Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:17 - ಕನ್ನಡ ಸತ್ಯವೇದವು C.L. Bible (BSI)

17 ಆ ಸಮಯದಲ್ಲಿ ಬಾಲಕನಾದ ಹದದನು ತನ್ನ ತಂದೆಯ ಸೇವಕರಾದ ಕೆಲವು ಮಂದಿ ಎದೋಮ್ಯರ ಜೊತೆಯಲ್ಲಿ ಈಜಿಪ್ಟಿಗೆ ಓಡಿಹೋಗಬೇಕೆಂದು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆ ಸಮಯದಲ್ಲಿ ಬಾಲಕನಾದ ಹದದನು ತನ್ನ ತಂದೆಯ ಸೇವಕರಾದ ಕೆಲವು ಜನರು ಎದೋಮ್ಯರ ಜೊತೆಯಲ್ಲಿ ಐಗುಪ್ತಕ್ಕೆ ಓಡಿಹೋಗಬೇಕೆಂದು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆ ಸಮಯದಲ್ಲಿ ಬಾಲಕನಾದ ಹದದನು ತನ್ನ ತಂದೆಯ ಸೇವಕರಾದ ಕೆಲವು ಮಂದಿ ಎದೋಮ್ಯರ ಜೊತೆಯಲ್ಲಿ ಐಗುಪ್ತಕ್ಕೆ ಓಡಿಹೋಗಬೇಕೆಂದು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ಆ ಕಾಲಕ್ಕೆ ಹದದನಿನ್ನೂ ಚಿಕ್ಕ ಬಾಲಕನಾಗಿದ್ದನು. ಆದ್ದರಿಂದ ಹದದನು ಈಜಿಪ್ಟಿಗೆ ಓಡಿಹೋದನು. ಅವನ ತಂದೆಯ ಕೆಲವು ಜನ ಸೇವಕರೂ ಅವನೊಡನೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ಆ ಸಮಯದಲ್ಲಿ ಇನ್ನೂ ಬಾಲಕನಾದ ಹದಾದನು ತನ್ನ ತಂದೆಯ ಕೆಲವು ಸೇವಕರಾದ ಎದೋಮ್ಯರ ಸಂಗಡ ಈಜಿಪ್ಟಿಗೆ ಓಡಿಹೋಗಬೇಕೆಂದು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:17
6 ತಿಳಿವುಗಳ ಹೋಲಿಕೆ  

ಆದರೆ ಅರಸ ಯೆಹೋರಾಮನ ಮಗಳೂ ಅಹಜ್ಯನ ತಂಗಿಯೂ ಆದ ಯೆಹೋಷೆಬ ಎಂಬಾಕೆ, ಯಾರಿಗೂ ತಿಳಿಯದಂತೆ ತನ್ನ ಅಣ್ಣನ ಮಗ ಯೆಹೋವಾಷನನ್ನು, ಹತವಾಗುವುದಕ್ಕಿದ್ದ ರಾಜಪುತ್ರರ ಮಧ್ಯೆಯಿಂದ, ಅವನ ದಾದಿಯೊಡನೆ ತೆಗೆದುಕೊಂಡು ಹೋಗಿ, ಮಲಗುವ ಕೋಣೆಯಲ್ಲಿ ಅಡಗಿಸಿಬಿಟ್ಟಳು.


ಸೌಲನ ಮಗ ಯೋನಾತಾನನಿಗೆ ಮೆಫೀಬೋಶೆತನೆಂಬ ಒಬ್ಬ ಕುಂಟ ಮಗನಿದ್ದನು. ಅವನು ಕುಂಟನಾದದ್ದು ಹೀಗೆ: ಸೌಲ ಹಾಗು ಯೋನಾತಾನರು ಸತ್ತರೆಂಬ ವರ್ತಮಾನ ಜೆಸ್ರೀಲಿನಿಂದ ಬಂದಾಗ ಐದು ವರ್ಷದವನಾಗಿದ್ದ ಅವನನ್ನು ಅವನ ದಾದಿ ತೆಗೆದುಕೊಂಡು ಅವಸರದಿಂದ ಓಡಿಹೋಗುವಾಗ ಅವನು ಬಿದ್ದು ಕಾಲು ಮುರಿದುಕೊಂಡನು.


ಆರು ತಿಂಗಳು ಅಲ್ಲಿಯೇ ಇದ್ದು ಎದೋಮ್ಯರ ಎಲ್ಲ ಗಂಡಸರನ್ನು ಸಂಹರಿಸಿದನು.


ಅವರು ಮೊದಲು ಮಿದ್ಯಾನಿಗೂ ಆಮೇಲೆ ಪಾರಾನಿಗೂ ಬಂದರು. ಅಲ್ಲಿಂದ ಕೆಲವುಮಂದಿ ಪಾರಾನಿನ ಜನರನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಈಜಿಪ್ಟಿನ ಅರಸ ಫರೋಹನ ಬಳಿಗೆ ಬಂದರು. ಫರೋಹನು ಹದದನಿಗೆ ಆಹಾರವನ್ನು, ಮನೆಯನ್ನು ಹಾಗು ಭೂಮಿಯನ್ನು ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು