1 ಅರಸುಗಳು 11:24 - ಕನ್ನಡ ಸತ್ಯವೇದವು C.L. Bible (BSI)24 ದಾವೀದನು ಚೋಬದವರನ್ನು ಸಂಹರಿಸಿದಾಗ ಈ ರೆಜೋನನು ಚೋಬದ ಅರಸನೂ ತನ್ನ ಒಡೆಯನೂ ಆದ ಹದದೆಜೆರನನ್ನು ಬಿಟ್ಟು ಓಡಿಹೋಗಿ, ಕೆಲವು ಮಂದಿಯನ್ನು ಕೂಡಿಸಿಕೊಂಡು, ತಾನು ಅವರ ನಾಯಕನಾಗಿ, ಅವರೊಡನೆ ದಮಸ್ಕಕ್ಕೆ ಬಂದು ಅಲ್ಲಿ ಅರಸನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ದಾವೀದನು ಚೋಬದವರನ್ನು ಸಂಹರಿಸಿದಾಗ ಅವನು ಚೋಬದ ಅರಸನೂ ಒಡೆಯನೂ ಆದ ಹದದೆಜೆರನನ್ನು ಬಿಟ್ಟು ಓಡಿಹೋಗಿ ಕೆಲವು ಜನರನ್ನು ಕೂಡಿಸಿಕೊಂಡು ತಾನು ಅವರ ನಾಯಕನಾಗಿ ಅವರೊಡನೆ ದಮಸ್ಕಕ್ಕೆ ಬಂದು ಅಲ್ಲಿ ಅರಸನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ದಾವೀದನು ಚೋಬದವರನ್ನು ಸಂಹರಿಸಿದಾಗ ಇವನು ಚೋಬದ ಅರಸನೂ ತನ್ನ ಒಡೆಯನೂ ಆದ ಹದದೆಜೆರನನ್ನು ಬಿಟ್ಟು ಓಡಿಹೋಗಿ ಕೆಲವು ಮಂದಿಯನ್ನು ಕೂಡಿಸಿಕೊಂಡು ತಾನು ಅವರ ನಾಯಕನಾಗಿ ಅವರೊಡನೆ ದಮಸ್ಕಕ್ಕೆ ಬಂದು ಅಲ್ಲಿ ಅರಸನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ದಾವೀದನು ಚೋಬದ ಸೈನ್ಯವನ್ನು ಸೋಲಿಸಿದ ಬಳಿಕ, ರೆಜೋನನು ಕೆಲವು ಜನರನ್ನು ಒಟ್ಟುಗೂಡಿಸಿಕೊಂಡು, ಆ ಕಿರುಸೇನೆಗೆ ತಾನೇ ನಾಯಕನಾದನು. ರೆಜೋನನು ದಮಸ್ಕಕ್ಕೆ ಹೋಗಿ ಅಲ್ಲಿಯೇ ನೆಲೆಸಿದನು. ರೆಜೋನನು ದಮಸ್ಕದ ರಾಜನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ದಾವೀದನು ಚೋಬದ ಜನರನ್ನು ಸಂಹರಿಸುವಾಗ ಇವನು ಜನರನ್ನು ತನ್ನ ಬಳಿಯಲ್ಲಿ ಕೂಡಿಸಿಕೊಂಡು ಒಂದು ಗುಂಪಿಗೆ ಅಧಿಪತಿಯಾಗಿ ಅವರ ಸಂಗಡ ದಮಸ್ಕಕ್ಕೆ ಹೋಗಿ ಅಲ್ಲಿ ವಾಸಿಸಿ, ಅರಸನಾದನು. ಅಧ್ಯಾಯವನ್ನು ನೋಡಿ |
ಬೆನ್ಹದದನು ಅವನಿಗೆ, “ನನ್ನ ತಂದೆ, ನಿನ್ನ ತಂದೆಯಿಂದ ಕಿತ್ತುಕೊಂಡ ಪಟ್ಟಣಗಳನ್ನು ನಾನು ಹಿಂದಕ್ಕೆ ಕೊಡುತ್ತೇನೆ; ಅವನು ಸಮಾರಿಯಾದಲ್ಲಿ ಮಾಡಿದಂತೆ ನೀನೂ ನನಗಾಗಿ ದಮಸ್ಕದಲ್ಲಿ ಕೆಲವು ವ್ಯಾಪಾರ ಕೇಂದ್ರಗಳನ್ನು ಸ್ಥಾಪಿಸಿಕೊಳ್ಳಬಹುದು,” ಎಂದು ಹೇಳಿದನು. ಅಹಾಬನು, “ನಾನು ಈ ಒಪ್ಪಂದದ ಮೇಲೆ ನಿನ್ನನ್ನು ಬಿಟ್ಟುಬಿಡುತ್ತೇನೆ,” ಎಂದು ಹೇಳಿ, ಅವನಿಂದ ಪ್ರಮಾಣಮಾಡಿಸಿ ಕಳುಹಿಸಿಬಿಟ್ಟನು.