Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:1 - ಕನ್ನಡ ಸತ್ಯವೇದವು C.L. Bible (BSI)

1 ಅರಸ ದಾವೀದನು ಹಣ್ಣು ಹಣ್ಣು ಮುದುಕನಾದ; ಎಷ್ಟು ಕಂಬಳಿಗಳನ್ನು ಹೊದಿಸಿದರೂ ಅವನಿಗೆ ಬೆಚ್ಚಗಾಗುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅರಸನಾದ ದಾವೀದನು ವಯೋವೃದ್ಧನಾಗಿದ್ದನು. ಸೇವಕರು ಎಷ್ಟು ಕಂಬಳಿ ಹೊದಿಸಿದರೂ ಅವನಿಗೆ ಬೆಚ್ಚಗಾಗುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅರಸನಾದ ದಾವೀದನು ದಿನ ತುಂಬಿದ ಮುದುಕನಾಗಿದ್ದನು. ಸೇವಕರು ಎಷ್ಟು ಕಂಬಳಿಗಳನ್ನು ಹೊದಿಸಿದರೂ ಅವನಿಗೆ ಬೆಚ್ಚಗಾಗುತ್ತಿದ್ದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆ ಕಾಲದಲ್ಲಿ ರಾಜನಾದ ದಾವೀದನು ಬಹಳ ಮುದುಕನಾಗಿದ್ದನು. ಅವನ ದೇಹವು ಬೆಚ್ಚಗಾಗುತ್ತಲೇ ಇರಲಿಲ್ಲ. ಅವನ ಸೇವಕರು ಅವನಿಗೆ ಕಂಬಳಿಗಳನ್ನು ಹೊದಿಸಿದರೂ ಅವನ ದೇಹವು ತಣ್ಣಗೇ ಇರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅರಸನಾದ ದಾವೀದನು ವೃದ್ಧನಾಗಿಯೂ, ಬಹಳ ಪ್ರಾಯ ಹೋದವನಾಗಿಯೂ ಇರುವಾಗ, ಅವನ ಮೇಲೆ ಹೊದಿಕೆಗಳನ್ನು ಹಾಕಿದರೂ, ಅವನಿಗೆ ಬೆಚ್ಚಗಾಗುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:1
13 ತಿಳಿವುಗಳ ಹೋಲಿಕೆ  

ನಮ್ಮ ಆಯುಷ್ಕಾಲ ಎಪ್ಪತ್ತು ವರುಷ I ಹೆಚ್ಚಾಗಿದ್ದರೆ ಬಲ, ಎಂಬತ್ತು ವರುಷ II


ದಾವೀದನು ಹಣ್ಣುಹಣ್ಣು ಮುದುಕನಾದಾಗ ತನ್ನ ಮಗ ಸೊಲೊಮೋನನನ್ನು ಇಸ್ರಯೇಲರ ಅರಸನನ್ನಾಗಿ ಮಾಡಿದನು.


ದಾವೀದನು ಮೂವತ್ತು ವರ್ಷದವನಾಗಿದ್ದಾಗ ಅರಸನಾಗಿ ನಾಲ್ವತ್ತು ವರ್ಷ ಆಳಿದನು.


ಅಬ್ರಹಾಮನು ಆಗ ತುಂಬು ವಯಸ್ಸಿನ ಮುದುಕ. ಸರ್ವೇಶ್ವರ ಸ್ವಾಮಿ ಅವನ ಎಲ್ಲ ಕೆಲಸಕಾರ್ಯಗಳನ್ನು ಆಶೀರ್ವದಿಸಿದ್ದರು.


ಅಬ್ರಹಾಮನು ಮತ್ತು ಸಾರಳು ಬಹು ವೃದ್ಧರಾಗಿದ್ದರು; ಸಾರಳಿಗೆ ಮುಟ್ಟುನಿಂತುಹೋಗಿತ್ತು.


ಎಲಿಜಬೇತಳು ಬಂಜೆ ಆದುದರಿಂದ ಅವರಿಗೆ ಮಕ್ಕಳಿರಲಿಲ್ಲ. ಅಲ್ಲದೆ ಅವರಿಬ್ಬರೂ ಮುದುಕರಾಗಿದ್ದರು.


ಅಲ್ಲಿ ಸರ್ವೇಶ್ವರನಿಗೆ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ಅವರಿಗೆ ದಹನಬಲಿಗಳನ್ನು ಹಾಗು ಶಾಂತಿಸಮಾಧಾನದ ಬಲಿಗಳನ್ನು ಅರ್ಪಿಸಿದನು. ಹೀಗೆ ನಾಡಿನ ಮೇಲಿದ್ದ ಸರ್ವೇಶ್ವರನ ಕೋಪ ಶಮನವಾಯಿತು. ಇಸ್ರಯೇಲರಲ್ಲಿದ್ದ ಆ ಸಂಹಾರಕವ್ಯಾಧಿ ನಿಂತುಹೋಯಿತು.


ಆದುದರಿಂದ ಅವನ ಸೇವಕರು, “ಒಡೆಯರೇ, ಅರಸರೇ, ತಮ್ಮ ಸನ್ನಿಧಿಯಲ್ಲಿದ್ದುಕೊಂಡು ತಮಗೆ ಶುಶ್ರೂಷೆಮಾಡಲು ಒಬ್ಬ ಕನ್ನಿಕೆಯನ್ನು ಹುಡುಕಬೇಕಾಗಿದೆ. ಆಕೆ ನಮ್ಮ ಒಡೆಯರೂ ಅರಸರೂ ಆದ ತಮ್ಮ ಮಗ್ಗುಲಲ್ಲೇ ಮಲಗಿ ತಮ್ಮನ್ನು ಬೆಚ್ಚಗಿರಿಸುವಳು,” ಎಂದು ಹೇಳಿದರು.


ಅರಸನು ಬಹಳ ಮುದುಕನಾಗಿದ್ದರಿಂದ, ಶೂನೇಮ್ಯಳಾದ ಅಬೀಷಗಳಿಂದ ಶುಶ್ರೂಷೆ ಪಡೆಯುತ್ತಾ ಒಳಗಿನ ಕೋಣೆಯಲ್ಲಿಯೇ ಇರುತ್ತ ಇದ್ದನು.


ಇದಲ್ಲದೆ, ಒಬ್ಬನ ಮಗ್ಗುಲಲ್ಲಿ ಇನ್ನೊಬ್ಬನು ಮಲಗಿಕೊಂಡರೆ ಇಬ್ಬರಿಗೂ ಬೆಚ್ಚಗಾದೀತು!


ಯೆಹೋಶುವ ಹಣ್ಣುಹಣ್ಣು ಮುದುಕನಾದ. ಆಗ ಸರ್ವೇಶ್ವರ ಆತನಿಗೆ, “ನೀನೀಗ ಮುದುಕ. ಸ್ವಾಧೀನ ಮಾಡಿಕೊಳ್ಳಬೇಕಾದ ನಾಡುಗಳು ಇನ್ನೂ ಬಹಳ ಇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು