Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 10:9 - ಕನ್ನಡ ಸತ್ಯವೇದವು C.L. Bible (BSI)

9 ನಿಮ್ಮನ್ನು ಮೆಚ್ಚಿ ಇಸ್ರಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿಮ್ಮ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ಇಸ್ರಯೇಲರನ್ನು ಸದಾ ಪ್ರೀತಿಸುವವರಾಗಿರುವುದರಿಂದ ಆ ಜನರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕಾಗಿ ನಿಮ್ಮನ್ನು ಅರಸನನ್ನಾಗಿ ನೇಮಿಸಿದ್ದಾರೆ,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಿನ್ನನ್ನು ಮೆಚ್ಚಿ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ಇಸ್ರಾಯೇಲರನ್ನು ಸದಾ ಪ್ರೀತಿಸುವವನಾದುದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕೋಸ್ಕರ ನಿನ್ನನ್ನೇ ಅರಸನನ್ನಾಗಿ ನೇಮಿಸಿದ್ದಾನೆ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಿನ್ನನ್ನು ಮೆಚ್ಚಿ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ಆತನು ಇಸ್ರಾಯೇಲ್ಯರನ್ನು ಸದಾ ಪ್ರೀತಿಸುವವನಾಗಿರುವದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವದಕ್ಕೋಸ್ಕರ ನಿನ್ನನ್ನೇ ಅರಸನನ್ನಾಗಿ ನೇವಿುಸಿದ್ದಾನೆ ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ! ನಿನ್ನನ್ನು ಇಸ್ರೇಲಿನ ರಾಜನಾಗಿ ಮಾಡಲು ಆತನು ಸಂತೋಷಪಟ್ಟಿರಬೇಕು. ದೇವರಾದ ಯೆಹೋವನು ಇಸ್ರೇಲನ್ನು ಸದಾ ಪ್ರೀತಿಸುತ್ತಾನೆ. ಆದ್ದರಿಂದಲೇ ಆತನು ನಿನ್ನನ್ನು ರಾಜನನ್ನಾಗಿ ನೇಮಿಸಿದನು. ನೀನು ಕಟ್ಟಳೆಗಳನ್ನು ಅನುಸರಿಸುತ್ತಿರುವೆ ಮತ್ತು ಜನರಿಗೆ ನ್ಯಾಯ ದೊರಕಿಸುತ್ತಿರುವೆ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇಸ್ರಾಯೇಲಿನ ಸಿಂಹಾಸನದ ಮೇಲೆ ನಿನ್ನನ್ನು ಕುಳ್ಳಿರಿಸಿದ ನಿನ್ನಲ್ಲಿ ಹರ್ಷಗೊಂಡ ನಿನ್ನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ. ಯೆಹೋವ ದೇವರು ಯುಗಯುಗಕ್ಕೂ ಇಸ್ರಾಯೇಲರನ್ನು ಪ್ರೀತಿಮಾಡಿದ್ದರಿಂದ ನ್ಯಾಯವನ್ನೂ, ನೀತಿಯನ್ನೂ ನಡೆಸಲು ಅವರು ನಿನ್ನನ್ನು ಅರಸನನ್ನಾಗಿ ಮಾಡಿದರು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 10:9
23 ತಿಳಿವುಗಳ ಹೋಲಿಕೆ  

ಆತನಾಳಲಿ ನಿನ್ನ ಪ್ರಜೆಯನು ನೀತಿಯಿಂದ I ಪರಿಪಾಲಿಸಲಿ ದೀನದಲಿತರನು ನ್ಯಾಯದಿಂದ II


ಹೀರಾಮನು ಸೊಲೊಮೋನನ ಮಾತುಗಳನ್ನು ಕೇಳಿದಾಗ ಬಹಳವಾಗಿ ಸಂತೋಷಪಟ್ಟನು. “ಈ ಮಹಾಜನಾಂಗವನ್ನು ಆಳುವುದಕ್ಕಾಗಿ ದಾವೀದನಿಗೆ ಒಬ್ಬ ಬುದ್ಧಿವಂತ ಮಗನನ್ನು ಅನುಗ್ರಹಿಸಿದ ಸರ್ವೇಶ್ವರನಿಗೆ ಸ್ತೋತ್ರವಾಗಲಿ!” ಎಂದು ನುಡಿದನು.


ದಾವೀದನು ಸಮಸ್ತ ಇಸ್ರಯೇಲಿಗೂ ಅರಸನಾಗಿ ಪ್ರಜೆಗಳೆಲ್ಲರನ್ನೂ ಧರ್ಮಾನುಸಾರ ನ್ಯಾಯಯುತವಾಗಿ ನಡೆಸುತ್ತಿದ್ದನು.


ಇಗೋ, ನನ್ನ ದಾಸನು ! ನನ್ನ ಆಧಾರ ಪಡೆದವನು ನನ್ನಿಂದ ಆಯ್ಕೆಯಾದವನು ನನಗೆ ಪರಮ ಪ್ರಿಯನು. ನೆಲೆಗೊಳಿಸಿರುವೆ ಇವನಲ್ಲಿ ನನ್ನ ಆತ್ಮವನು ಅನ್ಯರಾಷ್ಟ್ರಗಳಿಗೆ ಸಾರುವನಿವನು ಸದ್ಧರ್ಮವನು.


ಟೈರಿನ ಅರಸ ಹೂರಾಮನು ಪತ್ರದ ಮೂಲಕ ಸೊಲೊಮೋನನಿಗೆ, “ಸರ್ವೇಶ್ವರ ತಮ್ಮ ಪ್ರಜೆಗಳನ್ನು ಪ್ರೀತಿಸುವವರು. ಆದುದರಿಂದ ನಿನ್ನನ್ನು ಆ ಜನರ ಅರಸನನ್ನಾಗಿ ನೇಮಿಸಿದ್ದಾರೆ.


“ಇತ್ತನಿವನು ಭರವಸೆ, ಪ್ರಭುವೆ ತನ್ನುದ್ಧಾರಕನೆಂದು I ಆತನಿಗಿವನು ಮೆಚ್ಚುಗೆಯಾದರೆ ರಕ್ಷಿಸಲಿ” - ಇಂತೆಂದು II


ಬಿಕ್ಕಟ್ಟಿನಿಂದ ಬಿಡಿಸಿ ತಂದನು ಬಯಲಿಗೆ I ಅಕ್ಕರೆಯಿಂದ ಮೆಚ್ಚಿ ರಕ್ಷಕನಾದ ನನಗೆ II


ಇಸ್ರಯೇಲರು ಸದಾಕಾಲ ನಿಮ್ಮ ಪ್ರಜೆಗಳಾಗಿರಬೇಕೆಂದು ನಿರ್ಣಯಿಸಿದಿರಿ;


ಇಸ್ರಯೇಲರ ದೇವನು, ಅವರಾಶಕ್ತನು, ಹೀಗೆಂದು ನನಗೆ ನುಡಿದನು


“ಎನ್ನ ಮನದನ್ನೆ” ಎನಿಸಿಕೊಳ್ಳುವೆ ನೀನು “ಸುವಿವಾಹಿತೆ” ಎನಿಸಿಕೊಳ್ಳುವುದು ನಿನ್ನ ನಾಡು. ನಿನ್ನಲ್ಲಿದೆ ಉಲ್ಲಾಸ ಸರ್ವೇಶ್ವರನಿಗೆ ವಿವಾಹವಾಗುವುದಿದೆ ನಿನ್ನ ನಾಡಿಗೆ.


ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.


ಆದರೂ ಸರ್ವೇಶ್ವರ ನಿಮ್ಮನ್ನು ಪ್ರೀತಿಸಿ, ತಾವು ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಬೇಕೆಂದು, ಈಜಿಪ್ಟಿನ ರಾಜ ಫರೋಹನ ಕೈಕೆಳಗೆ ಗುಲಾಮರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ತಮ್ಮ ಭುಜಬಲ ಪ್ರಯೋಗಿಸಿ, ಆ ದೇಶದಿಂದ ಬರಮಾಡಿದ್ದಾರೆ.


ಹೀಗೆ ದಾವೀದನು, “ಸರ್ವೇಶ್ವರಸ್ವಾಮಿ ನನ್ನನ್ನು ಇಸ್ರಯೇಲ್ ಅರಸನನ್ನಾಗಿ ಸ್ಥಿರಪಡಿಸಿದ್ದಾರೆ, ತಮ್ಮ ಪ್ರಜೆಗಳಾದ ಇಸ್ರಯೇಲರ ನಿಮಿತ್ತ ನನ್ನ ರಾಜ್ಯವನ್ನು ಅಭಿವೃದ್ಧಿಪಡಿಸಿದ್ದಾರೆ,” ಎಂದು ತಿಳಿದುಕೊಂಡನು.


ಇಸ್ರಯೇಲರೆಲ್ಲರೂ ಅರಸನ ಈ ತೀರ್ಪನ್ನು ಕೇಳಿದರು. ನ್ಯಾಯನಿರ್ಣಯಿಸುವುದಕ್ಕೆ ಈತನಲ್ಲಿ ದೇವದತ್ತ ಜ್ಞಾನವಿದೆ ಎಂದು ತಿಳಿದು ಅವನ ಬಗ್ಗೆ ಅಪಾರ ಗೌರವ ಉಳ್ಳವರಾದರು.


ಮಗುವೊಂದು ಹುಟ್ಟಿತೆಮಗೆ ವರಪುತ್ರನನು ಕೊಟ್ಟರೆಮಗೆ. ಆತನ ಕೈಯಲ್ಲಿಹುದು ರಾಜ್ಯಾಡಳಿತ ‘ಅದ್ಭುತಶಾಲಿ’, ಮಂತ್ರಿಶ್ರೇಷ್ಠ’ ‘ಪರಾಕ್ರಮದೇವ’, ‘ಅನಂತ ಪಿತ’, ‘ಶಾಂತಿ ನೃಪ’ - ಇವು ಆತನ ನಾಮಾಂಕಿತ.


ಸರ್ವೇಶ್ವರನಾದ ನಾನು ದೂರದಿಂದ ಅದಕ್ಕೆ ದರ್ಶನಕೊಟ್ಟು: ‘ನಾನು ನಿನ್ನನ್ನು ಪ್ರೀತಿಸುವುದು ಶಾಶ್ವತ ಪ್ರೇಮದಿಂದ. ಈ ಕಾರಣದಿಂದ ನಿನ್ನನ್ನು ಆಕರ್ಷಿಸಿಕೊಂಡಿದ್ದೇನೆ ಅಚಲ ಪ್ರೇಮದಿಂದ.


“ನಿಮ್ಮ ಮೇಲೆ ನನಗೆ ಪ್ರೀತಿ ಇದೆ” ಎನ್ನುತ್ತಾರೆ ಸರ್ವೇಶ್ವರ. ನೀವಾದರೋ, “ಯಾವ ವಿಷಯದಲ್ಲಿ ನಮಗೆ ಪ್ರೀತಿ ತೋರಿಸಿದ್ದೀರಿ?” ಎಂದು ಕೇಳುತ್ತೀರಿ. ಅದಕ್ಕೆ ಅವರು, “ಏಸಾವನು ಯಕೋಬನ ಅಣ್ಣನಲ್ಲವೇ? ಆದರೂ ನಾನು ಯಕೋಬನನ್ನು ಪ್ರೀತಿಸಿದೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು