Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:37 - ಕನ್ನಡ ಸತ್ಯವೇದವು C.L. Bible (BSI)

37 ಸರ್ವೇಶ್ವರಸ್ವಾಮಿ ನನ್ನ ಒಡೆಯರೂ ಅರಸರೂ ಆದ ನಿಮ್ಮ ಸಂಗಡ ಇದ್ದ ಹಾಗೆ ಸೊಲೊಮೋನನ ಸಂಗಡವೂ ಇದ್ದು, ರಾಜ್ಯವನ್ನು ನನ್ನ ಒಡೆಯರೂ ಅರಸರೂ ಆದ ನಿಮ್ಮ ಕಾಲದಲ್ಲಿ ಇದ್ದುದಕ್ಕಿಂತ ಹೆಚ್ಚು ಅಭಿವೃದ್ಧಿಮಾಡಲಿ!” ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಆತನು ನನ್ನ ಒಡೆಯನಾದ ಅರಸನ ಸಂಗಡ ಇದ್ದ ಪ್ರಕಾರ ಸೊಲೊಮೋನನ ಸಂಗಡಲೂ ಇದ್ದು ರಾಜ್ಯವನ್ನು ನನ್ನ ಒಡೆಯನೂ, ಅರಸನೂ ಆದ ನಿನ್ನ ಕಾಲದಲ್ಲಿದ್ದದಕ್ಕಿಂತ ಹೆಚ್ಚಾಗಿ ಅಭಿವೃದ್ಧಿಮಾಡಲಿ” ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಆತನು ನನ್ನ ಒಡೆಯನಾದ ಅರಸನ ಸಂಗಡ ಇದ್ದ ಪ್ರಕಾರ ಸೊಲೊಮೋನನ ಸಂಗಡಲೂ ಇದ್ದು ರಾಜ್ಯವನ್ನು ನನ್ನ ಒಡೆಯನೂ ಅರಸನೂ ಆದ ನಿನ್ನ ಕಾಲದಲ್ಲಿದ್ದದ್ದಕ್ಕಿಂತ ಅಭಿವೃದ್ಧಿಮಾಡಲಿ ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ನನ್ನ ಒಡೆಯನಾದ ರಾಜನೇ, ನಿನಗೆ ಯಾವಾಗಲೂ ಸಹಾಯಮಾಡಿದ ಯೆಹೋವನು ಸೊಲೊಮೋನನಿಗೂ ಸಹಾಯ ಮಾಡಲಿ. ನಿನ್ನ ರಾಜ್ಯಕ್ಕಿಂತಲೂ ಸೊಲೊಮೋನನ ರಾಜ್ಯವು ಹೆಚ್ಚು ಬಲಿಷ್ಠವಾಗಲಿ.” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಯೆಹೋವ ದೇವರು ಅರಸನಾದ ನನ್ನ ಒಡೆಯನ ಸಂಗಡ ಹೇಗೆ ಇದ್ದರೋ, ಹಾಗೆಯೇ ಸೊಲೊಮೋನನ ಸಂಗಡ ಇದ್ದು, ನನ್ನ ಒಡೆಯನೂ, ಅರಸನೂ ಆದ ದಾವೀದನ ಸಿಂಹಾಸನಕ್ಕಿಂತ ಇವನ ಸಿಂಹಾಸನವನ್ನು ಅಧಿಕವಾಗಿ ಮಾಡಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:37
21 ತಿಳಿವುಗಳ ಹೋಲಿಕೆ  

ಅರಸ ದಾವೀದನ ಸೇವಕರು ನಮ್ಮ ಒಡೆಯನೂ ಅರಸನೂ ಆದ ದಾವೀದನ ಮುಂದೆ ಬಂದು, ‘ನಿಮ್ಮ ದೇವರು ನಿಮ್ಮ ಹೆಸರಿಗಿಂತಲೂ ಸೊಲೊಮೋನನ ಹೆಸರನ್ನು ಪ್ರಸಿದ್ಧಿಗೆ ತರಲಿ! ರಾಜ್ಯವನ್ನು ನಿಮ್ಮ ಕಾಲದಲ್ಲಿ ಇದ್ದುದಕ್ಕಿಂತ ಅವನ ಕಾಲದಲ್ಲಿ ಹೆಚ್ಚು ಅಭಿವೃದ್ಧಿಗೊಳಿಸಲಿ!’ ಎಂದು ಅವನನ್ನು ಹರಸಿದ್ದಾರೆ. ಅರಸನು ತನ್ನ ಹಾಸಿಗೆಯ ಮೇಲೆ ಬಿದ್ದುಕೊಂಡು,


ನನ್ನ ತಂದೆ ನಿನಗೆ ಕೇಡುಮಾಡಲು ಮನಸ್ಸುಮಾಡಿದ್ದಾರೆಂದು ಗೊತ್ತಾದರೆ, ಅದನ್ನೂ ನಿನಗೆ ತಿಳಿಸಿ ನೀನು ತಪ್ಪಿಸಿಕೊಂಡು ಸುರಕ್ಷಿತನಾಗುವ ಹಾಗೆ ನಿನ್ನನ್ನು ಕಳುಹಿಸಿಬಿಡುವೆನು. ಹಾಗೆ ಮಾಡದಿದ್ದರೆ, ಸರ್ವೇಶ್ವರ ನನಗೆ ಏನು ಬೇಕಾದರೂ ಮಾಡಲಿ. ಅವರು ನನ್ನ ತಂದೆಯೊಂದಿಗೆ ಇದ್ದಹಾಗೆ ನಿನ್ನೊಂದಿಗೂ ಇರಲಿ.


ಮೋಶೆಯ ಮಾತುಗಳನ್ನೆಲ್ಲ ಕೇಳಿದಂತೆ ನಿಮ್ಮ ಮಾತುಗಳನ್ನೂ ಕೇಳುತ್ತೇವೆ. ದೇವರಾದ ಸರ್ವೇಶ್ವರ ಮೋಶೆಯ ಸಂಗಡ ಇದ್ದ ಹಾಗೆ ನಿಮ್ಮ ಸಂಗಡವೂ ಇರಲಿ.


ನಿನ್ನ ಜೀವಮಾನವಿಡೀ ಯಾರೊಬ್ಬನು ನಿನ್ನನ್ನು ಎದುರಿಸಿ ನಿಲ್ಲನು. ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರುವೆನು. ನಿನ್ನನ್ನು ಕೈಬಿಡುವುದಿಲ್ಲ, ನಿನ್ನನ್ನು ತೊರೆದುಬಿಡುವುದಿಲ್ಲ.


ಹೀಗಿರುವಲ್ಲಿ ನಾವು ಏನು ಹೇಳೋಣ? ದೇವರೇ ನಮ್ಮ ಪರ ಇರುವಾಗ ನಮ್ಮನ್ನು ವಿರೋಧಿಸುವವರು ಯಾರು?


“ಇಮ್ಮಾನುವೇಲ್” ಎಂದರೆ, “ದೇವರು ನಮ್ಮೊಡನೆ ಇದ್ದಾರೆ” ಎಂದು ಅರ್ಥ.


ಸಕಲ ರಾಷ್ಟ್ರ-ಕುಲ-ಭಾಷೆಗಳವರು ಅವನಿಗೆ ಸೇವೆ ಸಲ್ಲಿಸಲೆಂದು ಅವನಿಗೆ ದೊರೆತನ, ಘನತೆ, ರಾಜ್ಯತ್ವ ಇವುಗಳನ್ನು ಕೊಡಲಾಯಿತು. ಅವನ ಆಳ್ವಿಕೆಗೆ ಅಂತ್ಯವಿಲ್ಲ, ಅದು ಶಾಶ್ವತವಾದುದು, ಅವನ ರಾಜ್ಯ ಎಂದಿಗೂ ಅಳಿಯದು!


ವ್ಯರ್ಥವಾಗುವುದು ನೀವು ಮಾಡಿದ ಸಮಾಲೋಚನೆ; ಕೈಗೂಡದು ನೀವು ಮಾಡಿದ ಪ್ರತಿಜ್ಞೆ; ಕಾರಣ, ದೇವನಿರುವನು ನಮ್ಮೊಡನೆ.”


ಮಾಡುವೆನವನನು ಜೇಷ್ಠಪುತ್ರನನ್ನಾಗಿ I ಭೂರಾಜರುಗಳೊಳು ಅತ್ಯುನ್ನತನನ್ನಾಗಿ I


ಸಾಗರದಿಂದ ಸಾಗರದವರೆಗಿರಲಿ ಆತನ ಆಧಿಪತ್ಯ I ಮಹಾ ನದಿಯಿಂದ ಬುವಿ ಎಲ್ಲೆಯವರೆಗಿರಲಿ ಆತನ ಪ್ರಭುತ್ವ II


ನಮ್ಮ ಕಡೆಯಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವರು ನಮಗಾಶ್ರಯ ದೇವರು II


ನಮ್ಮ ಕಡೆಯಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವರು ನಮಗಾಶ್ರಯ ದುರ್ಗವು II


ದಾವೀದನ ಮಗ ಸೊಲೊಮೋನನು ತನ್ನ ರಾಜ್ಯದ ಮೇಲೆ ಸಂಪೂರ್ಣ ಪ್ರಭುತ್ವ ಹೊಂದಿದನು. ಅವನ ದೇವರಾದ ಸರ್ವೇಶ್ವರಸ್ವಾಮಿ ಅವನನ್ನು ಹರಸಿ ಮಹಾ ಬಲಾಢ್ಯನಾಗುವಂತೆ ಮಾಡಿದರು.


ಆಮೇಲೆ ದಾವೀದನು ತನ್ನ ಮಗ ಸೊಲೊಮೋನನಿಗೆ, “ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು; ಅಂಜಬೇಡ, ಕಳವಳಗೊಳ್ಳಬೇಡ. ನನ್ನ ದೇವರಾಗಿರುವ ಸರ್ವೇಶ್ವರಸ್ವಾಮಿ ನಿನ್ನೊಂದಿಗೆ ಇರುತ್ತಾರೆ; ಅವರು ತಮ್ಮ ಆಲಯದ ಎಲ್ಲಾ ಕೆಲಸ ತೀರುವವರೆಗೂ ನಿನ್ನನ್ನು ಕೈಬಿಡುವುದಿಲ್ಲ, ತೊರೆಯುವುದಿಲ್ಲ.


ಅವರು ಆಚೆ ದಡಕ್ಕೆ ಸೇರಿದ ಮೇಲೆ ಎಲೀಯನು ಎಲೀಷನನ್ನು, “ನಿನ್ನನ್ನು ಬಿಟ್ಟುಹೋಗುವ ಮೊದಲು ನಾನು ನಿನಗೋಸ್ಕರ ಏನು ಮಾಡಬೇಕನ್ನುತ್ತಿ ಹೇಳು?” ಎಂದು ಕೇಳಿದನು. ಅದಕ್ಕೆ ಎಲೀಷನು, “ನಿಮಗಿರುವ ಆತ್ಮಶಕ್ತಿಯಲ್ಲಿ ನನಗೆ ಎರಡು ಪಾಲನ್ನು ಅನುಗ್ರಹಿಸಿ,” ಎಂದು ಬೇಡಿಕೊಂಡನು.


ಆಗ ಯೋವಾಬನು, “ನನ್ನ ಒಡೆಯರಾದ ತಮ್ಮ ಆಯುಷ್ಕಾಲದಲ್ಲೇ ದೇವರಾದ ಸರ್ವೇಶ್ವರ ತಮ್ಮ ಪ್ರಜೆಯನ್ನು ಈಗ ಇರುವುದಕ್ಕಿಂತ ನೂರರಷ್ಟು ಹೆಚ್ಚಿಸಲಿ. ನನ್ನ ಒಡೆಯರಾದ ಅರಸರು ಈ ಕಾರ್ಯಕ್ಕೆ ಮನಸ್ಸುಮಾಡಿದ್ದೇಕೆ?” ಎಂದನು.


ಅದಕ್ಕೆ ದೇವರು, “ನಾನೇ ನಿನ್ನ ಸಂಗಡ ಇರುವೆನು; ನೀನು ನನ್ನ ಜನರನ್ನು ಈಜಿಪ್ಟಿನಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ದೇವರನ್ನು ಆರಾಧಿಸುವಿರಿ. ನಿನ್ನನ್ನು ಕಳಿಸಿದವನು ನಾನೇ ಎಂಬುದಕ್ಕೆ ಇದೇ ನಿನಗೆ ಗುರುತಾಗಿ ಇರುವುದು,” ಎಂದರು.


ಯೆಹೋಯಾದಾವನ ಮಗ ಬೆನಾಯನು ಅರಸನಿಗೆ, “ಹಾಗೆಯೇ ಆಗಲಿ; ನನ್ನ ಒಡೆಯರ ಹಾಗು ಅರಸರ ದೇವರಾದ ಸರ್ವೇಶ್ವರ ಇದನ್ನು ಸ್ಥಿರಪಡಿಸಲಿ.


ಸರ್ವೇಶ್ವರ ಇಸ್ರಯೇಲರೆಲ್ಲರಿಗೆ ಗೊತ್ತಾಗುವಂತೆ ಸೊಲೊಮೋನನನ್ನು ಅಭಿವೃದ್ಧಿಪಡಿಸಿದರು; ಅವನಿಗಿಂತ ಮೊದಲು ಇಸ್ರಯೇಲರನ್ನಾಳಿದ ಎಲ್ಲಾ ಅರಸರ ವೈಭವಕ್ಕಿಂತಲೂ ಹೆಚ್ಚಿನ ವೈಭವವನ್ನು ಅವನಿಗೆ ಅನುಗ್ರಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು