Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:26 - ಕನ್ನಡ ಸತ್ಯವೇದವು C.L. Bible (BSI)

26 ಅರಸ ಸೊಲೊಮೋನನಿಗೆ ವಿರುದ್ಧ ದಂಗೆ ಎದ್ದವರಲ್ಲಿ, ಅವನ ಸೇವಕನೂ ಚರೇದ ಊರಿನ ಎಫ್ರಯೀಮ್ಯನಾದ ನೆಬಾಟನ ಮಗನೂ ಆಗಿದ್ದ, ಯಾರೊಬ್ಬಾಮ ಎಂಬವನು ಮತ್ತೊಬ್ಬನು. ಚೆರೂಗಳೆಂಬ ವಿಧವೆ ಅವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅರಸನಾದ ಸೊಲೊಮೋನನಿಗೆ ವಿರುದ್ಧವಾಗಿ ಎದ್ದವರಲ್ಲಿ ಅವನ ಸೇವಕನೂ ಚರೇದ ಊರಿನ ಎಫ್ರಾಯೀಮ್ಯನಾದ ನೆಬಾಟನ ಮಗನಾದ ಯಾರೊಬ್ಬಾಮನೆಂಬವನು ಮತ್ತೊಬ್ಬನು. ಚೆರೂಗಳೆಂಬ ವಿಧವೆಯು ಅವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅರಸನಾದ ಸೊಲೊಮೋನನಿಗೆ ವಿರೋಧವಾಗಿ ಎದ್ದವರಲ್ಲಿ ಅವನ ಸೇವಕನೂ ಚರೇದ ಊರಿನ ಎಫ್ರಾಯೀಮ್ಯನಾದ ನೆಬಾಟನ ಮಗನೂ ಆಗಿದ್ದ ಯಾರೊಬ್ಬಾಮನೆಂಬವನು ಮತ್ತೊಬ್ಬನು; ಚೆರೂಗಳೆಂಬ ವಿಧವೆಯು ಅವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಸೊಲೊಮೋನನ ಸೇವಕರಲ್ಲಿ ನೆಬಾಟನ ಮಗನಾದ ಯಾರೊಬ್ಬಾಮನೂ ಒಬ್ಬನಾಗಿದ್ದನು. ಯಾರೊಬ್ಬಾಮನು ಎಫ್ರಾಯೀಮ್ ಕುಲದವನು, ಅವನು ಚರೇದ ಪಟ್ಟಣದವನು. ಯಾರೊಬ್ಬಾಮನ ತಾಯಿಯ ಹೆಸರು ಜೆರೂಗ, ಆಕೆ ವಿಧವೆಯಾಗಿದ್ದಳು. ಯಾರೊಬ್ಬಾಮನು ರಾಜನ ವಿರುದ್ಧ ತಿರುಗಿಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಇದಲ್ಲದೆ, ಅರಸನಾದ ಸೊಲೊಮೋನನಿಗೆ ವಿರೋಧವಾಗಿ ದಂಗೆ ಎದ್ದವರಲ್ಲಿ ಅವನ ಸೇವಕನೂ ಚರೇದ ಪಟ್ಟಣದ ಎಫ್ರಾಯೀಮ್ಯನಾದ ನೆಬಾಟನ ಮಗ ಯಾರೊಬ್ಬಾಮನು ಇದ್ದನು, ಚೆರೂಯಳೆಂಬ ವಿಧವೆಯು ಅವನ ತಾಯಿಯು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:26
20 ತಿಳಿವುಗಳ ಹೋಲಿಕೆ  

ಹೀಗೆ ಇದ್ದರೂ ದಾವೀದನ ಮಗ ಸೊಲೊಮೋನನ ಸೇವೆಯಲ್ಲಿದ್ದ, ನೆಬಾಟನ ಮಗ ಯಾರೊಬ್ಬಾಮನು ದಂಗೆಯೆದ್ದು ತನ್ನ ದಣಿಗೆ ವಿರುದ್ಧ ದ್ರೋಹವೆಸಗಿದ;


ಅರಸ ಸೊಲೊಮೋನನಿಂದ ತಪ್ಪಿಸಿಕೊಂಡು ಈಜಿಪ್ಟಿಗೆ ಓಡಿಹೋಗಿದ್ದ ನೆಬಾಟನ ಮಗ ಯಾರೊಬ್ಬಾಮನನ್ನು ಕರೆಸಿಕೊಂಡಿದ್ದರು.


ಯೌವನಸ್ಥನಾದ ಯಾರೊಬ್ಬಾಮನು ಬಹುಸಾಮರ್ಥ್ಯದಿಂದ ಕೆಲಸಮಾಡುತ್ತಿರುವುದನ್ನು ಕಂಡು ಅವನನ್ನು ಜೋಸೆಫ್ಯರ ಎಲ್ಲಾ ಆಳುಗಳ ಮೇಲೆ ಮೇಸ್ತ್ರಿಯನ್ನಾಗಿ ನೇಮಿಸಿದನು.


ಆದ್ದರಿಂದ ಸರ್ವೇಶ್ವರ ಅವನ ಮೇಲೆ ಕೋಪಗೊಂಡು, “ನೀನು ಹೀಗೆ ಮಾಡಿ ನನ್ನ ನಿಬಂಧನೆಗಳನ್ನು ಮೀರಿದ್ದರಿಂದ ನಿನ್ನ ರಾಜ್ಯವನ್ನು ಕಿತ್ತುಕೊಂಡು ನಿನ್ನ ದಾಸನಿಗೆ ಕೊಡುವೆನು.


ನಾವು ಬಂದಿರುವ ಸಂಗತಿಯೇ ಬೇರೆ; ಎಫ್ರಯಿಮ್ ಪರ್ವತ ಪ್ರದೇಶದ ಬಿಕ್ರೀಯ ಮಗನಾದ ಶೆಬನೆಂಬವನು ಅರಸ ದಾವೀದನಿಗೆ ವಿರೋಧವಾಗಿ ಕೈಯೆತ್ತಿದ್ದಾನೆ. ಅವನನ್ನು ಒಪ್ಪಿಸಿಬಿಡಿ; ನಾನು ಊರನ್ನು ಬಿಟ್ಟು ಹೋಗುತ್ತೇನೆ,” ಎಂದು ಹೇಳಿದನು. ಅದಕ್ಕೆ ಆ ಸ್ತ್ರೀ, “ನೋಡಿ, ಈಗಲೇ ಅವನ ತಲೆಯನ್ನು ಗೋಡೆಯ ಕಿಂಡಿಯಿಂದ ನಿಮ್ಮ ಕಡೆಗೆ ಎಸೆಯಲಾಗುವುದು,” ಎಂದು ಉತ್ತರಕೊಟ್ಟು ತನ್ನ ಜನರ ಬಳಿಗೆ ಹೋಗಿ ಅವರಿಗೆ ವಿವೇಕದಿಂದ ಈ ಸಂಗತಿಯನ್ನು ತಿಳಿಸಿದಳು.


ಎಫ್ರಯಿಮ್ ಬೆಟ್ಟದ ಪ್ರದೇಶದಲ್ಲಿ ರಾಮಾ ಒಂದು ಊರು. ಆ ಊರಲ್ಲಿ ‘ಎಲ್ಕಾನ’ ಎಂಬ ಒಬ್ಬ ಮನುಷ್ಯನಿದ್ದ. ಇವನು ಯೆರೋಹಾಮನ ಮಗ, ಎಲೀಹುವಿನ ಮೊಮ್ಮಗ ಹಾಗು ತೋಹುವಿನ ಮರಿಮಗ. ಈ ತೋಹು ಎಂಬುವನು ಎಫ್ರಯಿಮ್ಯನಾದ ಚೂಫನ ಮಗ.


ಅವನ ಹೆಸರು ಎಲಿಮೆಲೆಕ್; ಅವನ ಪತ್ನಿಯ ಹೆಸರು ನವೊಮಿ. ಮಹ್ಲೋನ್ ಮತ್ತು ಕಿಲ್ಯೋನ್ ಅವರ ಇಬ್ಬರು ಪುತ್ರರು. ಇವರು ಇಸ್ರಯೇಲ್ ವಂಶದ ಎಫ್ರಾತಕುಲಕ್ಕೆ ಸೇರಿದವರು, ಬೆತ್ಲೆಹೇಮಿನವರು.


ಅಜೂಬಳ ಮರಣದ ನಂತರ ಕಾಲೇಬನು ಎಫ್ರಾತಳನ್ನು ಮದುವೆ ಆಗಿ ಹೂರ್ ಎಂಬ ಮಗನನ್ನು ಪಡೆದನು.


ನೀನು ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿ, ನನಗೆ ಕೋಪವನ್ನೆಬ್ಬಿಸಿದ್ದರಿಂದ ನೆಬಾಟನ ಮಗ ಯಾರೊಬ್ಬಾಮನ ಮನೆಗೂ ಅಹೀಯನ ಮಗ ಬಾಷನ ಮನೆಗೂ ಆದ ಗತಿ ನಿನ್ನ ಮನೆಗೂ ಆಗುವುದು,’ ಎನ್ನುತ್ತಾರೆ.


ಆದ್ದರಿಂದ ನಿನ್ನನ್ನೂ ನಿನ್ನ ಮನೆಯವರನ್ನೂ ಅಳಿಸಿಬಿಡುವೆನು; ನೆಬಾಟನ ಮಗ ಯಾರೊಬ್ಬಾಮನ ಮನೆಗಾದ ಗತಿ ನಿನ್ನ ಮನೆಗೂ ಆಗುವುದು.


ಯಾರೊಬ್ಬಾಮನು ತಾನು ಪಾಪಮಾಡಿದ್ದಲ್ಲದೆ ಇಸ್ರಯೇಲರನ್ನೂ ಪಾಪಕ್ಕೆ ಪ್ರೇರಿಸಿ ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ರೇಗಿಸಿದ್ದರಿಂದ ಹೀಗಾಯಿತು.


ಯಾರೊಬ್ಬಾಮನ ಪಾಪಗಳ ನಿಮಿತ್ತ ಹಾಗು ಅವನ ಪ್ರೇರಣೆಯಿಂದ ಇಸ್ರಯೇಲರು ಮಾಡಿದ ಪಾಪಗಳ ನಿಮಿತ್ತ ಸರ್ವೇಶ್ವರ ಅವರನ್ನು ಶತ್ರುಗಳಿಗೆ ಒಪ್ಪಿಸುವರು,” ಎಂದು ಆಕೆಗೆ ಹೇಳಿದನು.


ಆದರೆ ಅವನು ಇಸ್ರಯೇಲರನ್ನು ಬಿಟ್ಟಿಹಿಡಿಯಲಿಲ್ಲ; ಅವರನ್ನು ಸೈನಿಕರನ್ನಾಗಿ, ಪರಿವಾರದವರನ್ನಾಗಿ, ಅಧಿಪತಿಗಳನ್ನಾಗಿ, ಸರದಾರರನ್ನಾಗಿ, ಹಾಗೂ ರಥಾಶ್ವಬಲಗಳ ನಾಯಕರನ್ನಾಗಿ ನೇಮಿಸಿಕೊಂಡನು.


ದಾವೀದನು ಜೆಸ್ಸೆಯ ಎಂಬವನ ಮಗ. ಜೆಸ್ಸೆಯ ಯೆಹೂದದ ಬೆತ್ಲೆಹೇಮ್ ಊರಿನ ಎಫ್ರಾತ್ಯನು. ಸೌಲನ ಕಾಲದಲ್ಲಿ ಹಣ್ಣುಹಣ್ಣು ಮುದುಕ. ಇವನ ಎಂಟುಮಂದಿ ಮಕ್ಕಳಲ್ಲಿ ದಾವೀದನು ಒಬ್ಬ.


ಆ ಬಳಿಕ ಅವರು ಬೇತೇಲನ್ನು ಬಿಟ್ಟು ಹೊರಟರು. ಎಫ್ರಾತೂರಿಗೆ ಸೇರುವುದಕ್ಕೆ ಇನ್ನು ಸ್ವಲ್ಪ ದೂರವಿದ್ದಾಗ ರಾಖೇಲಳಿಗೆ ಹೆರಿಗೆಯ ಕಾಲ ಬಂದಿತು.


ಸೊಲೊಮೋನನ ಜೀವಮಾನದಲ್ಲೆಲ್ಲಾ ಇಸ್ರಯೇಲರಿಗೆ ಮಹಾಬಾಧಕನಾದ ಹದದನ ಜೊತೆಗೆ ಇವನೂ ವೈರಿಯಾಗಿದ್ದನು. ಇವನು ಸಿರಿಯಾ ದೇಶದಲ್ಲಿ ಅರಸನಾಗಿ ಇಸ್ರಯೇಲರನ್ನು ಬಹಳವಾಗಿ ದ್ವೇಷಿಸಿದನು.


ಇದಲ್ಲದೆ, ಅವರು ತಪ್ಪಿಸಿಕೊಂಡು ಹೋಗದಂತೆ ಎಫ್ರಯಿಮಿಗೆ ಹೋಗುವ ಜೋರ್ಡನಿನ ಹಾಯಗಡಗಳನ್ನೆಲ್ಲಾ ಹಿಡಿದರು. ತಪ್ಪಿಸಿಕೊಂಡ ಎಫ್ರಯಿಮ್ಯರಲ್ಲಿ ಒಬ್ಬನು ಅಲ್ಲಿಗೆ ಬಂದು ನನ್ನನ್ನು ದಾಟಗೊಡಿರಿ ಎಂದು ಅವರನ್ನು ಕೇಳಿದಾಗ ಅವರು, “ನೀನು ಎಫ್ರಯಿಮನೋ?’ ಎಂದು ಕೇಳುತ್ತಿದ್ದರು.


ಸೊಲೊಮೋನನ ಉಳಿದ ಪೂರ್ವೋತ್ತರ ಚರಿತ್ರೆಯನ್ನು, ಪ್ರವಾದಿ ನಾತಾನನ ಚರಿತ್ರೆ ಶೀಲೋವಿನವನಾದ ಅಹೀಯನ ಪ್ರವಾದನೆ ಹಾಗೂ ದಿವ್ಯದರ್ಶಿಯಾದ ಇದ್ದೋವನು ನೆಬಾಟನ ಮಗ ಯಾರೊಬ್ಬಾಮನನ್ನು ಕುರಿತು ನುಡಿದ ದರ್ಶನೋಕ್ತಿ ಎಂಬ ಗ್ರಂಥಗಳಲ್ಲಿ ಬರೆದಿಡಲಾಗಿ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು