Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 12:13 - ಕನ್ನಡ ಸತ್ಯವೇದವು C.L. Bible (BSI)

13 ಅರಸನು ಅವರಿಗೆ ಕಠಿಣವಾದ ಉತ್ತರವನ್ನು ಕೊಟ್ಟನು. ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ, ಯೌವನಸ್ಥರ ಆಲೋಚನೆಗನುಸಾರ ಜನರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅರಸನು ಅವರಿಗೆ ಕಠಿಣವಾದ ಉತ್ತರವನ್ನು ಕೊಟ್ಟನು. ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ ಯೌವನಸ್ಥರ ಆಲೋಚನೆಗನುಸಾರವಾಗಿ ಜನರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅರಸನು ಅವರಿಗೆ ಕಠಿಣವಾದ ಉತ್ತರವನ್ನು ಕೊಟ್ಟನು; ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆ ಸಮಯದಲ್ಲಿ, ರೆಹಬ್ಬಾಮನು ಅವರೊಂದಿಗೆ ಕಠಿಣವಾಗಿ ಮಾತನಾಡಿದನು. ಹಿರಿಯರು ನೀಡಿದ ಸಲಹೆಗೆ ಅವನು ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೆ ಅರಸನು ಜನರಿಗೆ ಕಠಿಣವಾದ ಉತ್ತರವನ್ನು ಕೊಟ್ಟು, ಹಿರಿಯರು ಅವನಿಗೆ ಕೊಟ್ಟ ಆಲೋಚನೆಯನ್ನು ನಿರಾಕರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 12:13
21 ತಿಳಿವುಗಳ ಹೋಲಿಕೆ  

ದೇವರಿಂದ ಬರುವ ಜ್ಞಾನವಾದರೋ ಮೊಟ್ಟಮೊದಲನೆಯದಾಗಿ ಪವಿತ್ರವಾದುದು. ಅದು ಶಾಂತಿಸಮಾಧಾನ ಉಳ್ಳದ್ದು. ಸಹನೆ ಸಂಯಮವುಳ್ಳದ್ದು, ನ್ಯಾಯಸಮ್ಮತವಾದದ್ದು, ದಯೆದಾಕ್ಷಿಣ್ಯಗಳಿಂದಲೂ ಸತ್ಕಾರ್ಯಗಳಿಂದಲೂ ಫಲಭರಿತವಾದದ್ದು. ವಂಚನೆಯಾಗಲಿ, ಚಂಚಲತೆಯಾಗಲಿ ಅದರಲ್ಲಿ ಇರುವುದಿಲ್ಲ.


ಜ್ಞಾನಿಯ ಮಾತು ಹಿತಕರ; ಅಜ್ಞಾನಿಯ ಮಾತು ಅವನಿಗೆ ವಿನಾಶಕರ. ಅದು ಬುದ್ಧಿಹೀನತೆಯಿಂದ ಆರಂಭವಾಗುತ್ತದೆ. ಮೋಸ, ಮರುಳುತನದಲ್ಲಿ ಮುಕ್ತಾಯಗೊಳ್ಳುತ್ತದೆ.


ಬಡವರು ಮಾಡುವ ಬಿನ್ನಹ ನಮ್ರ; ಬಲ್ಲಿದರು ಕೊಡುವ ಬದಲು ಉಗ್ರ.


ಸುಜ್ಞಾನಿಗಳ ಸಹವಾಸದಿಂದ ಜನರು ಸುಜ್ಞಾನಿಗಳಾಗುವರು; ಅಜ್ಞಾನಿಗಳ ಒಡನಾಟದಿಂದ ಸಂಕಟಪಡುವರು.


ಸಜ್ಜನರ ಬಾಯಲ್ಲಿ ಹಿತವಚನ; ದುರ್ಜನರ ಬಾಯಲ್ಲಿ ನೀಚವಚನ.


ಸಜ್ಜನನ ಬಾಯಿ ಜೀವದ ಬುಗ್ಗೆ; ದುರ್ಜನನ ಬಾಯಿತುಂಬ ಚಿತ್ರಹಿಂಸೆ.


ಆಗ ಇಸ್ರಯೇಲರು ಯೆಹೂದ್ಯರಿಗೆ, “ಅರಸರಲ್ಲಿ ನಮಗೆ ಹತ್ತುಪಾಲು ಉಂಟಲ್ಲವೆ? ದಾವೀದನ ವಿಷಯದಲ್ಲೂ ನಮಗೆ ಹೆಚ್ಚು ಉಂಟು. ಹೀಗಿರುವುದರಿಂದ ನೀವು ನಮ್ಮನ್ನು ತಿರಸ್ಕರಿಸಿದ್ದೇಕೆ? ನಮ್ಮ ಅರಸರನ್ನು ಕರೆದುಕೊಂಡು ಬರುವ ವಿಷಯದಲ್ಲಿ ಮೊದಲು ಮಾತಾಡಿದವರು ನಾವಲ್ಲವೇ?’ ಎಂದರು. ಇಸ್ರಯೇಲರ ವಾದಕ್ಕಿಂತ ಯೆಹೂದ್ಯರ ವಾದ ಉಗ್ರವಾಗಿತ್ತು.


ದಾವೀದನು, “ನಿನ್ನ ತಂದೆ ಬಿರುನುಡಿಯಿಂದ ಉತ್ತರಕೊಟ್ಟರೆ ಅದನ್ನು ಯಾರ ಮುಖಾಂತರವಾಗಿ ನನಗೆ ತಿಳಿಸುವೆ?” ಎಂದು ಅವನನ್ನು ಕೇಳಿದನು.


ಅವನು ಮೋಶೆಗೆ, “ಇಲ್ಲಿಂದ ಹೊರಡು; ಇನ್ನು ಮುಂದೆ ನನ್ನ ಸಮ್ಮುಖಕ್ಕೆ ಬರಲೇ ಬೇಡ, ಎಚ್ಚರಿಕೆ! ತಿರುಗಿ ಬಂದೆಯಾದರೆ ಮರಣದಂಡನೆ ಆಗುವುದು,” ಎಂದು ಹೇಳಿದನು.


ಅದಕ್ಕೆ ಫರೋಹನು, “ 'ಸರ್ವೇಶ್ವರ' ಎಂಬುವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಯೇಲರನ್ನು ಹೋಗಬಿಡಬೇಕೊ? ಆ ಸರ್ವೇಶ್ವರನು ಯಾರೋ ನನಗೆ ಗೊತ್ತಿಲ್ಲ. ಇಸ್ರಯೇಲರನ್ನು ನಾನು ಹೋಗಬಿಡುವುದಿಲ್ಲ,” ಎಂದು ಬಿಟ್ಟನು.


“ಆ ದೇಶಾಧಿಪತಿ ನಮ್ಮೊಡನೆ ಗಡುಸಾಗಿ ಮಾತಾಡಿದ; ನಮ್ಮನ್ನು ಗೂಢಚಾರರೆಂದು ಕರೆದ.


ಜೋಸೆಫನು ಅವರನ್ನು ನೋಡಿದಕೂಡಲೆ ಗುರುತುಹಿಡಿದನು. ಆದರೂ ಅವರ ಪರಿಚಯ ಇಲ್ಲದವನಂತೆ ಬಿರುಬುಡಿಯಿಂದ, “ನೀವು ಎಲ್ಲಿಯವರು?” ಎಂದು ಕೇಳಿದನು. ಅವರು, “ನಾವು ಧಾನ್ಯ ಕೊಂಡುಕೊಳ್ಳುವುದಕ್ಕಾಗಿ ಕಾನಾನ್ ನಾಡಿನಿಂದ ಬಂದವರು,” ಎಂದು ಹೇಳಿದರು.


ಅದಕ್ಕೆ ಅಬ್ರಾಮನು, “ನಿನ್ನ ದಾಸಿ ನಿನ್ನ ಕೈಯಲ್ಲೇ ಇದ್ದಾಳೆ. ನಿನಗಿಷ್ಟ ಬಂದಂತೆ ಮಾಡು,” ಎಂದುಬಿಟ್ಟನು. ಬಳಿಕ ಸಾರಯಳು ಕೊಡುತ್ತಿದ್ದ ಕಿರುಕುಳವನ್ನು ತಾಳಲಾರದೆ ಹಾಗರಳು ಓಡಿಹೋದಳು.


ಮೃದುವಾದ ಮಾತು ಸಿಟ್ಟನ್ನಾರಿಸುತ್ತದೆ; ಬಿರುಸಾದ ನುಡಿ ಸಿಟ್ಟನ್ನೇರಿಸುತ್ತದೆ.


ಯಾರೊಬ್ಬಾಮನೂ ಜನರೆಲ್ಲರೂ ಅರಸ ರೆಹಬ್ಬಾಮನ ಅಪ್ಪಣೆಯಂತೆ ಮೂರನೆಯ ದಿನ ಪುನಃ ಅವನ ಬಳಿಗೆ ಬಂದರು.


“ನನ್ನ ತಂದೆ ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವುದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುವೆನು; ಅವರು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ಮುಳ್ಳುಕೊರಡೆಗಳಿಂದ ದಂಡಿಸುವೆನು,” ಎಂದು ನುಡಿದನು.


ನನ್ನ ನಂತರ ಬರುವವನು ಜ್ಞಾನಿಯೋ ಮೂಢನೋ ಯಾರಿಗೆ ಗೊತ್ತು? ಅವನು ಎಂಥವನಾದರೂ ನಾನು ಲೋಕದಲ್ಲಿ ಬುದ್ಧಿ ಖರ್ಚುಮಾಡಿ ಗಳಿಸಿದ ದುಡಿಮೆಯ ಫಲಕ್ಕೆಲ್ಲ ಅವನು ಒಡೆಯನಾಗುತ್ತಾನೆ. ಇದು ಸಹ ವ್ಯರ್ಥವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು