Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:39 - ಕನ್ನಡ ಸತ್ಯವೇದವು C.L. Bible (BSI)

39 ದಾವೀದನ ಸಂತಾನದವರನ್ನು ಅವರ ಪಾಪದ ನಿಮಿತ್ತ ತಲೆ ತಗ್ಗಿಸುವಂತೆ ಮಾಡುವೆನು. ಆದರೆ ಸದಾಕಾಲಕ್ಕೂ ಅಲ್ಲ, ಎಂದು ಹೇಳಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ದಾವೀದನ ಸಂತಾನದವರನ್ನು ಅವರ ಪಾಪದ ನಿಮಿತ್ತ ತಲೆತಗ್ಗಿಸುವಂತೆ ಮಾಡಿ ಕುಗ್ಗಿಸುವೆನು. ಆದರೆ ಸದಾಕಾಲಕ್ಕೂ ಅದು ಮುಂದುವರಿಯುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ದಾವೀದನ ಸಂತಾನದವರನ್ನು ಅವರ ಪಾಪದ ದೆಸೆಯಿಂದ ಕುಗ್ಗಿಸುವೆನು; ಆದರೆ ಸದಾಕಾಲವು ಅಲ್ಲ ಎಂದು ಹೇಳಿದ್ದಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಸೊಲೊಮೋನನು ಮಾಡಿದ ಕಾರ್ಯಗಳ ನಿಮಿತ್ತ ನಾನು ದಾವೀದನ ಮಕ್ಕಳನ್ನು ದಂಡಿಸುತ್ತೇನೆ. ಆದರೆ ನನ್ನ ದಂಡನೆಯು ಅವರ ಮೇಲೆ ಶಾಶ್ವತವಾಗಿರುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಇದಕ್ಕೋಸ್ಕರ ದಾವೀದನ ಸಂತತಿಯನ್ನು ಬಾಧಿಸುವೆನು, ಆದರೆ ನಿರಂತರವಾಗಿ ಅಲ್ಲ,’ ” ಎಂದು ಅಹೀಯನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:39
18 ತಿಳಿವುಗಳ ಹೋಲಿಕೆ  

ಅದೇನೆಂದರೆ, ಇಂದೇ ದಾವೀದನ ಊರಿನಲ್ಲಿ ನಿಮಗೋಸ್ಕರ ಲೋಕೋದ್ಧಾರಕ ಜನಿಸಿದ್ದಾರೆ. ಅವರೇ ಪ್ರಭು ಕ್ರಿಸ್ತ.


ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.


ಜೋಸೆಫನು ದಾವೀದನ ಮನೆತನದವನು ಹಾಗೂ ಗೋತ್ರದವನು. ಆದುದರಿಂದ ಅವನೂ ಗಲಿಲೇಯ ಪ್ರಾಂತ್ಯದ ನಜರೇತ್ ಎಂಬ ಊರಿನಿಂದ ಹೊರಟು ಜುದೇಯ ನಾಡಿನ ಬೆತ್ಲೆಹೇಮೆಂಬ ದಾವೀದನ ಊರಿಗೆಹೋದನು.


ಆಗಲಿ, ಸರ್ವೇಶ್ವರ ನಿಮಗೊಂದು ಗುರುತನ್ನು ಕೊಡುವರು. ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು. ಇಮ್ಮಾನುವೇಲ್ ಎಂದು ಆತನಿಗೆ ಹೆಸರಿಡುವಳು.


ರಾಜ್ಯವನ್ನು ದಾವೀದನ ಕುಟುಂಬದವರಿಂದ ಕಿತ್ತು ನಿನಗೆ ಕೊಟ್ಟೆ. ಆದರೂ ನೀನು ನನ್ನ ದಾಸ ದಾವೀದನಂತೆ ಆಜ್ಞೆಗಳನ್ನು ಕೈಗೊಂಡು, ಪೂರ್ಣಮನಸ್ಸಿನಿಂದ ನನ್ನನ್ನು ಮೆಚ್ಚಿಸಲಿಲ್ಲ; ನನ್ನನ್ನು ಹಿಂಬಾಲಿಸಿ ನಡೆಯಲಿಲ್ಲ.


ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲ ಎಂದು ನೋಡಿ ಇಸ್ರಯೇಲರೆಲ್ಲರೂ ಅವನಿಗೆ, “ದಾವೀದನಿಗೂ ನಮಗೂ ಏನೂ ಸಂಬಂಧವಿಲ್ಲ; ಜೆಸ್ಸೆಯ ಮಗನಿಗೂ ನಮಗೂ ಯಾವ ಬಾಧ್ಯತೆಯೂ ಇಲ್ಲ; ಇಸ್ರಯೇಲರೇ, ನಿಮ್ಮ ನಿಮ್ಮ ನಿವಾಸಗಳಿಗೆ ತೆರಳಿರಿ; ದಾವೀದನವರು ತಮ್ಮ ಕುಲವನ್ನು ತಾವೇ ನೋಡಿಕೊಳ್ಳಲಿ!” ಎಂದು ಹೇಳಿ ತಮ್ಮ ಮನೆಗಳಿಗೆ ಹೊರಟುಹೋದರು.


ನಾನು ನನ್ನ ಹೆಸರಿಗಾಗಿ ಆರಿಸಿಕೊಂಡ ಜೆರುಸಲೇಮ್ ಪಟ್ಟಣದಲ್ಲಿ ನನ್ನ ದಾಸ ದಾವೀದನ ದೀಪ ನನ್ನ ಸನ್ನಿಧಿಯಲ್ಲಿ ಉರಿಯುತ್ತಲೇ ಇರುವಂತೆ ಅವನ ಮಗನಿಗೆ ಒಂದು ಕುಲವನ್ನು ಉಳಿಸುವೆನು.


ನನ್ನ ದಾಸ ದಾವೀದನು ನನ್ನ ಆಜ್ಞಾವಿಧಿಗಳನ್ನು ಕೈಕೊಂಡಂತೆ, ನೀನೂ ನನ್ನ ಆಜ್ಞೆಗಳನ್ನು ಕೈಗೊಂಡು, ನನ್ನ ಮಾರ್ಗದಲ್ಲಿ ನಡೆದು ನನ್ನನ್ನು ಮೆಚ್ಚಿಸಿದರೆ, ನಾನು ನಿನ್ನ ಸಂಗಡ ಇದ್ದು ದಾವೀದನ ಸಂತಾನದಂತೆ ನಿನ್ನ ಸಂತಾನವನ್ನೂ ಸ್ಥಿರಪಡಿಸುವೆನು; ಇಸ್ರಯೇಲ್ ರಾಜ್ಯ ನಿನ್ನ ಪಾಲಾಗುವುದು.


ಸೊಲೊಮೋನನು ಯಾರೊಬ್ಬಾಮನನ್ನು ಕೊಲ್ಲುವುದಕ್ಕೆ ಪ್ರಯತ್ನಿಸಿದಾಗ ಅವನು ತಪ್ಪಿಸಿಕೊಂಡು, ಈಜಿಪ್ಟಿನ ಅರಸ ಶೀಶಕನ ಬಳಿಗೆ ಹೋಗಿ, ಸೊಲೊಮೋನನು ಜೀವದಿಂದಿರುವವರೆಗೆ ಅಲ್ಲಿಯೇ ಇದ್ದನು.


ನೆಲದ ಮೇಲೆ ಚೆಲ್ಲಿ ತಿರುಗಿ ತುಂಬಿಕೊಳ್ಳಲಾಗದ ನೀರಿನಂತೆ ಇದ್ದೇವೆ ನಾವು. ಮನುಷ್ಯರ ಪ್ರಾಣತೆಗೆಯುವುದಕ್ಕೆ ದೇವರಿಗೆ ಇಷ್ಟ ಇಲ್ಲ; ಹೊರದೂಡಲಾದವನು ತಿರುಗಿ ಬಳಿಗೆ ಬರುವ ಹಾಗೆ ಅವರು ಸದುಪಾಯಗಳನ್ನು ಕಲ್ಪಿಸುವವರಾಗಿರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು