Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:8 - ಕನ್ನಡ ಸತ್ಯವೇದವು C.L. Bible (BSI)

8 ಈ ಪ್ರಕಾರ ಅನ್ಯಜನಾಂಗಗಳಿಂದ ಬಂದ ತನ್ನ ಹೆಂಡತಿಯರು ತಮ್ಮ ದೇವತೆಗಳಿಗೆ ಧೂಪಾರತಿ ಎತ್ತುವುದಕ್ಕೂ ಬಲಿ ಅರ್ಪಿಸುವುದಕ್ಕೂ ಅನುಕೂಲ ಮಾಡಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಈ ರೀತಿಯಾಗಿ ಅನ್ಯಜನಾಂಗಗಳಿಂದ ಬಂದ ತನ್ನ ಹೆಂಡತಿಯರು ತಮ್ಮ ದೇವತೆಗಳಿಗೆ ಧೂಪಹಾಕುವುದಕ್ಕೂ ಮತ್ತು ಯಜ್ಞವರ್ಪಿಸುವುದಕ್ಕೂ ಅನುಕೂಲ ಮಾಡಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಈ ಪ್ರಕಾರವಾಗಿ ಅನ್ಯಜನಾಂಗಗಳಿಂದ ಬಂದ ತನ್ನ ಹೆಂಡತಿಯರು ತಮ್ಮ ದೇವತೆಗಳಿಗೆ ಧೂಪಸುಡುವದಕ್ಕೂ ಯಜ್ಞವರ್ಪಿಸುವದಕ್ಕೂ ಅನುಕೂಲಮಾಡಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಸೊಲೊಮೋನನು ಅನ್ಯದೇಶಗಳ ತನ್ನ ಪತ್ನಿಯರಿಗೆಲ್ಲ ಇದೇ ರೀತಿ ಮಾಡಿದನು. ಅವನ ಪತ್ನಿಯರು ತಮ್ಮ ದೇವರುಗಳಿಗೆ ಧೂಪಹಾಕಿದರು ಮತ್ತು ಯಜ್ಞಗಳನ್ನು ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇದೇ ಪ್ರಕಾರ ತಮ್ಮ ದೇವರುಗಳಿಗೆ ಧೂಪವನ್ನು ಸುಟ್ಟು, ಬಲಿಗಳನ್ನು ಅರ್ಪಿಸುವ ತನ್ನ ಅನ್ಯಜಾತಿಯ ಸಮಸ್ತ ಪತ್ನಿಯರಿಗೋಸ್ಕರವೂ ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:8
10 ತಿಳಿವುಗಳ ಹೋಲಿಕೆ  

ಅರಸ ಸೊಲೊಮೋನನು ಫರೋಹನ ಮಗಳನ್ನಲ್ಲದೆ, ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೀದೋನ್ಯರು, ಹಿತ್ತಿಯರು ಎಂಬೀ ಜನಾಂಗಗಳ ಮಹಿಳೆಯರನ್ನೂ ಮೋಹಿಸಿದನು.


ಅವನು ಜೆರುಸಲೇಮಿನ ಮೂಡಲಲ್ಲಿರುವ ಗುಡ್ಡದಲ್ಲಿ ಮೋವಾಬ್ಯರ ಕೆಮೋಷ್ ಎಂಬ ಅಸಹ್ಯ ವಿಗ್ರಹಕ್ಕೂ ಪೂಜಾಸ್ಥಳಗಳನ್ನು ಏರ್ಪಡಿಸಿದನು.


ಸೊಲೊಮೋನನಿಗೆ ಇಸ್ರಯೇಲ್ ದೇವರಾದ ಸರ್ವೇಶ್ವರ ಎರಡು ಸಾರಿ ಕಾಣಿಸಿಕೊಂಡು,


ವೇಶ್ಯೆಯರಾಗಿ ವರ್ತಿಸುತ್ತಿದ್ದ, ಹೆಂಗಸರು ಹಾಗು ಗಂಡಸರನ್ನೆಲ್ಲಾ ನಾಡಿನಿಂದ ಹೊರಡಿಸಿ ತನ್ನ ಹಿರಿಯರು ಮಾಡಿಸಿಟ್ಟಿದ್ದ ವಿಗ್ರಹಗಳನ್ನೆಲ್ಲಾ ತೆಗೆದು ಹಾಕಿದನು.


ಈ ನಗರವು ಕಟ್ಟಿದಂದಿನಿಂದ ಇಂದಿನವರೆಗೂ ನನ್ನ ಕೋಪತಾಪಗಳಿಗೆ ಕಾರಣವಾಗಿದೆ.


“ಅಂಥ ಮಹಿಳೆಯರ ದೆಸೆ ಇಂದಲೇ ಇಸ್ರಯೇಲ್ ಅರಸ ಸೊಲೊಮೋನನು ದೋಷಿಯಾದ; ಅನೇಕಾನೇಕ ಜನಾಂಗಗಳಲ್ಲಿ ಅವನಿಗೆ ಸಮಾನನಾದ ಅರಸನಿರಲಿಲ್ಲ; ಅವನು ತನ್ನ ದೇವರಿಗೆ ವಿಶೇಷಪ್ರಿಯನು; ಆದುದರಿಂದಲೇ ದೇವರು ಅವನನ್ನು ಎಲ್ಲ ಇಸ್ರಯೇಲರ ಮೇಲೆ ಅರಸನನ್ನಾಗಿ ನೇಮಿಸಿದರು. ಆದರೂ ಅನ್ಯದೇಶದ ಮಹಿಳೆಯರು ಅವನನ್ನು ಪಾಪದಲ್ಲಿ ಬೀಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು