Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:47 - ಕನ್ನಡ ಸತ್ಯವೇದವು C.L. Bible (BSI)

47 ಅರಸ ದಾವೀದನ ಸೇವಕರು ನಮ್ಮ ಒಡೆಯನೂ ಅರಸನೂ ಆದ ದಾವೀದನ ಮುಂದೆ ಬಂದು, ‘ನಿಮ್ಮ ದೇವರು ನಿಮ್ಮ ಹೆಸರಿಗಿಂತಲೂ ಸೊಲೊಮೋನನ ಹೆಸರನ್ನು ಪ್ರಸಿದ್ಧಿಗೆ ತರಲಿ! ರಾಜ್ಯವನ್ನು ನಿಮ್ಮ ಕಾಲದಲ್ಲಿ ಇದ್ದುದಕ್ಕಿಂತ ಅವನ ಕಾಲದಲ್ಲಿ ಹೆಚ್ಚು ಅಭಿವೃದ್ಧಿಗೊಳಿಸಲಿ!’ ಎಂದು ಅವನನ್ನು ಹರಸಿದ್ದಾರೆ. ಅರಸನು ತನ್ನ ಹಾಸಿಗೆಯ ಮೇಲೆ ಬಿದ್ದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಅರಸನಾದ ದಾವೀದನ ಸೇವಕರು ನಮ್ಮ ಒಡೆಯನೂ, ಅರಸನೂ ಆದ ದಾವೀದನ ಮುಂದೆ ಬಂದು, ‘ನಿನ್ನ ದೇವರು ನಿನ್ನ ಹೆಸರಿಗಿಂತಲೂ ಸೊಲೊಮೋನನ ಹೆಸರನ್ನು ಪ್ರಸಿದ್ಧಿಗೆ ತರಲಿ. ರಾಜ್ಯವನ್ನು ನಿನ್ನ ಕಾಲದಲ್ಲಿ ಇದ್ದದ್ದಕ್ಕಿಂತ ಅವನ ಕಾಲದಲ್ಲಿ ಹೆಚ್ಚು ಬಲಪಡಿಸಲಿ’ ಎಂದು ಅವನನ್ನು ಹರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಅರಸನಾದ ದಾವೀದನ ಸೇವಕರು ನಮ್ಮ ಒಡೆಯನೂ ಆರಸನೂ ಆದ ದಾವೀದನ ಮುಂದೆ ಬಂದು - ನಿನ್ನ ದೇವರು ನಿನ್ನ ಹೆಸರಿಗಿಂತಲೂ ಸೊಲೊಮೋನನ ಹೆಸರನ್ನು ಪ್ರಸಿದ್ಧಿಗೆ ತರಲಿ. ರಾಜ್ಯವನ್ನು ನಿನ್ನ ಕಾಲದಲ್ಲಿದ್ದದ್ದಕ್ಕಿಂತ ಅವನ ಕಾಲದಲ್ಲಿ ಹೆಚ್ಚು ಬಲಪಡಿಸಲಿ ಎಂದು ಅವನನ್ನು ಹರಸಿದ್ದಾರೆ; ಅರಸನು ತನ್ನ ಹಾಸಿಗೆಯ ಮೇಲೆ ಬಿದ್ದುಕೊಂಡು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ಇದರ ಹೊರತು ಅರಸನ ಸೇವಕರೂ, ನಮ್ಮ ಯಜಮಾನನೂ, ಅರಸನೂ ಆದ ದಾವೀದನನ್ನು ಆಶೀರ್ವದಿಸಲು ಬಂದು, ‘ದೇವರು ಸೊಲೊಮೋನನ ಹೆಸರನ್ನು ನಿಮ್ಮ ಹೆಸರಿಗಿಂತಲೂ ಪ್ರಸಿದ್ಧ ಮಾಡಲಿ. ಅವನ ಸಿಂಹಾಸನವನ್ನು ನಿಮ್ಮ ಸಿಂಹಾಸನಕ್ಕಿಂತ ದೊಡ್ಡದಾಗಿ ಮಾಡಲಿ,’ ಎಂದೂ ಹೇಳುತ್ತಿರುವಾಗ, ಅರಸನು ಮಂಚದ ಮೇಲೆ ಬಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:47
9 ತಿಳಿವುಗಳ ಹೋಲಿಕೆ  

ಸರ್ವೇಶ್ವರಸ್ವಾಮಿ ನನ್ನ ಒಡೆಯರೂ ಅರಸರೂ ಆದ ನಿಮ್ಮ ಸಂಗಡ ಇದ್ದ ಹಾಗೆ ಸೊಲೊಮೋನನ ಸಂಗಡವೂ ಇದ್ದು, ರಾಜ್ಯವನ್ನು ನನ್ನ ಒಡೆಯರೂ ಅರಸರೂ ಆದ ನಿಮ್ಮ ಕಾಲದಲ್ಲಿ ಇದ್ದುದಕ್ಕಿಂತ ಹೆಚ್ಚು ಅಭಿವೃದ್ಧಿಮಾಡಲಿ!” ಎಂದು ನುಡಿದನು.


ಆಗ ಯಕೋಬನು ಆ ಹಾಸಿಗೆಯ ತಲೆಭಾಗದ ಕಡೆ ಬಾಗಿ ಸ್ತೋತ್ರ ಮಾಡಿದನು.


ವಿಶ್ವಾಸದಿಂದಲೇ ಯಕೋಬನು, ತಾನು ಸಾಯುವ ಸಮಯದಲ್ಲಿ ಜೋಸೆಫನ ಪ್ರತಿಯೊಬ್ಬ ಮಗನನ್ನೂ ಆಶೀರ್ವದಿಸಿದನು; ಊರುಗೋಲಿನ ಮೇಲೆ ಬಾಗಿಕೊಂಡೇ ದೇವರನ್ನು ಆರಾಧಿಸಿದನು.


“ಸರ್ವೇಶ್ವರನ ನಾಮದಲಿ ಬರುವ ಅರಸನಿಗೆ ಜಯಜಯವಾಗಲಿ! ಶಾಂತಿ ಸ್ವರ್ಗದಲಿ, ಮಹಿಮೆ ಮಹೋನ್ನತದಲಿ!” ಎಂದು ಜಯಘೋಷ ಮಾಡುತ್ತಿದ್ದರು.


ಅವರಾದರೋ ಪರಲೋಕ ದೇವರಿಗೆ ಸುಗಂಧಹೋಮಗಳನ್ನು ಸಮರ್ಪಿಸಿ, ರಾಜನ ಮತ್ತು ರಾಜಪುತ್ರರ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥನೆ ಮಾಡಲಿ.


ಆಗ ಅರಸ ದಾವೀದನು ಗಿಬ್ಯೋನ್ಯರನ್ನು ಕರೆದು, “ನಾನು ನಿಮ್ಮ ಪರವಾಗಿ ಏನು ಮಾಡಬೇಕೆನ್ನುತ್ತೀರಿ? ನಿಮಗೆ ಪ್ರಾಯಶ್ಚಿತ್ತವಾಗಿ ಯಾವುದನ್ನು ಕೊಟ್ಟರೆ ನೀವು ಸರ್ವೇಶ್ವರನ ಪ್ರಜೆಯನ್ನು ಆಶೀರ್ವದಿಸುವಿರಿ?” ಎಂದು ಕೇಳಿದನು.


ತೋವಿಗೂ ಹದದೆಜೆರನಿಗೂ ಹಗೆತನವಿತ್ತು. ದಾವೀದನು ಹದದೆಜೆರನ ಮೇಲೆ ದಾಳಿಮಾಡಿ ಅವನನ್ನು ಸೋಲಿಸಿದುದರಿಂದ ತೋವು ದಾವೀದನನ್ನು ಅಭಿನಂದಿಸುವುದಕ್ಕಾಗಿ ಹಾಗು ಹರಸುವುದಕ್ಕಾಗಿ ತನ್ನ ಮಗ ಯೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೆ ತಾಮ್ರ, ಬೆಳ್ಳಿ ಹಾಗು ಬಂಗಾರದ ಪಾತ್ರೆಗಳನ್ನು ತಂದನು.


ನೀವು ಕೇಳಿಕೊಂಡಂತೆ ಸರ್ವೇಶ್ವರನನ್ನು ಆರಾಧಿಸಿ. ನಿಮ್ಮ ಕೋರಿಕೆಯಂತೆ ಕುರಿದನಗಳನ್ನೂ ತೆಗೆದುಕೊಂಡು ಹೋಗಬಹುದು. ನನ್ನ ಹಿತಕ್ಕಾಗಿಯೂ ಪ್ರಾರ್ಥನೆಮಾಡಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು