Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 12:10 - ಕನ್ನಡ ಸತ್ಯವೇದವು C.L. Bible (BSI)

10 ಅವರು ಅವನಿಗೆ, “ನಿಮ್ಮ ತಂದೆ ನಮ್ಮ ಮೇಲೆ ಹೇರಿರುವ ನೊಗವನ್ನು ಹಗುರ ಮಾಡು ಎಂದು ನಿಮ್ಮನ್ನು ಬೇಡಿಕೊಂಡ ಜನರಿಗೆ ನೀವು, ‘ನನ್ನ ತಂದೆಯ ಸೊಂಟಕ್ಕಿಂತ ನನ್ನ ಈ ಕಿರಿಬೆರಳು ದಪ್ಪ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರು ಅವನಿಗೆ, “ನಿನ್ನ ತಂದೆಯು ನಮ್ಮ ಮೇಲೆ ಹೇರಿರುವ ನೊಗವನ್ನು ಹಗುರಮಾಡು ಎಂಬುದಾಗಿ ನಿನ್ನನ್ನು ಬೇಡಿಕೊಂಡ ಜನರಿಗೆ ನೀನು, ‘ನನ್ನ ತಂದೆಯ ನಡುವಿಗಿಂತ ನನ್ನ ಕಿರಿಬೆರಳು ದಪ್ಪವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವರು ಅವನಿಗೆ - ನಿನ್ನ ತಂದೆಯು ನಮ್ಮ ಮೇಲೆ ಹೇರಿರುವ ನೊಗವನ್ನು ಹಗುರಮಾಡು ಎಂಬದಾಗಿ ನಿನ್ನನ್ನು ಬೇಡಿಕೊಂಡ ಜನರಿಗೆ ನೀನು - ನನ್ನ ತಂದೆಯ ನಡುವಿಗಿಂತ ನನ್ನ ಕಿರಿಬೆರಳು ದಪ್ಪವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ರಾಜನ ಸ್ನೇಹಿತರಾದ ಯುವಕರು, “ಆ ಜನರು ನಿನ್ನ ಬಳಿಗೆ ಬಂದು, ‘ನಿನ್ನ ತಂದೆಯು ಬಲಾತ್ಕರಿಸಿ ಹೆಚ್ಚು ಕಷ್ಟದ ಕೆಲಸಗಳನ್ನು ಮಾಡಿಸಿದನು. ಈಗ ನಮ್ಮ ಕೆಲಸವನ್ನು ಸುಲಭಗೊಳಿಸು’ ಎಂದು ಹೇಳಿದರು. ಆದ್ದರಿಂದ ನೀನು ಜಂಬದಿಂದ ಅವರಿಗೆ, ‘ನನ್ನ ಕಿರುಬೆರಳು ನನ್ನ ತಂದೆಯ ಪೂರ್ಣದೇಹಕ್ಕಿಂತ ಶಕ್ತಿಯುಳ್ಳದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಅವನ ಸಂಗಡ ಬೆಳೆದ ಯೌವನಸ್ಥರು ಅವನಿಗೆ, “ನಿನ್ನ ತಂದೆಯು ನಮ್ಮ ನೊಗವನ್ನು ಭಾರಮಾಡಿದನು. ಆದರೆ ನೀನು ಅದನ್ನು ನಮಗೆ ಹಗುರ ಮಾಡೆಂದು ನಿನ್ನ ಸಂಗಡ ಮಾತನಾಡಿದ ಈ ಜನರಿಗೆ, ‘ನನ್ನ ಕಿರುಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 12:10
9 ತಿಳಿವುಗಳ ಹೋಲಿಕೆ  

“ನಾ ರೋಷಗೊಂಡು ನನ್ನ ಜನರನ್ನೇ ನಿನ್ನ ಕೈವಶಮಾಡಿದೆ ನನಗೆ ಸ್ವಂತವಾದವರನ್ನೇ ಈ ಪರಿ ಹೊಲೆಗೆಡಿಸಿದೆ. ನೀನಾದರೋ ಕರುಣೆ ತೋರಿಸದೆಹೋದೆ ಮುದುಕರ ಮೇಲೂ ತೂಕದ ನೊಗವನು ಹೊರಿಸಿದೆ.


ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ಇಳಿಸುವುದು; ನಮ್ರತೆ ಅವನನ್ನು ಗೌರವಸ್ಥಿತಿಗೆ ಏರಿಸುವುದು.


ಅತ್ಯಾಸೆಪಡುವವನು ಜಗಳವೆಬ್ಬಿಸುವನು; ಸರ್ವೇಶ್ವರನಲ್ಲಿ ಭರವಸೆಯಿಟ್ಟವನು ಬಲಿಷ್ಠನು.


ಬುದ್ಧಿವಂತರು ಜ್ಞಾನದ ಭಂಡಾರಿಗಳು; ಮೂರ್ಖನ ಮಾತುಗಳು ವಿನಾಶದ ಸೋಪಾನಗಳು.


ನನ್ನ ತಂದೆ ಹೇರಿದ ನೊಗವನ್ನು ಹಗುರ ಮಾಡಬೇಕೆಂದು ಬೇಡಿಕೊಳ್ಳುವ ಈ ಜನರಿಗೆ ಯಾವ ಉತ್ತರವನ್ನು ಕೊಡಬೇಕು? ಈ ವಿಷಯದಲ್ಲಿ ನಿಮ್ಮ ಆಲೋಚನೆ ಏನು?” ಎಂದು ಕೇಳಿದನು.


ನನ್ನ ತಂದೆ ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವುದು ನಿಜ. ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ; ಅವರು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳುಕೊರಡೆಗಳಿಂದ ದಂಡಿಸುವೆನು,’ ಎಂಬುದಾಗಿ ಹೇಳಬೇಕು,” ಎಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು