Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 10:29 - ಕನ್ನಡ ಸತ್ಯವೇದವು C.L. Bible (BSI)

29 ಈಜಿಪ್ಟ್ ದೇಶದಿಂದ ರಥಗಳನ್ನೂ ಕುದುರೆಗಳನ್ನೂ ತರಿಸಬೇಕಾದರೆ ಪ್ರತಿಯೊಂದು ರಥಕ್ಕೆ ಆರುನೂರು ಬೆಳ್ಳಿನಾಣ್ಯಗಳನ್ನೂ ಕುದುರೆಗೆ ನೂರೈವತ್ತು ಬೆಳ್ಳಿನಾಣ್ಯಗಳನ್ನೂ ಕೊಡಬೇಕಾಗಿತ್ತು. ಅವು ಹಿತ್ತಿಯರ ಮತ್ತು ಸಿರಿಯಾದವರ ಎಲ್ಲಾ ಅರಸರಿಗೆ ಇವರ ಮುಖಾಂತರವೇ ಮಾರಾಟವಾಗುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಐಗುಪ್ತದೇಶದಿಂದ ರಥಗಳನ್ನೂ ಮತ್ತು ಕುದುರೆಗಳನ್ನೂ ತರಿಸಬೇಕಾದರೆ ಪ್ರತಿಯೊಂದು ರಥಕ್ಕೆ ಆರುನೂರು ರೂಪಾಯಿಗಳನ್ನೂ, ಕುದುರೆಗೆ ನೂರೈವತ್ತು ರೂಪಾಯಿಗಳನ್ನೂ ಕೊಡಬೇಕಾಗಿತ್ತು. ಅವು ಹಿತ್ತಿಯರ ಮತ್ತು ಅರಾಮ್ಯರ ಎಲ್ಲಾ ಅರಸರಿಗೆ ಇವರ ಮುಖಾಂತರವಾಗಿಯೇ ಮಾರಾಟವಾಗುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಐಗುಪ್ತದೇಶದಿಂದ ರಥಗಳನ್ನೂ ಕುದುರೆಗಳನ್ನೂ ತರಿಸಬೇಕಾದರೆ ಪ್ರತಿಯೊಂದು ರಥಕ್ಕೆ ಆರುನೂರು ರೂಪಾಯಿಗಳನ್ನೂ ಕುದುರೆಗೆ ನೂರೈವತ್ತು ರೂಪಾಯಿಗಳನ್ನೂ ಕೊಡಬೇಕಾಯಿತು. ಅವು ಹಿತ್ತಿಯರ ಮತ್ತು ಅರಾಮ್ಯರ ಎಲ್ಲಾ ಅರಸರಿಗೆ ಇವರ ಮುಖಾಂತರವಾಗಿಯೇ ಸಿಕ್ಕುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಈಜಿಪ್ಟಿನ ಒಂದು ರಥದ ಬೆಲೆಯು ಏಳು ಕಿಲೋಗ್ರಾಂ ಆದರೆ ಒಂದು ಕುದುರೆಯ ಬೆಲೆಯು ಎರಡು ಕಿಲೋಗ್ರಾಂ ಬೆಳ್ಳಿಯಾಗಿತ್ತು. ಸೊಲೊಮೋನನು ಹಿತ್ತಿಯ ಮತ್ತು ಅರಾಮ್ಯ ರಾಜರುಗಳಿಗೆ ಕುದುರೆಗಳನ್ನೂ ರಥಗಳನ್ನೂ ಮಾರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಹಾಗೆಯೇ ಈಜಿಪ್ಟಿನಿಂದ ಆರುನೂರು ಬೆಳ್ಳಿ ನಾಣ್ಯಗಳ ಕ್ರಯಕ್ಕೆ ಒಂದು ರಥವನ್ನೂ ನೂರ ಐವತ್ತು ಬೆಳ್ಳಿ ನಾಣ್ಯಗಳ ಕ್ರಯಕ್ಕೆ ಒಂದು ಕುದುರೆಯನ್ನೂ ತರಿಸುತ್ತಿದ್ದರು. ಈ ಪ್ರಕಾರ ಹಿತ್ತಿಯರ ಮತ್ತು ಅರಾಮಿನ ಅರಸುಗಳೆಲ್ಲರು ಇವರ ಮುಖಾಂತರವಾಗಿಯೇ ತರಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 10:29
6 ತಿಳಿವುಗಳ ಹೋಲಿಕೆ  

ಬೆಂಗಾಡು ಹಾಗೂ ಲೆಬನೋನ್ ಪರ್ವತದಿಂದ ಯೂಫ್ರೆಟಿಸ್ ಮಹಾನದಿಯ ವರೆಗಿರುವ ಹಿತ್ತಿಯರ ನಾಡೆಲ್ಲ ನಿಮ್ಮದಾಗುವುದು. ನಿಮ್ಮ ಸೀಮೆ ಪಶ್ಚಿಮ ದಿಕ್ಕಿನ ಮಹಾಸಾಗರದ ವರೆಗೆ ವಿಸ್ತರಿಸಿಕೊಳ್ಳುವುದು.


ಮಲಾಕಿಯನ ಮುಖಾಂತರ ಇಸ್ರಯೇಲ್ ಜನರಿಗೆ ಸರ್ವೇಶ್ವರ ನೀಡಿದ ದೈವೋಕ್ತಿ:


“ಪ್ರವಾದಿಗಳೊಂದಿಗೆ ಮಾತನಾಡಿದ್ದೇನೆ. ಅವರಿಗೆ ಹಲವಾರು ದರ್ಶನಗಳನ್ನು ದಯಪಾಲಿಸಿದ್ದೇನೆ. ಅವರ ಮುಖಾಂತರ ಸಾಮತಿಗಳನ್ನು ಹೇಳಿ ಜನರಿಗೆ ಮುನ್ನೆಚ್ಚರಿಕೆ ನೀಡಿದ್ದೇನೆ.


ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನು ಹಾಗು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯನ್ನು ಉದ್ದೇಶಿಸಿ, “ನಿಮ್ಮಲ್ಲಿ ನನ್ನ ಸಂಗಡ ಸೌಲನ ಪಾಳೆಯಕ್ಕೆ ಯಾರು ಬರುವಿರಿ?” ಎಂದು ಕೇಳಿದನು. ಅದಕ್ಕೆ ಅಬೀಷೈಯು, “ನಾನು ಬರುತ್ತೇನೆ,” ಎಂದು ಉತ್ತರಕೊಟ್ಟನು.


ರಥಕ್ಕೆ ಆರುನೂರು ಬೆಳ್ಳಿನಾಣ್ಯಗಳಂತೆ, ಕುದುರೆಗೆ ನೂರೈವತ್ತು ಬೆಳ್ಳಿನಾಣ್ಯಗಳಂತೆ ಕೊಟ್ಟು, ರಥಗಳನ್ನೂ ಕುದುರೆಗಳನ್ನೂ ಈಜಿಪ್ಟ್ ದೇಶದಿಂದ ತರಿಸುತ್ತಿದ್ದರು; ಹಿತ್ತಿಯರ ಮತ್ತು ಸಿರಿಯಾದವರ ಎಲ್ಲಾ ಅರಸರು ಇವರ ಮುಖಾಂತರವೇ ತರಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು