1 ಅರಸುಗಳು 1:34 - ಕನ್ನಡ ಸತ್ಯವೇದವು C.L. Bible (BSI)34 ಅಲ್ಲಿ ಯಾಜಕ ಚಾದೋಕನು ಹಾಗು ಪ್ರವಾದಿ ನಾತಾನನು ಅವನನ್ನು ಇಸ್ರಯೇಲರ ಅರಸನನ್ನಾಗಿ ಅಭಿಷೇಕಿಸಲಿ. ಅನಂತರ ಕೊಂಬನ್ನೂದಿರಿ. ಎಲ್ಲರು ‘ಅರಸ ಸೊಲೊಮೋನನು ಚಿರಂಜೀವಿಯಾಗಿರಲಿ!’ ಎಂದು ಘೋಷಿಸಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಅಲ್ಲಿ ಯಾಜಕನಾದ ಚಾದೋಕನೂ ಮತ್ತು ಪ್ರವಾದಿಯಾದ ನಾತಾನನೂ ಅವನನ್ನು ಇಸ್ರಾಯೇಲರ ಅರಸನನ್ನಾಗಿ ಅಭಿಷೇಕಿಸಲಿ. ಅನಂತರ ಕೊಂಬನ್ನೂದಿರಿ. ಎಲ್ಲರೂ, ‘ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ’ ಎಂದು ಜಯಘೋಷ ಮಾಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಅಲ್ಲಿ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಅವನನ್ನು ಇಸ್ರಾಯೇಲ್ಯರ ಅರಸನನ್ನಾಗಿ ಅಭಿಷೇಕಿಸಲಿ; ಅನಂತರ ಕೊಂಬನ್ನೂದಿರಿ; ಎಲ್ಲರೂ ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ ಎಂದು ಆರ್ಭಟಿಸಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಅಲ್ಲಿ ಯಾಜಕನಾದ ಚಾದೋಕನು ಮತ್ತು ಪ್ರವಾದಿಯಾದ ನಾತಾನನು ಅವನನ್ನು ಇಸ್ರೇಲಿನ ನೂತನ ರಾಜನನ್ನಾಗಿ ಅಭಿಷೇಕಿಸಲಿ. ಅನಂತರ ತುತ್ತೂರಿಯನ್ನು ಊದಿರಿ; ಎಲ್ಲರೂ ‘ರಾಜನಾದ ಸೊಲೊಮೋನನು ಚಿರಂಜೀವಿಯಾಗಿರಲಿ’ ಎಂದು ಆರ್ಭಟಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಅಲ್ಲಿ ಯಾಜಕನಾದ ಚಾದೋಕನೂ, ಪ್ರವಾದಿಯಾದ ನಾತಾನನೂ ಅವನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕಿಸಲಿ. ತುತೂರಿಯನ್ನು ಊದಿ, ‘ಅರಸ ಸೊಲೊಮೋನನು ಚಿರಂಜೀವಿಯಾಗಿರಲಿ!’ ಎಂದು ಘೋಷಿಸಿರಿ. ಅಧ್ಯಾಯವನ್ನು ನೋಡಿ |
ಇವು ನಜರೇತಿನ ಯೇಸುವಿಗೆ ಸಂಬಂಧಪಟ್ಟ ವಿಷಯಗಳು. ಸ್ನಾನದೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ಯೊವಾನ್ನನು ಬೋಧಿಸಿದ ನಂತರ, ಯೇಸು ತಮ್ಮ ಸೇವಾವೃತ್ತಿಯನ್ನು ಗಲಿಲೇಯದಲ್ಲಿ ಪ್ರಾರಂಭಿಸಿದರು. ಅವರು ಪವಿತ್ರಾತ್ಮರಿಂದಲೂ ದೈವಶಕ್ತಿಯಿಂದಲೂ ಅಭಿಷಿಕ್ತರಾಗಿದ್ದರು. ದೇವರು ತಮ್ಮೊಡನೆ ಇದ್ದುದರಿಂದ ಅವರು ಎಲ್ಲೆಡೆಯಲ್ಲೂ ಒಳಿತನ್ನು ಮಾಡುತ್ತಾ, ಪಿಶಾಚಿ ಪೀಡಿತರಾದವರನ್ನು ಸ್ವಸ್ಥಪಡಿಸುತ್ತಾ ಸಂಚರಿಸಿದರು.