Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:5 - ಕನ್ನಡ ಸತ್ಯವೇದವು C.L. Bible (BSI)

5-6 ಈಗಾಗಲೇ ಅಬ್ಷಾಲೋಮನು ಸತ್ತುಹೋಗಿದ್ದನು. ದಾವೀದನಿಗೆ ಹಗ್ಗೀತಳಲ್ಲಿ ಹುಟ್ಟಿದ ಅದೋನಿಯನೇ ಜೀವದಿಂದ ಉಳಿದವರಲ್ಲಿ ಹಿರಿಯ ಮಗ. ಅವನು ಬಹಳ ಸುಂದರನು. ದಾವೀದನು ಯಾವುದೇ ವಿಷಯದಲ್ಲಿ ಅವನನ್ನು ಎಂದೂ ಗದರಿಸಿರಲಿಲ್ಲ. ತಾನೇ ರಾಜನಾಗಬೇಕೆಂಬ ಆಕಾಂಕ್ಷೆ ಅವನದು. ಎಂದೇ ತನಗೋಸ್ಕರ ರಥ, ರಥಾಶ್ವಗಳನ್ನು ಹಾಗು ಐವತ್ತು ಮಂದಿ ಬೆಂಗಾವಲಿಗರನ್ನು ನೇಮಿಸಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆನಂತರ ಹಗ್ಗೀತಳ ಮಗನಾದ ಅದೋನೀಯನು, “ನಾನೇ ಅರಸನಾಗತಕ್ಕವನು” ಎಂಬುದಾಗಿ ಹೇಳಿ ಉಬ್ಬಿಕೊಂಡು, ತನಗೋಸ್ಕರ ರಥರಥಾಶ್ವಗಳನ್ನೂ, ಮುಂದೆ ಓಡುವುದಕ್ಕಾಗಿ ಐವತ್ತು ಸಿಪಾಯಿಗಳನ್ನೂ ನೇಮಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹಗ್ಗೀತಳ ಮಗನಾದ ಅದೋನೀಯನು ನಾನೇ ಅರಸನಾಗತಕ್ಕವನು ಎಂಬದಾಗಿ ಉಬ್ಬಿಕೊಂಡು ತನಗೋಸ್ಕರ ರಥರಥಾಶ್ವಗಳನ್ನೂ ಮುಂದೆ ಓಡುವದಕ್ಕಾಗಿ ಐವತ್ತು ಮಂದಿ ಸಿಪಾಯಿಗಳನ್ನೂ ಇಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ರಾಜನಾದ ದಾವೀದನ ಮಗನಾದ ಅದೋನೀಯನು ಬಹಳ ಗರ್ವಿಷ್ಠನಾದನು. ಅವನು, “ನಾನೇ ರಾಜನಾಗುತ್ತೇನೆ” ಎಂದು ಹೇಳಿಕೊಂಡನು. (ಅದೋನೀಯನ ತಾಯಿಯ ಹೆಸರು ಹಗ್ಗೀತ.) ಅದೋನೀಯನು ರಾಜನಾಗಬೇಕೆಂಬುದಾಗಿ ಬಹಳ ಆಸೆಪಟ್ಟನು. ಆದ್ದರಿಂದ ಅವನು ತನಗಾಗಿ ಒಂದು ರಥವನ್ನು, ಕುದುರೆಗಳನ್ನು ಮತ್ತು ರಥದ ಮುಂದೆ ಓಡುವಂತಹ ಐವತ್ತು ಜನರನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಹಗ್ಗೀತಳ ಮಗನಾದ ಅದೋನೀಯನು ತನ್ನನ್ನು ಹೆಚ್ಚಿಸಿಕೊಂಡು, “ನಾನು ಅರಸನಾಗಿರಬೇಕು,” ಎಂದುಕೊಂಡು, ತನಗೋಸ್ಕರ ರಥಗಳನ್ನೂ, ಸಾರಥಿಯರನ್ನೂ, ತನ್ನ ಮುಂದೆ ಓಡುವುದಕ್ಕೆ ಐವತ್ತು ಮಂದಿ ಪುರುಷರನ್ನೂ ಸಿದ್ಧಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:5
19 ತಿಳಿವುಗಳ ಹೋಲಿಕೆ  

ಸ್ವಲ್ಪಕಾಲವಾದನಂತರ ಅಬ್ಷಾಲೋಮನು ತನ್ನ ಮುಂದೆ ಮೈಗಾವಲಾಗಿ ಓಡುವುದಕ್ಕೆ ಐವತ್ತು ಮಂದಿ ಆಳುಗಳನ್ನು ನೇಮಿಸಿದನು. ಅದಕ್ಕಾಗಿ ಒಂದು ರಥವನ್ನೂ ಕುದುರೆಗಳನ್ನೂ ಪಡೆದುಕೊಂಡನು.


ನಾಲ್ಕನೆಯವನು ಅದೋನೀಯನು; ಇವನು ಹಗ್ಗೀತಳ ಮಗ.


“ದೇವರ ದೃಷ್ಟಿಯಲ್ಲಿ ಪಾಪಮುಕ್ತನಾಗಿ ಮನೆಗೆ ತೆರಳಿದವನು ಈ ಸುಂಕವಸೂಲಿಯವನು, ಆ ಫರಿಸಾಯನಲ್ಲ, ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಏಕೆಂದರೆ, ತನ್ನನ್ನು ತಾನೇ ಮೇಲಕ್ಕೇರಿಸಿಕೊಳ್ಳುವವನನ್ನು ದೇವರು ಕೆಳಗಿಳಿಸುವರು. ತನ್ನನ್ನು ತಾನೇ ಕೆಳಗಿಳಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು,” ಎಂದರು ಯೇಸು.


ಅಂತೆಯೇ, ತನ್ನನ್ನು ತಾನೇ ಮೇಲಕ್ಕೆ ಏರಿಸಿಕೊಳ್ಳುವವನನ್ನು ದೇವರು ಕೆಳಗಿಳಿಸುವರು; ತನ್ನನ್ನು ತಾನೇ ತಗ್ಗಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು,” ಎಂದರು.


ನಾಡು ಬೆಳ್ಳಿಬಂಗಾರದಿಂದ ತುಂಬಿಹೋಗಿದೆ. ಜನರ ನಿಧಿನಿಕ್ಷೇಪಗಳಿಗೆ ಮಿತಿಯಿಲ್ಲದಂತಿದೆ. ಎಲ್ಲಾ ಕಡೆ ಅಶ್ವಬಲ ಯಥೇಚ್ಛವಾಗಿದೆ. ರಥಗಳು ಅಪಾರವಾಗಿವೆ.


ಭಂಗಕ್ಕೆ ಮುಂಚೆ ಗರ್ವದ ಗುಂಡಿಗೆ; ಗೌರವಕ್ಕೆ ಮೊದಲು ನಮ್ರತೆ.


ವಿನಾಶಕ್ಕೆ ಮುಂಚೆ ವಿಪರೀತ ಬುದ್ಧಿ; ನೆಲಕ್ಕುರುಳುವುದಕ್ಕೆ ಮುಂಚೆ ನೆತ್ತಿಗೇರಿತು ಸೊಕ್ಕು.


ತರುವಾಯ ಅರಸ ದಾವೀದನು, “ದೇವರು ನನ್ನ ಮಗ ಸೊಲೊಮೋನನನ್ನೇ ಆರಿಸಿಕೊಂಡಿದ್ದಾರೆ. ಆದರೆ ಅವನು ಇನ್ನೂ ಚಿಕ್ಕವನು. ಮಾಡತಕ್ಕ ಕೆಲಸವೋ ವಿಶೇಷವಾದದ್ದು. ಕಟ್ಟ ತಕ್ಕ ಮಂದಿರ ದೇವರಾದ ಸರ್ವೇಶ್ವರನಿಗಾಗಿ!


ನನಗೆ ದಯಪಾಲಿಸಿದ ಅನೇಕ ಮಕ್ಕಳಲ್ಲಿ ನನ್ನ ಮಗ ಸೊಲೊಮೋನನನ್ನು ಸರ್ವೇಶ್ವರನ ರಾಜ್ಯಸಿಂಹಾಸನವಾಗಿರುವ ಇಸ್ರಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸುವುದಕ್ಕೆ ಆರಿಸಿಕೊಂಡರು.


ನನ್ನ ತಂದೆ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕುಳ್ಳಿರಿಸಿ, ಅಭಿವೃದ್ಧಿಗೊಳಿಸಿ, ತಾವು ವಾಗ್ದಾನ ಮಾಡಿದಂತೆ ನನಗೆ ಮನೆತನವನ್ನು ಕಟ್ಟಿದ ಸರ್ವೇಶ್ವರನಾಣೆ, ಅದೋನೀಯನು ಈ ದಿನವೇ ಸಾಯಬೇಕು,” ಎಂದು ಹೇಳಿದನು.


ಆಗ ನಾತಾನನು ಸೊಲೊಮೋನನ ತಾಯಿಯಾದ ಬತ್ಷೆಬೆಗೆ, “ಹಗ್ಗೀತಳ ಮಗ ಅದೋನೀಯನು, ನಮ್ಮ ಒಡೆಯ ದಾವೀದರಿಗೆ ತಿಳಿಯದೆಯೇ ಅರಸನಾದನೆಂಬುದನ್ನು ನೀನು ಕೇಳಿರಬೇಕಲ್ಲವೆ?


ನೀನು ನನ್ನ ಜನರನ್ನು ಇನ್ನೂ ಹೋಗಗೊಡಿಸದೆ ಅವರ ಮುಂದೆ ಅಡ್ಡಿ ಆತಂಕಗಳನ್ನು ಒಡ್ಡುತ್ತಿರುವೆಯೋ?


ಅಬ್ಷಾಲೋಮ - ಗೆಷೂರಿನ ಅರಸ ತಲ್ಮೈಯ ಮಗಳು ಮಾಕ ಇವನ ತಾಯಿ. ಅದೋನಿಯ - ಹಗ್ಗೀತ್ ಇವನ ತಾಯಿ.


“ನೀವು ದಯವಿಟ್ಟು ಶೆಕೆಮಿನ ಹಿರಿಯರೊಡನೆ ಮಾತಾಡಬೇಕು. ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳು ನಿಮ್ಮನ್ನು ಆಳುವುದು ಒಳ್ಳೆಯದೋ ಅಥವಾ ಒಬ್ಬನೇ ಆಳುವುದು ಮೇಲೋ? ಎಂದು ಅವರನ್ನು ವಿಚಾರಿಸಬೇಕು; ನಾನು ಅವರ ರಕ್ತಸಂಬಂಧಿಯಾಗಿದ್ದೇನೆಂಬುದನ್ನು ಜ್ಞಾಪಕಪಡಿಸಬೇಕು” ಎಂದು ಕೇಳಿಕೊಂಡನು.


ಬಹಳ ಚೆಲುವೆ ಆದ ಆಕೆ ಅರಸನನ್ನು ಶುಶ್ರೂಷೆ ಮಾಡುವ ದಾದಿಯಾದಳು. ಆದರೆ ಅರಸ ಅಬೀಷಗಳನ್ನು ಕೂಡಲಿಲ್ಲ.


ಆಗ ಅವನು, “ರಾಜ್ಯ ನನಗೆ ಬರಬೇಕಾಗಿತ್ತು; ನಾನೇ ಅರಸನಾಗುವೆನೆಂದು ಇಸ್ರಯೇಲರೆಲ್ಲರು ಎದುರು ನೋಡುತ್ತಿದ್ದರೆಂಬುದು ನಿನಗೆ ತಿಳಿದ ವಿಷಯ. ಆದರೆ ಅದು ತಪ್ಪಿ ನನ್ನ ತಮ್ಮನಿಗೆ ಹೋಯಿತು. ಅದು ಸರ್ವೇಶ್ವರನಿಂದಲೇ ಅವನಿಗೆ ದೊರಕಿತು.


ಹಗ್ಗೀತಳ ಮಗ ಅದೋನೀಯನು ಸೊಲೊಮೋನನ ತಾಯಿಯಾದ ಬತ್ಷೆಬೆಯ ದರ್ಶನಕ್ಕೆ ಬಂದನು. ಆಕೆ ಅವನನ್ನು, “ನೀನು ಸಮಾಧಾನದಿಂದ ಬಂದಿರುತ್ತೀಯೋ?” ಎಂದು ಕೇಳಿದಳು. ಅವನು, “ಹೌದು, ಸಮಾಧಾನದಿಂದ ಬಂದಿದ್ದೇನೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು