Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:44 - ಕನ್ನಡ ಸತ್ಯವೇದವು C.L. Bible (BSI)

44 ಯಾಜಕ ಚಾದೋಕ್, ಪ್ರವಾದಿ ನಾತಾನ್ ಹಾಗು ಯೆಹೋಯಾದಾವನ ಮಗ ಬೆನಾಯ ಇವರನ್ನೂ ಕೆರೇತ್ಯ-ಪೆಲೇತ್ಯರನ್ನೂ ಅರಸರು ಅವನ ಜೊತೆಯಲ್ಲಿ ಕಳುಹಿಸಿದ್ದಾರೆ. ಅವರು ಅವನನ್ನು ಅರಸನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಅರಸನು ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ್ ಯೆಹೋಯಾದಾವನ ಮಗನಾದ ಬೆನಾಯ ಎಂಬುವರನ್ನೂ, ಕೆರೇತ್ಯ ಮತ್ತು ಪೆಲೇತ್ಯರನ್ನೂ ಅವನ ಜೊತೆಯಲ್ಲಿ ಕಳುಹಿಸಿದ್ದಾನೆ. ಅವರು ಅವನನ್ನು ಅರಸನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಅರಸನು ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ್, ಯೆಹೋಯಾದಾವನ ಮಗನಾದ ಬೆನಾಯ ಎಂಬವರನ್ನೂ ಕೆರೇತ್ಯ ಪೆಲೇತ್ಯರನ್ನೂ ಅವನ ಜೊತೆಯಲ್ಲಿ ಕಳುಹಿಸಿದ್ದಾನೆ. ಅವರು ಅವನನ್ನು ಅರಸನ ಹೇಸರ ಕತ್ತೆಯ ಮೇಲೆ ಕುಳ್ಳಿರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ರಾಜನಾದ ದಾವೀದನು ಯಾಜಕನಾದ ಚಾದೋಕನನ್ನು, ಪ್ರವಾದಿಯಾದ ನಾತಾನನನ್ನು, ಯೆಹೋಯಾದಾವನ ಮಗನಾದ ಬೆನಾಯನನ್ನು ಮತ್ತು ರಾಜನ ಎಲ್ಲಾ ಅಧಿಕಾರಿಗಳನ್ನು ಅವನೊಂದಿಗೆ ಕಳುಹಿಸಿದನು. ಅವರು ಸೊಲೊಮೋನನನ್ನು ರಾಜನ ಸ್ವಂತ ಹೇಸರಕತ್ತೆಯ ಮೇಲೆ ಕುಳ್ಳಿರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಇದಲ್ಲದೆ ಅರಸನು ಅವನ ಸಂಗಡ ಯಾಜಕನಾದ ಚಾದೋಕನನ್ನೂ, ಪ್ರವಾದಿ ನಾತಾನನನ್ನೂ, ಯೆಹೋಯಾದಾವನ ಮಗ ಬೆನಾಯನನ್ನೂ, ಕೆರೇತ್ಯರನ್ನೂ, ಪೆಲೇತ್ಯರನ್ನೂ ಕಳುಹಿಸಿದ್ದಾನೆ. ಅವರು ಅವನನ್ನು ಅರಸನ ಹೇಸರಕತ್ತೆಯ ಮೇಲೆ ಕೂಡಿಸಿಕೊಂಡು ಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:44
10 ತಿಳಿವುಗಳ ಹೋಲಿಕೆ  

ಕೆರೇತ್ಯರೂ ಯೆಹೂದ್ಯರೂ ಕಾಲೇಬ್ಯರೂ ಇರುವ ದಕ್ಷಿಣ ಪ್ರಾಂತ್ಯವನ್ನು ನಾವು ಸೂರೆಮಾಡಿ ಚಿಕ್ಲಗ್ ಊರನ್ನು ಸುಟ್ಟುಬಿಟ್ಟು ಬಂದೆವು,” ಎಂದು ಉತ್ತರಕೊಟ್ಟನು.


ಯೆಹೋಯಾದಾವನ ಮಗ ಬೆನಾಯನು ‘ಕೆರೇತ್ಯ’, ‘ಪೆಲೇತ್ಯ,’ ಎಂಬ ಕಾವಲುದಂಡುಗಳ ಮುಖ್ಯಸ್ಥನಾಗಿದ್ದನು. ದಾವೀದನ ಮಕ್ಕಳೂ ಯಾಜಕರಾಗಿದ್ದರು.


ಯೋನಾತಾನನು, “ಶುಭಸಮಾಚಾರವಲ್ಲ! ನಮ್ಮೊಡೆಯನೂ ಅರಸನೂ ಆದ ದಾವೀದನು ಸೊಲೊಮೋನನನ್ನು ಅರಸನನ್ನಾಗಿ ಮಾಡಿದ್ದಾನೆ.


ಯಾಜಕ ಚಾದೋಕನೂ ಪ್ರವಾದಿ ನಾತಾನನೂ ಗೀಹೋನಿನ ಬಳಿಯಲ್ಲಿ ಅವನಿಗೆ ರಾಜಾಭಿಷೇಕ ಮಾಡಿದ್ದಾರೆ. ಅಲ್ಲಿಂದ ಅವರು ಹರ್ಷಾನಂದದಿಂದ ಆರ್ಭಟಿಸುತ್ತಾ ಪಟ್ಟಣಕ್ಕೆ ಬಂದಿದ್ದಾರೆ. ಇದರಿಂದಲೇ ಪಟ್ಟಣದಲ್ಲಿ ಗದ್ದಲವುಂಟಾಗಿದೆ; ನೀವು ಕೇಳಿದ ಆರ್ಭಟವು ಇದೇ.


ಸಿಬೆಯೋನನಿಗೆ ಅಯ್ಯಾ ಮತ್ತು ಅನಾಹ ಎಂಬ ಇಬ್ಬರು ಮಕ್ಕಳು. ಈ ಅನಾಹನೇ ತನ್ನ ತಂದೆ ಸಿಬೆಯೋನನ ಕತ್ತೆಗಳನ್ನು ಮೇಯಿಸುತ್ತಿದ್ದಾಗ ಕಾಡಿನಲ್ಲಿ ಬಿಸಿ ನೀರಿನ ಒರತೆಗಳನ್ನು ಕಂಡುಹಿಡಿದವನು.


ಆಗ ಅವನು ಯೋವಾಬನ ಸೈನಿಕರನ್ನೂ, ‘ಕೆರೇತ್ಯ’ ಹಾಗು ‘ಪೆಲೇತ್ಯ’ ಎಂಬ ಕಾವಲುದಂಡುಗಳನ್ನೂ ಎಲ್ಲಾ ಶೂರರನ್ನೂ ಕರೆದುಕೊಂಡು ಬಿಕ್ರೀಯ ಮಗನಾದ ಶೆಬನನ್ನು ಬೆನ್ನಟ್ಟುವುದಕ್ಕಾಗಿ ಜೆರುಸಲೇಮಿನಿಂದ ಹೊರಟನು.


ಅವರು ಸನ್ನಿಧಿಗೆ ಬರಲು ಅರಸನು ಅವರಿಗೆ, “ನೀವು ನನ್ನ ಸೇವಕರನ್ನು ಕರೆದುಕೊಂಡು, ನನ್ನ ಮಗ ಸೊಲೊಮೋನನನ್ನು ನನ್ನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿಕೊಂಡು, ಗೀಹೋನ್ ಬುಗ್ಗೆಗೆ ಹೋಗಿರಿ.


ಆಗ ಅರಸ ದಾವೀದನು ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದನು.


ಯೆಹೋಯಾದಾವನ ಮಗ ಬಿನಾಯನು ‘ಕೆರೇತ್ಯ’, ‘ಪೆಲೇತ್ಯ’ ಎಂಬ ಕಾವಲುದಂಡುಗಳ ಮುಖ್ಯಸ್ಥನಾಗಿದ್ದನು. ದಾವೀದನ ಮಕ್ಕಳು ಅರಸನ ಒಡ್ಡೋಲಗದಲ್ಲಿ ಪ್ರಧಾನರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು