Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 10:24 - ಕನ್ನಡ ಸತ್ಯವೇದವು C.L. Bible (BSI)

24 ಭೂಲೋಕದವರೆಲ್ಲರೂ, ದೇವರು ಅವನಿಗೆ ಅನುಗ್ರಹಿಸಿದ್ದ ಜ್ಞಾನವಾಕ್ಯಗಳನ್ನು ಕೇಳುವುದಕ್ಕಾಗಿ ಅವನ ದರ್ಶನಕ್ಕೆ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಭೂಲೋಕದವರೆಲ್ಲರೂ ದೇವರು ಅವನಿಗೆ ಅನುಗ್ರಹಿಸಿದ ಜ್ಞಾನವಾಕ್ಯಗಳನ್ನು ಕೇಳುವುದಕ್ಕೋಸ್ಕರ ಅವನ ದರ್ಶನಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಭೂಲೋಕದವರೆಲ್ಲರೂ ದೇವರು ಅವನಿಗೆ ಅನುಗ್ರಹಿಸಿದ ಜ್ಞಾನವಾಕ್ಯಗಳನ್ನು ಕೇಳುವದಕ್ಕೋಸ್ಕರ ಅವನ ದರ್ಶನಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಭೂಲೋಕದವರೆಲ್ಲರೂ ರಾಜನಾದ ಸೊಲೊಮೋನನನ್ನು ನೋಡುವುದಕ್ಕೂ ದೇವರು ಸೊಲೊಮೋನನಿಗೆ ದಯಪಾಲಿಸಿರುವ ಜ್ಞಾನವಾಕ್ಯಗಳನ್ನು ಕೇಳುವುದಕ್ಕೂ ಅಪೇಕ್ಷಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ದೇವರು ಸೊಲೊಮೋನನ ಹೃದಯದಲ್ಲಿ ಕೊಟ್ಟಿದ್ದ ಜ್ಞಾನವನ್ನು ಕೇಳುವುದಕ್ಕಾಗಿ ಭೂಲೋಕದಲ್ಲಿರುವ ಸಮಸ್ತರೂ ಅವನ ದರ್ಶನವನ್ನು ಬಯಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 10:24
13 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಯಾರಿಗಾದರೂ ಜ್ಞಾನದ ಕೊರತೆಯಿದ್ದರೆ ಅಂಥವನು ದೇವರಲ್ಲಿ ಬೇಡಿಕೊಳ್ಳಲಿ. ಯಾರನ್ನೂ ತಿರಸ್ಕರಿಸದೆ ಎಲ್ಲರಿಗೂ ಯಥೇಚ್ಛವಾಗಿ ನೀಡುವ ದೇವರು, ಅವನಿಗೆ ಜ್ಞಾನವನ್ನು ದಯಪಾಲಿಸುತ್ತಾರೆ.


ಇಸ್ರಯೇಲರೆಲ್ಲರೂ ಅರಸನ ಈ ತೀರ್ಪನ್ನು ಕೇಳಿದರು. ನ್ಯಾಯನಿರ್ಣಯಿಸುವುದಕ್ಕೆ ಈತನಲ್ಲಿ ದೇವದತ್ತ ಜ್ಞಾನವಿದೆ ಎಂದು ತಿಳಿದು ಅವನ ಬಗ್ಗೆ ಅಪಾರ ಗೌರವ ಉಳ್ಳವರಾದರು.


ಆದ್ದರಿಂದ ನಿನ್ನ ಬಿನ್ನಹವನ್ನು ನೆರವೇರಿಸಿದ್ದೇನೆ. ನೋಡು, ನಿನಗೆ ಜ್ಞಾನವನ್ನೂ ವಿವೇಕವನ್ನೂ ಅನುಗ್ರಹಿಸಿದ್ದೇನೆ; ನಿನ್ನಂಥ ಜ್ಞಾನಿಯು ಹಿಂದೆ ಇರಲಿಲ್ಲ, ಮುಂದೆಯೂ ಇರುವುದಿಲ್ಲ.


ನನ್ನ ಪಿತೃಗಳ ದೇವಾ, ಮಾಡುವೆ ನಿನ್ನ ಗುಣಗಾನ, ನಿನಗೆ ನನ್ನ ಧನ್ಯವಾದ. ಏಕೆಂದರೆ ನೀನೇ ನನಗೆ ಜ್ಞಾನಶಕ್ತಿಗಳನ್ನು ದಯಪಾಲಿಸಿದಾತ. ನಾವು ಬೇಡಿದ್ದನ್ನು ನನಗೆ ತೋರ್ಪಡಿಸಿದಾತ ನೀನೇ ಹೌದು, ರಾಜ ಬಯಸಿದ ಗುಟ್ಟನ್ನು ನಮಗೆ ವ್ಯಕ್ತಪಡಿಸಿದಾತ ನೀನೇ.


ಕಾಲಗಳು ಋತುಗಳು ಆತನ ಕೈಯಲ್ಲಿವೆ ರಾಜರನ್ನು ಕೆಳಕ್ಕಿಳಿಸುವವನು, ಮೇಲೆ ನಿಲ್ಲಿಸುವವನು ಆತನೆ. ಜ್ಞಾನಿಗಳ ಜ್ಞಾನ, ವಿವೇಕಿಗಳ ವಿವೇಕ ಆತನ ಕೊಡುಗೆ.


ಹೀಗಿರಲು ದೇವರು ಆ ನಾಲ್ಕುಮಂದಿ ಯುವಕರಿಗೆ ಸಕಲ ಶಾಸ್ತ್ರಗಳಲ್ಲೂ ವಿದ್ಯೆಗಳಲ್ಲೂ ಜ್ಞಾನ ವಿವೇಕಗಳನ್ನು ದಯಪಾಲಿಸಿದರು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ ದಿವ್ಯದರ್ಶನಗಳನ್ನೂ ಅರ್ಥೈಸುವುದರಲ್ಲಿ ಪ್ರವೀಣನಾದನು.


ಜ್ಞಾನವನ್ನು ನೀಡುವಾತ ಸರ್ವೇಶ್ವರನೇ; ತಿಳುವಳಿಕೆ, ವಿವೇಕ ಹೊರಡುವುದು ಆತನ ಬಾಯಿಂದಲೇ.


ಆದುದರಿಂದ ಅದನ್ನು ಆಳುವುದಕ್ಕೂ ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸಿರಿ. ಈ ಮಹಾಜನಾಂಗವನ್ನು ಆಳಲು ಯಾರೂ ಸಮರ್ಥರಲ್ಲ,” ಎಂದು ಬೇಡಿಕೊಂಡನು.


ನಿಮ್ಮ ತಂದೆಯ ಕಾಲದಲ್ಲಿ ಬುದ್ಧಿವಂತಿಕೆ, ತಿಳುವಳಿಕೆ, ದೇವರುಗಳಿಗೆ ಸಮಾನವಾದ ಜ್ಞಾನ ಅವನಲ್ಲಿ ಕಂಡುಬಂದುವು. ನಿಮ್ಮ ತಂದೆ ರಾಜ ನೆಬೂಕದ್ನೆಚ್ಚರನು, ಅವನನ್ನು ಜೋಯಿಸರಿಗೂ ಮಂತ್ರವಾದಿಗಳಿಗೂ ಪಂಡಿತರಿಗೂ ಶಾಕುನಿಕರಿಗೂ ಅಧ್ಯಕ್ಷನನ್ನಾಗಿ ನೇಮಿಸಿದ್ದರು.


ನಾನು ನಿನಗೆ ಅನುಗ್ರಹಿಸಿದ ನಿನ್ನ ವೈಭವದಿಂದ ನಿನ್ನ ಸೌಂದರ್ಯ ಪರಿಪೂರ್ಣವಾಯಿತು; ನಿನ್ನ ಚೆಲುವು ಜನಾಂಗಗಳಲ್ಲಿ ಪ್ರಸಿದ್ಧವಾಯಿತು; ಇದು ಸರ್ವೇಶ್ವರನಾದ ದೇವರ ನುಡಿ.


ಸರ್ವೇಶ್ವರನ ನಾಮಮಹತ್ತಿನಿಂದ ಸೊಲೊಮೋನನ ಕೀರ್ತಿ ಹರಡಿತು. ಇದನ್ನು ಕೇಳಿದ ಶೆಬದ ರಾಣಿ ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕೆ ಬಂದಳು.


ಆಗ ದೇವರು ಸೊಲೊಮೋನನಿಗೆ, “ನೀನು ಘನಧನೈಶ್ವರ್ಯಗಳನ್ನಾಗಲಿ, ಶತ್ರುಗಳ ವಿನಾಶವನ್ನಾಗಲಿ, ದೀರ್ಘಾಯುಷ್ಯವನ್ನಾಗಲಿ ಕೇಳಿಕೊಳ್ಳಲಿಲ್ಲ. ಬದಲಿಗೆ ನಾನು ಯಾರ ಮೇಲೆ ನಿನ್ನನ್ನು ಅರಸನನ್ನಾಗಿ ಮಾಡಿದೆನೋ ಆ ನನ್ನ ಪ್ರಜೆಗಳನ್ನು ಪಾಲಿಸುವುದಕ್ಕೆ ಬೇಕಾದ ಜ್ಞಾನ ವಿವೇಕಗಳ ಮೇಲೆ ಮನಸ್ಸಿಟ್ಟು ಅವುಗಳನ್ನು ನಿನಗಾಗಿ ಬೇಡಿಕೊಂಡೆ. ಆದುದರಿಂದ ಅವು ನಿನಗೆ ದೊರಕುವುವು.


ಇದಲ್ಲದೆ, ನಾನು ನಿನಗೆ ಘನಧನೈಶ್ವರ್ಯಗಳನ್ನೂ ಅನುಗ್ರಹಿಸುತ್ತೇನೆ. ಇಂಥ ಘನಧನೈಶ್ವರ್ಯಗಳು ನಿನಗಿಂತ ಮೊದಲಿದ್ದ ಅರಸರಲ್ಲಿ ಯಾರಿಗೂ ಇರಲಿಲ್ಲ, ನಿನ್ನ ಅನಂತರದವರಿಗೂ ಇರುವುದಿಲ್ಲ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು