Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:7 - ಕನ್ನಡ ಸತ್ಯವೇದವು C.L. Bible (BSI)

7 ಜೆರೂಯಳ ಮಗ ಯೋವಾಬನನ್ನೂ ಯಾಜಕ ಎಬ್ಯಾತಾರನನ್ನೂ ತನ್ನ ಕಡೆಗೆ ಒಲಿಸಿಕೊಂಡಿದ್ದನು. ಇವರು ಅವನಿಗೆ ಬೆಂಬಲ ವ್ಯಕ್ತಪಡಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವನು ಚೆರೂಯಳ ಮಗನಾದ ಯೋವಾಬನನ್ನು ಮತ್ತು ಯಾಜಕನಾದ ಎಬ್ಯಾತಾರನನ್ನೂ ತನ್ನ ಕಡೆಗೆ ಒಲಿಸಿಕೊಂಡನು. ಇವರು ಅವನನ್ನು ಹಿಂಬಾಲಿಸಿ ಅವನಿಗೆ ಸಹಾಯಕರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವನು ಚೆರೂಯಳ ಮಗನಾದ ಯೋವಾಬನನ್ನೂ ಯಾಜಕನಾದ ಎಬ್ಯಾತಾರನನ್ನೂ ತನ್ನ ಕಡೆಗೆ ಒಲಿಸಿಕೊಂಡನು. ಇವರು ಅವನಿಗೆ ಸಹಾಯಕರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅದೋನೀಯನು ಚೆರೂಯಳ ಮಗನಾದ ಯೋವಾಬ ಮತ್ತು ಯಾಜಕನಾದ ಎಬ್ಯಾತಾರನೊಂದಿಗೆ ಮಾತನಾಡಿದನು. ತಾನು ರಾಜನಾಗಬೇಕೆಂಬ ಅದೋನೀಯನ ಯೋಜನೆಗೆ ಅವರು ಬೆಂಬಲ ನೀಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅದೋನೀಯನು ಚೆರೂಯಳ ಮಗ ಯೋವಾಬ, ಯಾಜಕ ಅಬಿಯಾತರನ ಜೊತೆ ಸೇರಿ ಮಾತುಕತೆ ಮಾಡಿದನು. ಅವರು ಅದೋನೀಯನನ್ನು ಹಿಂಬಾಲಿಸಿ, ಅವನಿಗೆ ಸಹಾಯಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:7
12 ತಿಳಿವುಗಳ ಹೋಲಿಕೆ  

ಶೆವನು ಕಾರ್ಯದರ್ಶಿ, ಚಾದೋಕ್ ಹಾಗು ಎಬ್ಯಾತಾರರು ಯಾಜಕರು;


ಆಗ ಅರಸ ಸೊಲೊಮೋನನು ತನ್ನ ತಾಯಿಗೆ, “ಅದೋನೀಯನಿಗಾಗಿ ಶೂನೇಮ್ಯಳಾದ ಅಬೀಷಗಳನ್ನು ಮಾತ್ರ ಕೇಳುವುದೇಕೆ? ಅವನಿಗೆ ರಾಜ್ಯವನ್ನೂ ಕೊಡಬೇಕೆಂದು ಕೇಳು; ಅವನು ನನ್ನ ಅಣ್ಣನಲ್ಲವೇ? ಯಾಜಕ ಎಬ್ಯಾತಾರನೂ ಚೆರೂಯಳ ಮಗ ಯೋವಾಬನೂ ಅವನ ಪಕ್ಷದವರಾಗಿದ್ದಾರೆ,” ಎಂದು ಉತ್ತರಕೊಟ್ಟನು.


ದೇವನಿಗು, ಅವನಭಿಷಿಕ್ತನಿಗು ವಿರುದ್ಧವಾಗಿ I ನಿಂತಿಹರು ನೃಪರು ಸಮರ ಸನ್ನದ್ಧರಾಗಿ I ಸಮಾಲೋಚಿಸಿಹರು ಸಚಿವರು ರಹಸ್ಯವಾಗಿ II


‘ಯೆಬೂಸಿಯರಲ್ಲಿ ಒಬ್ಬನನ್ನು ಯಾರು ಮೊದಲು ಕೊಲ್ಲುವನೋ ಅವನು ನನ್ನ ದಳಪತಿಯಾಗುವನು’ ಎಂದು ದಾವೀದ ಪ್ರಕಟಿಸಿದ್ದನು. ಜೆರೂಯಳ ಮಗ ಯೋವಾಬನು ಯುದ್ಧದಲ್ಲಿ ಮುಂದೆ ಹೋಗಿ ಸೇನಾಪತಿಯಾದನು.


ಯೋವಾಬನು ಇಸ್ರಯೇಲರ ಮುಖ್ಯಸೇನಾಪತಿ. ಯೆಹೋಯಾದಾವನ ಮಗ ಬೆನಾಯಾಯನು ‘ಕೆರೇತ್ಯ’ ಹಾಗು ‘ಪೆಲೇತ್ಯ’ ಎಂಬ ಕಾವಲುದಂಡುಗಳ ಅಧಿಪತಿ.


ಅಲ್ಲಿ ನಿನ್ನ ಸಂಗಡ ಯಾಜಕರಾದ ಚಾದೋಕ್ ಹಾಗು ಎಬ್ಯಾತಾರರು ಇರುತ್ತಾರೆ ಅಲ್ಲವೆ; ಅರಮನೆಯಲ್ಲಿ ನಿನಗೆ ಗೊತ್ತಾಗುವ ವರ್ತಮಾನವನ್ನೆಲ್ಲಾ ಆ ಇಬ್ಬರು ಯಾಜಕರಿಗೆ ತಿಳಿಸು. ಅವರ ಬಳಿಯಲ್ಲಿ ಇಬ್ಬರು ಹುಡುಗರಿದ್ದಾರೆ;


ಇದಲ್ಲದೆ ಅವನು ಶಾಂತಿಸಮಾಧಾನದ ಬಲಿದಾನ ಮಾಡುತ್ತಿರುವಾಗ ದಾವೀದನ ಮಂತ್ರಿಯಾಗಿದ್ದ ಗೀಲೋವಿನ ಅಹೀತೋಫೆಲನೆಂಬವನನ್ನು ಅವನ ಊರಾದ ಗೀಲೋವಿನಿಂದ ಬರಮಾಡಿಸಿದ್ದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದುದರಿಂದ ಒಳಸಂಚು ಪ್ರಬಲವಾಗುತ್ತಾ ಹೋಯಿತು.


ಚೆರೂಯಳ ಮಗ ಯೋವಾಬನು ಅವನ ಸೇನಾಪತಿ ಆಗಿದ್ದನು. ಅಹೀಲೂದನ ಮಗ ಯೆಹೋಷಾಫಟನು ಅವನ ಮಂತ್ರಿ ಆಗಿದ್ದನು.


ಬೆನಾಯನ ಮಗ ಯೆಹೋಯಾದಾವನೂ ಎಬ್ಯಾತಾರನೂ ಅಹೀತೋಫೆಲನ ಉತ್ತರಾಧಿಕಾರಿಗಳು; ಯೋವಾಬನು ಅರಸನ ಸೈನ್ಯಾಧಿಪತಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು