Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 10:25 - ಕನ್ನಡ ಸತ್ಯವೇದವು C.L. Bible (BSI)

25 ಅವರೆಲ್ಲರೂ ಅವನಿಗೆ ವರ್ಷ ವರ್ಷ ಬೆಳ್ಳಿ ಬಂಗಾರದ ಸಾಮಾನು, ಉಡುಪು, ಯುದ್ಧಾಯುಧ, ಸುಗಂಧದ್ರವ್ಯ, ಕುದುರೆ, ಹೇಸರಗತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವರೆಲ್ಲರೂ ಅವನಿಗೆ ವರ್ಷ ವರ್ಷ ಬೆಳ್ಳಿಬಂಗಾರದ ಸಾಮಾನು, ಉಡುಪು, ಯುದ್ಧಕ್ಕೆ ಬೇಕಾದ ಆಯುಧಗಳು, ಸುಗಂಧದ್ರವ್ಯ, ಕುದುರೆ ಮತ್ತು ಹೇಸರಗತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವರೆಲ್ಲರೂ ಅವನಿಗೆ ವರುಷ ವರುಷ ಬೆಳ್ಳಿಬಂಗಾರದ ಸಾಮಾನು, ಉಡುಪು, ಯುದ್ಧಾಯುಧ, ಸುಗಂದದ್ರವ್ಯ, ಕುದುರೆ, ಹೇಸರಕತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಪ್ರತಿವರ್ಷವೂ ರಾಜನನ್ನು ನೋಡಲು ಜನರು ಬರುತ್ತಿದ್ದರು. ಪ್ರತಿಯೊಬ್ಬನೂ ಕಾಣಿಕೆಯನ್ನು ತರುತ್ತಿದ್ದನು. ಅವರು ಬೆಳ್ಳಿಬಂಗಾರದಿಂದ ಮಾಡಿದ ವಸ್ತುಗಳನ್ನು, ಆಯುಧಗಳನ್ನು, ಉಡುಪುಗಳನ್ನು, ಸಾಂಬಾರ ಪದಾರ್ಥಗಳನ್ನು, ಕುದುರೆಗಳನ್ನು ಮತ್ತು ಹೇಸರಕತ್ತೆಗಳನ್ನು ತರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅವರೆಲ್ಲರೂ ಕಾಣಿಕೆಯಾಗಿ ಬೆಳ್ಳಿಯ ಪಾತ್ರೆಗಳನ್ನೂ, ಬಂಗಾರದ ಪಾತ್ರೆಗಳನ್ನೂ, ವಸ್ತ್ರಗಳನ್ನೂ, ಆಯುಧಗಳನ್ನೂ, ಸುಗಂಧಗಳನ್ನೂ, ಕುದುರೆಗಳನ್ನೂ, ಹೇಸರಗತ್ತೆಗಳನ್ನೂ, ವರುಷ ವರುಷವೂ ನೇಮಕವಾದ ಪ್ರಕಾರ ತರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 10:25
23 ತಿಳಿವುಗಳ ಹೋಲಿಕೆ  

ಜ್ಯೋತಿಷಿಗಳು ಆ ಮನೆಯನ್ನು ಪ್ರವೇಶಿಸಿ ಮಗುವನ್ನು ತಾಯಿ ಮರಿಯಳ ಬಳಿ ಕಂಡು ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ತಮ್ಮ ತಮ್ಮ ಬೊಕ್ಕಸಗಳನ್ನು ಬಿಚ್ಚಿ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳ ಇವುಗಳನ್ನು ಮಗುವಿಗೆ ಪಾದಕಾಣಿಕೆಯಾಗಿ ಸಮರ್ಪಿಸಿದರು.


ತೋಗರ್ಮವಂಶದವರು ಕುದುರೆ, ಜಾತಿಯ ಕುದುರೆ, ಹೇಸರಗತ್ತೆ, ಇವುಗಳನ್ನು ನಿನಗಾಗಿ ತರುತ್ತಿದ್ದರು.


ನನಗೆ ಕಾಣಿಕೆಯಾಗಿ ಎಲ್ಲ ಜನಾಂಗಗಳಿಂದ ನಿಮ್ಮ ಸಹೋದರರನ್ನು ಕರೆದುತರುವರು. ಇಸ್ರಯೇಲರು ನನ್ನ ಆಲಯಕ್ಕೆ ಶುದ್ಧ ಪಾತ್ರೆಯಲ್ಲಿ ನೈವೇದ್ಯವನ್ನು ತೆಗೆದುಕೊಂಡು ಬರುವಂತೆ, ಅವರನ್ನು ಕುದುರೆ, ತೇರು, ಪಲ್ಲಕ್ಕಿ, ಹೇಸರಗತ್ತೆ, ಒಂಟೆ, ಇವುಗಳ ಮೇಲೆ ಏರಿಸಿಕೊಂಡು ಜೆರುಸಲೇಮೆಂಬ ನನ್ನ ಪವಿತ್ರ ಪರ್ವತಕ್ಕೆ ಕರೆದುತರುವರು.


ಅಸ್ಸೀರಿಯದ ಅರಸನಾದ ನನ್ನ ಒಡೆಯನ ಮಾತನ್ನು ಕೇಳಿ; ಆತನೊಡನೆ ಒಪ್ಪಂದ ಮಾಡಿಕೊಂಡು ಆತನ ಆಶ್ರಯವನ್ನು ಸೇರಿರಿ. ಆಗ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಅಂಜೂರಮರದ ಹಾಗೂ ದ್ರಾಕ್ಷಾಲತೆಯ ಹಣ್ಣುಗಳನ್ನು ತಿನ್ನುವನು; ತನ್ನ ಬಾವಿಯ ನೀರನ್ನು ಕುಡಿಯುವನು.


ಅರಸ ಬಾಳಲಿ ಚಿರಕಾಲ; ದೊರಕಲಿ ಆತನಿಗೆ ಶೆಬಾದ ಬಂಗಾರ I ಜರುಗಲಿ ಪ್ರಾರ್ಥನೆ ಸದಾಕಾಲ; ಆಶೀರ್ವಾದ ಸಿಗಲಿ ಅನವರತ II


ಕಪ್ಪಗಳನರ್ಪಿಸಲಿ ತಾರ್ಷಿಷ್ ಹಾಗೂ ದ್ವೀಪದ್ವೀಪದ ರಾಜರುಗಳು I ಕಾಣಿಕೆಗಳ ತಂದೊಪ್ಪಿಸಲಿ ಶೆಬಾ ಹಾಗೂ ಸೆಬಾದ ರಾಜರುಗಳು II


ಅವನ ಎಲ್ಲಾ ಅಣ್ಣತಮ್ಮಂದಿರು, ಅಕ್ಕತಂಗಿಯರು, ಹಿಂದಿನ ಪರಿಚಿತರು ಅವನನ್ನು ಕಾಣಬಂದು ಔತಣದಲ್ಲಿ ಭಾಗವಹಿಸಿದರು. ಅವನಿಗೆ ಸರ್ವೇಶ್ವರನಿಂದ ಒದಗಿದ್ದ ಆಪತ್ತಿಗಾಗಿ ಅನುತಾಪ ವ್ಯಕ್ತಪಡಿಸಿ, ಸಂತೈಸಿದರು. ಪ್ರತಿಯೊಬ್ಬರೂ ಒಂದೊಂದು ಬೆಳ್ಳಿ ನಾಣ್ಯವನ್ನೂ ಒಂದೊಂದು ಚಿನ್ನದ ಉಂಗುರವನ್ನೂ ಅವನಿಗೆ ಕೊಟ್ಟರು.


ಅರಸನ ಈ ರಾಜಾಜ್ಞೆ ಶೂಷನ್ ನಗರದಲ್ಲಿ ಪ್ರಕಟವಾದ ಕೂಡಲೆ ಅದರಿಂದ ಪ್ರೇರಿತರಾದ ಅಂಚೆಯವರು ಅರಮನೆಯ ಸವಾರಿ ಕುದುರೆಗಳನ್ನೇರಿ ಅತಿಶೀಘ್ರವಾಗಿ ಧಾವಿಸಿದರು.


ಅರಸನ ಹೆಸರಿನಲ್ಲಿ ಬರೆಯಲಾದ ಈ ಪತ್ರಗಳಿಗೆ ಮೊರ್ದೆಕೈ ರಾಜಮುದ್ರೆಯನ್ನು ಒತ್ತಿ, ಅರಮನೆಯ ಅಶ್ವಾಲಯಗಳಲ್ಲಿ ಹುಟ್ಟಿ ಬೆಳೆದ ಸವಾರಿ ಕುದುರೆಗಳನ್ನೇರಿ ಹೊರಟ ಅಂಚೆಯವರ ಮುಖಾಂತರ ಕಳುಹಿಸಿದನು.


ಅವರಿಗೆ 736 ಕುದುರೆಗಳೂ 245 ಹೇಸರಕತ್ತೆಗಳೂ 435 ಒಂಟೆಗಳೂ


ಅಮ್ಮೋನಿಯರೂ ಉಜ್ಜೀಯನಿಗೆ ಕಪ್ಪವನ್ನು ಕೊಡುತ್ತಿದ್ದರು. ಅವನು ಅಧಿಕ ಬಲ ಉಳ್ಳವನಾಗಿ ಅವನ ಹೆಸರು ಈಜಿಪ್ಟಿನ ಗಡಿಗಳವರೆಗೂ ಹಬ್ಬಿತು.


ಅವರೆಲ್ಲರು ಅವನಿಗೆ ವರ್ಷ ವರ್ಷವೂ ಬೆಳ್ಳಿ ಬಂಗಾರದ ಸಾಮಾನು, ಉಡುಪು, ಯುದ್ಧಾಯುಧ, ಸುಗಂಧದ್ರವ್ಯ, ಕುದುರೆ, ಹೇಸರಗತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು.


ಕೆಲವು ವರ್ಷಗಳಾದನಂತರ, ಇವನು ಪ್ರತಿ ವರ್ಷವೂ ಕೊಡಬೇಕಾದ ಕಪ್ಪವನ್ನು ಕೊಡದೆಹೋದನು; ಅದು ಮಾತ್ರವಲ್ಲ, ಈಜಿಪ್ಟಿನ ಅರಸನಾದ ಸೋ ಎಂಬವನ ಬಳಿಗೆ ರಾಯಭಾರಿಗಳನ್ನು ಕಳುಹಿಸಿದ್ದನು. ಈ ಕಾರಣ ಅಸ್ಸೀರಿಯದ ಅರಸನು ಇವನನ್ನು ದ್ರೋಹಿಯೆಂದು ತಿಳಿದು, ಬಂಧಿಸಿ ಸೆರೆಯಲ್ಲಿಟ್ಟನು.


ಅಹಾಬನು ಅವನಿಗೆ, “ನಾವು ದೇಶಸಂಚಾರಮಾಡುತ್ತಾ ಎಲ್ಲಾ ಹಳ್ಳ ಬುಗ್ಗೆಗಳಿಗೆ ಹೋಗಿ ಅವುಗಳಲ್ಲಿ ಹುಲ್ಲು ಸಿಕ್ಕುತ್ತದೋ ನೋಡೋಣ; ಸಿಕ್ಕುವುದಾದರೆ ನಮ್ಮ ಕುದುರೆಗಳೂ ಹೇಸರಕತ್ತೆಗಳೂ ಉಳಿಯುವುವು; ಆಗ ಅವುಗಳನ್ನು ಕೊಲ್ಲುವ ಅವಶ್ಯಕತೆ ಇರುವುದಿಲ್ಲ,” ಎಂದು ಹೇಳಿ ಸಂಚಾರಕ್ಕಾಗಿ ನಾಡನ್ನು ಎರಡು ಭಾಗಮಾಡಿ, ಒಂದು ಭಾಗಕ್ಕೆ ಓಬದ್ಯನನ್ನು ಕಳುಹಿಸಿ, ಇನ್ನೊಂದು ಭಾಗಕ್ಕೆ ತಾನೇ ಹೊರಟುಹೋದನು.


ಆಕೆ ಅರಸನಿಗೆ ನಾಲ್ಕು ಸಾವಿರ ಕಿಲೋಗ್ರಾಂಗೂ ಹೆಚ್ಚು ಬಂಗಾರವನ್ನು, ಅಪರಿಮಿತ ಸುಗಂಧದ್ರವ್ಯವನ್ನು ಹಾಗು ರತ್ನಗಳನ್ನು ಕೊಟ್ಟಳು. ಶೆಬದ ರಾಣಿ ಅರಸ ಸೊಲೊಮೋನನಿಗೆ ಕೊಟ್ಟಷ್ಟು ಸುಗಂಧದ್ರವ್ಯವನ್ನು ಬೇರೆ ಯಾರೂ ಈ ನಾಡಿಗೆ ಕೊಟ್ಟಿರಲಿಲ್ಲ.


ಅವರು ಸನ್ನಿಧಿಗೆ ಬರಲು ಅರಸನು ಅವರಿಗೆ, “ನೀವು ನನ್ನ ಸೇವಕರನ್ನು ಕರೆದುಕೊಂಡು, ನನ್ನ ಮಗ ಸೊಲೊಮೋನನನ್ನು ನನ್ನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿಕೊಂಡು, ಗೀಹೋನ್ ಬುಗ್ಗೆಗೆ ಹೋಗಿರಿ.


ತೋವಿಗೂ ಹದದೆಜೆರನಿಗೂ ಹಗೆತನವಿತ್ತು. ದಾವೀದನು ಹದದೆಜೆರನ ಮೇಲೆ ದಾಳಿಮಾಡಿ ಅವನನ್ನು ಸೋಲಿಸಿದುದರಿಂದ ತೋವು ದಾವೀದನನ್ನು ಅಭಿನಂದಿಸುವುದಕ್ಕಾಗಿ ಹಾಗು ಹರಸುವುದಕ್ಕಾಗಿ ತನ್ನ ಮಗ ಯೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೆ ತಾಮ್ರ, ಬೆಳ್ಳಿ ಹಾಗು ಬಂಗಾರದ ಪಾತ್ರೆಗಳನ್ನು ತಂದನು.


ಆಮೇಲೆ ಮೋವಾಬ್ಯರನ್ನು ಸೋಲಿಸಿದನು. ಸೆರೆಯಾಳುಗಳನ್ನು ನೆಲದಮೇಲೆ ಮಲಗಿಸಿ ಹಗ್ಗದಿಂದ ಅಳತೆಮಾಡಿಸಿ, ಎರಡು ಪಾಲು ಜನರನ್ನು ಕೊಲ್ಲಿಸಿ ಒಂದು ಪಾಲನ್ನು ಉಳಿಸಿದನು. ಮೋವಾಬ್ಯರು ದಾವೀದನಿಗೆ ಅಧೀನರಾಗಿ ಅವನಿಗೆ ಕಪ್ಪಕೊಡಬೇಕಾಯಿತು.


ಕೆಲವು ಮಂದಿ ಪುಂಡುಪೋಕರು, “ಇವನೇನೋ ನಮ್ಮನ್ನು ರಕ್ಷಿಸುವವನು!” ಎಂದು ತಾತ್ಸಾರಮಾಡಿ ಕಾಣಿಕೆಗಳನ್ನು ತರಲಿಲ್ಲ. ಆದರೂ ಸೌಲನು ಸುಮ್ಮನಿದ್ದನು.


ಆಗ ಇಸ್ರಯೇಲರು ಸರ್ವೇಶ್ವರನಿಗೆ ಮೊರೆಯಿಟ್ಟರು. ಅವರನ್ನು ಬಿಡುಗಡೆ ಮಾಡಲು ಬೆನ್ಯಾಮೀನ್ ಕುಲದ ಗೇರನ ಮಗ ಏಹೂದನನ್ನು ವಿಮೋಚಕನಾಗಿ ಕಳುಹಿಸಲಾಯಿತು. ಅವನೊಬ್ಬ ಎಡಚ. ಇಸ್ರಯೇಲರು ಅವನ ಮುಖಾಂತರ ಮೋವಾಬ್ಯರ ಅರಸ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಕಳುಹಿಸಿದರು.


ಸಿಬೆಯೋನನಿಗೆ ಅಯ್ಯಾ ಮತ್ತು ಅನಾಹ ಎಂಬ ಇಬ್ಬರು ಮಕ್ಕಳು. ಈ ಅನಾಹನೇ ತನ್ನ ತಂದೆ ಸಿಬೆಯೋನನ ಕತ್ತೆಗಳನ್ನು ಮೇಯಿಸುತ್ತಿದ್ದಾಗ ಕಾಡಿನಲ್ಲಿ ಬಿಸಿ ನೀರಿನ ಒರತೆಗಳನ್ನು ಕಂಡುಹಿಡಿದವನು.


ಜೆರುಸಲೇಮಿನ ನಿನ್ನ ಮಹಾದೇವಾಲಯದ ಪ್ರಯುಕ್ತ I ಅರಸರು ನಿನಗೆ ಕಾಣಿಕೆಯನು ತಂದೊಪ್ಪಿಸುವುದು ಅತಿಸೂಕ್ತ II


ದಾವೀದನಿಗೆ ಜೀವಮಾನದಲ್ಲೆಲ್ಲಾ ಆಪ್ತಮಿತ್ರನಾಗಿದ್ದ ಟೈರಿನ ಅರಸನಾದ ಹೀರಾಮನು, ಸೊಲೊಮೋನನು ತಂದೆಗೆ ಬದಲಾಗಿ ಪಟ್ಟಾಭಿಷೇಕ ಪಡೆದಿದ್ದಾನೆಂದು ಕೇಳಿ, ಅವನ ಬಳಿಗೆ ತನ್ನ ಸೇವಕರನ್ನು ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು