Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 10:10 - ಕನ್ನಡ ಸತ್ಯವೇದವು C.L. Bible (BSI)

10 ಆಕೆ ಅರಸನಿಗೆ ನಾಲ್ಕು ಸಾವಿರ ಕಿಲೋಗ್ರಾಂಗೂ ಹೆಚ್ಚು ಬಂಗಾರವನ್ನು, ಅಪರಿಮಿತ ಸುಗಂಧದ್ರವ್ಯವನ್ನು ಹಾಗು ರತ್ನಗಳನ್ನು ಕೊಟ್ಟಳು. ಶೆಬದ ರಾಣಿ ಅರಸ ಸೊಲೊಮೋನನಿಗೆ ಕೊಟ್ಟಷ್ಟು ಸುಗಂಧದ್ರವ್ಯವನ್ನು ಬೇರೆ ಯಾರೂ ಈ ನಾಡಿಗೆ ಕೊಟ್ಟಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಕೆಯು ಅರಸನಿಗೆ ನೂರಿಪ್ಪತ್ತು ತಲಾಂತು ಬಂಗಾರವನ್ನೂ, ಅಪರಿಮಿತ ಸುಗಂಧದ್ರವ್ಯವನ್ನೂ ಮತ್ತು ರತ್ನಗಳನ್ನೂ ಕೊಟ್ಟಳು. ಶೆಬೆದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಷ್ಟು ಸುಗಂಧದ್ರವ್ಯವನ್ನು ಅವನಿಗೆ ಪುನಃ ಯಾರು ಕೊಡಲಿಲ್ಲ. ಬರಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಕೆಯು ಅರಸನಿಗೆ ನೂರಿಪ್ಪತ್ತು ತಲಾಂತು ಬಂಗಾರವನ್ನೂ ಅಪರಿವಿುತ ಸುಗಂಧದ್ರವ್ಯವನ್ನೂ ರತ್ನಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಷ್ಟು ಸುಗಂಧದ್ರವ್ಯವು ದೇಶಕ್ಕೆ ತಿರಿಗಿ ಬರಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಂತರ ಶೆಬದ ರಾಣಿಯು ರಾಜನಿಗೆ ನಾಲ್ಕು ಸಾವಿರದ ಎಂಭತ್ತು ಕಿಲೋಗ್ರಾಂ ಬಂಗಾರವನ್ನು ಕೊಟ್ಟಳು. ಅವಳು ಅವನಿಗೆ ಅನೇಕ ಸಾಂಬಾರ ಪದಾರ್ಥಗಳನ್ನು ಮತ್ತು ರತ್ನಗಳನ್ನು ಕೊಟ್ಟಳು. ಹಿಂದೆಂದೂ ಯಾರೂ ಇಸ್ರೇಲಿಗೆ ತೆಗೆದುಕೊಂಡು ಬಂದಿಲ್ಲದಷ್ಟು ಸಾಂಬಾರ ಪದಾರ್ಥಗಳನ್ನು ಶೆಬದ ರಾಣಿಯು ಸೊಲೊಮೋನನಿಗೆ ಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವಳು ಅರಸನಿಗೆ ನಾಲ್ಕು ಸಾವಿರ ಕಿಲೋಗ್ರಾಂ ತೂಕ ಬಂಗಾರವನ್ನೂ, ಬಹು ಸಮೃದ್ಧಿಯಾದ ಸುಗಂಧದ್ರವ್ಯಗಳನ್ನೂ, ಅಮೂಲ್ಯವಾದ ರತ್ನಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟ ಅಪರಿಮಿತವಾದ ಸುಗಂಧದ್ರವ್ಯಗಳ ಹಾಗೆ ಬೇರೆ ಯಾರೂ ಕೊಟ್ಟಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 10:10
12 ತಿಳಿವುಗಳ ಹೋಲಿಕೆ  

ಆಕೆ ಸುಗಂಧದ್ರವ್ಯ, ಅಪರಿಮಿತವಾದ ಬಂಗಾರ, ರತ್ನ, ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾಪರಿವಾರದೊಡನೆ ಜೆರುಸಲೇಮಿಗೆ ಬಂದಳು. ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಸೊಲೊಮೋನನೊಡನೆ ಸಂಭಾಷಿಸಿದಳು.


ಜ್ಯೋತಿಷಿಗಳು ಆ ಮನೆಯನ್ನು ಪ್ರವೇಶಿಸಿ ಮಗುವನ್ನು ತಾಯಿ ಮರಿಯಳ ಬಳಿ ಕಂಡು ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ತಮ್ಮ ತಮ್ಮ ಬೊಕ್ಕಸಗಳನ್ನು ಬಿಚ್ಚಿ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳ ಇವುಗಳನ್ನು ಮಗುವಿಗೆ ಪಾದಕಾಣಿಕೆಯಾಗಿ ಸಮರ್ಪಿಸಿದರು.


ಅರಸ ಬಾಳಲಿ ಚಿರಕಾಲ; ದೊರಕಲಿ ಆತನಿಗೆ ಶೆಬಾದ ಬಂಗಾರ I ಜರುಗಲಿ ಪ್ರಾರ್ಥನೆ ಸದಾಕಾಲ; ಆಶೀರ್ವಾದ ಸಿಗಲಿ ಅನವರತ II


ಕಪ್ಪಗಳನರ್ಪಿಸಲಿ ತಾರ್ಷಿಷ್ ಹಾಗೂ ದ್ವೀಪದ್ವೀಪದ ರಾಜರುಗಳು I ಕಾಣಿಕೆಗಳ ತಂದೊಪ್ಪಿಸಲಿ ಶೆಬಾ ಹಾಗೂ ಸೆಬಾದ ರಾಜರುಗಳು II


ಹೀರಾಮನು ಸೊಲೊಮೋನನಿಗೆ, ನಾಲ್ಕು ಸಾವಿರ ಕಿಲೋಗ್ರಾಂ ಬಂಗಾರವನ್ನು ಕೊಟ್ಟನು.


ಸರ್ವೇಶ್ವರ ಮೋಶೆಗೆ ಮತ್ತೆ ಆಜ್ಞಾಪಿಸಿದ್ದೇನೆಂದರೆ: “ನೀನು ಹಾಲುಮಡ್ಡಿ, ಗುಗ್ಗುಲ ಹಾಗು ಗಂಧದಚೆಕ್ಕೆ ಎಂಬ ಪರಿಮಳ ದ್ರವ್ಯಗಳನ್ನು ಮತ್ತು ಸ್ವಚ್ಚವಾದ ಧೂಪವನ್ನು ಸಮಭಾಗವಾಗಿ ತೆಗೆದುಕೊಂಡು ಸುವಾಸನೆಯುಳ್ಳ ಬುಕ್ಕಿಟ್ಟಾಗಿರುವಂತೆ


ಇಷ್ಟಾದ ಮೇಲೆ ಅವರ ತಂದೆ ಯಕೋಬನು, “ನೀವು ಹೋಗಲೇಬೇಕಾದರೆ, ಒಂದು ಕೆಲಸಮಾಡಿ; ಈ ನಾಡಿನಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಚೀಲದಲ್ಲಿ ಹಾಕಿಕೊಂಡು ಹೋಗಿ, ಆ ಮನುಷ್ಯನಿಗೆ ಕಾಣಿಕೆಯಾಗಿ ಕೊಡಿ.


ದೇವರ ತೇಜಸ್ಸಿನಿಂದ ಕೂಡಿತ್ತು; ಅಮೂಲ್ಯ ರತ್ನದಂತೆ ಹೊಳೆಯುತ್ತಿತ್ತು; ಸ್ವಚ್ಛವಾದ ಸ್ಫಟಿಕದಂತೆ ಶುಭ್ರವಾಗಿತ್ತು.


ಹೊನ್ನು ಉಂಟು, ಹವಳದ ರಾಶಿ ಉಂಟು; ಆದರೆ ತಿಳುವಳಿಕೆಯುಳ್ಳ ತುಟಿಗಳು ಬೆಲೆಮೀರಿದ ಆಭರಣಗಳು.


ಜೆರುಸಲೇಮಿನ ನಿನ್ನ ಮಹಾದೇವಾಲಯದ ಪ್ರಯುಕ್ತ I ಅರಸರು ನಿನಗೆ ಕಾಣಿಕೆಯನು ತಂದೊಪ್ಪಿಸುವುದು ಅತಿಸೂಕ್ತ II


ಬೆಳ್ಳಿಬಂಗಾರಗಳನ್ನೂ ಅರಸರ ಹಾಗೂ ಸಾಮಂತರ ಕಪ್ಪಕಾಣಿಕೆಗಳನ್ನೂ ಶೇಖರಿಸಿಕೊಂಡೆ. ಗಾಯಕಗಾಯಕಿಯರೂ ಭೋಗವಿಲಾಸಕ್ಕಾಗಿ ಹಲವಾರು ಉಪಪತ್ನಿಯರೂ ನನಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು