Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 12:24 - ಕನ್ನಡ ಸತ್ಯವೇದವು C.L. Bible (BSI)

24 ನೀವು ನಿಮ್ಮ ಸಹೋದರರಾದ ಇಸ್ರಯೇಲರೊಡನೆ ಯುದ್ಧಮಾಡಲು ಹೋಗಬಾರದು; ಎಲ್ಲರೂ ಹಿಂದಿರುಗಿ ಹೋಗಿರಿ; ಈ ವಿಭಜನಾಕಾರ್ಯ ಸರ್ವೇಶ್ವರನಿಂದಾಗಿದೆ, ಎಂದು ಹೇಳಬೇಕು.” ಅಂತೆಯೇ ಆ ಜನರು ಸರ್ವೇಶ್ವರನ ಮಾತನ್ನು ಕೇಳಿ ಹಿಂದಿರುಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ‘ಯೆಹೋವನ ಮಾತನ್ನು ಕೇಳಿರಿ, ನೀವು ನಿಮ್ಮ ಸಹೋದರರಾದ ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕೆ ಹೋಗಬಾರದು. ಎಲ್ಲರೂ ಹಿಂತಿರುಗಿ ಹೋಗಿರಿ. ಈ ಕಾರ್ಯವು ಯೆಹೋವನಿಂದಾಗಿದೆ’ ಎಂದು ಹೇಳಬೇಕು” ಎಂಬ ಯೆಹೋವನ ಮಾತನ್ನು ಜನರಿಗೆ ಹೇಳಿದನು. ಆಗ ಅವರು ಯೆಹೋವನ ಮಾತನ್ನು ಕೇಳಿ ವಿಧೇಯರಾಗಿ ಹಿಂದಿರುಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಉಳಿದ ಜನರಿಗೂ - ಯೆಹೋವನ ಮಾತನ್ನು ಕೇಳಿರಿ, ನೀವು ನಿಮ್ಮ ಸಹೋದರರಾದ ಇಸ್ರಾಯೇಲ್ಯರೊಡನೆ ಯುದ್ಧಮಾಡುವದಕ್ಕೆ ಹೋಗಬಾರದು; ಎಲ್ಲರೂ ಹಿಂದಿರುಗಿ ಹೋಗಿರಿ; ಈ ಕಾರ್ಯವು ಯೆಹೋವನಿಂದಾಗಿದೆ ಎಂದು ಹೇಳಬೇಕು ಎಂಬ ದೈವೋತ್ತರ ಉಂಟಾಗಲು ಅವರು ಯೆಹೋವನ ಮಾತನ್ನು ಕೇಳಿ ಹಿಂದಿರುಗಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನೀನು ಅವರಿಗೆ, ‘ನಿಮ್ಮ ಸೋದರರಾದ ಇಸ್ರೇಲರ ವಿರುದ್ಧ ನೀವು ಯುದ್ಧಕ್ಕೆ ಹೋಗಲೇಬಾರದೆಂದು ಯೆಹೋವನು ಹೇಳುತ್ತಾನೆ. ನಿಮ್ಮಲ್ಲಿ ಪ್ರತಿಯೊಬ್ಬನು ಮನೆಗೆ ಹೋಗಬೇಕು. ಈ ಸಂಗತಿಗಳೆಲ್ಲ ಸಂಭವಿಸುವಂತೆ ನಾನೇ ಮಾಡಿದೆನು’ ಎಂದು ಹೇಳು” ಎಂಬುದಾಗಿ ತಿಳಿಸಿದನು. ಆದ್ದರಿಂದ ರೆಹಬ್ಬಾಮನ ಸೈನ್ಯದಲ್ಲಿನ ಜನರೆಲ್ಲರೂ ಯೆಹೋವನ ಆಜ್ಞೆಯನ್ನು ಅನುಸರಿಸಿದರು. ಅವರು ತಮ್ಮ ಮನೆಗಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ‘ನೀವು ಇಸ್ರಾಯೇಲರಾಗಿರುವ ನಿಮ್ಮ ಸಹೋದರರಿಗೆ ವಿರೋಧವಾಗಿ ಯುದ್ಧಮಾಡಲು ಹೋಗಬೇಡಿರಿ. ಪ್ರತಿ ಮನುಷ್ಯನು ತನ್ನ ಮನೆಗೆ ಹಿಂದಿರುಗಲಿ.’ ಏಕೆಂದರೆ ಈ ಕಾರ್ಯವು ತಮ್ಮಿಂದ ಉಂಟಾಯಿತೆಂದು ಯೆಹೋವ ದೇವರು ಹೇಳುತ್ತಾರೆ,” ಎಂದನು. ಆದ್ದರಿಂದ ಅವರು ಯೆಹೋವ ದೇವರ ವಾಕ್ಯವನ್ನು ಕೇಳಿ, ಯೆಹೋವ ದೇವರ ವಾಕ್ಯದ ಪ್ರಕಾರವೇ ಹಿಂದಿರುಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 12:24
13 ತಿಳಿವುಗಳ ಹೋಲಿಕೆ  

ಅವನು ಜನರ ಮಾತನ್ನು ಕೇಳದೆಹೋದದ್ದು ಸರ್ವೇಶ್ವರನಿಂದಲೇ ಸಂಭವಿಸಿತ್ತು. ಹೀಗೆ ಸರ್ವೇಶ್ವರ ಶಿಲೋವಿನವನಾದ ಅಹೀಯನ ಮುಖಾಂತರ ನೆಬಾಟನ ಮಗ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.


“ಅವರು ನನ್ನ ಅನುಮತಿ ಇಲ್ಲದೆ ಅರಸರನ್ನು ನೇಮಿಸಿಕೊಂಡಿದ್ದಾರೆ. ನನಗೆ ತಿಳಿಯದಂತೆ ಅಧಿಪತಿಗಳನ್ನು ಮಾಡಿಕೊಂಡಿದ್ದಾರೆ. ಬೆಳ್ಳಿಬಂಗಾರದ ವಿಗ್ರಹಗಳನ್ನು ನಿರ್ಮಿಸಿಕೊಂಡಿದ್ದಾರೆ. ಅವರು ಮಾಡಿರುವುದೆಲ್ಲ ಅವರ ನಾಶಕ್ಕಾಗಿಯೇ.


ಆಗ ಅಮಚ್ಯನು ಎಫ್ರಯಿಮರಿಂದ ಬಂದ ಸೈನಿಕರನ್ನು ಬೇರೆಮಾಡಿ, ಅವರನ್ನು ಅವರ ನಾಡಿಗೆ ಕಳುಹಿಸಿದನು. ಅವರು ಯೆಹೂದ್ಯರ ಮೇಲೆ ಕಡುಕೋಪಗೊಂಡು, ಬಲುಸಿಟ್ಟಿನಿಂದ ತಮ್ಮ ನಾಡಿಗೆ ಹೋದರು.


‘ಸರ್ವೇಶ್ವರ ಇಂತೆನ್ನುತ್ತಾರೆ: ನೀವು ನಿಮ್ಮ ಸಹೋದರರೊಡನೆ ಯುದ್ಧಮಾಡುವುದಕ್ಕೆ ಹೋಗಬಾರದು. ಎಲ್ಲರು ಹಿಂದಿರುಗಿಹೋಗಿರಿ; ಈ ವಿಭಜನಾಕಾರ್ಯ ಸರ್ವೇಶ್ವರನಿಂದಾಗಿದೆ’ ಎಂದು ಹೇಳಬೇಕು.” ಅಂತೆಯೇ ಆ ಜನರು ಸರ್ವೇಶ್ವರನ ಮಾತನ್ನು ಕೇಳಿ ಯಾರೊಬ್ಬಾಮನಿಗೆ ವಿರೋಧವಾಗಿ ಹೊರಡದೆ ಹಿಂದಿರುಗಿ ಹೋದರು.


ಸರ್ವೇಶ್ವರ ನಿಮ್ಮ ಸಂಗಡ ಇಲ್ಲ, ಹತ್ತಬೇಡಿ. ನೀವು ಶತ್ರುಗಳ ಮುಂದೆ ನಿಲ್ಲಲಾರಿರಿ, ಬಿದ್ದು ಸತ್ತುಹೋಗುವಿರಿ.


ಯಾರೊಬ್ಬಾಮನು ಎಫ್ರಯಿಮ್ ಮಲೆನಾಡಿನ ಶೆಕೆಮ್ ಪಟ್ಟಣವನ್ನು ಭದ್ರಪಡಿಸಿ ಅಲ್ಲಿ ವಾಸಿಸಿದನು. ಅಲ್ಲಿಂದ ಪೆನೂವೇಲಿಗೆ ಹೋಗಿ ಅದನ್ನೂ ಭದ್ರಪಡಿಸಿದನು.


ಅದಕ್ಕೆ ಲಾಬಾನನು ಮತ್ತು ಬೆತೂವೇಲನು, ” ಇದು ಸರ್ವೇಶ್ವರ ಸ್ವಾಮಿಯಿಂದಲೇ ಬಂದ ಸೂಚನೆ, ಇದಕ್ಕೆ ನಾವು ನಿನಗೆ 'ಹೌದು - ಇಲ್ಲ’ ಎಂದು ಹೇಳಲಾಗದು.


ಫಿಲಿಷ್ಟಿಯರ ದಂಡನೆಗೆ ಕಾರಣವನ್ನು ಹುಡುಕುತ್ತಿದ್ದ ಸರ್ವೇಶ್ವರನ ಪ್ರೇರಣೆಯಿಂದಲೇ ಇದೆಲ್ಲ ಸಂಭವಿಸಿತೆಂದು ಅವನ ತಂದೆತಾಯಿಗಳಿಗೆ ಗೊತ್ತಾಗಲಿಲ್ಲ. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಯೇಲರ ಮೇಲೆ ದೊರೆತನ ನಡೆಸುತ್ತಿದ್ದರು.


ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧ ನಡೆಯುತ್ತಿತ್ತು.


ಅಹಜ್ಯನು ಯೋರಾಮನ ಬಳಿಗೆ ಹೋಗಿ ನಾಶವಾದದ್ದು ದೈವಸಂಕಲ್ಪದಿಂದಲೇ. ಅವನು ಆ ಸ್ಥಳವನ್ನು ಮುಟ್ಟಿದ ಕೂಡಲೆ ಯೋರಾಮನ ಜೊತೆಯಲ್ಲಿ ನಿಂಷಿಯ ಮಗ ಯೇಹುವನ್ನು ಎದುರುಗೊಳ್ಳುವುದಕ್ಕೆ ಹೋದನು. ಸರ್ವೇಶ್ವರ ಅಹಾಬನ ಮನೆಯನ್ನು ನಿರ್ನಾಮ ಮಾಡುವುದಕ್ಕಾಗಿಯೇ ಯೇಹುವಿಗೆ ರಾಜಾಭಿಷೇಕ ಮಾಡಿಸಿ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು