Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:13 - ಕನ್ನಡ ಸತ್ಯವೇದವು C.L. Bible (BSI)

13 ನೀನು ಅರಸ ದಾವೀದನ ಬಳಿಗೆ ಹೋಗಿ, ‘ನನ್ನ ಒಡೆಯರಾದ ಅರಸರು ತಮ್ಮ ತರುವಾಯ ನನ್ನ ಮಗನಾದ ಸೊಲೊಮೋನನೇ ಆಳಬೇಕು, ಅವನೇ ತಮ್ಮ ಸಿಂಹಾಸನದ ಮೇಲೆ ಕುಳಿತುಕೊಳ್ಳಬೇಕು ಎಂದು ತಮ್ಮ ದಾಸಿಯಾದ ನನಗೆ ಪ್ರಮಾಣಮಾಡಿ ಹೇಳಿದಿರಲ್ಲವೇ? ಹೀಗಿದ್ದ ಮೇಲೆ ಅದೋನೀಯನು ಅರಸನಾದುದು ಹೇಗೆ?’ ಎಂದು ಕೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀನು ಅರಸನಾದ ದಾವೀದನ ಬಳಿಗೆ ಹೋಗಿ ಅವನಿಗೆ, ‘ನನ್ನ ಒಡೆಯನಾದ ಅರಸನು ತನ್ನ ತರುವಾಯ ನನ್ನ ಮಗನಾದ ಸೊಲೊಮೋನನೇ ಆಳಬೇಕು. ಅವನೇ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಬೇಕು ಎಂದು ತಮ್ಮ ದಾಸಿಯಾದ ನನಗೆ ಪ್ರಮಾಣ ಮಾಡಿ ಹೇಳಿದ್ದನಲ್ಲಾ. ಹೀಗಿದ್ದ ಮೇಲೆ ಅದೋನೀಯನು ಆಳುವುದೇಕೆ’ ಎಂದು ಕೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೀನು ಅರಸನಾದ ದಾವೀದನ ಬಳಿಗೆ ಹೋಗಿ ಅವನಿಗೆ - ನನ್ನ ಒಡೆಯನಾದ ಅರಸನು ತನ್ನ ತರುವಾಯ ನನ್ನ ಮಗನಾದ ಸೊಲೊಮೋನನೇ ಆಳಬೇಕು; ಅವನೇ ತನ್ನ ಸಿಂಹಾಸನದ ಮೇಲೆ ಕೂತುಕೊಳ್ಳಬೇಕು ಎಂದು ತನ್ನ ದಾಸಿಯಾದ ನನಗೆ ಪ್ರಮಾಣಮಾಡಿ ಹೇಳಿದನಲ್ಲಾ! ಹೀಗಿದ್ದ ಮೇಲೆ ಅದೋನೀಯನು ಆಳುವದೇಕೆ ಎಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ರಾಜನಾದ ದಾವೀದನ ಬಳಿಗೆ ಹೋಗಿ ಅವನಿಗೆ, ‘ನನ್ನ ಒಡೆಯನಾದ ರಾಜನೇ, ನನ್ನ ಮಗನಾದ ಸೊಲೊಮೋನನು ನಿನ್ನ ನಂತರದ ರಾಜನೆಂದು ನೀನು ನನಗೆ ವಾಗ್ದಾನ ಮಾಡಿದ್ದೆ. ಹೀಗಿರುವಾಗ ಅದೋನೀಯನು ನೂತನ ರಾಜನಾದದ್ದು ಏಕೆ?’ ಎಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನೀನು ಅರಸನಾದ ದಾವೀದನ ಬಳಿಗೆ ಹೋಗಿ ಅವನಿಗೆ, ‘ಅರಸನಾದ ನನ್ನ ಒಡೆಯನೇ, “ನಿಶ್ಚಯವಾಗಿ ನನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಆಳುವನೆಂದೂ, ಅವನು ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ,” ನೀವು ನಿನ್ನ ದಾಸಿಗೆ ಆಣೆ ಇಟ್ಟು ಹೇಳಲಿಲ್ಲವೋ? ಹೀಗಿರಲಾಗಿ ಅದೋನೀಯನು ಆಳುವುದು ಏಕೆ?’ ಎಂದು ಕೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:13
16 ತಿಳಿವುಗಳ ಹೋಲಿಕೆ  

ನನ್ನ ತರುವಾಯ ನನ್ನ ಮಗ ಸೊಲೊಮೋನನೇ ಅರಸನಾಗಿ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಬೇಕು. ನಾನು ನಿನಗೆ ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿನಲ್ಲಿ ಮಾಡಿದ ಈ ಪ್ರಮಾಣವನ್ನು ಈ ದಿನವೇ ನೆರವೇರಿಸುತ್ತೇನೆ,” ಎಂದನು.


ಆಗ ಆಕೆ, “ನನ್ನ ಒಡೆಯರು ತಮ್ಮ ದೇವರಾದ ಸರ್ವೇಶ್ವರನ ಮೇಲೆ ಆಣೆಯಿಟ್ಟು ತಮ್ಮ ದಾಸಿಯಾದ ನನಗೆ, ‘ನನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಅರಸನಾಗಬೇಕು; ನಿಶ್ಚಯವಾಗಿ ಅವನೇ ನನ್ನ ಸಿಂಹಾಸನದ ಮೇಲೆ ಕೂತುಕೊಳ್ಳಬೇಕು,’ ಎಂಬುದಾಗಿ ಹೇಳಿದಿರಲ್ಲವೆ?


ಆಗುವುದಾದರೆ ಮಾತ್ರ ನನ್ನ ದಾಸ ದಾವೀದನೊಂದಿಗೂ ನನ್ನ ಪರಿಚಾರಕರಾದ ಲೇವಿಕುಲದ ಯಾಜಕರೊಂದಿಗೂ ನಾನು ಮಾಡಿದ ಒಡಂಬಡಿಕೆ ನಿಂತುಹೋಗುವುದು ಮತ್ತು ದಾವೀದನ ಸಿಂಹಾಸನವನ್ನು ಏರಿ ಆಳತಕ್ಕ ಅವನ ಸಂತಾನದವನು ಒಬ್ಬನೂ ಇಲ್ಲವಾಗುವನು.


ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.


ಅಂದಿನಿಂದ ಸೊಲೊಮೋನನು ತನ್ನ ತಂದೆ ದಾವೀದನ ಸ್ಥಾನದಲ್ಲಿ ಅರಸನಾಗಿ, ಸರ್ವೇಶ್ವರನ ಸಿಂಹಾಸನದಲ್ಲಿ ಕುಳಿತುಕೊಂಡು, ವೃದ್ಧಿಯಾಗುತ್ತಾ ಬಂದನು. ಅರಸ ಸೊಲೊಮೋನನಿಗೆ ಇಸ್ರಯೇಲರೆಲ್ಲರೂ ವಿಧೇಯರಾಗಿ ನಡೆದರು.


ಸೊಲೊಮೋನನು ತನ್ನ ತಂದೆ ದಾವೀದನ ಸಿಂಹಾಸನವನ್ನು ಏರಿದನು. ಅವನ ರಾಜ್ಯ ಸಮೃದ್ಧಿಯಾಗಿ ಬೆಳೆಯಿತು.


‘ನಾನು ಕಣ್ಣಾರೆ ಕಾಣುವಂತೆ ಇಂದು ನನ್ನ ಸಿಂಹಾಸನಕ್ಕೆ ಒಬ್ಬ ಉತ್ತರಾಧಿಕಾರಿಯನ್ನು ದಯಪಾಲಿಸಿದ ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ!’ ಎಂದು ಹೇಳಿದ್ದಾನೆ,” ಎಂದನು.


“ನನ್ನ ಒಡೆಯರೂ ಅರಸರೂ ಆದ ನೀವು ಅದೋನೀಯನಿಗೆ ಅರಸನಾಗುವುದಕ್ಕೂ ನಿಮ್ಮ ಸಿಂಹಾಸನದ ಮೇಲೆ ಕುಳಿತುಕೊಳ್ಳುವುದಕ್ಕೂ ಅಪ್ಪಣೆಕೊಟ್ಟಿರುವಂತೆ ಕಾಣುತ್ತದೆ.


ಆಗ ನಾತಾನನು ಸೊಲೊಮೋನನ ತಾಯಿಯಾದ ಬತ್ಷೆಬೆಗೆ, “ಹಗ್ಗೀತಳ ಮಗ ಅದೋನೀಯನು, ನಮ್ಮ ಒಡೆಯ ದಾವೀದರಿಗೆ ತಿಳಿಯದೆಯೇ ಅರಸನಾದನೆಂಬುದನ್ನು ನೀನು ಕೇಳಿರಬೇಕಲ್ಲವೆ?


ಆಮೇಲೆ ನೀವು ಅವನ ಹಿಂದೆ ಬನ್ನಿ; ಅವನು ಅರಮನೆಯನ್ನು ಪ್ರವೇಶಿಸಿ ನನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ನನಗೆ ಬದಲಾಗಿ ಆಳಬೇಕು. ನಾನು ಇಸ್ರಯೇಲರ ಮತ್ತು ಯೆಹೂದ್ಯರ ಮೇಲೆ ಅವನನ್ನೇ ಅಧಿಪತಿಯನ್ನಾಗಿ ನೇಮಿಸಿದ್ದೇನೆ,” ಎಂದನು.


“ಅವನು ರಾಜ್ಯಾಧಿಕಾರಕ್ಕೆ ಬಂದಾಗ ಯಾಜಕ ಸೇವೆಮಾಡುವ ಲೇವಿಯರ ವಶದಲ್ಲಿ ಇರುವ ಈ ಧರ್ಮಶಾಸ್ತ್ರಗ್ರಂಥದ ಒಂದು ಪ್ರತಿಯನ್ನು ತನಗಾಗಿ ಪುಸ್ತಕರೂಪವಾಗಿ ಬರೆಯಿಸಿಕೊಳ್ಳಬೇಕು.


ನೀನು ಅರಸನೊಡನೆ ಮಾತಾಡುತ್ತಿರುವಾಗ ನಾನೂ ಬಂದು ನಿನ್ನ ಮಾತು ಸತ್ಯವೆಂದು ಅನುಮೋದಿಸುವೆನು,” ಎಂದನು.


ನನಗೆ ದಯಪಾಲಿಸಿದ ಅನೇಕ ಮಕ್ಕಳಲ್ಲಿ ನನ್ನ ಮಗ ಸೊಲೊಮೋನನನ್ನು ಸರ್ವೇಶ್ವರನ ರಾಜ್ಯಸಿಂಹಾಸನವಾಗಿರುವ ಇಸ್ರಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸುವುದಕ್ಕೆ ಆರಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು