Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:33 - ಕನ್ನಡ ಸತ್ಯವೇದವು C.L. Bible (BSI)

33 ಇದಲ್ಲದೆ, ಅವರು ನಿನಗೆ, ‘ಸೊಲೊಮೋನನೂ ಅವನ ಮನೆಯವರೂ ನನ್ನನ್ನು ಬಿಟ್ಟು ಸಿದೋನ್ಯರ ದೇವತೆಯಾದ ಅಷ್ಟೋರೆತ್, ಮೋವಾಬ್ಯರ ದೇವತೆಯಾದ ಕೆಮೋಷ್, ಅಮ್ಮೋನಿಯರ ದೇವತೆಯಾದ ಮಿಲ್ಕೋಮ್ ಇವುಗಳನ್ನು ಆರಾಧಿಸುತ್ತಿದ್ದಾರೆ. ಅವರ ತಂದೆ ದಾವೀದನು ನನ್ನ ನಿಯಮವಿಧಿಗಳನ್ನು ಕೈಕೊಂಡು ನನ್ನನ್ನು ಮೆಚ್ಚಿಸಿ ನಡೆದಂತೆ ಅವರು ನಡೆಯದೆಹೋದದ್ದೂ ಇದಕ್ಕೆ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಇದಲ್ಲದೆ ಆತನು ನಿನಗೆ, “ಸೊಲೊಮೋನನೂ ಅವರ ಮನೆಯವರೂ ನನ್ನನ್ನು ಬಿಟ್ಟು ಚೀದೋನ್ಯರ ದೇವತೆಯಾದ ಅಷ್ಟೋರೆತ್, ಮೋವಾಬ್ಯರ ದೇವತೆಯಾದ ‘ಕೆಮೋಷ್’ ಮತ್ತು ಅಮ್ಮೋನಿಯರ ‘ಮಿಲ್ಕೋಮ್’ ಇವುಗಳನ್ನು ಆರಾಧಿಸಿದ್ದೂ ಮತ್ತು ಅವರ ತಂದೆಯಾದ ದಾವೀದನು ನನ್ನ ನೇಮವಿಧಿಗಳನ್ನು ಕೈಕೊಂಡು ನನ್ನನ್ನು ಮೆಚ್ಚಿಸಿ ನಡೆದಂತೆ ಅವರು ನಡೆಯದೆ ಹೋದದ್ದೇ ಇದಕ್ಕೆ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಇದಲ್ಲದೆ ಆತನು ನಿನಗೆ - ಸೊಲೊಮೋನನೂ ಅವನ ಮನೆಯವರೂ ನನ್ನನ್ನು ಬಿಟ್ಟು ಚೀದೋನ್ಯರ ದೇವತೆಯಾದ ಅಷ್ಟೋರೆತ್, ಮೋವಾಬ್ಯರ ದೇವತೆಯಾದ ಕೆಮೋಷ್, ಅಮ್ಮೋನಿಯರ ದೇವತೆಯಾದ ವಿುಲ್ಕೋಮ್ ಇವುಗಳನ್ನು ಆರಾಧಿಸಿದ್ದೂ ಅವರ ತಂದೆಯಾದ ದಾವೀದನು ನನ್ನ ನೇಮವಿಧಿಗಳನ್ನು ಕೈಕೊಂಡು ನನ್ನನ್ನು ಮೆಚ್ಚಿಸಿ ನಡೆದಂತೆ ಅವರು ನಡಿಯದೆ ಹೋದದ್ದೂ ಇದಕ್ಕೆ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಸೊಲೊಮೋನನು ನನ್ನನ್ನು ಅನುಸರಿಸುವುದನ್ನು ನಿಲ್ಲಿಸಿದ ಕಾರಣ ನಾನು ಅವನ ರಾಜ್ಯವನ್ನು ಅವನಿಂದ ತೆಗೆದುಕೊಳ್ಳುವೆನು. ಅವನು ಚೀದೋನ್ಯರ ದೇವತೆಯಾದ ಅಷ್ಟೋರೆತಳನ್ನೂ ಮೋವಾಬ್ಯರ ದೇವರಾದ ಕೆಮೋಷನನ್ನೂ ಅಮ್ಮೋನಿಯರ ದೇವರಾದ ಮಿಲ್ಕೋಮನನ್ನೂ ಪೂಜಿಸಿದನು. ಸೊಲೊಮೋನನು ತಾನು ಮಾಡುತ್ತಿದ್ದ ಸರಿಯಾದ ಮತ್ತು ಉತ್ತಮವಾದ ಕಾರ್ಯಗಳನ್ನು ನಿಲ್ಲಿಸಿದನು. ಅವನು ನನ್ನ ಕಟ್ಟಳೆಗಳನ್ನು ಮತ್ತು ಆಜ್ಞೆಗಳನ್ನು ಅನುಸರಿಸಲಿಲ್ಲ. ತನ್ನ ತಂದೆಯಾದ ದಾವೀದನು ಜೀವಿಸಿದಂತೆ ಅವನು ಜೀವಿಸುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಏಕೆಂದರೆ ಅವನ ತಂದೆಯಾದ ದಾವೀದನ ಹಾಗೆ ನನ್ನ ಕಟ್ಟಳೆಗಳನ್ನೂ, ನನ್ನ ನ್ಯಾಯಗಳನ್ನೂ ಕೈಗೊಳ್ಳುವುದಕ್ಕೂ, ನನ್ನ ದೃಷ್ಟಿಗೆ ಮೆಚ್ಚಿಕೆಯಾದದ್ದನ್ನು ಮಾಡುವುದಕ್ಕೂ, ಸೊಲೊಮೋನನೂ ಅವನ ಮನೆಯವರೂ ನನ್ನ ಮಾರ್ಗಗಳಲ್ಲಿ ನಡೆಯದೆ, ನನ್ನನ್ನು ಬಿಟ್ಟು ಸೀದೋನ್ಯರ ದೇವತೆಯಾದ ಅಷ್ಟೋರೆತಳನ್ನೂ, ಮೋವಾಬ್ಯರ ದೇವರಾದ ಕೆಮೋಷನ್ನೂ, ಅಮ್ಮೋನಿಯರ ದೇವರಾದ ಮಿಲ್ಕೋಮನ್ನೂ ಆರಾಧಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:33
20 ತಿಳಿವುಗಳ ಹೋಲಿಕೆ  

ಸೊಲೊಮೋನನಿಗೆ ಇಸ್ರಯೇಲ್ ದೇವರಾದ ಸರ್ವೇಶ್ವರ ಎರಡು ಸಾರಿ ಕಾಣಿಸಿಕೊಂಡು,


ಎಫ್ರಯಿಮ್ ವಿಗ್ರಹಗಳ ಪ್ರಭಾವಕ್ಕೆ ಒಳಗಾಗಿದೆ. ಅದನ್ನು ಅದರಷ್ಟಕ್ಕೆ ಬಿಟ್ಟುಬಿಡಿ.


“ನನ್ನ ಜನರು ಇಬ್ಬಗೆಯ ಅಪರಾಧಗಳನ್ನು ಎಸಗಿದ್ದಾರೆ; ಜೀವಜಲದ ಬುಗ್ಗೆಯಾದ ನನ್ನನ್ನೇ ತೊರೆದುಬಿಟ್ಟಿದ್ದಾರೆ! ತೊಟ್ಟಿಗಳನ್ನು, ನೀರುನಿಲ್ಲದ ಬಿರುಕು ತೊಟ್ಟಿಗಳನ್ನು ತಮಗಾಗಿ ಕೊರೆದುಕೊಂಡಿದ್ದಾರೆ!”


ಅವನು ಆಸನನ್ನು ಭೇಟಿಯಾಗಲು ಬಂದು, ಅವನಿಗೆ, “ಆಸ ರಾಜನೇ, ಎಲ್ಲಾ ಯೆಹೂದ ಹಾಗೂ ಬೆನ್ಯಾಮೀನ್ ಕುಲಗಳವರೇ, ಕಿವಿಗೊಡಿ; ನೀವು ಸರ್ವೇಶ್ವರನನ್ನು ಹೊಂದಿಕೊಂಡಿರುವ ತನಕ ಅವರೂ ನಿಮ್ಮೊಂದಿಗಿರುವರು; ನೀವು ಅವರನ್ನು ಅರಸಿದರೆ ನಿಮಗೆ ಸಿಕ್ಕುವರು. ಅವರನ್ನು ಬಿಟ್ಟರೆ ಅವರೂ ನಿಮ್ಮನ್ನು ಬಿಟ್ಟುಬಿಡುವರು.


“ನನ್ನ ಮಗ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಪೂರ್ಣಹೃದಯದಿಂದ ಹಾಗೂ ಮನಸ್ಸಂತೋಷದಿಂದ ಅವರೊಬ್ಬರಿಗೇ ಸೇವೆ ಸಲ್ಲಿಸು. ಸರ್ವೇಶ್ವರನು ಎಲ್ಲಾ ಹೃದಯಗಳನ್ನು ಶೋಧಿಸುವವರೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವರೂ ಆಗಿದ್ದಾರೆ. ನೀನು ಅವರನ್ನು ಆರಿಸಿದರೆ ಅವರು ನಿನಗೆ ಸಿಗುವರು; ಅವರನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವರು.


ನೀನು ನಿನ್ನ ತಂದೆ ದಾವೀದನಂತೆ ನನ್ನ ಮಾರ್ಗದಲ್ಲೇ ನಡೆದು ನನ್ನ ಆಜ್ಞಾವಿಧಿಗಳನ್ನು ಕೈಗೊಳ್ಳುವುದಾದರೆ ನಿನ್ನ ಆಯುಷ್ಯವನ್ನೂ ಹೆಚ್ಚಿಸುವೆನು,” ಎಂದರು.


ಮೋವಾಬ್ಯರೇ, ನಿಮಗೆ ಧಿಕ್ಕಾರ! ಕೆಮೋಷಿನ ಭಕ್ತರೇ, ನಿಮಗೆ ಪರಿವಿನಾಶ! ಮಾಡಿಹನಾತ ತನ್ನ ಕುವರರನ್ನು ದೇಶಭ್ರಷ್ಟರನ್ನಾಗಿ ತನ್ನ ಕುವರಿಯರನ್ನು ಸೆರೆಯಾಳುಗಳನ್ನಾಗಿ ಅಮೋರಿಯರ ಅರಸ ಸೀಹೋನನಿಗೆ ಸೆರೆಯವರನ್ನಾಗಿ.


ಆಗ ಸಮುವೇಲನು ಅವರಿಗೆ, “ನೀವು ಪೂರ್ಣಮನಸ್ಸಿನಿಂದ ಸರ್ವೇಶ್ವರನಿಗೆ ಅಭಿಮುಖರಾಗಿ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿರಿ. ಸರ್ವೇಶ್ವರನ ಮೇಲೆಯೇ ಮನಸ್ಸಿಟ್ಟು ಅವರೊಬ್ಬರಿಗೇ ಸೇವೆಸಲ್ಲಿಸಿರಿ; ಆಗ ಅವರು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವರು,” ಎಂದನು.


ಆದರೂ ನಾನು ಸೊಲೊಮೋನನಿಂದ ಸಾಮ್ರಾಜ್ಯವನ್ನೆಲ್ಲಾ ಕಿತ್ತುಕೊಳ್ಳುವುದಿಲ್ಲ; ನನ್ನ ಆಜ್ಞಾವಿಧಿಗಳನ್ನು ಕೈಕೊಂಡವನೂ ನಾನು ಆರಿಸಿಕೊಂಡ ದಾಸನೂ ಆದ ದಾವೀದನ ನಿಮಿತ್ತ ಅವನನ್ನು ಅವನ ಜೀವಮಾನದಲ್ಲೆಲ್ಲಾ ಅರಸನನ್ನಾಗಿಯೇ ಇರಿಸುವೆನು.


ರಾಜ್ಯವನ್ನು ದಾವೀದನ ಕುಟುಂಬದವರಿಂದ ಕಿತ್ತು ನಿನಗೆ ಕೊಟ್ಟೆ. ಆದರೂ ನೀನು ನನ್ನ ದಾಸ ದಾವೀದನಂತೆ ಆಜ್ಞೆಗಳನ್ನು ಕೈಗೊಂಡು, ಪೂರ್ಣಮನಸ್ಸಿನಿಂದ ನನ್ನನ್ನು ಮೆಚ್ಚಿಸಲಿಲ್ಲ; ನನ್ನನ್ನು ಹಿಂಬಾಲಿಸಿ ನಡೆಯಲಿಲ್ಲ.


“ಮೋವಾಬೇ, ನಿನ್ನ ಸಾಧನೆಗಳಲ್ಲೇ, ಧನರಾಶಿಗಳಲ್ಲೇ ಭರವಸೆಯಿಟ್ಟೆ. ಆದುದರಿಂದ ನೀನು ಇದೀಗಲೆ ಶತ್ರುಗಳ ಕೈವಶವಾಗುವೆ. ಕೆಮೋಷ್ ಎಂಬ ನಿನ್ನ ದೇವತೆಯೂ ಅದರ ಭಕ್ತ ಯಾಜಕರೂ ಹಾಗೂ ರಾಜ್ಯಾಧಿಕಾರಿಗಳು ಸೆರೆಗೆ ಹೋಗುವರು ಒಟ್ಟಿಗೆ.


ಇಸ್ರಯೇಲ್ ವಂಶದವರು ನಂಬಿಕೆ ಇಟ್ಟಿದ್ದ ಬೇತೇಲ್ ಕ್ಷೇತ್ರವನ್ನು ಕುರಿತು ಆಶಾಭಂಗಪಟ್ಟಂತೆ ಆಗ ಮೋವಾಬ್ಯರು ತಮ್ಮ ಕೆಮೋಷ್ ದೇವತೆಯನ್ನು ಕುರಿತು ಆಶಾಭಂಗಪಡುವರು.


ಮಾಳಿಗೆಗಳ ಮೇಲೆ ನಿಂತು ಆಕಾಶದ ಸೂರ್ಯ, ಚಂದ್ರ, ನಕ್ಷತ್ರಗಳನ್ನು ಆರಾಧಿಸುವವರನ್ನು ನಾಶಗೊಳಿಸುವೆನು; ಅಂತೆಯೇ ಸರ್ವೇಶ್ವರನ ಆರಾಧಕರೆಂದು ಪ್ರಮಾಣಮಾಡಿ, ಮಲ್ಕಾಮನ ಮೇಲೂ ಪ್ರಮಾಣ ಮಾಡುವವರನ್ನು ವಿನಾಶಗೊಳಿಸುವೆನು.


ಅವನು ವೃದ್ಧನಾದಾಗ ಇವರು ಅವನ ಹೃದಯವನ್ನು ಅನ್ಯದೇವತೆಗಳ ಕಡೆಗೆ ತಿರುಗಿಸಿದರು. ಈ ಕಾರಣ ಅವನು ತನ್ನ ದೇವರಾದ ಸರ್ವೇಶ್ವರನಲ್ಲಿಟ್ಟಿದ್ದ ಯಥಾರ್ಥ ಭಕ್ತಿಯನ್ನು ಕಳೆದುಕೊಂಡನು. ತನ್ನ ತಂದೆಯಾದ ದಾವೀದನಂತೆ ನಡೆಯಲಿಲ್ಲ.


ಆದರೆ ಸರ್ವೇಶ್ವರ ಸ್ವಾಮಿಯ ದೂತನು ತಿಷ್ಬೀಯನಾದ ಎಲೀಯನಿಗೆ, “ನೀನು ಹೋಗಿ ಸಮಾರಿಯದ ಅರಸನ ಆ ಸೇವಕರನ್ನು ಭೇಟಿಯಾಗು. ಅವರಿಗೆ, ‘ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವ ಅಗತ್ಯವಾದರೂ ಏನು? ಇಸ್ರಯೇಲರಲ್ಲಿ ದೇವರಿಲ್ಲವೆ?


ಅವನು ಪೂಜಿಸಿದ ವಿಗ್ರಹಗಳನ್ನು ತಾನೂ ಪೂಜಿಸಿ ಅವುಗಳಿಗೆ ಅಡ್ಡಬಿದ್ದನು.


ತನ್ನ ದೇವತೆಗಳು ದೇವರಲ್ಲದೆ ಇದ್ದರೂ ಅವುಗಳನ್ನು ಯಾವ ಜನಾಂಗವಾದರು ಬದಲಾಯಿಸಿಕೊಂಡಿತೋ? ಆದರೆ ನನ್ನ ಜನ, ತಮ್ಮ ಮಹಿಮೆಯಾದ ನನ್ನನ್ನು ತೊರೆದು ನಿರರ್ಥಕವಾದುವುಗಳನ್ನು ಆರಿಸಿಕೊಂಡಿದ್ದಾರೆ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು