Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 9:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಪೂರ್ವದಲ್ಲಿ ಗಿಬ್ಯದವರು ಕೆಡಿಸಿಕೊಂಡಂತೆ ಎಫ್ರಾಯೀಮ್ಯರು ತಮ್ಮನ್ನು ತೀರಾ ಕೆಡಿಸಿಕೊಂಡಿದ್ದಾರೆ. ದೇವರು ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಗಳಿಗೆ ಪ್ರತಿದಂಡನೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಪೂರ್ವದಲ್ಲಿ ಗಿಬ್ಯದವರು ಭ್ರಷ್ಟರಾದಂತೆ ಎಫ್ರಯಿಮಿನವರು ಅತಿ ಭ್ರಷ್ಟರಾಗಿದ್ದಾರೆ. ದೇವರು ಅವರ ಅಪರಾಧವನ್ನು ನೆನಪಿಗೆ ತಂದುಕೊಳ್ಳುವರು. ಅವರ ಪಾಪಕ್ಕೆ ತಕ್ಕ ದಂಡನೆಯನ್ನು ವಿಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಪೂರ್ವದಲ್ಲಿ ಗಿಬ್ಯದವರು ಕೆಡಿಸಿಕೊಂಡಂತೆ ಎಫ್ರಾಯೀಮ್ಯರು ತಮ್ಮನ್ನು ತೀರಾ ಕೆಡಿಸಿಕೊಂಡಿದ್ದಾರೆ; ದೇವರು ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಗಳಿಗೆ ಪ್ರತಿದಂಡನೆಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಗಿಬ್ಯದ ಕಾಲದಂತೆ ಇಸ್ರೇಲರು ನಾಶನದ ಕಡೆಗೆ ಆಳವಾಗಿ ಇಳಿದಿದ್ದಾರೆ. ಯೆಹೋವನು ಇಸ್ರೇಲರ ಪಾಪಗಳನ್ನು ತನ್ನ ನೆನಪಿಗೆ ತಂದುಕೊಂಡು ಅವರನ್ನು ಶಿಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಗಿಬೆಯದ ದಿವಸಗಳಲ್ಲಿ ಆದ ಹಾಗೆ ತಮ್ಮನ್ನು ಬಹಳವಾಗಿ ಕೆಡಿಸಿಕೊಂಡಿದ್ದಾರೆ. ಆದ್ದರಿಂದ ಅವರ ಅಕ್ರಮವನ್ನು ಆತನು ಜ್ಞಾಪಕ ಮಾಡಿಕೊಳ್ಳುವನು. ಅವರ ಪಾಪಕ್ಕೆ ತನ್ನ ದಂಡನೆಯನ್ನು ವಿಧಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 9:9
16 ತಿಳಿವುಗಳ ಹೋಲಿಕೆ  

ಇಸ್ರಾಯೇಲೇ, ಗಿಬ್ಯದಲ್ಲಿ ದುರಾಚಾರವು ನಡೆದಂದಿನಿಂದ ನೀನು ಪಾಪಮಾಡುತ್ತಾ ಬಂದಿದ್ದಿ; ಆಹಾ, ನಿನ್ನ ಜನರು ಅಲ್ಲಿ ನಿಂತಿದ್ದಾರೆ, ದುರಾಚಾರಿಗಳಿಗೆ ವಿರುದ್ಧವಾದ ಗಿಬ್ಯದಲ್ಲಿ ನಡೆದ ಯುದ್ಧಕ್ಕೆ ಅವರು ತುತ್ತಾಗುವುದಿಲ್ಲವೋ?.


ಅಷ್ಟರಲ್ಲಿ ಎಫ್ರಾಯೀಮಿನ ಪರ್ವತಪ್ರದೇಶಕ್ಕೆ ಸೇರಿದ ಒಬ್ಬ ಮುದುಕನು, ಬೆನ್ಯಾಮೀನ್ಯರ ಊರಾದ ಗಿಬೆಯದಲ್ಲಿ ವಾಸವಾಗಿದ್ದ ಆ ಮುದುಕನು ಸಾಯಂಕಾಲವಾದ್ದರಿಂದ ಕೆಲಸವನ್ನು ಮುಗಿಸಿ ಹೊಲದಿಂದ ಮನೆಗೆ ಬರುತ್ತಿದ್ದನು.


ಎಫ್ರಾಯೀಮ್ಯರು ಯಜ್ಞಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸಿ ಮಾಂಸಭೋಜನ ಮಾಡುತ್ತಾರೆ; ಯೆಹೋವನು ಆ ಯಜ್ಞಗಳನ್ನು ಮೆಚ್ಚುವುದಿಲ್ಲ; ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಕ್ಕೆ ದಂಡನೆಮಾಡುವನು; ಅವರು ಐಗುಪ್ತಕ್ಕೆ ಹಿಂದಿರುಗಬೇಕಾಗುವುದು.


“ಇಸ್ರಾಯೇಲರೇ, ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದಿರೋ ಆತನ ಕಡೆಗೆ ತಿರುಗಿಕೊಳ್ಳಿರಿ.


ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ, ನಿಯಮಗಳನ್ನು ಬದಲಾಯಿಸಿ, ಶಾಶ್ವತವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂಮಿಯು ಅವರ ಹೆಜ್ಜೆಯಿಂದ ಅಪವಿತ್ರವಾಯಿತು.


ಆಗ ದಣಿಯು, “ನಾವು ಇಸ್ರಾಯೇಲ್ಯರಿಲ್ಲದ ಅನ್ಯರ ಪಟ್ಟಣದಲ್ಲಿ ಇಳಿಯಬಾರದು; ಗಿಬೆಯಕ್ಕೆ ಹೋಗೋಣ” ಅಂದನು.


ಇಸ್ರಾಯೇಲರು ಅವರನ್ನು ಸುತ್ತಿಕೊಂಡು, ಎಲ್ಲಿಯೂ ಓಡಿಹೋಗದಂತೆ, ಗಿಬೆಯ ಊರಿನ ಪೂರ್ವದಿಕ್ಕಿನಲ್ಲಿರುವ ಮೆನೂಹದಲ್ಲಿ ತುಳಿದುಹಾಕಿಬಿಟ್ಟರು.


ಯೆಹೋವನು ಈ ಜನರನ್ನು ಕುರಿತು, “ಇವರು ಪ್ರಯಾಣಿಕನ ಹಾಗೆ ಅಲೆಯುವುದಕ್ಕೆ ಇಷ್ಟಪಟ್ಟಿದ್ದಾರೆ, ಕಾಲನ್ನು ಹಿಂದೆಗೆಯಲಿಲ್ಲ. ಆದಕಾರಣ ಯೆಹೋವನಾದ ನಾನು ಇವರನ್ನು ಕಟಾಕ್ಷಿಸೆನು; ಈಗಲೇ ಇವರ ಅಪರಾಧವನ್ನು ಮನಸ್ಸಿಗೆ ತಂದುಕೊಂಡು ಇವರ ಪಾಪಗಳಿಗೆ ದಂಡನೆಯನ್ನು ವಿಧಿಸುವೆನು” ಎಂದು ಹೇಳಿದ್ದಾನೆ.


ಜನರೂ, ಯಾಜಕರೂ ಒಂದೇ; ಅವರ ದುಷ್ಕಾರ್ಯಗಳಿಗೆ ಅವರನ್ನು ದಂಡಿಸುವೆನು, ಅವರ ದುಷ್ಕೃತ್ಯಗಳನ್ನು ಅವರಿಗೆ ಕಟ್ಟುವೆನು.


ಗಿಬ್ಯದಲ್ಲಿ ತುತ್ತೂರಿಯನ್ನು ಊದಿರಿ, ರಾಮದಲ್ಲಿ ಕೊಂಬು ಕೂಗಲಿ, ಬೇತ್ ಅವೆನಿನಲ್ಲಿ ಆರ್ಭಟಿಸಿರಿ, ಬೆನ್ಯಾಮೀನೇ, ಹಿಂದೆ ನೋಡು!


ತಮ್ಮ ದುರ್ಮಾರ್ಗವೆಲ್ಲಾ ಯೆಹೋವನ ಜ್ಞಾಪಕದಲ್ಲಿರುತ್ತದೆ ಎಂದು ಅವರು ಮನದಟ್ಟು ಮಾಡಿಕೊಳ್ಳುವುದಿಲ್ಲ; ಅವರ ದುಷ್ಕೃತ್ಯಗಳು ಈಗ ಅವರನ್ನು ಮುತ್ತಿಕೊಂಡಿವೆ, ನನ್ನ ಕಣ್ಣೆದುರಿಗಿವೆ.


ಎಫ್ರಾಯೀಮು ನನ್ನ ದೇವರ ವಿಷಯವಾಗಿ ಹೊಂಚು ಹಾಕುತ್ತದೆ; ಪ್ರವಾದಿಯ ಮಾರ್ಗಗಳಲ್ಲೆಲ್ಲಾ ಬೇಟೆಗಾರನ ಬಲೆಯು ಒಡ್ಡಿದೆ, ಅವನ ದೇವರ ಆಲಯದಲ್ಲಿಯೂ ಶತ್ರುವಿನ ವಿರೋಧವು ಕಾದಿದೆ.


ಇದರಿಂದ ಯೆರೂಸಲೇಮೇ, ನೀನು ನನಗೆ ನಿಶ್ಚಯವಾಗಿ ಭಯಪಡುವಿ, ಶಿಕ್ಷಣಕ್ಕೆ ಒಳಪಡುವಿ, ನಿನ್ನ ನಿವಾಸವು ನಾಶವಾಗದು, ನಾನು ನಿನಗೆ ವಿಧಿಸಿದ್ದೊಂದೂ ತಗಲದು” ಎಂದು ಅಂದುಕೊಂಡೆನು; ಅವರಾದರೋ ಆತುರಗೊಂಡು ತಮ್ಮ ನಡತೆಯನ್ನೆಲ್ಲಾ ಕೆಡಿಸಿಕೊಂಡರು.


ಹೀಗಿರಲಾಗಿ ಯೆಹೋವನು ಮೋಶೆಗೆ, “ನೀನು ಬೆಟ್ಟದಿಂದ ಇಳಿದುಹೋಗು ಐಗುಪ್ತದೇಶದಿಂದ ನೀನು ಕರೆದುಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು.


ಅವರು ಭೋಜನದಿಂದ ತೃಪ್ತಿಪಡುವಷ್ಟರಲ್ಲಿ ಆ ಊರಲ್ಲಿದ್ದ ದುಷ್ಟ ಜನರು ಬಂದು ಆ ಮನೆಯನ್ನು ಸುತ್ತಿಕೊಂಡು, ಬಾಗಿಲನ್ನು ಬಡಿದು, ಮನೆಯ ಯಜಮಾನನಾದ ಮುದುಕನಿಗೆ, “ನಿನ್ನ ಮನೆಗೆ ಬಂದಿರುವಂಥ ಮನುಷ್ಯನನ್ನು ಹೊರಗೆ ಕರೆದುಕೊಂಡು ಬಾ; ಅವನೊಡನೆ ನಾವು ಸಂಗಮಿಸಬೇಕು” ಎಂದು ಕೂಗಿದರು.


ನರಪುತ್ರನೇ, ನೀನು ದೈವಸಂಕಲ್ಪವನ್ನು ಪ್ರಕಟಿಸುತ್ತಾ ಹೀಗೆ ನುಡಿ, “ಅಮ್ಮೋನ್ಯರ ವಿಷಯದಲ್ಲಿಯೂ ಮತ್ತು ಅವರು ಮಾಡುವ ದೂಷಣೆಯ ವಿಷಯದಲ್ಲಿಯೂ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ಖಡ್ಗ, ಸಂಹರಿಸುವುದಕ್ಕೆ ಹಿರಿದಿದೆ, ಮಿಂಚುವಂತೆ ಚೆನ್ನಾಗಿ ಮಸೆದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು