Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:17 - ಕನ್ನಡ ಸತ್ಯವೇದವು C.L. Bible (BSI)

17 ಆಗ ಆಕೆ, “ನನ್ನ ಒಡೆಯರು ತಮ್ಮ ದೇವರಾದ ಸರ್ವೇಶ್ವರನ ಮೇಲೆ ಆಣೆಯಿಟ್ಟು ತಮ್ಮ ದಾಸಿಯಾದ ನನಗೆ, ‘ನನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಅರಸನಾಗಬೇಕು; ನಿಶ್ಚಯವಾಗಿ ಅವನೇ ನನ್ನ ಸಿಂಹಾಸನದ ಮೇಲೆ ಕೂತುಕೊಳ್ಳಬೇಕು,’ ಎಂಬುದಾಗಿ ಹೇಳಿದಿರಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ಆಕೆಯು, “ನನ್ನ ಒಡೆಯನು ತನ್ನ ದೇವರಾದ ಯೆಹೋವನ ಮೇಲೆ ಆಣೆಯಿಟ್ಟು ತಮ್ಮ ದಾಸಿಯಾದ ನನಗೆ ನನ್ನ ತರುವಾಯ ನನ್ನ ಮಗನಾದ ಸೊಲೊಮೋನನು ಅರಸನಾಗಬೇಕು. ನಿಜವಾಗಿ ಅವನೇ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಬೇಕು ಎಂಬುದಾಗಿ ಹೇಳಿದ್ದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಗ ಆಕೆಯು - ನನ್ನ ಒಡೆಯನು ತನ್ನ ದೇವರಾದ ಯೆಹೋವನ ಮೇಲೆ ಆಣೆಯಿಟ್ಟು ತನ್ನ ದಾಸಿಯಾದ ನನಗೆ - ನನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಅರಸನಾಗಬೇಕು; ನಿಜವಾಗಿ ಅವನೇ ನನ್ನ ಸಿಂಹಾಸನದ ಮೇಲೆ ಕೂತುಕೊಳ್ಳಬೇಕು ಎಂಬದಾಗಿ ಹೇಳಿದನಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಬತ್ಷೆಬೆಳು, “ನನ್ನ ಒಡೆಯನೇ, ನಿನ್ನ ದೇವರಾದ ಯೆಹೋವನ ಆಣೆಯಾಗಿ ನೀನು ನನಗೆ ಒಂದು ವಾಗ್ದಾನವನ್ನು ಮಾಡಿದ್ದೆ. ‘ನನ್ನ ನಂತರ ನಿನ್ನ ಮಗ ಸೊಲೊಮೋನನು ರಾಜನಾಗುವನು. ಸೊಲೊಮೋನನು ನನ್ನ ಸಿಂಹಾಸನದ ಮೇಲೆ ಕುಳಿತು ಆಳುವನು’ ಎಂಬುದೇ ಆ ಪ್ರಮಾಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಕೆಯು ಅರಸನಿಗೆ, “ನನ್ನ ಒಡೆಯನೇ, ನಿಶ್ಚಯವಾಗಿ ನಿನ್ನ ಮಗ ಸೊಲೊಮೋನನು ಆಳುವನೆಂದೂ, ಅವನು ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ, ನೀವು ನಿನ್ನ ದಾಸಿಗೆ ನಿನ್ನ ದೇವರಾದ ಯೆಹೋವ ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:17
7 ತಿಳಿವುಗಳ ಹೋಲಿಕೆ  

ನೀನು ಅರಸ ದಾವೀದನ ಬಳಿಗೆ ಹೋಗಿ, ‘ನನ್ನ ಒಡೆಯರಾದ ಅರಸರು ತಮ್ಮ ತರುವಾಯ ನನ್ನ ಮಗನಾದ ಸೊಲೊಮೋನನೇ ಆಳಬೇಕು, ಅವನೇ ತಮ್ಮ ಸಿಂಹಾಸನದ ಮೇಲೆ ಕುಳಿತುಕೊಳ್ಳಬೇಕು ಎಂದು ತಮ್ಮ ದಾಸಿಯಾದ ನನಗೆ ಪ್ರಮಾಣಮಾಡಿ ಹೇಳಿದಿರಲ್ಲವೇ? ಹೀಗಿದ್ದ ಮೇಲೆ ಅದೋನೀಯನು ಅರಸನಾದುದು ಹೇಗೆ?’ ಎಂದು ಕೇಳು.


ನನ್ನ ತರುವಾಯ ನನ್ನ ಮಗ ಸೊಲೊಮೋನನೇ ಅರಸನಾಗಿ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಬೇಕು. ನಾನು ನಿನಗೆ ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿನಲ್ಲಿ ಮಾಡಿದ ಈ ಪ್ರಮಾಣವನ್ನು ಈ ದಿನವೇ ನೆರವೇರಿಸುತ್ತೇನೆ,” ಎಂದನು.


ಉದಾಹರಣೆಗೆ: ಸಾರಳು ತನ್ನ ಪತಿ ಅಬ್ರಹಾಮನಿಗೆ ವಿಧೇಯಳಾಗಿದ್ದು ಆತನನ್ನು, “ಯಜಮಾನ” ಎಂದು ಕರೆಯುತ್ತಿದ್ದಳು. ಯಾವ ಭಯಭೀತಿಯಿಲ್ಲದೆ ಸತ್ಕಾರ್ಯಗಳನ್ನು ಮಾಡುವವರಾಗಿದ್ದರೆ, ನೀವೂ ಸಾರಳ ಕುಮಾರ್ತಿಯರೇ ಹೌದು.


ಎಂತಲೇ ಆಕೆ, “ನನ್ನಂಥ ಮುದುಕಿಗೆ ಸಂಭೋಗ ಸಾಧ್ಯವೆ? ನನ್ನ ಯಜಮಾನರೂ ಮುದುಕರಲ್ಲವೆ?” ಎಂದುಕೊಂಡು ನಕ್ಕಳು.


ಬತ್ಷೆಬೆ ಅಲ್ಲಿಗೆ ಹೋಗಿ ಅರಸನಿಗೆ ಬಾಗಿ ನಮಸ್ಕರಿಸಿದಳು. ಅರಸನು, “ಏನು, ನಿನಗೇನು ಬೇಕು?” ಎಂದು ಆಕೆಯನ್ನು ವಿಚಾರಿಸಿದನು.


ಆದರೆ ಈಗ ಅದೋನೀಯನು ನಮ್ಮ ಒಡೆಯರೂ ಅರಸರೂ ಆದ ನಿಮಗೂ ತಿಳಿಯದೆಯೇ ರಾಜನಾಗಿಬಿಟ್ಟಿದ್ದಾನೆ.


ನೀನು ಅರಸನೊಡನೆ ಮಾತಾಡುತ್ತಿರುವಾಗ ನಾನೂ ಬಂದು ನಿನ್ನ ಮಾತು ಸತ್ಯವೆಂದು ಅನುಮೋದಿಸುವೆನು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು