1 ಅರಸುಗಳು 12:21 - ಕನ್ನಡ ಸತ್ಯವೇದವು C.L. Bible (BSI)21 ಸೊಲೊಮೋನನ ಮಗ ರೆಹಬ್ಬಾಮನು ಜೆರುಸಲೇಮನ್ನು ಮುಟ್ಟಿದನಂತರ ಇಸ್ರಯೇಲರಿಗೆ ವಿರುದ್ಧ ಯುದ್ಧಮಾಡುವುದಕ್ಕೂ ರಾಜ್ಯವನ್ನು ಮರಳಿ ತನಗೆ ವಶಪಡಿಸಿಕೊಳ್ಳುವುದಕ್ಕೂ ಯೆಹೂದ ಬೆನ್ಯಾಮೀನ್ ಕುಲಗಳಿಂದ ಒಂದು ಲಕ್ಷದ ಎಂಬತ್ತು ಸಾವಿರ ಮಂದಿ ಶ್ರೇಷ್ಠ ಸೈನಿಕರನ್ನು ಕೂಡಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಸೊಲೊಮೋನನ ಮಗನಾದ ರೆಹಬ್ಬಾಮನು ಯೆರೂಸಲೇಮನ್ನು ತಲುಪಿದ ನಂತರ ಇಸ್ರಾಯೇಲರಿಗೆ ವಿರೋಧವಾಗಿ ಯುದ್ಧಮಾಡುವುದಕ್ಕೂ ರಾಜ್ಯವನ್ನು ತಿರುಗಿ ತನಗೆ ವಶಪಡಿಸಿಕೊಳ್ಳುವುದಕ್ಕೂ ಯೆಹೂದ ಬೆನ್ಯಾಮೀನ್ ಕುಲಗಳಿಂದ ಲಕ್ಷದ ಎಂಬತ್ತು ಸಾವಿರ ಶ್ರೇಷ್ಠ ಸೈನಿಕರನ್ನು ಕೂಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಸೊಲೊಮೋನನ ಮಗನಾದ ರೆಹಬ್ಬಾಮನು ಯೆರೂಸಲೇಮನ್ನು ಮುಟ್ಟಿದನಂತರ ಇಸ್ರಾಯೇಲ್ಯರಿಗೆ ವಿರೋಧವಾಗಿ ಯುದ್ಧಮಾಡುವದಕ್ಕೂ ರಾಜ್ಯವನ್ನು ತಿರಿಗಿ ತನಗೆ ವಶಪಡಿಸಿಕೊಳ್ಳುವದಕ್ಕೂ ಯೆಹೂದ ಬೆನ್ಯಾಮೀನ್‍ಕುಲಗಳಿಂದ ಲಕ್ಷದ ಎಂಭತ್ತುಸಾವಿರ ಮಂದಿ ಶ್ರೇಷ್ಠ ಸೈನಿಕರನ್ನು ಕೂಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ರೆಹಬ್ಬಾಮನು ಜೆರುಸಲೇಮಿಗೆ ಹಿಂದಿರುಗಿ ಹೋದನು. ಅವನು ಯೆಹೂದದ ಕುಟುಂಬಗಳನ್ನು ಮತ್ತು ಬೆನ್ಯಾಮೀನ್ ಕುಟುಂಬಗಳನ್ನು ಒಟ್ಟಾಗಿ ಸೇರಿಸಿದನು. ಅವರಲ್ಲಿ ಒಂದು ಲಕ್ಷದ ಎಂಭತ್ತು ಸಾವಿರ ಸೈನಿಕರಿದ್ದರು. ರೆಹಬ್ಬಾಮನು ಇಸ್ರೇಲಿನ ಜನರ ವಿರುದ್ಧ ಯುದ್ಧಮಾಡಲು ಅಪೇಕ್ಷಿಸಿದನು. ಅವನು ತನ್ನ ರಾಜ್ಯವನ್ನು ಪುನರ್‌ಸ್ಥಾಪಿಸಬೇಕೆಂದಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಸೊಲೊಮೋನನ ಮಗನಾದ ರೆಹಬ್ಬಾಮನು ಯೆರೂಸಲೇಮಿಗೆ ಬಂದ ತರುವಾಯ, ರಾಜ್ಯವನ್ನು ತಿರುಗಿ ಪಡೆಯುವ ಹಾಗೆ ಇಸ್ರಾಯೇಲಿಗೆ ವಿರೋಧವಾಗಿ ಯುದ್ಧಮಾಡಲು ಬೆನ್ಯಾಮೀನನ ಗೋತ್ರದ ಮತ್ತು ಯೆಹೂದನ ಸಮಸ್ತ ಕುಟುಂಬಗಳಿಂದ 1,80,000 ಸಮರ್ಥ ಸೈನಿಕರನ್ನು ಆಯ್ದುಕೊಂಡು ಒಟ್ಟುಗೂಡಿಸಿದನು. ಅಧ್ಯಾಯವನ್ನು ನೋಡಿ |