Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:9 - ಕನ್ನಡ ಸತ್ಯವೇದವು C.L. Bible (BSI)

9 ಒಮ್ಮೆ ಅದೋನೀಯನು ರೋಗೆಲ್ ಬುಗ್ಗೆಯ ಬಳಿಯಿರುವ ಜೋಹೆಲೆತ್ ಬಂಡೆಯ ಮೇಲೆ ಕುರಿ, ಹೋರಿ ಮೊದಲಾದ ಕೊಬ್ಬಿದ ಪಶುಗಳನ್ನು ಬಲಿದಾನ ಮಾಡಿಸಿದನು; ಅರಸುಕುಮಾರರಾದ ತನ್ನ ಸಹೋದರರನ್ನು ಹಾಗು ಆಸ್ಥಾನದ ಎಲ್ಲ ಯೆಹೂದ್ಯ ಅಧಿಕಾರಿಗಳನ್ನು ಔತಣಕ್ಕೆ ಆಮಂತ್ರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅದೋನೀಯನು ರೋಗೆಲ್ ಬುಗ್ಗೆಯ ಬಳಿಯಲ್ಲಿರುವ ಚೋಹೆಲೆತ್ ಬಂಡೆಯ ಮೇಲೆ ಕುರಿ, ಹೋರಿ ಮೊದಲಾದ ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ, ರಾಜಪುತ್ರರಾದ ತನ್ನ ಉಳಿದ ಸಹೋದರರನ್ನೂ ಅರಸನ ಅಧಿಕಾರಿಗಳಾದ ಎಲ್ಲಾ ಯೆಹೂದ್ಯರನ್ನೂ ಔತಣಕ್ಕೆ ಆಮಂತ್ರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅದೋನೀಯನು ರೋಗೆಲ್ ಬುಗ್ಗೆಯ ಬಳಿಯಲ್ಲಿರುವ ಚೋಹೆಲೆತ್ ಬಂಡೆಯ ಮೇಲೆ ಕುರಿ, ಹೋರಿ ಮೊದಲಾದ ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ ಪ್ರವಾದಿಯಾದ ನಾತಾನ್, ಬೆನಾಯ, ಯುದ್ಧಭಟರು, ತಮ್ಮನಾದ ಸೊಲೊಮೋನ್ ಇವರನ್ನು ಬಿಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಒಂದು ದಿನ, ಅದೋನೀಯನು ಎನ್‌ರೋಗೆಲಿನ ಹತ್ತಿರದ ಚೋಹೆಲೆತ್ ಎಂಬ ಬಂಡೆಯ ಬಳಿ ಕೆಲವು ಕುರಿಗಳನ್ನು, ಹಸುಗಳನ್ನು ಮತ್ತು ಕೊಬ್ಬಿದ ಕರುಗಳನ್ನು ಸಮಾಧಾನಯಜ್ಞವಾಗಿ ಅರ್ಪಿಸಿದನು. ಅದೋನೀಯನು ತನ್ನ ಸಹೋದರರನ್ನು (ರಾಜನ ಇತರ ಗಂಡುಮಕ್ಕಳನ್ನು) ಮತ್ತು ಯೆಹೂದದ ಅಧಿಕಾರಿಗಳನ್ನು ಆಹ್ವಾನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅದೋನೀಯನು ಏನ್ ರೋಗೆಲಿನ ಬಳಿಯಲ್ಲಿರುವ ಚೋಹೆಲೆತ್ ಎಂಬ ಕಲ್ಲಿನ ಹತ್ತಿರ ಕುರಿಗಳನ್ನೂ, ಎತ್ತುಗಳನ್ನೂ, ಕೊಬ್ಬಿದ ಪಶುಗಳನ್ನೂ ಕೊಲ್ಲಿಸಿ, ಅರಸನ ಮಕ್ಕಳಾದ ತನ್ನ ಸಮಸ್ತ ಸಹೋದರರನ್ನೂ, ಅರಸನ ಸೇವಕರಾದ ಸಮಸ್ತ ಯೆಹೂದದ ಜನರನ್ನೂ ಔತಣಕ್ಕೆ ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:9
9 ತಿಳಿವುಗಳ ಹೋಲಿಕೆ  

ಯೋನಾತಾನ್ ಹಾಗು ಅಹೀಮಾಚರು ರೋಗೆಲಿನ ಬುಗ್ಗೆಯ ಬಳಿಯಲ್ಲಿದ್ದರು. ಇವರ ಮನೆಯ ದಾಸಿ ಎಲ್ಲಾ ವರ್ತಮಾನಗಳನ್ನು ಇವರಿಗೂ ಇವರ ಅರಸ ದಾವೀದನಿಗೂ ಮುಟ್ಟಿಸುವಂತೆ ಗೊತ್ತುಮಾಡಿಕೊಂಡಿದ್ದರು. ತಮ್ಮನ್ನು ಯಾರೂ ನೋಡಬಾರದೆಂದು ಇವರು ತಾವಾಗಿ ಊರೊಳಗೆ ಬರಲಿಲ್ಲ.


ದುರುಳರು ಅರ್ಪಿಸುವ ಬಲಿ ಸರ್ವೇಶ್ವರನಿಗೆ ಅಸಹ್ಯ; ಸಜ್ಜನರು ಮಾಡುವ ಪ್ರಾರ್ಥನೆ ಆತನಿಗೆ ಪ್ರಿಯ.


ಇವುಗಳ ಮೇಲೆ ದೆಬೀರಿಗೆ ಹೋಗುತ್ತದೆ. ಅದು ಅಲ್ಲಿಂದ ಉತ್ತರಕ್ಕೆ ತಿರುಗಿಕೊಂಡು ನದಿಯ ದಕ್ಷಿಣದಲ್ಲಿರುವ ಅದುಮೀಮಿಗೆ ಹೋಗುವ ದಾರಿಯ ಎದುರಿನಲ್ಲಿರುವ ಗಿಲ್ಗಾಲ್, ಏನ್ ಷೆಮೆಷ್ ಎನ್ನುವ ಬುಗ್ಗೆ, ಏನ್ ರೋಗೆಲ್ ಇವುಗಳ ಮೇಲೆ


ಪುನಃ ಬೇರೆ ಸೇವಕರನ್ನು ಅಟ್ಟಿದ. ‘ಔತಣ ಸಿದ್ಧವಾಗಿದೆ. ಕೊಬ್ಬಿನ ಮಾಂಸದ ಅಡಿಗೆಯನ್ನು ಮಾಡಿಸಿದ್ದೇನೆ. ಎಲ್ಲವೂ ಅಣಿಯಾಗಿದೆ. ಉತ್ಸವಕ್ಕೆ ಬೇಗ ಬನ್ನಿ’ ಎಂದು ಆಹ್ವಾನಿತರಿಗೆ ತಿಳಿಸುವಂತೆ ಹೇಳಿಕಳುಹಿಸಿದ.


ನೆಫ್ತೋಹ ಬುಗ್ಗೆಯ ಮೇಲೆ ಬೆನ್ ಹಿನ್ನೋಮ್ ಕಣಿವೆಯ ಉತ್ತರದಲ್ಲೂ ಇರುವ ಬೆಟ್ಟದ ಅಂಚಿಗೆ ಹೋಗಿ ಅಲ್ಲಿಂದ ಯೆಬೂಸಿಯರ ಬೆಟ್ಟದ ದಕ್ಷಿಣದಲ್ಲಿದ್ದ ಬೆನ್ ಹಿನ್ನೋಮ್ ಕಣಿವೆಯ ಮಾರ್ಗವಾಗಿ ಏನ್ ರೋಗೆಲಿಗೆ ಬರುತ್ತದೆ.


ಹೋರಿ, ಕುರಿ ಮೊದಲಾದ ಹಲವು ಕೊಬ್ಬಿದ ಪಶುಗಳನ್ನು ಬಲಿಯಾಗಿ ಅರ್ಪಿಸಿದ್ದಾನೆ; ನಿಮ್ಮ ಸೇವಕ ಸೊಲೊಮೋನನನ್ನು ಬಿಟ್ಟು, ಎಲ್ಲಾ ರಾಜಪುತ್ರರನ್ನು, ಯಾಜಕ ಎಬ್ಯಾತಾರನನ್ನು ಹಾಗು ಸೇನಾಪತಿ ಯೋವಾಬನನ್ನು ಔತಣಕ್ಕೆ ಕರೆದಿದ್ದಾನೆ.


ಅವನು ಇಲ್ಲಿಂದ ಇಳಿದುಹೋಗಿ ಹೋರಿ, ಕುರಿ ಮುಂತಾದ ಹಲವು ಕೊಬ್ಬಿದ ಪಶುಗಳನ್ನು ಬಲಿಯಾಗಿ ಅರ್ಪಿಸಿದ್ದಾನೆ. ರಾಜಪುತ್ರರೆಲ್ಲರನ್ನು, ಸೇನಾಪತಿಗಳನ್ನು ಹಾಗು ಯಾಜಕ ಎಬ್ಯಾತಾರನನ್ನು ಔತಣಕ್ಕೆ ಕರೆದಿದ್ದಾನೆ. ಅವರು ಅವನ ಪಂಕ್ತಿಯಲ್ಲೇ ಅನ್ನಪಾನಗಳನ್ನು ತೆಗೆದುಕೊಂಡು ಅರಸನಾದ ಅದೋನೀಯನು ಚಿರಂಜೀವಿಯಾಗಿ ಇರಲಿ!’ ಎಂದು ಕೂಗುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು