Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 12:16 - ಕನ್ನಡ ಸತ್ಯವೇದವು C.L. Bible (BSI)

16 ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲ ಎಂದು ನೋಡಿ ಇಸ್ರಯೇಲರೆಲ್ಲರೂ ಅವನಿಗೆ, “ದಾವೀದನಿಗೂ ನಮಗೂ ಏನೂ ಸಂಬಂಧವಿಲ್ಲ; ಜೆಸ್ಸೆಯ ಮಗನಿಗೂ ನಮಗೂ ಯಾವ ಬಾಧ್ಯತೆಯೂ ಇಲ್ಲ; ಇಸ್ರಯೇಲರೇ, ನಿಮ್ಮ ನಿಮ್ಮ ನಿವಾಸಗಳಿಗೆ ತೆರಳಿರಿ; ದಾವೀದನವರು ತಮ್ಮ ಕುಲವನ್ನು ತಾವೇ ನೋಡಿಕೊಳ್ಳಲಿ!” ಎಂದು ಹೇಳಿ ತಮ್ಮ ಮನೆಗಳಿಗೆ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲವೆಂದೂ ತಿಳಿದು ಇಸ್ರಾಯೇಲರೆಲ್ಲರೂ ಅವನಿಗೆ, “ದಾವೀದನಲ್ಲಿ ನಮಗೇನು ಪಾಲು? ಇಷಯನ ಮಗನಲ್ಲಿ ನಮಗೇನು ಬಾಧ್ಯತೆ? ಇಸ್ರಾಯೇಲರೇ, ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಿರಿ, ದಾವೀದನವರೇ ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ” ಎಂದು ಹೇಳಿ ತಮ್ಮ ತಮ್ಮ ನಿವಾಸಗಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲವೆಂದು ನೋಡಿ ಇಸ್ರಾಯೇಲ್ಯರೆಲ್ಲರೂ ಅವನಿಗೆ - ದಾವೀದನಲ್ಲಿ ನಮಗೇನು ಪಾಲು? ಇಷಯನ ಮಗನಲ್ಲಿ ನಮಗೇನು ಬಾಧ್ಯತೆ? ಇಸ್ರಾಯೇಲ್ಯರೇ, ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಿರಿ; ದಾವೀದನವರೇ, ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ ಎಂದು ಹೇಳಿ ತಮ್ಮ ತಮ್ಮ ನಿವಾಸಗಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಇಸ್ರೇಲಿನ ಜನರೆಲ್ಲರೂ ಹೊಸರಾಜನು ತಮ್ಮ ಮಾತಿಗೆ ಕಿವಿಗೊಡಲಿಲ್ಲವೆಂಬುದನ್ನು ನೋಡಿದರು. ಆದ್ದರಿಂದ ಜನರೆಲ್ಲರೂ ರಾಜನಿಗೆ, “ದಾವೀದನ ಕುಟುಂಬದಲ್ಲಿ ನಾವೆಲ್ಲರೂ ಭಾಗಿಗಳೇ? ಇಲ್ಲ! ಇಷಯನ ಭೂಮಿಯಲ್ಲಿ ನಮಗೇನಾದರೂ ಪಾಲು ಸಿಕ್ಕುತ್ತದೆಯೇ? ಇಲ್ಲ! ಇಸ್ರೇಲರೇ, ನಮ್ಮ ಮನೆಗಳಿಗೆ ನಾವು ಹೋಗೋಣ ನಡೆಯಿರಿ. ದಾವೀದನ ಮಗನು ತನ್ನ ಜನರನ್ನು ತಾನೇ ಆಳಲಿ!” ಎಂದು ಹೇಳಿದರು. ಇಸ್ರೇಲಿನ ಜನರೆಲ್ಲರೂ ಮನೆಗಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲರು ತಿಳಿದಾಗ, ಜನರು ಅರಸನಿಗೆ ಉತ್ತರವಾಗಿ, “ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾಯೇಲರೇ, ನಿಮ್ಮ ಡೇರೆಗಳಿಗೆ ಹೋಗಿರಿ. ದಾವೀದನೇ, ಈಗ ನಿನ್ನ ಕುಟುಂಬವನ್ನು ನೀನೇ ನೋಡಿಕೋ,” ಎಂದು ಹೇಳಿ, ಇಸ್ರಾಯೇಲರು ತಮ್ಮ ತಮ್ಮ ಡೇರೆಗಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 12:16
32 ತಿಳಿವುಗಳ ಹೋಲಿಕೆ  

ಬೆನ್ಯಾಮೀನ್ ಕುಲದವನೂ ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ನೀಚ ವ್ಯಕ್ತಿ ಅಲ್ಲಿಗೆ ಹೇಗೋ ಬಂದಿದ್ದನು. ಅವನು ಕಹಳೆಯನ್ನು ಊದಿ, “ಇಸ್ರಯೇಲರೇ, ದಾವೀದನಿಗೂ ನಮಗೂ ಏನೂ ಸಂಬಂಧವಿಲ್ಲ. ಜೆಸ್ಸೆಯನ ಮಗನಲ್ಲಿ ನಮಗೆ ಹಕ್ಕುಭಾದ್ಯತೆಯಿಲ್ಲ. ಪ್ರತಿ ಒಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ತೆರಳೋಣ,” ಎಂದನು.


ಆಗುವುದಾದರೆ ಮಾತ್ರ ನನ್ನ ದಾಸ ದಾವೀದನೊಂದಿಗೂ ನನ್ನ ಪರಿಚಾರಕರಾದ ಲೇವಿಕುಲದ ಯಾಜಕರೊಂದಿಗೂ ನಾನು ಮಾಡಿದ ಒಡಂಬಡಿಕೆ ನಿಂತುಹೋಗುವುದು ಮತ್ತು ದಾವೀದನ ಸಿಂಹಾಸನವನ್ನು ಏರಿ ಆಳತಕ್ಕ ಅವನ ಸಂತಾನದವನು ಒಬ್ಬನೂ ಇಲ್ಲವಾಗುವನು.


ತಮ್ಮ ಮಾತನ್ನು ಅರಸನು ಲಕ್ಷಿಸಲಿಲ್ಲ ಎಂದು ತಿಳಿದು, ಇಸ್ರಯೇಲರೆಲ್ಲರು ಅವನಿಗೆ, “ದಾವೀದನಿಗೂ ನಮಗೂ ಇನ್ನು ಮೇಲೆ ಏನೂ ಸಂಬಂಧವಿಲ್ಲ, ಜೆಸ್ಸೆಯ ಮಗನಿಗೂ ನಮಗೂ ಯಾವ ಬಾಧ್ಯತೆಯೂ ಇಲ್ಲ. ಇಸ್ರಯೇಲರೇ, ನಿಮ್ಮ ನಿಮ್ಮ ನಿವಾಸಗಳಿಗೆ ತೆರಳಿರಿ; ದಾವೀದನ ಕಡೆಯವರೇ, ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿ,” ಎಂದು ಪ್ರತಿಭಟಿಸಿ ತಮ್ಮ ತಮ್ಮ ನಿವಾಸಗಳಿಗೆ ಹೊರಟುಹೋದರು.


ಸಿರಿಯರ ಸೈನಿಕರು ಈಗಾಗಲೇ ಇಸ್ರಯೇಲಿನ ಗಡಿಯೊಳಗಿದ್ದಾರೆ ಎಂಬ ಸುದ್ದಿ ಜುದೇಯದ ಅರಸನಿಗೆ ಮುಟ್ಟಿದ್ದೇ ತಡ, ಅವನೂ ಅವನ ಪ್ರಜೆಗಳೆಲ್ಲರೂ ಹೆದರಿದರು. ಬಿರುಗಾಳಿಗೆ ಸಿಕ್ಕಿದ ಗಿಡಮರಗಳಂತೆ ನಡುಗಿದರು.


ಕೋಡೊಂದು ಮೂಡುವಂತೆ ಮಾಡುವೆ ದಾವೀದನಿಗಿಲ್ಲೆ I ನಂದಾದೀಪ ಬೆಳಗುವಂತೆ ಮಾಡುವೆ ನನ್ನ ಅಭಿಷಿಕ್ತನಿಗಿಲ್ಲೆ II


ನರರ ಕೋಪ, ದೇವಾ ನಿನ್ನ ಘನತೆಗೆ ಸಾಧಕ I ಅಳಿದುಳಿದಾ ಕೋಪ ನಿನ್ನ ನಡುಕಟ್ಟಿಗೆ ಲಾಯಕ II


ಸೂರ್ಯಾಸ್ತಮವಾದ ಕೂಡಲೆ, “ಪ್ರತಿಯೊಬ್ಬನು ತನ್ನ ಪ್ರಾಂತ್ಯಕ್ಕೂ ಪಟ್ಟಣಕ್ಕೂ ಹೋಗಲಿ,” ಎಂಬ ಕೂಗು ಇಸ್ರಯೇಲರ ಸೈನ್ಯದಲ್ಲಿ ಹಬ್ಬಿಕೊಂಡಿತು.


ಆಗ ಅವನು, “ಇಸ್ರಯೇಲರೆಲ್ಲರೂ ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದರಿಹೋದದ್ದನ್ನು ಕಂಡೆ; ಆಗ ಸರ್ವೇಶ್ವರ, ‘ಇವರು ಒಡೆಯನಿಲ್ಲದವರಾಗಿರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ,’ ಎಂದರು” ಎಂಬುದಾಗಿ ಉತ್ತರಕೊಟ್ಟನು.


ದಾವೀದನ ಸಂತಾನದವರನ್ನು ಅವರ ಪಾಪದ ನಿಮಿತ್ತ ತಲೆ ತಗ್ಗಿಸುವಂತೆ ಮಾಡುವೆನು. ಆದರೆ ಸದಾಕಾಲಕ್ಕೂ ಅಲ್ಲ, ಎಂದು ಹೇಳಿದ್ದಾರೆ,” ಎಂದನು.


ನಾನು ನನ್ನ ಹೆಸರಿಗಾಗಿ ಆರಿಸಿಕೊಂಡ ಜೆರುಸಲೇಮ್ ಪಟ್ಟಣದಲ್ಲಿ ನನ್ನ ದಾಸ ದಾವೀದನ ದೀಪ ನನ್ನ ಸನ್ನಿಧಿಯಲ್ಲಿ ಉರಿಯುತ್ತಲೇ ಇರುವಂತೆ ಅವನ ಮಗನಿಗೆ ಒಂದು ಕುಲವನ್ನು ಉಳಿಸುವೆನು.


ಆದರೂ ನಾನು ಸೊಲೊಮೋನನಿಂದ ಸಾಮ್ರಾಜ್ಯವನ್ನೆಲ್ಲಾ ಕಿತ್ತುಕೊಳ್ಳುವುದಿಲ್ಲ; ನನ್ನ ಆಜ್ಞಾವಿಧಿಗಳನ್ನು ಕೈಕೊಂಡವನೂ ನಾನು ಆರಿಸಿಕೊಂಡ ದಾಸನೂ ಆದ ದಾವೀದನ ನಿಮಿತ್ತ ಅವನನ್ನು ಅವನ ಜೀವಮಾನದಲ್ಲೆಲ್ಲಾ ಅರಸನನ್ನಾಗಿಯೇ ಇರಿಸುವೆನು.


ಆದರೆ ಇಡೀ ಸಾಮ್ರಾಜ್ಯವನ್ನು ಕಿತ್ತುಕೊಳ್ಳುವುದಿಲ್ಲ; ನನ್ನ ದಾಸ ದಾವೀದನ ನಿಮಿತ್ತ ಹಾಗು ನಾನು ಆರಿಸಿಕೊಂಡ ಜೆರುಸಲೇಮ್ ಪಟ್ಟಣದ ನಿಮಿತ್ತ ನಿನ್ನ ಮಗನಿಗೆ ಒಂದು ಕುಲವನ್ನು ಉಳಿಸುವೆನು,” ಎಂದು ಸರ್ವೇಶ್ವರ ಹೇಳಿದರು.


ಇದಲ್ಲದೆ ಅವನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ, “ನೋಡಿ, ನನ್ನಿಂದ ಹುಟ್ಟಿದ ನನ್ನ ಮಗನೇ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವಲ್ಲಿ ಈ ಬೆನ್ಯಾಮೀನ್ಯನು ಹೀಗೆ ಮಾಡುವುದು ಯಾವ ಲೆಕ್ಕ? ಬಿಡಿ, ಅವನು ಶಪಿಸಲಿ; ಹೀಗೆ ಮಾಡಬೇಕೆಂದು ಸರ್ವೇಶ್ವರನೇ ಅವನಿಗೆ ಆಜ್ಞಾಪಿಸಿದ್ದಾರೆ.


ಇಸ್ರಯೇಲರ ಮನಸ್ಸು ಅಬ್ಷಾಲೋಮನ ಕಡೆಗೆ ತಿರುಗಿಕೊಂಡಿತೆಂಬ ವರ್ತಮಾನ ದಾವೀದನಿಗೆ ಮುಟ್ಟಿತು.


ಯೆರುಬ್ಬಾಳನೆಂಬ ಗಿದ್ಯೋನನು ತಮಗೆ ಮಾಡಿದ ಉಪಕಾರಗಳನ್ನು ಸ್ಮರಿಸಲಿಲ್ಲ; ಅವನ ಮನೆಯವರಿಗೆ ದಯೆತೋರಿಸಲಿಲ್ಲ.


“ಅಲ್ಲದೆ, ‘ನಾನು ತಮಗೆ ರಾಜನಾಗುವುದು ಬೇಡವೆಂದ ನನ್ನ ಶತ್ರುಗಳನ್ನು ಇಲ್ಲಿಗೆ ಎಳೆದು ತಂದು ನನ್ನ ಮುಂದೆಯೇ ಸಂಹರಿಸಿರಿ,” ಎಂದ.”


ಅವನ ನಾಡಿಗರಾದರೋ ಅವನನ್ನು ದ್ವೇಷಿಸುತ್ತಿದ್ದರು. ‘ಇವನು ನಮಗೆ ರಾಜನಾಗುವುದು ಬೇಡ,’ ಎಂದು ತಿಳಿಸಲು ಅವನ ಹಿಂದೆಯೇ ತಮ್ಮ ಪ್ರತಿನಿಧಿಗಳನ್ನು ಕಳುಹಿಸಿದರು.


“ನೀವು ನನ್ನ ಕಾಲುಗಳನ್ನು ತೊಳೆಯುವುದು ಎಂದಿಗೂ ಕೂಡದು,” ಎಂದು ಪೇತ್ರನು ಪ್ರತಿಭಟಿಸಿದನು. ಅದಕ್ಕೆ ಯೇಸು, “ನಾನು ತೊಳೆಯದಿದ್ದರೆ ನಿನಗೆ ನನ್ನಲ್ಲಿ ಪಾಲು ಇಲ್ಲ,” ಎಂದು ನುಡಿದರು.


ಆದ್ದರಿಂದ ಸರ್ವೇಶ್ವರ ಅವನ ಮೇಲೆ ಕೋಪಗೊಂಡು, “ನೀನು ಹೀಗೆ ಮಾಡಿ ನನ್ನ ನಿಬಂಧನೆಗಳನ್ನು ಮೀರಿದ್ದರಿಂದ ನಿನ್ನ ರಾಜ್ಯವನ್ನು ಕಿತ್ತುಕೊಂಡು ನಿನ್ನ ದಾಸನಿಗೆ ಕೊಡುವೆನು.


ಆದರೆ, ಅವನ ಮಗನ ಕೈಯಿಂದ ಅದನ್ನು ಕಿತ್ತುಕೊಂಡು ನಿನಗೆ ಹತ್ತು ಕುಲಗಳನ್ನು ಕೊಡುವೆನು.


ಸರ್ವೇಶ್ವರ ನಿನ್ನ ಮೇಲೂ ನಿನ್ನ ಪ್ರಜೆಯ ಮೇಲೂ ನಿನ್ನ ತಂದೆಯ ಮನೆತನದ ಮೇಲೂ ಭೀಕರ ದಿನಗಳನ್ನು ಬರಮಾಡುವರು. ಇಸ್ರಯೇಲ್ ರಾಜ್ಯ ಜುದೇಯ ನಾಡಿನಿಂದ ಬೇರ್ಪಟ್ಟ ದಿನ ಮೊದಲುಗೊಂಡು ಇದುವರೆಗೂ ಅಂಥ ದಿನಗಳು ಬಂದಿರಲಿಲ್ಲ. ಅಸ್ಸೀರಿಯದ ಅರಸನೇ ಆ ದುರ್ದಿನಗಳ ಪ್ರತೀಕ.


“ನರಪುತ್ರನೇ, ನೀನು ಒಂದು ದಂಡವನ್ನು ತೆಗೆದು ಅದರಲ್ಲಿ ‘ಜುದೇಯದ್ದು, ಜುದೇಯಕ್ಕೆ ಸೇರಿದ ಇಸ್ರಯೇಲರದು’ ಎಂದು ಬರೆ; ಇನ್ನೊಂದು ದಂಡವನ್ನು ತೆಗೆದು ಅದರಲ್ಲಿ, ‘ಜೋಸೆಫನದು, ಎಫ್ರಯಿಮಿನದು, ಜೊಸೇಫಿಗೆ ಸೇರಿದ ಎಲ್ಲ ಇಸ್ರಯೇಲರದು’ ಎಂದು ಬರೆ;


ಎಬೇದನ ಮಗನಾದ ಗಾಳನೂ ಅವರ ಸಂಗಡ ಕೂಡಿಕೊಂಡು, “ಅಬೀಮೆಲೆಕನು ಎಷ್ಟರವನು? ಶೆಕೆಮಿನವರಾದ ನಾವು ಎಷ್ಟರವರು? ನಾವು ಅಬೀಮೆಲೆಕನಿಗೆ ಏಕೆ ಸೇವೆಮಾಡಬೇಕು? ಅವನು ಯೆರುಬ್ಬಾಳನ ಮಗನಲ್ಲವೇ? ಅವನ ಪುರಾಧಿಕಾರಿ ಜೆಬುನಲ್ಲವೇ? ನಾವು ಅವನಿಗೆ ಏಕೆ ಸೇವೆಮಾಡಬೇಕು? ಶೆಕೆಮನ ತಂದೆಯಾದ ಹಮೋರನ ವಂಶದವರಿಗೇ ಸೇವೆಮಾಡೋಣ.


ಮೃದುವಾದ ಮಾತು ಸಿಟ್ಟನ್ನಾರಿಸುತ್ತದೆ; ಬಿರುಸಾದ ನುಡಿ ಸಿಟ್ಟನ್ನೇರಿಸುತ್ತದೆ.


ಒಂದು ರಾಜ್ಯದ ಪ್ರಜೆಗಳು ತಮ್ಮತಮ್ಮೊಳಗೆ ಕಚ್ಚಾಡುವುದಾದರೆ ಆ ರಾಜ್ಯ ಉಳಿಯದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು