Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:6 - ಕನ್ನಡ ಸತ್ಯವೇದವು C.L. Bible (BSI)

6 ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು; ಅವನ ತಂದೆ ದಾವೀದನು ಪೂರ್ಣಮನಸ್ಸಿನಿಂದ ಸರ್ವೇಶ್ವರನನ್ನು ಸೇವೆಮಾಡಿದಂತೆ ಅವನು ಸೇವೆಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನ ತಂದೆಯಾದ ದಾವೀದನು ಪೂರ್ಣಮನಸ್ಸಿನಿಂದ ಯೆಹೋವನನ್ನು ಸೇವಿಸಿದಂತೆ ಅವನು ಸೇವಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು; ಅವನ ತಂದೆಯಾದ ದಾವೀದನು ಪೂರ್ಣಮನಸ್ಸಿನಿಂದ ಯೆಹೋವನನ್ನು ಸೇವಿಸಿದಂತೆ ಅವನು ಸೇವಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಹೀಗೆ ಸೊಲೊಮೋನನು ಯೆಹೋವನ ದೃಷ್ಟಿಯಲ್ಲಿ ಕೆಟ್ಟದಾಗಿದ್ದ ಕಾರ್ಯಗಳನ್ನು ಮಾಡಿದನು; ತನ್ನ ತಂದೆಯಾದ ದಾವೀದನು ಪೂರ್ಣಮನಸ್ಸಿನಿಂದ ಯೆಹೋವನನ್ನು ಅನುಸರಿಸಿದಂತೆ ಅನುಸರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಸೊಲೊಮೋನನು ತನ್ನ ತಂದೆ ದಾವೀದನ ಹಾಗೆ ಯೆಹೋವ ದೇವರನ್ನು ಪೂರ್ಣವಾಗಿ ಹಿಂಬಾಲಿಸದೆ ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:6
8 ತಿಳಿವುಗಳ ಹೋಲಿಕೆ  

ನನ್ನ ದಾಸನಾದ ಕಾಲೇಬನಾದರೋ ಅವರಂಥ ಮನಸ್ಸುಳ್ಳವನಾಗಿರದೆ ಮನಪೂರ್ವಕವಾಗಿ ನನ್ನ ಮಾತನ್ನು ಅನುಸರಿಸಿ ನಡೆದಿದ್ದಾನೆ. ಆದ್ದರಿಂದ ಅವನು ಸಂಚರಿಸಿ ಬಂದ ಆ ನಾಡಿಗೆ ಅವನನ್ನು ಸೇರಿಸುವೆನು. ಅವನ ಸಂತತಿಯವರು ಅದನ್ನು ಸ್ವಾಧೀನಪಡಿಸಿಕೊಳ್ಳುವರು.


ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನು ಇಸ್ರಯೇಲಿನ ದೇವರಾದ ಸರ್ವೇಶ್ವರನನ್ನು ಸಂಪೂರ್ಣವಾಗಿ ಶ್ರದ್ಧೆಯಿಂದ ಅನುಸರಿಸಿದ್ದರಿಂದ ಹೆಬ್ರೋನ್ ಅವನಿಗೆ ಸೊತ್ತಾಗಿ ಸಿಕ್ಕಿತು.ಅದು ಇಂದಿನವರೆಗೂ ಅವನದೇ ಆಗಿದೆ.


ನನ್ನ ಜೊತೆಯಲ್ಲಿ ಬಂದಿದ್ದ ಸಹೋದರರು ಜನರನ್ನು ಎದೆಗೆಡಿಸಿದರು. ನಾನಾದರೋ ನನ್ನ ದೇವರಾದ ಸರ್ವೇಶ್ವರನನ್ನೇ ಸಂಪೂರ್ಣವಾಗಿ ನಂಬಿ ಶ್ರದ್ಧೆಯಿಂದ ಅನುಸರಿಸಿದೆ.


ಸೊಲೊಮೋನನು ಸರ್ವೇಶ್ವರನನ್ನು ಪ್ರೀತಿಸಿ, ತನ್ನ ತಂದೆ ದಾವೀದನ ವಿಧಿಗಳನ್ನು ಕೈಗೊಳ್ಳುತ್ತಿದ್ದರೂ ಆ ಪೂಜಾಸ್ಥಳಗಳಲ್ಲೇ ಬಲಿಯರ್ಪಿಸುತ್ತಿದ್ದನು; ಅಲ್ಲಿಯೇ ಧೂಪಾರತಿ ಎತ್ತುತ್ತಿದ್ದನು.


ನೀನು ನಿನ್ನ ತಂದೆ ದಾವೀದನಂತೆ ಪೂರ್ಣಮನಸ್ಸಿನಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡು, ನನ್ನ ಆಜ್ಞಾವಿಧಿನ್ಯಾಯಗಳನ್ನು ಕೈಗೊಳ್ಳುತ್ತಾ ಬಂದರೆ, ಇಸ್ರಯೇಲರಲ್ಲಿ ನಿನ್ನ ಸಿಂಹಾಸನವನ್ನು ಸದಾ ಸ್ಥಿರಪಡಿಸುವೆನು;


ಸಿದೋನ್ಯರ ಅಷ್ಟೋರೆತ್ ದೇವತೆಯನ್ನೂ ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹವನ್ನೂ ಆರಾಧಿಸತೊಡಗಿದನು.


ಅವನು ಜೆರುಸಲೇಮಿನ ಮೂಡಲಲ್ಲಿರುವ ಗುಡ್ಡದಲ್ಲಿ ಮೋವಾಬ್ಯರ ಕೆಮೋಷ್ ಎಂಬ ಅಸಹ್ಯ ವಿಗ್ರಹಕ್ಕೂ ಪೂಜಾಸ್ಥಳಗಳನ್ನು ಏರ್ಪಡಿಸಿದನು.


ಇದಲ್ಲದೆ, ಅವರು ನಿನಗೆ, ‘ಸೊಲೊಮೋನನೂ ಅವನ ಮನೆಯವರೂ ನನ್ನನ್ನು ಬಿಟ್ಟು ಸಿದೋನ್ಯರ ದೇವತೆಯಾದ ಅಷ್ಟೋರೆತ್, ಮೋವಾಬ್ಯರ ದೇವತೆಯಾದ ಕೆಮೋಷ್, ಅಮ್ಮೋನಿಯರ ದೇವತೆಯಾದ ಮಿಲ್ಕೋಮ್ ಇವುಗಳನ್ನು ಆರಾಧಿಸುತ್ತಿದ್ದಾರೆ. ಅವರ ತಂದೆ ದಾವೀದನು ನನ್ನ ನಿಯಮವಿಧಿಗಳನ್ನು ಕೈಕೊಂಡು ನನ್ನನ್ನು ಮೆಚ್ಚಿಸಿ ನಡೆದಂತೆ ಅವರು ನಡೆಯದೆಹೋದದ್ದೂ ಇದಕ್ಕೆ ಕಾರಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು