Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 10:3 - ಕನ್ನಡ ಸತ್ಯವೇದವು C.L. Bible (BSI)

3 ಸೊಲೊಮೋನನು ಆಕೆಯ ಎಲ್ಲಾ ಪ್ರಶ್ನೆಗಳಿಗೆ ಉತ್ತರಕೊಟ್ಟನು; ಅರಸನಿಗೆ ಬಿಡಿಸಲು ಕ್ಲಿಷ್ಟವಾದ ಒಗಟು ಒಂದೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಸೊಲೊಮೋನನು ಆಕೆಯ ಎಲ್ಲಾ ಪ್ರಶ್ನೆಗಳಿಗೂ ಉತ್ತರಕೊಟ್ಟನು. ಅವುಗಳಲ್ಲಿ ಸೊಲೊಮೋನನಿಗೆ ತಿಳಿಯದಂಥದ್ದು ಒಂದೂ ಇರಲಿಲ್ಲವಾದುದರಿಂದ ಅವನು ಅವೆಲ್ಲವುಗಳಿಗೆ ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಸೊಲೊಮೋನನು ಆಕೆಯ ಎಲ್ಲಾ ಪ್ರಶ್ನೆಗಳಿಗೆ ಉತ್ತರಕೊಟ್ಟನು; ಅರಸನಾದ ಅವನಿಗೆ ತಿಳಿಯದಂಥದು ಅವುಗಳಲ್ಲಿ ಒಂದೂ ಇರಲಿಲ್ಲವಾದದರಿಂದ ಎಲ್ಲವುಗಳಿಗೂ ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಸೊಲೊಮೋನನು ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಿದನು. ಅವಳ ಯಾವ ಪ್ರಶ್ನೆಗಳೂ ಅವನಿಗೆ ಹೆಚ್ಚು ಕಠಿಣವೆನಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಸೊಲೊಮೋನನು ಅವಳ ಪ್ರಶ್ನೆಗಳಿಗೆಲ್ಲಾ ಉತ್ತರಿಸಿದನು. ಅವುಗಳಲ್ಲಿ ಅರಸನಿಗೆ ತಿಳಿಯದಂಥದ್ದು ಒಂದೂ ಇರಲಿಲ್ಲವಾದ್ದರಿಂದ ಎಲ್ಲವುಗಳಿಗೂ ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 10:3
16 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸುವಿನಲ್ಲಿಯೇ ಜ್ಞಾನ, ವಿವೇಕ ಎಂಬ ಸಿರಿಸಂಪತ್ತು ಅಡಗಿದೆ.


ಅವರ ಕೃಪೆಯಿಂದಲೇ ನೀವು ಕ್ರಿಸ್ತಯೇಸುವಿನಲ್ಲಿ ಬಾಳುತ್ತಾ ಇದ್ದೀರಿ; ಅವರ ಕೃಪೆಯಿಂದಲೇ ಕ್ರಿಸ್ತಯೇಸು ನಮಗೆ ಜ್ಞಾನ ಮೂಲವಾಗಿದ್ದಾರೆ. ದೇವರಿಂದ ನಮಗೆ ದೊರಕುವ ಸತ್ಸಂಬಂಧ, ಪಾವನತೆ ಹಾಗೂ ವಿಮೋಚನೆ ಆ ಕ್ರಿಸ್ತಯೇಸುವಿನಿಂದಲೇ.


ದೇವರ ಚಿತ್ತದಂತೆ ನಡೆಯಲು ಮನಸ್ಸು ಉಳ್ಳವನಿಗೆ, ನಾನು ಬೋಧಿಸುವುದು ದೇವರಿಂದ ಬಂದುದೋ ಅಥವಾ ನನ್ನ ಸ್ವಂತ ಕಲ್ಪನೆಯೋ ಎಂಬುದು ತಿಳಿಯುತ್ತದೆ.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸ್ವರ್ಗಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶ ಲಭಿಸಿರುವುದು ನಿಮಗೆ, ಅವರಿಗಲ್ಲ.


ಕುರುಡರನ್ನು ನೆಪ್ಪಿಲ್ಲದ ಮಾರ್ಗದಲ್ಲಿ ಬರಮಾಡುವೆನು ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಸುವೆನು. ಅವರೆದುರಿನ ಕತ್ತಲನ್ನು ಬೆಳಕಾಗಿಸುವೆನು ಅವರ ಹಾದಿಯ ಡೊಂಕನು ನೇರಮಾಡುವೆನು. ಬಿಡದೆ ಮಾಡುವೆನು ಈ ಕಾರ್ಯಗಳನು.


ಸುಜ್ಞಾನಿಗಳ ಸಹವಾಸದಿಂದ ಜನರು ಸುಜ್ಞಾನಿಗಳಾಗುವರು; ಅಜ್ಞಾನಿಗಳ ಒಡನಾಟದಿಂದ ಸಂಕಟಪಡುವರು.


ಸೊಲೊಮೋನನು ಆಕೆಯ ಪ್ರಶ್ನೆಗಳಿಗೆಲ್ಲಾ ಉತ್ತರಕೊಟ್ಟನು. ಅವುಗಳಲ್ಲಿ ಬಗೆಹರಿಸಲು ಅವನಿಗೆ ಅಸಾಧ್ಯವಾದದ್ದು ಒಂದೂ ಇರಲಿಲ್ಲ; ಎಲ್ಲವುಗಳಿಗೂ ಉತ್ತರಕೊಟ್ಟನು.


ಸರ್ವೇಶ್ವರನ ನಾಮಮಹತ್ತಿನಿಂದ ಸೊಲೊಮೋನನ ಕೀರ್ತಿ ಹರಡಿತು. ಇದನ್ನು ಕೇಳಿದ ಶೆಬದ ರಾಣಿ ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕೆ ಬಂದಳು.


ಆದ್ದರಿಂದ ನಿನ್ನ ಬಿನ್ನಹವನ್ನು ನೆರವೇರಿಸಿದ್ದೇನೆ. ನೋಡು, ನಿನಗೆ ಜ್ಞಾನವನ್ನೂ ವಿವೇಕವನ್ನೂ ಅನುಗ್ರಹಿಸಿದ್ದೇನೆ; ನಿನ್ನಂಥ ಜ್ಞಾನಿಯು ಹಿಂದೆ ಇರಲಿಲ್ಲ, ಮುಂದೆಯೂ ಇರುವುದಿಲ್ಲ.


ಅಬ್ಷಾಲೋಮನ ವಿಷಯವನ್ನು ರೂಪಾಂತರ ಪಡಿಸುವುದಕ್ಕಾಗಿ ನಿಮ್ಮ ಸೇವಕನಾದ ಯೋವಾಬನೇ ಇದನ್ನು ಮಾಡಿದನು. ನನ್ನ ಒಡೆಯರು ದೇವದೂತನಂಥ ಜ್ಞಾನಿ; ಅವರು ಭೂಲೋಕದಲ್ಲಿ ನಡೆಯುವುದನ್ನೆಲ್ಲಾ ತಿಳಿದುಕೊಳ್ಳುತ್ತಾರೆ!” ಎಂದು ಉತ್ತರಕೊಟ್ಟಳು.


ನನ್ನ ಒಡೆಯರಾದ ಅರಸರ ಮಾತು ಸಮಾಧಾನಕ್ಕೆ ಕಾರಣವಾಗುವುದೆಂದು ನೆನಸಿ ನಿಮ್ಮ ದಾಸಿಯಾದ ನಾನು ಬಂದೆ. ನ್ಯಾಯ ಅನ್ಯಾಯಗಳನ್ನು ಕಂಡು ಹಿಡಿಯುವುದರಲ್ಲಿ ನನ್ನ ಒಡೆಯರಾದ ಅರಸರು ದೇವದೂತನಂತೆ ಇರುತ್ತೀರಿ; ನಿಮ್ಮ ದೇವರಾದ ಸರ್ವೇಶ್ವರ ನಿಮ್ಮೊಂದಿಗೆ ಇರಲಿ!” ಎಂದಳು.


ಆಕೆ ಸುಗಂಧದ್ರವ್ಯ, ಅಪರಿಮಿತವಾದ ಬಂಗಾರ, ರತ್ನ, ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾಪರಿವಾರದೊಡನೆ ಜೆರುಸಲೇಮಿಗೆ ಬಂದಳು. ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಸೊಲೊಮೋನನೊಡನೆ ಸಂಭಾಷಿಸಿದಳು.


ಶೆಬದ ರಾಣಿ ಸೊಲೊಮೋನನ ಹಲವಿಧವಾದ ಜ್ಞಾನೋಕ್ತಿಗಳನ್ನು ಕೇಳಿದಳು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು