1 ಅರಸುಗಳು 1:52 - ಕನ್ನಡ ಸತ್ಯವೇದವು C.L. Bible (BSI)52 ಆಗ ಸೊಲೊಮೋನನು, “ಅದೋನೀಯನು ಸತ್ಪುರುಷನಾಗಿ ನಡೆಯುವುದಾದರೆ ಅವನ ಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಗೊಡಿಸುವುದಿಲ್ಲ; ಆದರೆ ಅವನಲ್ಲಿ ಕೆಟ್ಟತನ ಕಂಡುಬರುವುದಾದರೆ, ಅವನು ಖಂಡಿತವಾಗಿ ಸಾಯುವನು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201952 ಅವನು, “ಅದೋನೀಯನು ಯೋಗ್ಯತೆಯುಳ್ಳವನಾಗಿ ನಡೆಯುವುದಾದರೆ ಅವನ ಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಗೊಡಿಸುವುದಿಲ್ಲ. ಆದರೆ ಅವನಲ್ಲಿ ಕೆಟ್ಟತನವು ಕಂಡುಬರುವುದಾದರೆ ಅವನು ಸಾಯುವನು” ಎಂದು ಹೇಳಿ ಆಳುಗಳನ್ನು ಕಳುಹಿಸಿ ಅವನನ್ನು ಯಜ್ಞವೇದಿಯ ಬಳಿಯಿಂದ ಕರೆಯಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)52 ಅವನು - ಅದೋನೀಯನು ಸತ್ಪುರುಷನಾಗಿ ನಡೆಯುವದಾದರೆ ಅವನ ಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಗೊಡುವದಿಲ್ಲ; ಅವನಲ್ಲಿ ಕೆಟ್ಟತನವು ಕಂಡುಬರುವದಾದರೆ ಅವನು ಸಾಯುವನು ಎಂದು ಹೇಳಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್52 ಆದ್ದರಿಂದ ಸೊಲೊಮೋನನು, “ಅದೋನೀಯನು ತಾನು ಒಳ್ಳೆಯ ಮನುಷ್ಯನೆಂದು ನಿರೂಪಿಸಿದರೆ ಅವನ ತಲೆಯ ಒಂದು ಕೂದಲಿಗೂ ತೊಂದರೆಯಾಗುವುದಿಲ್ಲವೆಂದು ನಾನು ಪ್ರಮಾಣ ಮಾಡುತ್ತೇನೆ. ಆದರೆ ಅವನೇನಾದರೂ ಕೇಡನ್ನು ಮಾಡಿದರೆ ಸಾಯುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ52 ಅದಕ್ಕೆ ಸೊಲೊಮೋನನು, “ಅವನು ಉತ್ತಮನಾಗಿ ನಡೆಯುವುದಾದರೆ, ಅವನ ಕೂದಲಲ್ಲಿ ಒಂದಾದರೂ ನೆಲಕ್ಕೆ ಬೀಳದು. ಆದರೆ ಅವನಲ್ಲಿ ಕೆಟ್ಟತನವು ಸಿಕ್ಕಿದರೆ ಅವನು ಸಾಯುವನು,” ಎಂದನು. ಅಧ್ಯಾಯವನ್ನು ನೋಡಿ |