Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 10:22 - ಕನ್ನಡ ಸತ್ಯವೇದವು C.L. Bible (BSI)

22 ಹೀರಾಮನ ನಾವೆಗಳ ಜೊತೆಯಲ್ಲಿ ಸೊಲೊಮೋನನ ತಾರ್ಷಿಷ್ ಹಡಗುಗಳು ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ಕಪಿ, ನವಿಲು ಇವುಗಳನ್ನು ತರುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಹೀರಾಮನ ನಾವೆಗಳ ಜೊತೆಯಲ್ಲಿ ಸೊಲೊಮೋನನ ತಾರ್ಷೀಷ್ ಹಡಗುಗಳು ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ವಾನರಗಳನ್ನು ಮತ್ತು ನವಿಲುಗಳನ್ನೂ ತರುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಹೀರಾಮನ ನಾವೆಗಳ ಜೊತೆಯಲ್ಲಿ ಸೊಲೊಮೋನನ ತಾರ್ಷೀಷ್ ಹಡಗುಗಳು ಹೋಗಿ ಮೂರು ವರುಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ಕಪಿ, ನವಿಲು ಇವುಗಳನ್ನು ತರುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ರಾಜನಾದ ಸೊಲೊಮೋನನ ಹತ್ತಿರ ಅನೇಕ ಸರಕು ಸಾಗಣಿಕೆಯ ಹಡಗುಗಳಿದ್ದವು. ಅವನು ಅವುಗಳನ್ನು ಇತರ ದೇಶಗಳಲ್ಲಿನ ವ್ಯಾಪಾರಕ್ಕಾಗಿ ಕಳುಹಿಸುತ್ತಿದ್ದನು. ಇವು ಹೀರಾಮನ ಹಡಗುಗಳು. ಈ ಹಡಗುಗಳು ಬಂಗಾರ, ಬೆಳ್ಳಿ, ದಂತ ಮತ್ತು ಪ್ರಾಣಿಗಳನ್ನು ಹೊಸದಾಗಿ ತುಂಬಿಕೊಂಡು ಮೂರು ವರ್ಷಕ್ಕೊಮ್ಮೆ ಹಿಂದಿರುಗುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಹೀರಾಮನ ಹಡಗುಗಳ ಜೊತೆಯಲ್ಲಿ ಅರಸನ ಹಡಗುಗಳು ತಾರ್ಷೀಷಿಗೆ ಹೋಗಿ ಮೂರು ವರ್ಷಕ್ಕೆ ಒಂದು ಸಾರಿ ಬಂಗಾರ, ಬೆಳ್ಳಿ, ದಂತ, ಕೋತಿ, ನವಿಲು ಇವುಗಳನ್ನೂ ತರುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 10:22
21 ತಿಳಿವುಗಳ ಹೋಲಿಕೆ  

ಇದಲ್ಲದೆ, ಯೆಹೋಷಾಫಾಟನು ಓಫೀರಿನಿಂದ ಬಂಗಾರ ತರುವುದಕ್ಕಾಗಿ ತಾರ್ಷೀಷ್ ಹಡಗುಗಳನ್ನು ಮಾಡಿಸಿದನು.


ಕಪ್ಪಗಳನರ್ಪಿಸಲಿ ತಾರ್ಷಿಷ್ ಹಾಗೂ ದ್ವೀಪದ್ವೀಪದ ರಾಜರುಗಳು I ಕಾಣಿಕೆಗಳ ತಂದೊಪ್ಪಿಸಲಿ ಶೆಬಾ ಹಾಗೂ ಸೆಬಾದ ರಾಜರುಗಳು II


ತಾರ್ಷಿಷ್ ನಾಡಿನ ದೊಡ್ಡ ದೊಡ್ಡ ಹಡಗುಗಳನು I ಚಂಡಮಾರುತದಿಂದ ಪುಡಿಪುಡಿ ಮಾಡಿದೆ ನೀನು II


ಯಾವಾನನ ಮಕ್ಕಳು - ಎಲಿಷಾ, ಸ್ಪೇಯಿನ್ (ತಾರ್ಷಿಸ್), ಸೈಪ್ರಸ್ (ಕಿತ್ತೀಮ್) ಮತ್ತು ದೋದಾ ಎಂಬ ಸ್ಥಳದವರು. ಇವರು ಸಮುದ್ರದ ರೇವುಗಳಲ್ಲಿ ಹರಡಿಕೊಂಡರು.


ಅವರ ಮಧ್ಯೆ ಒಂದು ಸೂಚಕಕಾರ್ಯವನ್ನು ಮಾಡುವೆನು. ಅವರಲ್ಲಿ ಅಳಿದುಳಿದವರನ್ನು ನನ್ನ ಸುದ್ದಿಯನ್ನು ಕೇಳದೆಯೂ ನನ್ನ ಮಹಿಮೆಯನ್ನು ಕಾಣದೆಯೂ ಇರುವವರ ಬಳಿಗೆ ಕಳಿಸುವೆನು. ತಾರ್ಷೀಷ್, ಲಿಬಿಯಾ, ಧನುರ್ಧಾರಿಗಳಾದ ಲೂದಿಯಾ, ತೂಬಲ್, ಗ್ರೀಸ್ ಎಂಬ ನಾಡುಗಳಿಗೂ ದೂರದ ದ್ವೀಪನಿವಾಸಿಗಳ ಬಳಿಗೂ ಕಳಿಸುವೆನು. ಈ ಅನ್ಯಜನಾಂಗಗಳಿಗೆ ಅವರು ನನ್ನ ಮಹಿಮೆಯನ್ನು ಪ್ರಕಟಿಸುವರು.


ನಿರೀಕ್ಷಿಸುತ್ತಿಹರು ನನ್ನನು ದೂರದ ನಿವಾಸಿಗಳು ಮುಂದಾಗಿ ಬರುತಿಹವು ತಾರ್ಷೀಷಿನ ಹಡಗುಗಳು, ನಿನ್ನ ದೇವರಾದ ಸರ್ವೇಶ್ವರನ ಶ್ರೀನಾಮ ನಿಧಿಯಾದ ಇಲ್ಲಿಗೆ; ನಿನ್ನ ಘನಪಡಿಸಿದ ಇಸ್ರಯೇಲಿನ ಪರಮಪಾವನನ ಸನ್ನಿಧಿಗೆ. ಹೊತ್ತು ತರುತಿಹರು ನಿನ್ನ ಮಕ್ಕಳನು ಜೊತೆಗೆ ಅವರ ಬೆಳ್ಳಿಬಂಗಾರಗಳನು.


ತಾರ್ಷೀಷ್ ನಗರವೇ, ನೈಲ್ ನದಿಯಂತೆ ನಿನ್ನ ನಾಡನ್ನು ಕೃಷಿಮಾಡು. ನಿನಗೆ ಬಂದರು ಇಲ್ಲವೇ ಇಲ್ಲ.


ಕರಾವಳಿಯ ನಿವಾಸಿಗಳೇ, ಗೋಳಾಡಿರಿ, ಸಮುದ್ರವನ್ನು ದಾಟಿ ತಾರ್ಷೀಷಿಗೆ ಹೋಗಿರಿ.


ಟೈರ್ ನಗರವನ್ನು ಕುರಿತ ದೈವೋಕ್ತಿ : “ಗೋಳಾಡಿರಿ ತಾರ್ಷಿಷಿನ ನಾವಿಕರೆಲ್ಲ, ಹಾಳಾಗಿವೆ ನಿಮ್ಮ ಬಂದರುಗಳೆಲ್ಲ; ಹಡಗುಗಳಿಗೆ ರೇವಿಲ್ಲ, ನೆಲೆಯಿಲ್ಲ, ಸೈಪ್ರಸ್ಸಿನಿಂದ ಬಂದ ನಾವಿಕರಿಂದ ಈ ಸುದ್ದಿ ನಿಮಗೆ ತಿಳಿಯುವುದು.”


ಎಲ್ಲಾ ದೊಡ್ಡ ದೊಡ್ಡ ಹಡಗುಗಳಿಗೆ, ಎಲ್ಲಾ ಸುಂದರವಾದ ನೌಕೆಗಳಿಗೆ, ಆ ದಿನವು ತಪ್ಪದೆ ಬರುವುದು.


ಅರಸನ ಹಡಗುಗಳು ಹೂರಾಮನ ನಾವಿಕರ ಜೊತೆಯಲ್ಲಿ ತಾರ್ಷೀಷಿಗೆ ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ಕಪಿ, ನವಿಲು ಇವುಗಳನ್ನು ತರುತ್ತಿದ್ದವು.


ಆದರೆ ಯೋನನು ಆ ಸ್ವಾಮಿಯ ಸನ್ನಿಧಿಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ನಿನೆವೆಗೆ ಹೋಗುವುದರ ಬದಲು ತಾರ್ಷಿಷಿಗೆ ಅಭಿಮುಖವಾಗಿ ಓಡಿಹೋಗಲು ಹೊರಟನು. ಜೊಪ್ಪ ಎಂಬ ಊರನ್ನು ತಲುಪಿದಾಗ ತಾರ್ಷಿಷಿಗೆ ಹೊರಡಲಿದ್ದ ಹಡಗೊಂದನ್ನು ಕಂಡನು. ಪ್ರಯಾಣದ ದರವನ್ನು ತೆತ್ತು ಸಹನಾವಿಕರೊಂದಿಗೆ ಹಡಗನ್ನು ಹತ್ತಿದನು. ಹೀಗೆ ಯೋನನು ಸರ್ವೇಶ್ವರಸ್ವಾಮಿಯ ಸನ್ನಿಧಿಯಿಂದ ದೂರಹೋಗಬಹುದೆಂದು ಭಾವಿಸಿದನು.


ಚಳಿಗಾಲ, ಬೇಸಿಗೆಕಾಲಗಳ ವಿಹಾರಗೃಹಗಳನ್ನು ವಿನಾಶಮಾಡುವೆನು. ದಂತನಿರ್ಮಿತ ಮಂದಿರಗಳು ಧ್ವಂಸವಾಗುವುವು. ಮಹಾಸೌಧಗಳು ನೆಲಸಮವಾಗುವುವು. ಸರ್ವೇಶ್ವರಸ್ವಾಮಿಯ ನುಡಿಯಿದು.”


ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿತ್ತು. ಆದುದರಿಂದ ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ ಹಾಗೂ ಸೀಸಗಳನ್ನು ನಿನಗೆ ಒದಗಿಸುತ್ತಿದ್ದರು.


ಉಷ್ಟ್ರಪಕ್ಷಿ ಲವಲವಿಕೆಯಿಂದ ರೆಕ್ಕೆಬಡಿಯುತ್ತದೆ ಆದರೆ ಪ್ರೀತಿವ್ಯಾಮೋಹವಿದೆಯೆ ಅದರ ರೆಕ್ಕೆ ಗರಿಗಳಿಗೆ?


ಇದಲ್ಲದೆ, ಅರಸನು ದೊಡ್ಡದಾದ ಒಂದು ದಂತಸಿಂಹಾಸನವನ್ನು ಮಾಡಿಸಿ ಅದನ್ನು ಚೊಕ್ಕಬಂಗಾರದ ತಗಡಿನಿಂದ ಹೊದಿಸಿದನು;


ಎದೋಮ್ ದೇಶದಲ್ಲಿ ಎಲೋತಿನ ಹತ್ತಿರ ಕೆಂಪುಸಮುದ್ರದ ತೀರದಲ್ಲಿರುವ ಎಚ್ಯೋನ್ಗೆಬೆರಿನಲ್ಲಿ ಅರಸ ಸೊಲೊಮೋನನು ಹಡಗುಗಳನ್ನು ಕಟ್ಟಿಸಿದನು.


ಅರಸ ಸೊಲೊಮೋನನ ಎಲ್ಲಾ ಪಾನಪಾತ್ರೆಗಳು ಬಂಗಾರದವುಗಳು; ‘ಲೆಬನೋನಿನ ತೋಪು’ ಎನಿಸಿಕೊಳ್ಳುವ ಮಂದಿರದ ಸಾಮಾನುಗಳು ಚೊಕ್ಕ ಬಂಗಾರದವುಗಳು. ಸೊಲೊಮೋನನ ಕಾಲದಲ್ಲಿ ಬೆಳ್ಳಿಗೆ ಬೆಲೆಯಿರಲಿಲ್ಲ. ಆದುದರಿಂದ ಅವನಲ್ಲಿ ಬೆಳ್ಳಿಯ ಸಾಮಾನು ಒಂದಾದರೂ ಕಾಣಿಸಲಿಲ್ಲ.


ದೆದಾನಿನವರು ನಿನ್ನ ವರ್ತಕರಾಗಿದ್ದರು; ಬಹುದ್ವೀಪಗಳ ಉತ್ಪತ್ತಿ ನಿನ್ನ ಕೈಗೆ ಸೇರಿತ್ತು. ಗಜದಂತಗಳನ್ನೂ, ಕರೀಮರವನ್ನೂ ನಿನಗೆ ಕಪ್ಪವಾಗಿ ಸಲ್ಲಿಸುತ್ತಿದ್ದರು.


ಆಗ ಅಹಾಬನ ಮಗ ಅಹಜ್ಯನು, “ನಿನ್ನ ಜನರ ಜೊತೆಯಲ್ಲಿ ನನ್ನ ಜನರೂ ಸಮುದ್ರಪ್ರಯಾಣ ಮಾಡುವುದಕ್ಕೆ ಅಪ್ಪಣೆಯಾಗಲಿ,” ಎಂದು ಬೇಡಿಕೊಂಡನು. ಅವನು ಅದಕ್ಕೆ ಒಪ್ಪಲಿಲ್ಲ. ಆದರೆ ಆ ಹಡಗುಗಳು ಎಚ್ಯೋನ್ಗೆಬೆರಿನಲ್ಲಿ ಒಡೆದುಹೋದುದರಿಂದ ಓಫೀರನ್ನು ಮುಟ್ಟಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು