Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 10:8 - ಕನ್ನಡ ಸತ್ಯವೇದವು C.L. Bible (BSI)

8 ನಿಮ್ಮ ಪ್ರಜೆಗಳು ಭಾಗ್ಯವಂತರು! ಸದಾ ನಿಮ್ಮ ಸನ್ನಿಧಿಯಲ್ಲಿದ್ದು ನಿಮ್ಮ ಜ್ಞಾನವಾಕ್ಯಗಳನ್ನು ಕೇಳುವ ನಿಮ್ಮ ಸೇವಕರು ಧನ್ಯರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಿನ್ನ ಪ್ರಜೆಗಳು ಸದಾ ನಿನ್ನ ಮುಂದೆ ನಿಂತುಕೊಂಡು ನಿನ್ನ ಜ್ಞಾನವಾಕ್ಯಗಳನ್ನು ಕೇಳುವ ನಿನ್ನ ಸೇವಕರು ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಿನ್ನ ಪ್ರಜೆಗಳೂ ಸದಾ ನಿನ್ನ ಮುಂದೆ ನಿಂತುಕೊಂಡು ನಿನ್ನ ಜ್ಞಾನವಾಕ್ಯಗಳನ್ನು ಕೇಳುವ ನಿನ್ನ ಸೇವಕರೂ ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಿನ್ನ ಪತ್ನಿಯರೂ ಅಧಿಕಾರಿಗಳೂ ಧನ್ಯರೇ ಸರಿ! ಯಾಕೆಂದರೆ ಅವರು ನಿನ್ನ ಸೇವೆ ಮಾಡುತ್ತಾ ನಿನ್ನ ಜ್ಞಾನವಾಕ್ಯಗಳನ್ನು ಕೇಳಬಹುದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಿನ್ನ ಜನರು ಭಾಗ್ಯವಂತರು. ನಿನ್ನ ಮುಂದೆ ಯಾವಾಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಅಧಿಪತಿಗಳು ಭಾಗ್ಯವಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 10:8
12 ತಿಳಿವುಗಳ ಹೋಲಿಕೆ  

ನನ್ನ ಬಾಗಿಲಬಳಿ ಪ್ರತಿದಿನ ಕಾಯುತ್ತಾ ನನ್ನ ಹೊಸಲಿನತ್ತ ನಿರೀಕ್ಷಿಸಿ ನೋಡುತ್ತಾ ನನ್ನ ಮಾತನ್ನು ಆಲಿಸುವವನು ಭಾಗ್ಯವಂತ.


“ದೈವತೀರ್ಪಿನ ದಿನ ದಕ್ಷಿಣದೇಶದ ರಾಣಿ ಈ ಪೀಳಿಗೆಗೆ ಎದುರಾಗಿ ನಿಂತುಕೊಂಡು, ಇವರನ್ನು ಅಪರಾಧಿಗಳೆಂದು ತೋರಿಸುವಳು. ಆಕೆ ಸೊಲೊಮೋನನ ಜ್ಞಾನೋಕ್ತಿಗಳನ್ನು ಕೇಳುವುದಕ್ಕಾಗಿ ದೇಶದ ಕಟ್ಟಕಡೆಯಿಂದ ಬಂದಳು. ಆದರೆ, ಸೊಲೊಮೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ.


ಅದಕ್ಕೆ ಯೇಸು, “ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವನು ಹೆಚ್ಚು ಭಾಗ್ಯವಂತನು!” ಎಂದರು.


ಸುಜ್ಞಾನಿಗಳ ಸಹವಾಸದಿಂದ ಜನರು ಸುಜ್ಞಾನಿಗಳಾಗುವರು; ಅಜ್ಞಾನಿಗಳ ಒಡನಾಟದಿಂದ ಸಂಕಟಪಡುವರು.


ಸಜ್ಜನರ ಭಾಷಣದಿಂದ ಬಹುಜನರಿಗೆ ಪೋಷಣ; ಬುದ್ಧಿಹೀನತೆಯಿಂದ ಮೂರ್ಖರಿಗೆ ನಾಶನ.


ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವುದಕ್ಕೆ ಮೊದಲು ಜನರು ಹೇಳಿದ ಸುದ್ದಿಯನ್ನು ನಂಬಲಿಲ್ಲ; ಈಗ ನೋಡಿದರೆ ನಿಮ್ಮ ಜ್ಞಾನವೈಭವಗಳು, ನಾನು ಕೇಳಿದ್ದಕ್ಕಿಂತ ಮಿಗಿಲಾಗಿವೆ. ಜನರು ನನಗೆ ಇದರಲ್ಲಿ ಅರ್ಧವನ್ನಾದರೂ ವರದಿ ಮಾಡಿರಲಿಲ್ಲ.


ತನ್ನ ಕೆಲಸದಲ್ಲಿ ನಿಪುಣನಾದವನನ್ನು ಗುರುತುಹಚ್ಚು; ಅಂಥವನು ರಾಜರನ್ನಲ್ಲದೆ ನೀಚರನ್ನು ಸೇವಿಸಲಾರನು.


ನಾನಂತು ಮಿಚ್ಪದಲ್ಲಿ ವಾಸವಾಗಿರುವೆನು. ನಮ್ಮ ಬಳಿಗೆ ಬರುವ ಬಾಬಿಲೋನಿಯರ ಮುಂದೆ ನಿಮ್ಮ ಪ್ರತಿನಿಧಿಯಾಗಿರುವೆನು. ನೀವು ಹೋಗಿ ದ್ರಾಕ್ಷಾರಸ, ಹಣ್ಣು, ಎಣ್ಣೆ ಮುಂತಾದವುಗಳನ್ನು ಸಂಗ್ರಹಿಸಿ ನಿಮ್ಮ ಉಗ್ರಾಣಗಳಲ್ಲಿ ತುಂಬಿಸಿಡಿ. ನೀವು ಹಿಡಿದಿರುವ ಪಟ್ಟಣಗಳಲ್ಲೆ ವಾಸವಾಗಿರಿ,” ಎಂದು ಶಪಥಮಾಡಿ ಹೇಳಿದನು.


ಆಗ ಅರಸ ರೆಹಬ್ಬಾಮನು ತನ್ನ ತಂದೆ ಸೊಲೊಮೋನನ ಕಾಲದಲ್ಲಿ ಮಂತ್ರಿಗಳಾಗಿದ್ದ ಹಿರಿಯರನ್ನು ಕೂಡಿಸಿ, ತಾನು ಜನರಿಗೆ ಕೊಡಬೇಕಾದ ಉತ್ತರದ ಬಗ್ಗೆ ಅವರ ಆಲೋಚನೆಯನ್ನು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು