Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:7 - ಕನ್ನಡ ಸತ್ಯವೇದವು C.L. Bible (BSI)

7 ಅವನು ಜೆರುಸಲೇಮಿನ ಮೂಡಲಲ್ಲಿರುವ ಗುಡ್ಡದಲ್ಲಿ ಮೋವಾಬ್ಯರ ಕೆಮೋಷ್ ಎಂಬ ಅಸಹ್ಯ ವಿಗ್ರಹಕ್ಕೂ ಪೂಜಾಸ್ಥಳಗಳನ್ನು ಏರ್ಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವನು ಯೆರೂಸಲೇಮಿನ ಮೂಡಲಲ್ಲಿರುವ ಗುಡ್ಡದಲ್ಲಿ ಮೋವಾಬ್ಯರ ಕೆಮೋಷ್ ಎಂಬ ಅಸಹ್ಯ ವಿಗ್ರಹಕ್ಕೂ ಮತ್ತು ಅಮ್ಮೋನಿಯರ ಮೋಲೆಕ್ ಎಂಬ ಅಸಹ್ಯ ವಿಗ್ರಹಕ್ಕೂ ಪೂಜಾಸ್ಥಳಗಳನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವನು ಯೆರೂಸಲೇವಿುನ ಮೂಡಲಲ್ಲಿರುವ ಗುಡ್ಡದಲ್ಲಿ ಮೋವಾಬ್ಯರ ಕೆಮೋಷ್ ಎಂಬ ಅಸಹ್ಯ ವಿಗ್ರಹಕ್ಕೂ ಅಮ್ಮೋನಿಯರ ಮೋಲೆಕ್ ಎಂಬ ಅಸಹ್ಯ ವಿಗ್ರಹಕ್ಕೂ ಪೂಜಾಸ್ಥಳಗಳನ್ನು ಏರ್ಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸೊಲೊಮೋನನು ಕೆಮೋಷನನ್ನು ಆರಾಧಿಸಲು ಒಂದು ಸ್ಥಳವನ್ನು ನಿರ್ಮಿಸಿದನು. ಮೋವಾಬ್ಯರ ಭಯಂಕರ ವಿಗ್ರಹವೇ ಕೆಮೋಷ್. ಜೆರುಸಲೇಮಿನ ಪಕ್ಕದಲ್ಲಿದ್ದ ಬೆಟ್ಟದ ಮೇಲೆ ಸೊಲೊಮೋನನು ಆರಾಧನೆಯ ಸ್ಥಳವನ್ನು ನಿರ್ಮಿಸಿದನು. ಆ ಬೆಟ್ಟದ ಮೇಲೆಯೇ ಸೊಲೊಮೋನನು ಮೋಲೆಕ್ ದೇವತೆಯ ಪೂಜಾಸ್ಥಳವನ್ನು ನಿರ್ಮಿಸಿದನು. ಅಮ್ಮೋನಿಯರ ಭಯಂಕರ ವಿಗ್ರಹವೇ ಮೋಲೆಕ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಸೊಲೊಮೋನನು ಮೋವಾಬಿನ ಅಸಹ್ಯಕರವಾದ ಕೆಮೋಷಿಗೋಸ್ಕರವೂ, ಅಮ್ಮೋನ್ಯರ ಅಸಹ್ಯಕರವಾದ ಮೋಲೆಕನಿಗೋಸ್ಕರವೂ ಯೆರೂಸಲೇಮಿನ ಪೂರ್ವದಲ್ಲಿರುವ ಬೆಟ್ಟದಲ್ಲಿ ಎತ್ತರವಾದ ಸ್ಥಳವನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:7
35 ತಿಳಿವುಗಳ ಹೋಲಿಕೆ  

ಮೋವಾಬ್ಯರೇ, ನಿಮಗೆ ಧಿಕ್ಕಾರ! ಕೆಮೋಷಿನ ಭಕ್ತರೇ, ನಿಮಗೆ ಪರಿವಿನಾಶ! ಮಾಡಿಹನಾತ ತನ್ನ ಕುವರರನ್ನು ದೇಶಭ್ರಷ್ಟರನ್ನಾಗಿ ತನ್ನ ಕುವರಿಯರನ್ನು ಸೆರೆಯಾಳುಗಳನ್ನಾಗಿ ಅಮೋರಿಯರ ಅರಸ ಸೀಹೋನನಿಗೆ ಸೆರೆಯವರನ್ನಾಗಿ.


ನಿನ್ನ ದೇವನಾದ ಕೆಮೋಷನು ನಿನಗೆ ಕೊಡುವ ದೇಶಗಳನ್ನು ನೀನು ಸ್ವತಂತ್ರಿಸಿಕೊಳ್ಳುವುದಿಲ್ಲವೇ? ಹಾಗೆಯೇ ನಮ್ಮ ದೇವರಾದ ಸರ್ವೇಶ್ವರ ನಮಗೆ ಒಪ್ಪಿಸಿಕೊಡುವುದನ್ನು ನಾವು ಸ್ವತಂತ್ರಿಸಿಕೊಳ್ಳುವುದು ನ್ಯಾಯವಾಗಿದೆ.


ವಿಗ್ರಹಗಳನ್ನು ಮಾಡಿ ಪೂಜಿಸಿದಿರಿ; ಮೋಲೆಕ ದೇವರ ಗುಡಾರವನ್ನೂ ನಕ್ಷತ್ರಾಧಿಪತಿಯಾದ ರೇಫಾ ದೇವತೆಯ ಪ್ರತಿಮೆಯನ್ನೂ ಹೊತ್ತುಕೊಂಡು ಹೋದಿರಿ. ಆದುದರಿಂದ ನಾನು ನಿಮ್ಮನ್ನು ಬಾಬಿಲೋನಿನ ಆಚೆ ಗಡಿಪಾರುಮಾಡುತ್ತೇನೆ,’ ಎಂದು ಬರೆದಿದೆ.


ಅನಂತರ ಪ್ರೇಷಿತರು ಓಲಿವ್ ತೋಪಿನ ಗುಡ್ಡದಿಂದ ಸುಮಾರು ಒಂದು ಕಿಲೊಮೀಟರು ದೂರದಲ್ಲಿರುವ ಜೆರುಸಲೇಮಿಗೆ ಹಿಂದಿರುಗಿದರು.


ಇದನ್ನು ಹೇಳಿದ ಮೇಲೆ ಪ್ರೇಷಿತರು ನೋಡುತ್ತಿದ್ದಂತೆಯೇ, ಯೇಸು ಸ್ವರ್ಗಾರೋಹಣವಾದರು. ಮೇಘವೊಂದು ಕವಿದು ಅವರನ್ನು ಕಣ್ಮರೆಮಾಡಿತು.


ಬಳಿಕ ಅವರೆಲ್ಲರು ಕೀರ್ತನೆ ಹಾಡಿ, ಓಲಿವ್ ಗುಡ್ಡಕ್ಕೆ ಹೊರಟರು.


ಅವರ ಪಾದಗಳು ಜೆರುಸಲೇಮಿಗೆ ಪೂರ್ವಕ್ಕಿರುವ ಓಲಿವ್ ಗುಡ್ಡದ ಮೇಲೆ ನಿಲ್ಲುವುದು. ಆ ಗುಡ್ಡವು ಇಬ್ಭಾಗವಾಗಿ ಪೂರ್ವಪಶ್ಚಿಮದ ಉದ್ದಕ್ಕೂ ಇನ್ನರ್ಧ ಭಾಗವು ದಕ್ಷಿಣಕ್ಕೂ ಸರಿದುಕೊಳ್ಳುವುದು.


ಅನುದಿನದ ಬಲಿ ನಿಂತುಹೋಗುವುದು. ‘ವಿನಾಶಕರ ವಿಕಟ ಮೂರ್ತಿ’ ಪ್ರತಿಷ್ಠಿತವಾದ ಮೇಲೆ 1290 ದಿನಗಳು ಕಳೆಯಬೇಕು.


ಅವನು ಕೂಡಿಸುವ ಸೈನ್ಯವು ಆಶ್ರಯದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸುವುದು. ಅನುದಿನದ ಬಲಿಯನ್ನು ನಿಲ್ಲಿಸುವುದು. ವಿನಾಶಕರ ವಿಕಟ ಮೂರ್ತಿಯನ್ನು ಪ್ರತಿಷ್ಠಾಪಿಸುವುದು.


ದೀನದಲಿತರನ್ನು ಹಿಂಸಿಸಿ, ಜನರ ಸೊತ್ತನ್ನು ಅಪಹರಿಸಿ, ಸಾಲಗಾರನ ಒತ್ತೆಯನ್ನು ಬಿಗಿಹಿಡಿದು, ವಿಗ್ರಹಗಳ ಕಡೆಗೆ ಕಣ್ಣೆತ್ತಿ,


ಇಸ್ರಯೇಲ್ ವಂಶದವರು ನಂಬಿಕೆ ಇಟ್ಟಿದ್ದ ಬೇತೇಲ್ ಕ್ಷೇತ್ರವನ್ನು ಕುರಿತು ಆಶಾಭಂಗಪಟ್ಟಂತೆ ಆಗ ಮೋವಾಬ್ಯರು ತಮ್ಮ ಕೆಮೋಷ್ ದೇವತೆಯನ್ನು ಕುರಿತು ಆಶಾಭಂಗಪಡುವರು.


“ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದ್ದೇನೆ. ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ, ಮಾಂಸ ಸುಟ್ಟು ತಿಂದಿದ್ದೇನೆ; ಮಿಕ್ಕಿದ್ದರಿಂದ ವಿಗ್ರಹಮಾಡುವುದು ಸರಿಯೇ? ಆ ಮರದ ತುಂಡಿಗೆ ಅಡ್ಡಬೀಳುವುದು ಅಸಹ್ಯವಲ್ಲವೆ?” ಎಂದುಕೊಳ್ಳುವಷ್ಟು ವಿವೇಕ ಯಾರಿಗೂ ಇಲ್ಲ; ಯಾರೂ ಇದನ್ನು ಮನಸ್ಸಿನಲ್ಲಿ ಅರ್ಥೈಸಿಕೊಳ್ಳುವುದಿಲ್ಲ.


ಬೇಸರಗೊಳಿಸಿದರು ತಮ್ಮ ಪೂಜಾಸ್ಥಾನಗಳಿಂದ I ರೇಗಿಸಿದರಾತನನು ಕೆತ್ತನೆಯ ವಿಗ್ರಹಗಳಿಂದ II


ತಮ್ಮ ಗಂಡುಹೆಣ್ಣುಮಕ್ಕಳನ್ನು ಯಾರೂ ಮೋಲೆಕನಿಗಾಗಿ ಬಲಿಯಗ್ನಿಪರೀಕ್ಷೆಗೆ ಈಡುಮಾಡದಂತೆ ಬೆನ್ಹಿನ್ನೋಮ್ ಕಣಿವೆಯಲ್ಲಿದ್ದ ತೋಫೆತ್ ಎಂಬ ಸ್ಥಳವನ್ನು ಹೊಲೆಮಾಡಿದನು.


ದಾವೀದನು, ಮುಖವನ್ನು ಮರೆಮಾಚಿಕೊಂಡು ಅಳುತ್ತಾ, ಬರಿಗಾಲಿನಿಂದ ಎಣ್ಣೇಮರಗಳ ಗುಡ್ಡವನ್ನೇರಿದನು. ಅವನ ಜೊತೆಯಲ್ಲಿದ್ದ ಜನರೂ ಮೋರೆಮುಚ್ಚಿಕೊಂಡು ಅಳುತ್ತಾ ಏರಿದರು.


‘ಶಿಲ್ಪಿಯ ಕೆಲಸವಾಗಿ ಇರುವ ಮರದ ವಿಗ್ರಹ ಹಾಗು ಲೋಹವಿಗ್ರಹ ಸರ್ವೇಶ್ವರನಿಗೆ ಹೇಯವಾದದ್ದು. ಆದುದರಿಂದ ಅವನ್ನು ಮಾಡಿಸಿ ಗೋಪ್ಯವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು,’ ಎನ್ನಲು ಜನರೆಲ್ಲರು, ‘ಆಮೆನ್’ ಎನ್ನಬೇಕು.


ಆ ಸುದ್ದಿಯನ್ನು ನೀವು ಕೇಳಿದರೆ, ಆ ಸಂಗತಿಯನ್ನು ಚೆನ್ನಾಗಿ ವಿಚಾರಿಸಿ ತಿಳಿದುಕೊಳ್ಳಬೇಕು. ಅಂಥ ಅಸಹ್ಯಕಾರ್ಯ ಇಸ್ರಯೇಲರಲ್ಲಿ ನಡೆದದ್ದು ನಿಜವೆಂದು ತಿಳಿದುಬಂದರೆ,


ಆ ನಾಡಿನ ನಿವಾಸಿಗಳನ್ನೆಲ್ಲಾ ಹೊರಡಿಸಿಬಿಡಿ. ಅವರ ವಿಚಿತ್ರ ಕಲ್ಲುಗಳನ್ನು ಹಾಗು ಲೋಹವಿಗ್ರಹಗಳನ್ನು ನಾಶಮಾಡಿ ಅವರ ಪೂಜಾಸ್ಥಳಗಳನ್ನು ಹಾಳುಮಾಡಬೇಕು.


ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು. ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದು ಹಾಕುವೆನು. ನಿಮ್ಮ ಬೊಂಬೆಗಳ ಬುರುಡೆಗಳ ಮೇಲೆ ನಿಮ್ಮ ಬುರುಡೆಗಳನ್ನು ಬಿಸಾಡುವೆನು; ನಿಮ್ಮ ಬಗ್ಗೆ ಅಸಹ್ಯಪಡುವೆನು.


ಅವರನ್ನು ಬೇರೆ ಬೇರೆ ಮಾಡಿ ಮುಂದುಗಡೆಯಲ್ಲಿ ದಾಸಿಯರನ್ನೂ ಅವರ ಮಕ್ಕಳನ್ನೂ, ಅವರ ಹಿಂದೆ ಲೇಯಳನ್ನೂ ಆಕೆಯ ಮಕ್ಕಳನ್ನೂ, ಕಡೆಯಲ್ಲಿ ರಾಖೇಲಳನ್ನೂ ಜೋಸೆಫನನ್ನೂ ನಿಲ್ಲಿಸಿದನು.


ಸಿದೋನ್ಯರ ಅಷ್ಟೋರೆತ್ ದೇವತೆಯನ್ನೂ ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹವನ್ನೂ ಆರಾಧಿಸತೊಡಗಿದನು.


ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು; ಅವನ ತಂದೆ ದಾವೀದನು ಪೂರ್ಣಮನಸ್ಸಿನಿಂದ ಸರ್ವೇಶ್ವರನನ್ನು ಸೇವೆಮಾಡಿದಂತೆ ಅವನು ಸೇವೆಮಾಡಲಿಲ್ಲ.


ಈ ಪ್ರಕಾರ ಅನ್ಯಜನಾಂಗಗಳಿಂದ ಬಂದ ತನ್ನ ಹೆಂಡತಿಯರು ತಮ್ಮ ದೇವತೆಗಳಿಗೆ ಧೂಪಾರತಿ ಎತ್ತುವುದಕ್ಕೂ ಬಲಿ ಅರ್ಪಿಸುವುದಕ್ಕೂ ಅನುಕೂಲ ಮಾಡಿಕೊಟ್ಟನು.


ವೇಶ್ಯೆಯರಾಗಿ ವರ್ತಿಸುತ್ತಿದ್ದ, ಹೆಂಗಸರು ಹಾಗು ಗಂಡಸರನ್ನೆಲ್ಲಾ ನಾಡಿನಿಂದ ಹೊರಡಿಸಿ ತನ್ನ ಹಿರಿಯರು ಮಾಡಿಸಿಟ್ಟಿದ್ದ ವಿಗ್ರಹಗಳನ್ನೆಲ್ಲಾ ತೆಗೆದು ಹಾಕಿದನು.


ಅವನು ಜುದೇಯದ ಗುಡ್ಡಗಳಲ್ಲಿ ಪೂಜಾಸ್ಥಳಗಳನ್ನು ಏರ್ಪಡಿಸಿ, ಜೆರುಸಲೇಮಿನವರು ದೇವದ್ರೋಹ ಮಾಡುವಂತೆ ಪ್ರೇರೇಪಿಸಿ, ಯೆಹೂದ್ಯರನ್ನು ಸನ್ಮಾರ್ಗದಿಂದ ತಪ್ಪಿಸಿದನು.


ಈ ನಗರವು ಕಟ್ಟಿದಂದಿನಿಂದ ಇಂದಿನವರೆಗೂ ನನ್ನ ಕೋಪತಾಪಗಳಿಗೆ ಕಾರಣವಾಗಿದೆ.


ತಮ್ಮ ಗಂಡುಹೆಣ್ಣು ಮಕ್ಕಳನ್ನು ಮೋಲೆಕ್ ದೇವತೆಗೆ ಆಹುತಿಕೊಡುವುದಕ್ಕಾಗಿ ಬೆನ್‍ಹಿನ್ನೋಮ್ ಕಣಿವೆಯಲ್ಲಿ ಬಾಳ್‍ದೇವತೆಗೆ ಪೂಜಾಸ್ಥಳಗಳನ್ನು ಕಟ್ಟಿಸಿದ್ದಾರೆ. ಹೀಗೆ ಯೆಹೂದ ಕುಲವನ್ನೆ ಪಾಪಕ್ಕೆ ಸಿಕ್ಕಿಸಿದ್ದಾರೆ. ನಾನು ಇಂಥ ಅಸಹ್ಯ ಕಾರ್ಯವನ್ನು ವಿಧಿಸಲಿಲ್ಲ. ಅದರ ಯೋಚನೆಕೂಡ ನನ್ನ ಮನಸ್ಸಿನಲ್ಲಿ ಸುಳಿಯಲಿಲ್ಲ.”


ಮೋವಾಬ್ಯರೇ, ನಿಮ್ಮ ಗತಿಯೇನೆಂದು ಹೇಳಲಿ! ಕೆಮೋಷ್ ದೇವತೆಯ ಭಕ್ತರು ನಾಶವಾದರು. ನಿಮ್ಮ ಗಂಡುಹೆಣ್ಣು ಮಕ್ಕಳು ಗಡೀಪಾರಾಗಿ ಸೆರೆಯಾದರು.


ಇದಕ್ಕೆಲ್ಲಾ ಕಾರಣ ಯಕೋಬನ ದ್ರೋಹ. ಇಸ್ರಯೇಲ್ ಮನೆತನದ ಪಾಪ. ಯಕೋಬನ ದ್ರೋಹಕ್ಕೆ ಕಾರಣ ಯಾವುದು? ಸಮಾರ್ಯ ಅಲ್ಲವೆ? ಜುದೇಯದ ವಿಗ್ರಹಾರಾಧನೆಯ ಸ್ಥಳ ಯಾವುದು? ಜೆರುಸಲೇಮ್ ಅಲ್ಲವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು