Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:32 - ಕನ್ನಡ ಸತ್ಯವೇದವು C.L. Bible (BSI)

32 ತನ್ನ ದಾಸ ದಾವೀದನ ನಿಮಿತ್ತ ಹಾಗು ತಾವು ಇಸ್ರಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಜೆರುಸಲೇಮ್ ಪಟ್ಟಣದ ನಿಮಿತ್ತ ಅವನಿಗೆ ಒಂದೇ ಒಂದು ಕುಲವನ್ನು ಉಳಿಸಿ, ಬೇರೆ ಹತ್ತು ಕುಲಗಳನ್ನು ನಿನಗೆ ಕೊಡುತ್ತೇನೆಂದು ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ತನ್ನ ಸೇವಕನಾದ ದಾವೀದನ ನಿಮಿತ್ತವಾಗಿಯೂ, ತಾನು ಇಸ್ರಾಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದ ನಿಮಿತ್ತವಾಗಿಯೂ ಅವನಿಗೆ ಒಂದೇ ಕುಲವನ್ನು ಉಳಿಸಿ, ಬೇರೆ ಹತ್ತು ಕುಲಗಳನ್ನು ನಿನಗೆ ಕೊಡುತ್ತೇನೆ” ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ತನ್ನ ಸೇವಕನಾದ ದಾವೀದನ ನಿವಿುತ್ತವಾಗಿಯೂ ತಾನು ಇಸ್ರಾಯೇಲ್ಯರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಯೆರೂಸಲೇಮ್‍ಪಟ್ಟಣದ ನಿವಿುತ್ತವಾಗಿಯೂ ಅವನಿಗೆ ಒಂದೇ ಕುಲವನ್ನು ಉಳಿಸಿ ಬೇರೆ ಹತ್ತು ಕುಲಗಳನ್ನು ನಿನಗೆ ಕೊಡುತ್ತೇನೆಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಒಂದು ಕುಲವನ್ನು ಮಾತ್ರ ದಾವೀದನ ವಂಶದ ಅಧೀನದಲ್ಲಿ ಬಿಡುತ್ತೇನೆ. ಅವರು ಈ ಕುಲವನ್ನು ಉಳಿಸಿಕೊಳ್ಳಲು ನಾನು ಅವಕಾಶ ಮಾಡಿಕೊಡುತ್ತೇನೆ. ನನ್ನ ಸೇವಕನಾದ ದಾವೀದನಿಗಾಗಿ ಮತ್ತು ಜೆರುಸಲೇಮಿಗಾಗಿ ನಾನು ಇದನ್ನು ಮಾಡುತ್ತೇನೆ. ಇಸ್ರೇಲಿನ ಎಲ್ಲಾ ಕುಲಗಳಿಂದಲೂ ನಾನು ಜೆರುಸಲೇಮ್ ನಗರವನ್ನು ಆರಿಸಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆದರೆ, ನನ್ನ ಸೇವಕ ದಾವೀದನಿಗೋಸ್ಕರವೂ, ಇಸ್ರಾಯೇಲಿನ ಸಮಸ್ತ ಗೋತ್ರಗಳಿಂದ ನಾನು ಆಯ್ದುಕೊಂಡ ಪಟ್ಟಣವಾದ ಯೆರೂಸಲೇಮಿಗೋಸ್ಕರವೂ ಅವನಿಗೆ ಒಂದು ಗೋತ್ರ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:32
6 ತಿಳಿವುಗಳ ಹೋಲಿಕೆ  

ಆದರೆ ಇಡೀ ಸಾಮ್ರಾಜ್ಯವನ್ನು ಕಿತ್ತುಕೊಳ್ಳುವುದಿಲ್ಲ; ನನ್ನ ದಾಸ ದಾವೀದನ ನಿಮಿತ್ತ ಹಾಗು ನಾನು ಆರಿಸಿಕೊಂಡ ಜೆರುಸಲೇಮ್ ಪಟ್ಟಣದ ನಿಮಿತ್ತ ನಿನ್ನ ಮಗನಿಗೆ ಒಂದು ಕುಲವನ್ನು ಉಳಿಸುವೆನು,” ಎಂದು ಸರ್ವೇಶ್ವರ ಹೇಳಿದರು.


ಸೊಲೊಮೋನನ ಮಗ ರೆಹಬ್ಬಾಮನು ಜುದೇಯದ ಅರಸನಾದನು. ಅವನು ಪಟ್ಟಕ್ಕೆ ಬಂದಾಗ ಅವನಿಗೆ ನಾಲ್ವತ್ತೊಂದು ವರ್ಷ ವಯಸ್ಸು. ಸರ್ವೆಶ್ವರ ತಮ್ಮ ಹೆಸರನ್ನು ನೆಲೆಗೊಳಿಸುವುದಕ್ಕಾಗಿ, ಇಸ್ರಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಜೆರುಸಲೇಮ್ ಪಟ್ಟಣದಲ್ಲಿ ಅವನು ಹದಿನೇಳು ವರ್ಷ ಆಳಿದನು. ಅಮ್ಮೋನಿಯಳಾದ ನಯಮಾ ಎಂಬಾಕೆ ಅವನ ತಾಯಿ.


ಈ ಪ್ರಕಾರ ನಡೆದುದರಿಂದ ಸರ್ವೇಶ್ವರ ಅವರ ಮೇಲೆ ಕಡುಕೋಪಗೊಂಡು ಯೆಹೂದಕುಲದವರ ಹೊರತು, ಉಳಿದ ಎಲ್ಲಾ ಕುಲಗಳವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು.


ಆದರೂ ನಾನು ನಿನ್ನ ತಂದೆ ದಾವೀದನನ್ನು ಸ್ಮರಿಸಿ, ನಿನ್ನ ಮಗನ ಕೈಯಿಂದ ಅದನ್ನು ಕಿತ್ತುಕೊಳ್ಳುವೆನು.


ಹಿತ್ತಿಯನಾದ ಊರೀಯನ ವಿಷಯವೊಂದನ್ನು ಬಿಟ್ಟರೆ, ಬೇರೆ ಯಾವ ವಿಷಯದಲ್ಲೂ ತಮ್ಮ ಆಜ್ಞೆಯನ್ನು ಮೀರದೆ, ಜೀವದಿಂದಿರುವವರೆಗೂ ತಮ್ಮ ಚಿತ್ತಕ್ಕನುಸಾರ ನಡೆದ ದಾವೀದನ ನಿಮಿತ್ತ, ಸರ್ವೇಶ್ವರಸ್ವಾಮಿ ಜೆರುಸಲೇಮಿನಲ್ಲಿನ ಇವನ ದೀಪವನ್ನು ಆರಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು