Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:15 - ಕನ್ನಡ ಸತ್ಯವೇದವು C.L. Bible (BSI)

15 ದಾವೀದನಿಗೂ ಎದೋಮ್ಯರಿಗೂ ಯುದ್ಧ ನಡೆಯುತ್ತಿರುವಾಗ ಸೇನಾಪತಿಯಾದ ಯೋವಾಬನು ಇಸ್ರಯೇಲ್ ಸರ್ವಸೈನ್ಯದೊಡನೆ ಅಲ್ಲಿಗೆ ಹೋಗಿ ಹತರಾದ ಇಸ್ರಯೇಲರನ್ನು ಸಮಾಧಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ದಾವೀದನಿಗೂ ಎದೋಮಿನವರಿಗೂ ಯುದ್ಧ ನಡೆಯುತ್ತಿರುವಾಗ ಸೇನಾಪತಿಯಾದ ಯೋವಾಬನು ಇಸ್ರಾಯೇಲ್ ಸರ್ವಸೈನ್ಯದೊಡನೆ ಅಲ್ಲಿಗೆ ಹೋಗಿ, ಹತರಾದ ಇಸ್ರಾಯೇಲರನ್ನು ಸಮಾಧಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ದಾವೀದನಿಗೂ ಎದೋಮ್ಯರಿಗೂ ಯುದ್ಧನಡಿಯುತ್ತಿರುವಾಗ ಸೇನಾಪತಿಯಾದ ಯೋವಾಬನು ಇಸ್ರಾಯೇಲ್ ಸರ್ವಸೈನ್ಯದೊಡನೆ ಅಲ್ಲಿಗೆ ಹೋಗಿ ಹತರಾದ ಇಸ್ರಾಯೇಲ್ಯರನ್ನು ಹೂಣಿಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅದು ಹೀಗೆ ಸಂಭವಿಸಿತು: ದಾವೀದನು ಮೊದಲು ಎದೋಮ್ಯರನ್ನು ಸೋಲಿಸಿದ್ದನು, ದಾವೀದನ ಸೈನ್ಯಕ್ಕೆ ಯೋವಾಬನು ಸೇನಾಪತಿಯಾಗಿದ್ದನು. ಸತ್ತ ಜನರನ್ನು ಸಮಾಧಿ ಮಾಡಲು ಯೋವಾಬನು ಎದೋಮಿಗೆ ಹೋದನು. ಅಲ್ಲಿ ಇನ್ನೂ ವಾಸವಾಗಿದ್ದ ಗಂಡಸರನ್ನೆಲ್ಲ ಯೋವಾಬನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ದಾವೀದನು ಎದೋಮಿನಲ್ಲಿರುವಾಗ ಸೇನಾಧಿಪತಿಯಾದ ಯೋವಾಬನು ಎದೋಮಿನ ಗಂಡಸರೆಲ್ಲರನ್ನು ಕೊಂದುಹಾಕಿದನು. ತರುವಾಯ ಇಸ್ರಾಯೇಲರಲ್ಲಿ ಹತರಾದವರನ್ನು ಸಮಾಧಿಮಾಡಲು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:15
14 ತಿಳಿವುಗಳ ಹೋಲಿಕೆ  

ಎದೋಮಿನಲ್ಲೆಲ್ಲಾ ಅವನು ಕಾವಲು ದಂಡುಗಳನ್ನಿರಿಸಿದನು. ಹೀಗೆ ಎದೋಮ್ಯರೆಲ್ಲರೂ ದಾವೀದನ ಅಡಿಯಾಳುಗಳಾದರು. ಸರ್ವೇಶ್ವರನ ಅನುಗ್ರಹದಿಂದ ದಾವೀದನಿಗೆ ಎಲ್ಲಿಹೋದರೂ ಜಯ ಉಂಟಾಯಿತು.


ನಿಮ್ಮ ದೇವರಾದ ಸರ್ವೇಶ್ವರ ಆ ಪಟ್ಟಣವನ್ನು ನಿಮಗೆ ವಶಪಡಿಸಿದಾಗ ಅದರಲ್ಲಿರುವ ಗಂಡಸರೆಲ್ಲರನ್ನೂ ಕನಿಕರಿಸದೆ ಸಂಹಾರ ಮಾಡಬೇಕು.


ಕೋಟೆ ನಗರಕೆ ನನ್ನನು ಕರೆದೊಯ್ಯುವವರಾರು? I ಎದೋಮ್ ಪ್ರಾಂತ್ಯಕೆ ನನ್ನ ಕೊಂಡೊಯ್ಯುವವರಾರು? II


ಕೈಬಿಟ್ಟೆ ದೇವಾ, ನಮ್ಮನು ಕೈಬಿಟ್ಟೆ I ಕೋಪದಿಂದೆಮ್ಮನು ತಳ್ಳಿ ಕೆಡವಿಬಿಟ್ಟೆ I ಉದ್ಧಾರವಾಗ್ವೆವು ನೀ ಮರಳಿ ಬೆಂಗೊಡೆ II


ಆದಕಾರಣ ಈ ಗುಂಪಿನಲ್ಲಿರುವ ಎಲ್ಲ ಗಂಡುಮಕ್ಕಳನ್ನು ಮತ್ತು ಪುರುಷ ಸಂಗಮಮಾಡಿದ ಎಲ್ಲ ಹೆಂಗಸರನ್ನು ಕೊಲ್ಲಬೇಕು.


ಬಾಳ ನಡೆಸುವೆ ಕತ್ತಿಕಠಾರಿಯಿಂದಲೇ ಕೂಲಿಯಾಳಾಗುವೆ ಸೋದರನಿಗೆ ಮುರಿಯುವೆ ಅವ ಹೊರಿಸಿದ ನೊಗವ ಸ್ವಾತಂತ್ರ್ಯಕ್ಕಾಗಿ ನೀ ಬಂಡಾಯ ಹೂಡಿದಾಗ,”


ಸರ್ವೇಶ್ವರ ಆಕೆಗೆ ಇಂತೆಂದರು: ನಿನ್ನ ಉದರದೊಳಿವೆ ಜನಾಂಗಗಳೆರಡು ಹುಟ್ಟಿನಿಂದ ವೈರಿಗಳಾ ರಾಷ್ಟ್ರಗಳೆರಡು ಬಲಿಷ್ಠವಿರುವುದು ಒಂದು ಮತ್ತೊಂದಕೆ ಜ್ಯೇಷ್ಠನೇ ದಾಸನಾಗುವನು ಕನಿಷ್ಠನಿಗೆ.


ಸರ್ವೇಶ್ವರನ ಆಜ್ಞೆಯಂತೆ ಅವರು ಮಿದ್ಯಾನರೊಡನೆ ಯುದ್ಧಮಾಡಿ ಗಂಡಸರೆಲ್ಲರನ್ನು ಸಂಹಾರ ಮಾಡಿದರು.


ಎದೋಮ್ಯನೂ ರಾಜಪುತ್ರನೂ ಆದ ಹದದನನ್ನು ಸೊಲೊಮೋನನಿಗೆ ವಿರುದ್ಧ ದಂಗೆಯೇಳುವಂತೆ ಮಾಡಿದರು ಸರ್ವೇಶ್ವರ.


ಆರು ತಿಂಗಳು ಅಲ್ಲಿಯೇ ಇದ್ದು ಎದೋಮ್ಯರ ಎಲ್ಲ ಗಂಡಸರನ್ನು ಸಂಹರಿಸಿದನು.


ಇದಲ್ಲದೆ ದಾವೀದನು ಹೋಗಿ ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹದಿನೆಂಟು ಸಾವಿರಮಂದಿ ಸೈನಿಕರನ್ನು ಸೋಲಿಸಿಬಂದು ಅಂದಿನಿಂದ ಬಹಳ ಪ್ರಖ್ಯಾತಿ ಹೊಂದಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು