ಹೆಚ್ಚಾಗಿರುವದರಿಂದಲೂ ಪ್ರವಾದಿಯು ಮೂರ್ಖನು, ದೇವರಾತ್ಮಾವಿಷ್ಟನು ಹುಚ್ಚನು [ಅಂದುಕೊಳ್ಳುತ್ತಿ].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಪ್ರವಾದಿಯು ಹೀಗೆ ಹೇಳುತ್ತಾನೆ, “ಇಸ್ರೇಲೇ, ಇದನ್ನು ಕಲಿತುಕೋ. ಶಿಕ್ಷೆಯ ಸಮಯವು ಬಂದದೆ. ನೀನು ಮಾಡಿದ ದುಷ್ಟತನಕ್ಕೆ ಪ್ರತಿಯಾಗಿ ದೊರಕಬೇಕಾದ ಸಂಬಳ (ಫಲ)ದ ಸಮಯವು ಬಂತು.” ಆದರೆ ಇಸ್ರೇಲ್ ಜನರು ಹೀಗೆ ಹೇಳುತ್ತಾರೆ: “ಪ್ರವಾದಿಯು ಮೂರ್ಖನಾಗಿದ್ದಾನೆ. ದೇವರಾತ್ಮನುಳ್ಳ ಈ ಮನುಷ್ಯನು ಹುಚ್ಚನಾಗಿದ್ದಾನೆ.” ಪ್ರವಾದಿಯು ಹೀಗೆ ಹೇಳಿದನು, “ನಿನ್ನ ಕೆಟ್ಟ ಪಾಪಗಳಿಗಾಗಿ ನೀನು ಶಿಕ್ಷಿಸಲ್ಪಡುವೆ. ನೀನು ಹಗೆ ಮಾಡಿದುದಕ್ಕೆ ನೀನು ಶಿಕ್ಷೆ ಅನುಭವಿಸುವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದಂಡನೆಯ ದಿವಸಗಳು ಬಂದಿವೆ, ಮುಯ್ಯಿ ತೀರಿಸುವ ದಿವಸಗಳೂ ಸಮೀಪವಾಗಿವೆ. ಇಸ್ರಾಯೇಲು ಅದನ್ನು ತಿಳಿದುಕೊಳ್ಳಲಿ. ಏಕೆಂದರೆ ನಿನ್ನ ಪಾಪಗಳು ಬಹಳವಾಗಿರುವುದರಿಂದಲೂ, ದ್ವೇಷವು ಹೆಚ್ಚಾಗಿರುವುದರಿಂದಲೂ, “ಪ್ರವಾದಿ ಮೂರ್ಖನೂ, ಪ್ರೇರಿತ ಮನುಷ್ಯನು ಹುಚ್ಚನೂ,” ಎಂದು ಇಸ್ರಾಯೇಲು ಹೇಳಿಕೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 9:7
40 ತಿಳಿವುಗಳ ಹೋಲಿಕೆ  

ಅವರಲ್ಲಿ ಉತ್ತಮನೂ ಮುಳ್ಳಿನ ಪೊದೆಗೆ ಸಮಾನ, ಸತ್ಯವಂತನೂ ಕೂಡ ಮುಳ್ಳುಬೇಲಿಗಿಂತ ಕಡೆ. ನಿನ್ನ ಕಾವಲುಗಾರರು ಮುಂತಿಳಿಸಿದ ನಿನ್ನ ದಂಡನೆಯ ದಿನ ಬಂದಿದೆ. ಈಗ ನಿನ್ನ ಜನರಿಗೆ ಭ್ರಾಂತಿ ಹಿಡಿಯುವುದು.


ಯೇಹುವು ತಿರುಗಿ ತನ್ನ ಒಡೆಯನ ಸೇವಕರ ಹತ್ತಿರ ಬರಲು ಅವರು ಅವನನ್ನು, “ಶುಭವಾರ್ತೆಯೋ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇಕೆ?” ಎಂದು ಕೇಳಿದರು. ಅದಕ್ಕೆ ಯೇಹುವು, “ಆ ಮನುಷ್ಯನು ಎಂಥವನು, ಅವನ ಮಾತು ಎಂಥದು ಎಂಬುದು ನಿಮಗೇ ಗೊತ್ತಿದೆಯಲ್ಲಾ” ಎಂದು ಉತ್ತರಕೊಟ್ಟನು.


ಇದನ್ನು ಕೇಳಿ ಆತನ ಬಂಧುಗಳು “ಅವನಿಗೆ ಹುಚ್ಚುಹಿಡಿದಿದೆ” ಎಂದು ಹೇಳಿ ಆತನನ್ನು ಹಿಡಿಯುವುದಕ್ಕೆ ಹೊರಟರು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುವ ಮೂರ್ಖ ಪ್ರವಾದಿಗಳ ಗತಿಯನ್ನು ಏನೆಂದು ಹೇಳಲಿ!


ನಿನ್ನ ಪ್ರವಾದಿಗಳು ಕಂಡ ದರ್ಶನ, ಹೇಳಿದ ಪ್ರವಾದನೆಯ ವಾಕ್ಯಗಳು ವ್ಯರ್ಥ, ನಿಸ್ಸಾರ; ಅವರು ನಿನ್ನ ದೋಷವನ್ನು ಬೈಲಿಗೆ ತಾರದ ಕಾರಣ ನಿನ್ನ ದುರವಸ್ಥೆಯು ನೀಗಲಿಲ್ಲ; ನಿನ್ನ ವಿಷಯವಾಗಿ ಅವರಿಗೆ ಕಂಡುಬಂದ ವ್ಯರ್ಥ ದೈವೋಕ್ತಿಗಳು ನೀನು ಗಡೀಪಾರಾಗಿ ಒಯ್ಯಲ್ಪಡುವುದಕ್ಕೆ ಆಸ್ಪದವಾದವು.


ಅವು ವ್ಯರ್ಥ, ಹಾಸ್ಯಾಸ್ಪದವಾದ ಕೆಲಸ; ದಂಡನೆಯಾಗುವಾಗ ಅಳಿದುಹೋಗುವವು.


ದಂಡನೆಯ ದಿನದಲ್ಲಿಯೂ, ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಯಾರ ವಶಮಾಡುವಿರಿ?


ನಮಗೆ ಬುದ್ಧಿಭ್ರಮಣೆಯಾಗಿದ್ದರೆ ಅದು ದೇವರ ಮಹಿಮೆಗಾಗಿಯೇ; ಹಾಗೂ ನಮಗೆ ಸ್ವಸ್ಥಬುದ್ಧಿ ಇದ್ದರೆ ಅದು ನಿಮ್ಮ ಪ್ರಯೋಜನಕ್ಕಾಗಿಯೇ.


ಏಕೆಂದರೆ ಬರೆದಿರುವುದೆಲ್ಲಾ ನೆರವೇರುವುದಕ್ಕಾಗಿ ಅವು ದಂಡನೆಯ ದಿನಗಳಾಗಿವೆ.


ಗಾಳಿಯನ್ನೂ, ಮೋಸವನ್ನೂ ಹಿಂಬಾಲಿಸುವ ಸುಳ್ಳುಗಾರನೊಬ್ಬನು, “ನಾನು ದ್ರಾಕ್ಷಾರಸ, ಮಧ್ಯಗಳ ವಿಷಯವಾಗಿ ನಿನಗೆ ಪ್ರವಾದನೆ ಮಾಡುವೆನು” ಎಂದು ಹೇಳಿದರೆ, ಈ ಜನರು ಅಂಥವನನ್ನು ಪ್ರವಾದಿಯನ್ನಾಗಿ ಸ್ವೀಕರಿಸಿಕೊಳ್ಳುವರು.


“ಅಶಾಂತಿಯಿದ್ದರೂ ಅವರು ‘ಶಾಂತಿಯಿದೆ’ ಎಂದು ಹೇಳಿ ನನ್ನ ಜನರನ್ನು ವಂಚಿಸಿದ್ದಾರೆ. ಒಬ್ಬನು ತೆಳುವಾದ ಗೋಡೆಯನ್ನು ಕಟ್ಟಿದ್ದರೂ, ಇಗೋ, ಅದಕ್ಕೆ ಸುಣ್ಣಬಳಿಯುತ್ತಾರೆ;


“ಯೆಹೋವನು ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ಯಾಜಕನನ್ನಾಗಿ ನೇಮಿಸಿ, ಯಾರು ತನ್ನನ್ನು ತಾನೇ ಪ್ರವಾದಿಯಂತೆ ನಟಿಸುತ್ತಾನೋ ಅವನನ್ನು ಕೋಳಕ್ಕೆ ಹಾಕಿ, ಕೊರಳಿಗೆ ಕವೆಯೊಡ್ಡುವ ಅಧಿಕಾರವನ್ನು ತನ್ನ ಆಲಯದಲ್ಲಿ ನಿನಗೆ ವಹಿಸಿದ್ದಾನಲ್ಲಾ.


ಮಹಾ ಪಟ್ಟಣವು ಮೂರು ಭಾಗವಾಗಿ ಬಿರಿಯಿತು ಮತ್ತು ಜನಾಂಗಗಳ ಪಟ್ಟಣಗಳು ಬಿದ್ದವು. ಆಗ ದೇವರು ತನ್ನ ಸನ್ನಿಧಿಯಲ್ಲಿ ಬಾಬೆಲನ್ನು ಜ್ಞಾಪಿಸಿಕೊಂಡು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದಿಂದ ತುಂಬಿದ ಪಾತ್ರೆಯನ್ನು ಆ ನಗರಕ್ಕೆ ಕೊಟ್ಟನು.


ಅಲ್ಲಿರುವ ಪ್ರವಾದಿಗಳು ಬಡಾಯಿ ಕೊಚ್ಚಿಕೊಳ್ಳುವವರು, ವಿಶ್ವಾಸ ದ್ರೋಹಿಗಳು; ಅದರ ಯಾಜಕರು ಪವಿತ್ರಾಲಯವನ್ನು ಹೊಲೆಗೆಡಿಸಿದ್ದಾರೆ, ಧರ್ಮವಿಧಿಗಳನ್ನು ಭಂಗಮಾಡಿದ್ದಾರೆ.


ಆತನು ನನಗೆ, “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಲು, ನಾನು ಅದಕ್ಕೆ, “ಮಾಗಿದ ಹಣ್ಣಿನ ಪುಟ್ಟಿ” ಎಂದೆನು. ಆಗ ಯೆಹೋವನು ನನಗೆ ಹೀಗೆ ಹೇಳಿದನು, “ಇಸ್ರಾಯೇಲೆಂಬ ನನ್ನ ಜನರಿಗೆ ಕಡೆಗಾಲವು ಮಾಗುತ್ತಾ ಬಂದಿದೆ. ಇನ್ನು ಮೇಲೆ ನಾನು ಅವರನ್ನು ಉಳಿಸುವುದಿಲ್ಲ.


ಎಫ್ರಾಯೀಮು ನನ್ನ ದೇವರ ವಿಷಯವಾಗಿ ಹೊಂಚು ಹಾಕುತ್ತದೆ; ಪ್ರವಾದಿಯ ಮಾರ್ಗಗಳಲ್ಲೆಲ್ಲಾ ಬೇಟೆಗಾರನ ಬಲೆಯು ಒಡ್ಡಿದೆ, ಅವನ ದೇವರ ಆಲಯದಲ್ಲಿಯೂ ಶತ್ರುವಿನ ವಿರೋಧವು ಕಾದಿದೆ.


ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡು, ಅನೇಕ ಜನಾಂಗಗಳು ನಾನೇ ಯೆಹೋವನು ಎಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತವಾಗುವೆನು.”


ಅವರೆಲ್ಲರನ್ನು ಬಲವಾಗಿ ಖಂಡಿಸಿ ಮುಯ್ಯಿಗೆಮುಯ್ಯಿ ತೀರಿಸುವೆನು; ಹೀಗೆ ಪ್ರತಿಕಾರಮಾಡುವುದರಿಂದ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.”


ಸಂಬಳಕ್ಕಾಗಿ ಐಗುಪ್ತವನ್ನು ಸೇರಿರುವ ದಂಡಾಳುಗಳು ಕೊಬ್ಬಿದ ಕರುಗಳಂತಿದ್ದಾರೆ; ಅವರೂ ಬೆನ್ನುಕೊಟ್ಟು ಓಡಿಹೋಗಿದ್ದಾರೆ; ನಿಲ್ಲಲೇ ಇಲ್ಲ. ಅವರಿಗೆ ವಿಪತ್ಕಾಲವು ಒದಗಿದೆ, ದಂಡನೆಯ ದಿನವು ಸಂಭವಿಸಿದೆ.


ಅವರ ಅಧರ್ಮಕ್ಕೂ, ಪಾಪಕ್ಕೂ ಎರಡರಷ್ಟು ಶಿಕ್ಷೆಯನ್ನು ಮೊದಲು ಕೊಡುವೆನು; ಹೆಣಗಳಂತಿರುವ ತಮ್ಮ ಹೇಯವಿಗ್ರಹಗಳಿಂದ ನನ್ನ ದೇಶವನ್ನು ಹೊಲಸುಮಾಡಿ, ನನ್ನ ಸ್ವತ್ತನ್ನು ತಮ್ಮ ಅಸಹ್ಯ ವಸ್ತುಗಳಿಂದ ತುಂಬಿಸಿದ್ದಾರಷ್ಟೆ.”


ದಂಡನೆಯ ವರ್ಷದಲ್ಲಿ ಅನಾತೋತಿನವರಿಗೆ ಕೇಡನ್ನು ಬರಮಾಡುವೆನು, ಅವರಲ್ಲಿ ಯಾರೂ ಉಳಿಯರು” ಎಂದು ಹೇಳಿದ್ದಾನೆ.


ಸಮಾಧಾನವಿಲ್ಲದ್ದಿದ್ದರೂ, ‘ಸಮಾಧಾನ’ ಎಂದು ಹೇಳಿ ನನ್ನ ಪ್ರಜೆಯೆಂಬಾಕೆಯ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.


ಸಮಾಧಾನವಿಲ್ಲದಿದ್ದರೂ, ಸಮಾಧಾನ ಎಂದು ಹೇಳಿ ನನ್ನ ಜನರ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.


ನಾನು ಕೊಚ್ಚಿಕೊಳ್ಳುವವರ ಶಕುನಗಳನ್ನು ನಿರರ್ಥಕಪಡಿಸಿ, ಕಣಿಹೇಳುವವರನ್ನು ಮರುಳುಗೊಳಿಸಿ, ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳಿವಳಿಕೆಯನ್ನು ಹುಚ್ಚುತನವಾಗ ಮಾಡುವೆನು.


ಏಕೆಂದರೆ ಅದು ಯೆಹೋವನು ಮುಯ್ಯಿತೀರಿಸುವ ದಿನವಾಗಿದೆ, ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರ್ಷವು ಒದಗಿದೆ.


ಯೆಹೋವನೇ, ನೀನು ಕೈಯೆತ್ತಿದ್ದರೂ ಅವರು ಲಕ್ಷಿಸರು. ಆದರೆ ನಿನ್ನ ಸ್ವಜನರ ಅಭಿಮಾನವನ್ನು ನೋಡಿ ನಾಚಿಕೆಪಡಲಿ; ಹೌದು, ಆ ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವುದು.


ನಾನು ಸಮಾರ್ಯದ ಪ್ರವಾದಿಗಳಲ್ಲಿ ಅನೈತಿಕತೆಯನ್ನು ನೋಡಿದ್ದೇನೆ; ಅವರು ಬಾಳ್ ದೇವತೆಯ ಆವೇಶದಿಂದ ಪ್ರವಾದಿಸಿ, ಇಸ್ರಾಯೇಲೆಂಬ ನನ್ನ ಜನರನ್ನು ಮಾರ್ಗ ತಪ್ಪಿಸಿದ್ದಾರೆ.


ಅನೇಕ ಜನಾಂಗಗಳೂ ಮತ್ತು ಮಹಾರಾಜರೂ ಅವರನ್ನೇ ಅಡಿಯಾಳಾಗಿ ಮಾಡಿಕೊಳ್ಳುವರು; ಅವರ ಕೃತ್ಯಗಳಿಗೂ ಮತ್ತು ಕೈಕೆಲಸಗಳಿಗೂ ತಕ್ಕಂತೆ ಅವರಿಗೆ ಮುಯ್ಯಿತೀರಿಸುವೆನು” ಎಂಬುದೇ.


ನಾನಂತು, ಅವರನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು” ಎಂದು ಹೇಳಿದನು.


ಎಫ್ರಾಯೀಮ್ಯರು ಯಜ್ಞಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸಿ ಮಾಂಸಭೋಜನ ಮಾಡುತ್ತಾರೆ; ಯೆಹೋವನು ಆ ಯಜ್ಞಗಳನ್ನು ಮೆಚ್ಚುವುದಿಲ್ಲ; ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಕ್ಕೆ ದಂಡನೆಮಾಡುವನು; ಅವರು ಐಗುಪ್ತಕ್ಕೆ ಹಿಂದಿರುಗಬೇಕಾಗುವುದು.


ಇಸ್ರಾಯೇಲೇ, ನೀನು ಹಿಂದಿರುಗಿ ನಿನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೋ; ನಿನ್ನ ಅಪರಾಧದಿಂದಲೇ, ನೀನು ಮುಗ್ಗರಿಸಿ ಬಿದ್ದಿ.


ದಂಡನೆಯ ದಿನದಲ್ಲಿ ಎಫ್ರಾಯೀಮು ಹಾಳಾಗುವುದು; ಇಸ್ರಾಯೇಲ್ ಕುಲಗಳ ಭವಿಷ್ಯತ್ತಿನ ನಿಶ್ಚಯವನ್ನು ತಿಳಿಯಪಡಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು