Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:11 - ಕನ್ನಡ ಸತ್ಯವೇದವು C.L. Bible (BSI)

11 ಆದ್ದರಿಂದ ಸರ್ವೇಶ್ವರ ಅವನ ಮೇಲೆ ಕೋಪಗೊಂಡು, “ನೀನು ಹೀಗೆ ಮಾಡಿ ನನ್ನ ನಿಬಂಧನೆಗಳನ್ನು ಮೀರಿದ್ದರಿಂದ ನಿನ್ನ ರಾಜ್ಯವನ್ನು ಕಿತ್ತುಕೊಂಡು ನಿನ್ನ ದಾಸನಿಗೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನು ಅವನಿಗೆ, “ನೀನು ಈ ರೀತಿಯಾಗಿ ಮಾಡಿ ನನ್ನ ವಿಧಿನಿಬಂಧನೆಗಳನ್ನು ಮೀರಿದ್ದರಿಂದ ನಿನ್ನ ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನ್ನ ಸೇವಕನಿಗೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವನಿಗೆ - ನೀನು ಈ ಪ್ರಕಾರ ಮಾಡಿ ನನ್ನ ವಿಧಿನಿಬಂಧನೆಗಳನ್ನು ಮೀರಿದ್ದರಿಂದ ನಿನ್ನ ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನ್ನ ಸೇವಕನಿಗೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದ್ದರಿಂದ ಯೆಹೋವನು ಸೊಲೊಮೋನನಿಗೆ, “ನಮ್ಮಿಬ್ಬರ ನಡುವೆಯಿದ್ದ ಒಡಂಬಡಿಕೆಯನ್ನು ಮೀರಿಬಿಟ್ಟೆ. ನೀನು ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ. ಆದ್ದರಿಂದ ನಿನ್ನ ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನ್ನ ಸೇವಕರಲ್ಲಿ ಒಬ್ಬನಿಗೆ ಅದನ್ನು ಕೊಡುವುದಾಗಿ ನಾನು ಪ್ರಮಾಣ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದಕಾರಣ ಯೆಹೋವ ದೇವರು ಸೊಲೊಮೋನನಿಗೆ, “ನೀನು ಹೀಗೆ ನಡೆದು ನಾನು ನಿನಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನೂ, ನನ್ನ ಕಟ್ಟಳೆಗಳನ್ನೂ ಕೈಗೊಳ್ಳದೆ ಹೋದುದರಿಂದ ನಿಶ್ಚಯವಾಗಿ ನಾನು ರಾಜ್ಯವನ್ನು ನಿನ್ನಿಂದ ಕಸಿದುಕೊಂಡು ಅದನ್ನು ನಿನ್ನ ಸೇವಕನಿಗೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:11
16 ತಿಳಿವುಗಳ ಹೋಲಿಕೆ  

ಯಾರೊಬ್ಬಾಮನಿಗೆ, “ನೀನು ಇವುಗಳಲ್ಲಿ ಹತ್ತು ತುಂಡುಗಳನ್ನು ತೆಗೆದುಕೋ. ಇಸ್ರಯೇಲ್ ದೇವರಾದ ಸರ್ವೆಶ್ವರ ರಾಜ್ಯವನ್ನು ಸೊಲೊಮೋನನಿಂದ ಕಿತ್ತುಕೊಂಡು


ಇಸ್ರಯೇಲ್ ರಾಜ್ಯವನ್ನು ದಾವೀದ ಸಂತಾನದವರ ಕೈಯಿಂದ ಕಿತ್ತುಕೊಂಡ ನಂತರ, ಇಸ್ರಯೇಲರು ನೆಬಾಟನ ಮಗ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಅವನು ಅವರನ್ನು ಸರ್ವೇಶ್ವರನ ಭಕ್ತಿಮಾರ್ಗದಿಂದ ತಪ್ಪಿಸಿ ಮಹಾಪಾಪಕ್ಕೆ ಒಳಪಡಿಸಿದನು.


ಯಾರೊಬ್ಬಾಮನು ಹಿಂದಿರುಗಿ ಬಂದು ಇದ್ದಾನೆಂಬ ಸಮಾಚಾರ ಇಸ್ರಯೇಲರಿಗೆ ಗೊತ್ತಾದಾಗ ಅವರೆಲ್ಲರೂ ಅವನನ್ನು ನೆರೆದ ಸಭೆಯ ಮುಂದೆ ಕರೆಸಿ ತಮ್ಮ ಅರಸನನ್ನಾಗಿ ನೇಮಿಸಿಕೊಂಡರು. ದಾವೀದನ ಕುಟುಂಬದವರನ್ನು ಯೆಹೂದಕುಲವೇ ಹೊರತು ಬೇರೆ ಯಾವ ಕುಲವೂ ಹಿಂಬಾಲಿಸಲಿಲ್ಲ.


ಇದು ಸರ್ವೇಶ್ವರನೆಂಬ ನಾನೇ ಹೇಳಿದ ಮಾತು. ನನಗೆ ವಿರೋಧವಾಗಿ ಒಟ್ಟುಕೂಡಿಕೊಂಡಿರುವ ಈ ದುಷ್ಟಸಮೂಹದವರೆಲ್ಲರಿಗೆ ಈ ಮಾತಿನ ಮೇರೆಗೆ ಮಾಡಿಯೇ ತೀರುವೆನು. ಮರುಭೂಮಿಯಲ್ಲೇ ಅವರೆಲ್ಲರು ಸಾಯಬೇಕು,” ಎಂದು ಹೇಳಿದರು.


ಆದ್ದರಿಂದ ಇವರ ಪೂರ್ವಜರಿಗೆ ಪ್ರಮಾಣಪೂರ್ವಕವಾಗಿ ನಾನು ವಾಗ್ದಾನ ಮಾಡಿದ ಆ ನಾಡನ್ನು ಇವರಾರು ನೋಡುವುದಿಲ್ಲ.


ಆದರೂ ನಾನು ನಿನ್ನ ತಂದೆ ದಾವೀದನನ್ನು ಸ್ಮರಿಸಿ, ನಿನ್ನ ಮಗನ ಕೈಯಿಂದ ಅದನ್ನು ಕಿತ್ತುಕೊಳ್ಳುವೆನು.


ಅರಸ ಸೊಲೊಮೋನನಿಗೆ ವಿರುದ್ಧ ದಂಗೆ ಎದ್ದವರಲ್ಲಿ, ಅವನ ಸೇವಕನೂ ಚರೇದ ಊರಿನ ಎಫ್ರಯೀಮ್ಯನಾದ ನೆಬಾಟನ ಮಗನೂ ಆಗಿದ್ದ, ಯಾರೊಬ್ಬಾಮ ಎಂಬವನು ಮತ್ತೊಬ್ಬನು. ಚೆರೂಗಳೆಂಬ ವಿಧವೆ ಅವನ ತಾಯಿ.


ಒಂದು ದಿವಸ ಯಾರೊಬ್ಬಾಮನು ಜೆರುಸಲೇಮಿನಿಂದ ಎಲ್ಲಿಗೋ ಹೋಗುತ್ತಿರುವಾಗ ಅಡವಿಯಲ್ಲಿ ಶಿಲೋವಿನವನಾದ ಅಹೀಯನೆಂಬ ಪ್ರವಾದಿ ಅವನಿಗೆ ಎದುರಾದನು. ಇವನು ಹೊಸ ಬಟ್ಟೆಯನ್ನು ಹೊದ್ದುಕೊಂಡಿದ್ದನು. ಅಲ್ಲಿ ಇವರಿಬ್ಬರ ಹೊರತಾಗಿ ಬೇರೆ ಯಾರೂ ಇರಲಿಲ್ಲ.


ಸರ್ವೇಶ್ವರ ತಮ್ಮ ಪೂರ್ವಜರಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ ತಮಗೆ ಹೇಳಿಸಿದ ಬುದ್ಧಿವಾಕ್ಯಗಳನ್ನೂ ತಿರಸ್ಕರಿಸಿ, ಮಿಥ್ಯಾದೇವತೆಗಳನ್ನು ಪೂಜಿಸಿ ನಿಸ್ಸಾರ್ಥಕರಾದರು. ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಸರ್ವೇಶ್ವರ ಆಜ್ಞಾಪಿಸಿದ್ದರೂ ಕೇಳದೆ ಆ ಜನಾಂಗಗಳನ್ನೇ ಅನುಸರಿಸಿದರು.


ಪಾಲಿಸಲಿಲ್ಲ ಅವರು ದೇವರ ನಿಬಂಧನೆಯನು I ಅನುಸರಿಸಲಿಲ್ಲ ಆತನ ಧರ್ಮಶಾಸ್ತ್ರವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು