Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:36 - ಕನ್ನಡ ಸತ್ಯವೇದವು C.L. Bible (BSI)

36 ಯೆಹೋಯಾದಾವನ ಮಗ ಬೆನಾಯನು ಅರಸನಿಗೆ, “ಹಾಗೆಯೇ ಆಗಲಿ; ನನ್ನ ಒಡೆಯರ ಹಾಗು ಅರಸರ ದೇವರಾದ ಸರ್ವೇಶ್ವರ ಇದನ್ನು ಸ್ಥಿರಪಡಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಯೆಹೋಯಾದಾವನ ಮಗನಾದ ಬೆನಾಯನು ಅರಸನಿಗೆ, “ಹಾಗೆಯೇ ಆಗಲಿ. ನನ್ನ ಒಡೆಯನಾದ ಅರಸನ ದೇವರಾದ ಯೆಹೋವನು ಅದನ್ನು ಸ್ಥಿರಪಡಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಯೆಹೋಯಾದಾವನ ಮಗನಾದ ಬೆನಾಯನು ಅರಸನಿಗೆ - ಹಾಗಾಗಲಿ; ನನ್ನ ಒಡೆಯನಾದ ಅರಸನ ದೇವರಾದ ಯೆಹೋವನು ಅದನ್ನು ಸ್ಥಿರಪಡಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಯೆಹೋಯಾದಾವನ ಮಗನಾದ ಬೆನಾಯನು, “ಆಮೆನ್, ನಿನ್ನ ದೇವರಾದ ಯೆಹೋವನು ಇದನ್ನು ಕಾರ್ಯಗತಗೊಳಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಯೆಹೋಯಾದಾವನ ಮಗ ಬೆನಾಯನು ಅರಸನಿಗೆ ಉತ್ತರವಾಗಿ, “ಆಮೆನ್, ಅರಸನಾದ ನನ್ನ ಒಡೆಯನ ದೇವರಾದ ಯೆಹೋವ ದೇವರು ಹಾಗೆಯೇ ಹೇಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:36
16 ತಿಳಿವುಗಳ ಹೋಲಿಕೆ  

ಸಭೆಯಲ್ಲಿ ನೀನು ಆತ್ಮದಿಂದ ಮಾತ್ರ ದೇವರ ಸ್ತುತಿಮಾಡಿದರೆ ನಿನ್ನ ಹಾಗೆ ಪರವಶನಲ್ಲದವನು ನಿನ್ನ ಕೃತಜ್ಞತಾ ಸ್ತುತಿಗೆ ‘ಆಮೆನ್’ ಎಂದು ಹೇಗೆ ತಾನೇ ಹೇಳಬಲ್ಲನು? ನೀನು ಹೇಳುವುದೇ ಅವನಿಗೆ ತಿಳಿಯುವುದಿಲ್ಲವಲ್ಲಾ!


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ.’


“ಆಮೆನ್! ಸರ್ವೇಶ್ವರ ಹಾಗೆಯೇ ಮಾಡಲಿ! ಸರ್ವೇಶ್ವರ ತಮ್ಮ ಆಲಯದ ಉಪಕರಣಗಳನ್ನೂ ಸೆರೆಹೋದವರೆಲ್ಲರನ್ನೂ ಬಾಬಿಲೋನಿನಿಂದ ಈ ಸ್ಥಳಕ್ಕೆ ಪುನಃ ಬರಮಾಡಲಿ. ನೀನು ನುಡಿದ ಮಾತುಗಳನ್ನು ನೆರವೇರಿಸಲಿ!


ಹಾಲೂ ಜೇನೂ ಹರಿಯುವ ನಾಡನ್ನು, ಅಂದರೆ ಇಂದು ನೀವಿರುವ ನಾಡನ್ನು, ಕೊಡುವುದಾಗಿ ನಿಮ್ಮ ಮೂಲಪಿತೃಗಳಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು’ ಎಂದು ಹೇಳಿದ್ದೆ. ಈ ಒಡಂಬಡಿಕೆಯ ವಚನಗಳಿಗೆ ಕಿವಿಗೊಡದವನು ಶಾಪಗ್ರಸ್ತನು. ಇದು ಇಸ್ರಯೇಲಿನ ದೇವರಾದ ಸರ್ವೇಶ್ವರ ಹೇಳುವ ಮಾತು.” ಆಗ ನಾನು, “ತಮ್ಮ ಅಪ್ಪಣೆಯಂತಾಗಲಿ, ಸರ್ವೇಶ್ವರಾ,” ಎಂದು ಉತ್ತರಕೊಟ್ಟೆ.


‘ನನಗೆ ಪಿತ, ದೈವ, ದುರ್ಗ, ಉದ್ಧಾರಕ, ನೀನು’ I ಇಂತೆಂದೇ ನನ್ನನು ಸಂಬೋಧಿಸುವನವನು II


“ನನ್ನ ದಾಸ ದಾವೀದನನು ಗುರುತಿಸಿರುವೆ I ಪವಿತ್ರ ತೈಲದಿಂದವನನು ಅಭಿಷೇಕಿಸಿರುವೆ II


ಮಹಿಮಾಯುಕ್ತ ಆತನ ನಾಮಕೆ ಸದಾಕಾಲವು ಸ್ತುತಿ I ಆಮೆನ್ ಆಮೆನ್ ಭೂಮಂಡಲವೆಲ್ಲಾ ಆತನ ಪ್ರಭಾವ ಪೂರ್ತಿ I ಇತಿ, ಜೆಸ್ಸೆಯನ ಕುವರ ದಾವೀದನ ಪ್ರಾರ್ಥನೆಗಳ ಸಮಾಪ್ತಿ II


ದೇವಾ, ನೀಯೆನ್ನ ದೇವ, ನಿನಗಾಗಿ ನಾ ಕಾದಿರುವೆ I ನಿರ್ಜಲ ಮರುಭೂಮಿಯಲಿ ನೀರಿಗಾಗಿ ಹಾತೊರೆವಂತೆ I ನಿನಗೋಸ್ಕರ ಎನ್ನ ತನು ಸೊರಗಿದೆ, ಮನ ಬಾಯಾರಿದೆ II


ಪ್ರಭುವೇ ನನ್ನ ಕಲ್ಲುಕೋಟೆ, ನನಗೆ ವಿಮೋಚಕ I ಆತನೇ ನನ್ನ ದೇವ, ನನ್ನಾಶ್ರಯ ದುರ್ಗ I ಆತನೆನಗೆ ಗುರಾಣಿ, ಗಿರಿ, ರಕ್ಷಣಾಶೃಂಗ II


ಈಗ ನಿಮ್ಮ ದಾಸನ ಮನೆತನವನ್ನು ಆಶೀರ್ವದಿಸಿರಿ; ಅದನ್ನು ಸದಾಕಾಲ ನಿಮ್ಮ ಆಶ್ರಯದಲ್ಲಿ ಇಟ್ಟುಕೊಳ್ಳಬೇಕೆಂದು ಮನಸ್ಸು ಮಾಡಿದ್ದೀರಿ; ಸರ್ವೇಶ್ವರಾ, ನೀವು ಅದನ್ನು ಆಶೀರ್ವದಿಸಿದ್ದೀರಿ; ಅದು ನಿತ್ಯವು ಸೌಭಾಗ್ಯದಿಂದ ಇರುವುದು,” ಎಂದು ಪ್ರಾರ್ಥಿಸಿದನು.


ಯಾವನಾದರೂ ನನ್ನ ಒಡೆಯರಾದ ನಿಮ್ಮನ್ನು ಹಿಂಸಿಸಿ ಜೀವತೆಗೆಯಬೇಕೆಂದು ಇರುವಾಗ, ಆ ನಿಮ್ಮ ಜೀವ, ತಮ್ಮ ದೇವರಾದ ಸರ್ವೇಶ್ವರನ ರಕ್ಷಣೆಯಲ್ಲಿರುವ ಜೀವನಿಕ್ಷೇಪದಲ್ಲಿ ಸುಭದ್ರವಾಗಿರಲಿ; ಆದರೆ ನಿಮ್ಮ ಶತ್ರುಗಳ ಜೀವವನ್ನು ಕವಣೆಯ ಕಲ್ಲನ್ನೋ ಎಂಬಂತೆ ಎಸೆದುಬಿಡಲಿ.


ಯೆಹೋಯಾದಾವನ ಮಗ ಬೆನಾಯನು ‘ಕೆರೇತ್ಯ’, ‘ಪೆಲೇತ್ಯ,’ ಎಂಬ ಕಾವಲುದಂಡುಗಳ ಮುಖ್ಯಸ್ಥನಾಗಿದ್ದನು. ದಾವೀದನ ಮಕ್ಕಳೂ ಯಾಜಕರಾಗಿದ್ದರು.


ಆಮೇಲೆ ನೀವು ಅವನ ಹಿಂದೆ ಬನ್ನಿ; ಅವನು ಅರಮನೆಯನ್ನು ಪ್ರವೇಶಿಸಿ ನನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ನನಗೆ ಬದಲಾಗಿ ಆಳಬೇಕು. ನಾನು ಇಸ್ರಯೇಲರ ಮತ್ತು ಯೆಹೂದ್ಯರ ಮೇಲೆ ಅವನನ್ನೇ ಅಧಿಪತಿಯನ್ನಾಗಿ ನೇಮಿಸಿದ್ದೇನೆ,” ಎಂದನು.


ಸರ್ವೇಶ್ವರಸ್ವಾಮಿ ನನ್ನ ಒಡೆಯರೂ ಅರಸರೂ ಆದ ನಿಮ್ಮ ಸಂಗಡ ಇದ್ದ ಹಾಗೆ ಸೊಲೊಮೋನನ ಸಂಗಡವೂ ಇದ್ದು, ರಾಜ್ಯವನ್ನು ನನ್ನ ಒಡೆಯರೂ ಅರಸರೂ ಆದ ನಿಮ್ಮ ಕಾಲದಲ್ಲಿ ಇದ್ದುದಕ್ಕಿಂತ ಹೆಚ್ಚು ಅಭಿವೃದ್ಧಿಮಾಡಲಿ!” ಎಂದು ನುಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು