1 ಅರಸುಗಳು 1:53 - ಕನ್ನಡ ಸತ್ಯವೇದವು C.L. Bible (BSI)53 ಆಳುಗಳನ್ನು ಕಳುಹಿಸಿ ಅವನನ್ನು ಬಲಿಪೀಠದ ಬಳಿಯಿಂದ ಕರೆದುತರುವಂತೆ ಮಾಡಿದನು. ಅವನು ಬಂದು, ಅರಸ ಸೊಲೊಮೋನನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದನು. ಸೊಲೊಮೋನನು ಅವನಿಗೆ ಮನೆಗೆ ಹೋಗಲು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201953 ಅವನು ಬಂದಾಗ ಅರಸನಾದ ಸೊಲೊಮೋನನಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ಸೊಲೊಮೋನನು ಅವನಿಗೆ ಅವನ ಮನೆಗೆ ಹೋಗಲು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)53 ಆಳುಗಳನ್ನು ಕಳುಹಿಸಿ ಅವನನ್ನು ಯಜ್ಞವೇದಿಯ ಬಳಿಯಿಂದ ತರಿಸಿದನು. ಅವನು ಬಂದಾಗ ಅರಸನಾದ ಸೊಲೊಮೋನನಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ಸೊಲೊಮೋನನು ಅವನಿಗೆ ಮನೆಗೆ ಹೋಗ ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್53 ರಾಜನಾದ ಸೊಲೊಮೋನನು ಅದೋನೀಯನನ್ನು ಕರೆತರಲು ಕೆಲವು ಜನರನ್ನು ಕಳುಹಿಸಿದನು. ಅವರು ಅದೋನೀಯನನ್ನು ರಾಜನಾದ ಸೊಲೊಮೋನನ ಬಳಿಗೆ ಕರೆದುತಂದರು. ಅದೋನೀಯನು ರಾಜನಾದ ಸೊಲೊಮೋನನ ಬಳಿಗೆ ಬಂದು, ಸಾಷ್ಟಾಂಗನಮಸ್ಕಾರ ಮಾಡಿದನು. ಸೊಲೊಮೋನನು ಅವನಿಗೆ, “ಮನೆಗೆ ಹೋಗು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ53 ಅರಸನಾದ ಸೊಲೊಮೋನನು ಅವನನ್ನು ಕರೆಸಿದಾಗ, ಬಲಿಪೀಠದ ಬಳಿಯಿಂದ ಅವನನ್ನು ಕರೆದುಕೊಂಡು ಬಂದರು. ಆಗ ಅವನು ಬಂದು ಅರಸನಾದ ಸೊಲೊಮೋನನಿಗೆ ಅಡ್ಡಬಿದ್ದನು. ಸೊಲೊಮೋನನು ಅವನಿಗೆ, “ನಿನ್ನ ಮನೆಗೆ ಹೋಗು,” ಎಂದನು. ಅಧ್ಯಾಯವನ್ನು ನೋಡಿ |