Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:16 - ಕನ್ನಡ ಸತ್ಯವೇದವು C.L. Bible (BSI)

16 ಬತ್ಷೆಬೆ ಅಲ್ಲಿಗೆ ಹೋಗಿ ಅರಸನಿಗೆ ಬಾಗಿ ನಮಸ್ಕರಿಸಿದಳು. ಅರಸನು, “ಏನು, ನಿನಗೇನು ಬೇಕು?” ಎಂದು ಆಕೆಯನ್ನು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಬತ್ಷೆಬೆಯು ಅಲ್ಲಿಗೆ ಹೋಗಿ ಅರಸನಿಗೆ ಬಾಗಿ ನಮಸ್ಕರಿಸಿದಳು. ಅರಸನು, “ನಿನಗೇನು ಬೇಕು?” ಎಂದು ಆಕೆಯನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಬತ್ಷೆಬೆಯು ಅಲ್ಲಿಗೆ ಹೋಗಿ ಅರಸನಿಗೆ ಬೊಗ್ಗಿ ನಮಸ್ಕರಿಸಿದಳು. ಅರಸನು - ನಿನಗೇನು ಬೇಕು ಎಂದು ಆಕೆಯನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ರಾಜನ ಎದುರಿನಲ್ಲಿ ಬತ್ಷೆಬೆಳು ಬಾಗಿ ನಮಸ್ಕರಿಸಿದಳು. ರಾಜನು, “ನಾನು ನಿನಗಾಗಿ ಏನು ಮಾಡಬೇಕು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಬತ್ಷೆಬೆಳು ಅರಸನಿಗೆ ಬಾಗಿ ನಮಸ್ಕರಿಸಿದಳು. ಅರಸನಾದ ದಾವೀದನು, “ನಿನಗೇನು ಬೇಕು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:16
10 ತಿಳಿವುಗಳ ಹೋಲಿಕೆ  

ಅಬೀಗೈಲಳು ದಾವೀದನನ್ನು ಕಂಡ ಕೂಡಲೆ ಕತ್ತೆಯಿಂದಿಳಿದು ಅವನಿಗೆ ಸಾಷ್ಟಾಂಗ ನಮಸ್ಕರಿಸಿದಳು.


ಸೌಲನು ಗವಿಯಿಂದ ಹೊರಗೆ ಬಂದು ಸ್ವಲ್ಪ ಮುಂದೆ ಹೋದಮೇಲೆ ದಾವೀದನೂ ಹೊರಗೆ ಬಂದು, “ಅರಸರೇ, ನನ್ನ ಒಡೆಯರೇ,” ಎಂದು ಅವನನ್ನು ಕೂಗಿದನು. ಸೌಲನು ಹಿಂದಿರುಗಿ ನೋಡಿದನು. ಆಗ ಅವನಿಗೆ ಸಾಷ್ಟಾಂಗ ನಮಸ್ಕಾರಮಾಡಿ,


ಹುಡುಗನು ಹೋಗುತ್ತಲೇ ದಾವೀದನು ಕಲ್ಲುಕುಪ್ಪೆಯ ಬಳಿಯಿಂದೆದ್ದು ಬಂದು ಮೂರು ಸಾರಿ ಸಾಷ್ಟಾಂಗವಾಗಿ ಯೋನಾತಾನನನ್ನು ವಂದಿಸಿದನು. ಅವರು ಒಬ್ಬರನ್ನೊಬ್ಬರು ಅಪ್ಪಿಕೊಂಡು ಅತ್ತರು. ದಾವೀದನು ಬಹಳವಾಗಿ ಅತ್ತನು.


ಯೇಸು ಅಲ್ಲೇ ನಿಂತು, ಅವರನ್ನು ಕರೆದರು. “ನನ್ನಿಂದ ನಿಮಗೇನಾಗಬೇಕು?” ಎಂದು ಕೇಳಿದರು.


“ನಿನ್ನ ಕೋರಿಕೆ ಏನು?” ಎಂದರು ಯೇಸು. ಅದಕ್ಕೆ ಅವಳು, “ತಮ್ಮ ಸಾಮ್ರಾಜ್ಯದಲ್ಲಿ, ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ತಮ್ಮ ಬಲಗಡೆಯಲ್ಲೂ ಇನ್ನೊಬ್ಬನು ತಮ್ಮ ಎಡಗಡೆಯಲ್ಲೂ ಆಸೀನರಾಗುವಂತೆ ಅಪ್ಪಣೆಯಾಗಬೇಕು,” ಎಂದು ಕೋರಿದಳು.


ಅರಸನು ಈ ಎರಡನೆಯ ದಿನದಲ್ಲೂ ದ್ರಾಕ್ಷಾರಸ ಪಾನಮಾಡುತ್ತಿರುವಾಗ ಎಸ್ತೇರಳಿಗೆ, “ಎಸ್ತೇರ್ ರಾಣಿಯೇ, ನಿನ್ನ ವಿಜ್ಞಾಪನೆ ಯಾವುದು ಹೇಳು; ಅದನ್ನು ನಾನು ನೆರವೇರಿಸುವೆನು. ನನ್ನ ರಾಜ್ಯದ ಅರ್ಧಭಾಗವನ್ನು ಕೇಳಿದರೂ ಸರಿ, ನಾನದನ್ನು ನಿನಗೆ ಕೊಡುವೆನು,” ಎನ್ನಲು


“ಒಂದು ಸಣ್ಣ ಬಿನ್ನಹವಿದೆ, ತಿರಸ್ಕರಿಸಬೇಡ,” ಎಂದು ಹೇಳಿದಳು. ಅರಸನು, “ತಾಯೇ, ಏನು ಬೇಕು, ಕೇಳಿ; ನಾನು ಆಗದು ಎನ್ನುವುದಿಲ್ಲ,” ಎಂದನು.


ಸೇವಕರು ನಾತಾನನು ಬಂದಿರುವ ಸಂಗತಿಯನ್ನು ಅರಸನಿಗೆ ತಿಳಿಸಿದರು. ನಾತಾನನು ಅರಸನ ಮುಂದೆ ಹೋಗಿ ಸಾಷ್ಟಾಂಗ ನಮಸ್ಕಾರ ಮಾಡಿದನು.


ಅರಸನು ಬಹಳ ಮುದುಕನಾಗಿದ್ದರಿಂದ, ಶೂನೇಮ್ಯಳಾದ ಅಬೀಷಗಳಿಂದ ಶುಶ್ರೂಷೆ ಪಡೆಯುತ್ತಾ ಒಳಗಿನ ಕೋಣೆಯಲ್ಲಿಯೇ ಇರುತ್ತ ಇದ್ದನು.


ಆಗ ಆಕೆ, “ನನ್ನ ಒಡೆಯರು ತಮ್ಮ ದೇವರಾದ ಸರ್ವೇಶ್ವರನ ಮೇಲೆ ಆಣೆಯಿಟ್ಟು ತಮ್ಮ ದಾಸಿಯಾದ ನನಗೆ, ‘ನನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಅರಸನಾಗಬೇಕು; ನಿಶ್ಚಯವಾಗಿ ಅವನೇ ನನ್ನ ಸಿಂಹಾಸನದ ಮೇಲೆ ಕೂತುಕೊಳ್ಳಬೇಕು,’ ಎಂಬುದಾಗಿ ಹೇಳಿದಿರಲ್ಲವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು