Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 10:18 - ಕನ್ನಡ ಸತ್ಯವೇದವು C.L. Bible (BSI)

18 ಇದಲ್ಲದೆ, ಅರಸನು ದೊಡ್ಡದಾದ ಒಂದು ದಂತಸಿಂಹಾಸನವನ್ನು ಮಾಡಿಸಿ ಅದನ್ನು ಚೊಕ್ಕಬಂಗಾರದ ತಗಡಿನಿಂದ ಹೊದಿಸಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇದಲ್ಲದೆ ಅರಸನು ದೊಡ್ಡದಾದ ಒಂದು ದಂತ ಸಿಂಹಾಸನವನ್ನು ಮಾಡಿಸಿ ಅದಕ್ಕೆ ಚೊಕ್ಕ ಬಂಗಾರದ ತಗಡನ್ನು ಹೊದಿಸಿದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇದಲ್ಲದೆ ಅರಸನು ದೊಡ್ಡದಾದ ಒಂದು ದಂತ ಸಿಂಹಾಸನವನ್ನು ಮಾಡಿಸಿ ಅದನ್ನು ಚೊಕ್ಕಬಂಗಾರದ ತಗಡಿನಿಂದ ಹೊದಿಸಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ರಾಜನಾದ ಸೊಲೊಮೋನನು ವಿಶಾಲವಾದ ದಂತದ ಸಿಂಹಾಸನವನ್ನು ಸಹ ಮಾಡಿಸಿದನು. ಅವನು ಅಪ್ಪಟ ಚಿನ್ನದ ತಗಡನ್ನು ಅದಕ್ಕೆ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅರಸನು ದಂತದಿಂದ ದೊಡ್ಡ ಸಿಂಹಾಸನವನ್ನು ಮಾಡಿಸಿ, ಅದನ್ನು ಚೊಕ್ಕ ಬಂಗಾರದಿಂದ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 10:18
14 ತಿಳಿವುಗಳ ಹೋಲಿಕೆ  

ಘಮಘಮಿಸುತಿದೆ ನಿನ್ನುಡಿಗೆ ರಸಗಂಧ, ಅಗರು, ಚಂದನಗಳಿಂದ I ಮನರಂಜನೆಗೊಳ್ಳುತಿರುವೆ ದಂತ ಮಂದಿರದುನ್ನತ ವಾದ್ಯಗಳಿಂದ II


ಹೀರಾಮನ ನಾವೆಗಳ ಜೊತೆಯಲ್ಲಿ ಸೊಲೊಮೋನನ ತಾರ್ಷಿಷ್ ಹಡಗುಗಳು ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ಕಪಿ, ನವಿಲು ಇವುಗಳನ್ನು ತರುತ್ತಿದ್ದವು.


ಅನಂತರ ಶ್ವೇತವರ್ಣದ ಒಂದು ಮಹಾಸಿಂಹಾಸನವನ್ನು ಕಂಡೆ. ಅದರಲ್ಲಿ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ತಮ್ಮ ಇರುವಿಕೆಯೇ ಇಲ್ಲದಂತೆ ಕಣ್ಮರೆಯಾಗಿ ಹೋದವು.


ಇವರು ಚಿನ್ನ, ಬೆಳ್ಳಿ, ಮುತ್ತು ರತ್ನಾಭರಣಗಳನ್ನೂ ನಯವಾದ ನಾರುಮಡಿ, ಕೆನ್ನೀಲಿಯ ವಸ್ತ್ರ, ರೇಷ್ಮೆ ಬಟ್ಟೆ ಮತ್ತು ಕಡುಗೆಂಪು ಉಡುಪುಗಳನ್ನೂ ಎಲ್ಲಾ ಬಗೆಯ ಗಂಧಕ ಚಕ್ಕೆಗಳನ್ನೂ ಎಲ್ಲಾ ವಿಧದ ದಂತದ ಸಾಮಾನುಗಳನ್ನೂ ಬಹು ಬೆಲೆಬಾಳುವ ಮರದ, ಕಂಚಿನ, ಕಬ್ಬಿಣದ, ಚಂದ್ರಕಾಂತ ಶಿಲೆಯ ಸಾಮಾನುಗಳನ್ನೂ ಅವಳಿಗೆ ಮಾರುತ್ತಿದ್ದರು.


ತಮ್ಮ ಪುತ್ರನನ್ನು ಕುರಿತಾದರೋ: “ದೇವಾ, ನಿನ್ನ ಸಿಂಹಾಸನವು ಶಾಶ್ವತವಾದುದು; ನ್ಯಾಯದಂಡವೇ ನಿನ್ನ ರಾಜದಂಡವಾಗಿದೆ.


ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ.


ದಂತದ ಮಂಚಗಳ ಮೇಲೆ ಮಲಗುವ ಜನರೇ, ನಿಮಗೆ ಧಿಕ್ಕಾರ! ಸುಖಾಸನಗಳಲ್ಲೂ ಸುಪ್ಪತ್ತಿಗೆಯ ಮೇಲೂ ಹಾಯಾಗಿ ಒರಗಿಕೊಂಡಿರುವವರೇ, ನಿಮಗೆ ಧಿಕ್ಕಾರ! ಮಂದೆಯ ಕುರಿಮರಿಗಳನ್ನು, ಕೊಟ್ಟಿಗೆಯ ಕರುಗಳನ್ನು ಕೊಂದು ತಿನ್ನುವವರೇ, ನಿಮಗೆ ಧಿಕ್ಕಾರ!


ನಿನ್ನ ಹುಟ್ಟುಗಳು ರೂಪಿಸಲಾಗಿವೆ ಬಾಷಾನಿನ ಅಲ್ಲೋನ್ ಮರದಿಂದ ನಿನ್ನ ಮೇಲ್ಮಾಳಿಗೆ ಕಟ್ಟಲಾಗಿದೆ ಕಿತ್ತೀಮ್ ದ್ವೀಪದ ತಿಲಕ ಹಲಗೆಯಿಂದ, ಕೆತ್ತಲಾಗಿದೆ ದಂತದಿಂದ.


ಸ್ಥಾಪಿತವಾಗಿವೆಯಿಲ್ಲಿ ನ್ಯಾಯಪೀಠಗಳು I ದಾವೀದನ ಮನೆತನದವರ ಸಿಂಹಾಸನಗಳು II


ನುಡಿದಿಹನು ಇಂತೆಂದು ಪ್ರಭು ನನ್ನೊಡೆಯನಿಗೆ I “ಆಸೀನನಾಗಿರು ನೀನು ನನ್ನ ಬಲಗಡೆಗೆ I ಹಗೆಗಳನು ನಿನಗೆ ಕಾಲ್ಮಣೆಯಾಗಿಸುವವರೆಗೆ” II


ಅಮರವಾದುದು ಹೇ ದೇವಾ, ನಿನ್ನ ಸಿಂಹಾಸನ I ನ್ಯಾಯಸ್ಥಾಪಕವಾದುದು ನಿನ್ನ ರಾಜದಂಡ II


ಅಹಾಬನ ಉಳಿದ ಚರಿತ್ರೆ, ಅವನು ಕಟ್ಟಿಸಿದ ದಂತಮಂದಿರ, ಪಟ್ಟಣಗಳು, ಇವುಗಳ ವಿವರ, ಹಾಗು ಅವನ ಬೇರೆ ಕಾರ್ಯಸಾಧನೆಗಳು ಇಸ್ರಯೇಲರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಅದಕ್ಕೆ ಆರು ಮೆಟ್ಟಲುಗಳಿದ್ದವು. ಅದರ ಹಿಂಭಾಗದ ತುದಿ ಚಕ್ರಾಕಾರವಾಗಿತ್ತು. ಆಸನಕ್ಕೆ ಎರಡು ಕೈಗಳೂ, ಅವುಗಳ ಹತ್ತಿರ ಎರಡು ಸಿಂಹಗಳೂ ಇದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು