Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:4 - ಕನ್ನಡ ಸತ್ಯವೇದವು C.L. Bible (BSI)

4 ಬಹಳ ಚೆಲುವೆ ಆದ ಆಕೆ ಅರಸನನ್ನು ಶುಶ್ರೂಷೆ ಮಾಡುವ ದಾದಿಯಾದಳು. ಆದರೆ ಅರಸ ಅಬೀಷಗಳನ್ನು ಕೂಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಬಹು ಸುಂದರಿಯಾದ ಈಕೆಯು ಅರಸನನ್ನು ಶುಶ್ರೂಷೆ ಮಾಡುವ ಸೇವಕಿಯಾದಳು. ಆದರೆ ಅರಸನು ಈಕೆಯನ್ನು ಸಂಗಮಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಬಹು ಸುಂದರಿಯಾದ ಈಕೆಯು ಅರಸನನ್ನು ಪರಾಂಬರಿಸುವ ಸೇವಕಿಯಾದಳು. ಅರಸನು ಈಕೆಯನ್ನು ಸಂಗವಿುಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆ ಯುವತಿಯು ಬಹಳ ಸೌಂದರ್ಯವತಿಯಾಗಿದ್ದಳು. ಅವಳು ರಾಜನ ಆರೈಕೆಯನ್ನು ಮಾಡಿದಳು ಮತ್ತು ಅವನ ಸೇವೆಯನ್ನೂ ಮಾಡಿದಳು. ರಾಜನಾದ ದಾವೀದನು ಅವಳನ್ನು ಕೂಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಈ ಸೌಂದರ್ಯವತಿಯಾದ ಹುಡುಗಿಯು ಅರಸನ ಆರೈಕೆ ಮಾಡುತ್ತಾ, ಅವನ ಸೇವೆ ಮಾಡುತ್ತಿದ್ದಳು. ಅರಸನು ಅವಳೊಂದಿಗೆ ಸಂಪರ್ಕ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:4
6 ತಿಳಿವುಗಳ ಹೋಲಿಕೆ  

ಆದರೆ ಆಕೆಯೊಡನೆ ಲೈಂಗಿಕ ಸಂಬಂಧವಿಲ್ಲದೆ ಇದ್ದನು. ಆಕೆ ಗಂಡುಮಗುವಿಗೆ ಜನ್ಮವಿತ್ತಳು. ಜೋಸೆಫನು ಆ ಮಗುವಿಗೆ ‘ಯೇಸು’ ಎಂದು ನಾಮಕರಣ ಮಾಡಿದನು.


ಅದರಂತೆಯೇ, ಇಸ್ರಯೇಲರ ಪ್ರಾಂತ್ಯಗಳಲೆಲ್ಲಾ ಅತಿ ಸುಂದರಿಯಾದ ಒಬ್ಬ ಹುಡುಗಿಯನ್ನು ಹುಡುಕುವುದಕ್ಕೆ ಹೋದರು. ಶೂನೇಮ್ ಊರಿನ ಅಬೀಷಗ್ ಎಂಬವಳನ್ನು ಕಂಡುಹಿಡಿದು ಆಕೆಯನ್ನು ಅರಸನ ಬಳಿಗೆ ಕರೆದುಕೊಂಡು ಬಂದರು.


ಈಗಾಗಲೇ ಅಬ್ಷಾಲೋಮನು ಸತ್ತುಹೋಗಿದ್ದನು. ದಾವೀದನಿಗೆ ಹಗ್ಗೀತಳಲ್ಲಿ ಹುಟ್ಟಿದ ಅದೋನಿಯನೇ ಜೀವದಿಂದ ಉಳಿದವರಲ್ಲಿ ಹಿರಿಯ ಮಗ. ಅವನು ಬಹಳ ಸುಂದರನು. ದಾವೀದನು ಯಾವುದೇ ವಿಷಯದಲ್ಲಿ ಅವನನ್ನು ಎಂದೂ ಗದರಿಸಿರಲಿಲ್ಲ. ತಾನೇ ರಾಜನಾಗಬೇಕೆಂಬ ಆಕಾಂಕ್ಷೆ ಅವನದು. ಎಂದೇ ತನಗೋಸ್ಕರ ರಥ, ರಥಾಶ್ವಗಳನ್ನು ಹಾಗು ಐವತ್ತು ಮಂದಿ ಬೆಂಗಾವಲಿಗರನ್ನು ನೇಮಿಸಿಕೊಂಡಿದ್ದನು.


ಅವನು, “ದಯವಿಟ್ಟು ಶೂನೇಮ್ಯಳಾದ ಅಬೀಷಗಳನ್ನು ನನಗೆ ಹೆಂಡತಿಯನ್ನಾಗಿ ಕೊಡಬೇಕೆಂದು ಅರಸ ಸೊಲೊಮೋನನಿಗೆ ಹೇಳಿ; ಅವನು ನಿಮ್ಮ ಮಾತನ್ನು ತಳ್ಳುವುದಿಲ್ಲ,” ಎಂದನು.


ಆಕೆ, “ಶೂನೇಮ್ಯಳಾದ ಅಬೀಷಗಳು ನಿನ್ನ ಅಣ್ಣ ಅದೋನೀಯನಿಗೆ ಹೆಂಡತಿಯಾಗಲು ಅಪ್ಪಣೆಯಾಗಲಿ,” ಎಂದಳು.


ಈಜಿಪ್ಟನ್ನು ಪ್ರವೇಶಿಸುವುದಕ್ಕೆ ಮುಂಚೆಯೆ ತನ್ನ ಹೆಂಡತಿ ಸಾರಯಳಿಗೆ, “ನೀನು ಬಲು ಚೆಲುವಾದ ಹೆಣ್ಣು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು