Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 12:26 - ಕನ್ನಡ ಸತ್ಯವೇದವು C.L. Bible (BSI)

26 ಅವನು ತನ್ನಲ್ಲೇ, “ರಾಜ್ಯವು ಮತ್ತೆ ದಾವೀದನ ಕುಟುಂಬದವರಿಗೆ ಆಗುವುದೋ ಏನೋ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವನು ತನ್ನ ಮನಸ್ಸಿನಲ್ಲಿ, “ರಾಜ್ಯವು ಪುನಃ ದಾವೀದನ ಕುಟುಂಬದವರಿಗೆ ಆಗುವುದೋ ಏನೋ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವನು ತನ್ನ ಮನಸ್ಸಿನಲ್ಲಿ - ರಾಜ್ಯವು ತಿರಿಗಿ ದಾವೀದನ ಕುಟುಂಬದವರಿಗೆ ಆಗುವದೋ ಏನೋ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26-27 ಯಾರೊಬ್ಬಾಮನು ತನ್ನಲ್ಲೇ, “ಜನರು ಜೆರುಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಹೋಗುವುದನ್ನೇ ಮುಂದುವರಿಸಿದರೆ, ಆಗ ಅವರು ದಾವೀದನ ಕುಟುಂಬವೇ ನಮ್ಮನ್ನು ಆಳಲಿ ಎಂದು ಅಪೇಕ್ಷೆಪಡಬಹುದು. ಜನರು ಯೆಹೂದದ ರಾಜನಾದ ರೆಹಬ್ಬಾಮನನ್ನೇ ಮತ್ತೆ ಅನುಸರಿಸಬಹುದು. ನಂತರ ಅವರು ನನ್ನನ್ನು ಕೊಂದುಬಿಡಬಹುದು.” ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆದರೆ ಯಾರೊಬ್ಬಾಮನು ತನ್ನ ಮನಸ್ಸಿನಲ್ಲಿ, “ಈಗ ರಾಜ್ಯವು ದಾವೀದನ ಮನೆಯವರಿಗೆ ಹಿಂದಿರುಗುವುದು ಏನೋ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 12:26
17 ತಿಳಿವುಗಳ ಹೋಲಿಕೆ  

ಇದನ್ನೆಲ್ಲಾ ಕಂಡ ಫರಿಸಾಯರು ತಮ್ಮತಮ್ಮೊಳಗೆ, “ನೋಡಿದಿರಾ? ನಮ್ಮ ಕೈಯಿಂದ ಏನೂ ಆಗಲಿಲ್ಲ. ಇಡೀ ಜಗತ್ತೇ ಅವನ ಹಿಂದೆ ಹೋಗುತ್ತಿದೆಯಲ್ಲಾ !” ಎಂದುಕೊಂಡರು.


ಯೇಸುವನ್ನು ಆಹ್ವಾನಿಸಿದ ಫರಿಸಾಯನು ಇದನ್ನು ನೋಡಿ, ‘ಇವನು ನಿಜವಾಗಿಯೂ ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟುತ್ತಿರುವ ಇವಳು ಯಾರು, ಎಂಥಾ ಪತಿತಳು, ಎಂದು ತಿಳಿದುಕೊಳ್ಳುತ್ತಿದ್ದನು’ ಎಂದು ತನ್ನೊಳಗೇ ಅಂದುಕೊಂಡನು.


ಅಂತೆಯೇ, ರಾಜಧಾನಿಯಾದ ಸಮಾರ್ಯಕ್ಕಿಂತ ಇಸ್ರಯೇಲ್ ಹೆಚ್ಚಲ್ಲ. ರಾಜನಾದ ಪೆಕಹನಿಗಿಂತ ಸಮಾರ್ಯ ಹೆಚ್ಚಲ್ಲ. ನಿಮ್ಮ ವಿಶ್ವಾಸ ಸ್ಥಿರವಿಲ್ಲದಿದ್ದರೆ, ನಿಮಗೆ ಸ್ಥಿರತೆ ಇರುವುದಿಲ್ಲ.”


“ದೇವನಿಲ್ಲ” ಎನ್ನುವವರು ಮನದಲಿ ದುರ್ಮತಿಗಳು I ಹೇಯ ಕೃತ್ಯವೆಸಗುವರು ಆ ಭ್ರಷ್ಟಚಾರಿಗಳು I ಒಳಿತನ್ನು ಮಾಡುವರಾರೂ ಇಲ್ಲ ಅವರೊಳು II


ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಮರುಭೂಮಿಗೆ ಹೊರಟರು. ಹೊರಡುವಾಗ ಯೆಹೋಷಾಫಾಟನು ಎದ್ದು ನಿಂತು, “ಯೆಹೂದ್ಯರೇ, ಜೆರುಸಲೇಮಿನವರೇ, ನನ್ನ ಮಾತನ್ನು ಕೇಳಿರಿ; ಸರ್ವೇಶ್ವರನಲ್ಲಿ ಭರವಸೆ ಇಡಿ, ಆಗ ಸುರಕ್ಷಿತರಾಗುವಿರಿ; ಸರ್ವೇಶ್ವರನ ಪ್ರವಾದಿಗಳನ್ನು ನಂಬಿರಿ, ಆಗ ಸಾರ್ಥಕರಾಗುವಿರಿ,” ಎಂದು ಹೇಳಿದನು.


ನನ್ನ ದಾಸ ದಾವೀದನು ನನ್ನ ಆಜ್ಞಾವಿಧಿಗಳನ್ನು ಕೈಕೊಂಡಂತೆ, ನೀನೂ ನನ್ನ ಆಜ್ಞೆಗಳನ್ನು ಕೈಗೊಂಡು, ನನ್ನ ಮಾರ್ಗದಲ್ಲಿ ನಡೆದು ನನ್ನನ್ನು ಮೆಚ್ಚಿಸಿದರೆ, ನಾನು ನಿನ್ನ ಸಂಗಡ ಇದ್ದು ದಾವೀದನ ಸಂತಾನದಂತೆ ನಿನ್ನ ಸಂತಾನವನ್ನೂ ಸ್ಥಿರಪಡಿಸುವೆನು; ಇಸ್ರಯೇಲ್ ರಾಜ್ಯ ನಿನ್ನ ಪಾಲಾಗುವುದು.


ದಾವೀದನು ತನ್ನ ಮನಸ್ಸಿನಲ್ಲೇ, “ನಾನು ಇಲ್ಲಿದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಮಡಿಯಲೇ ಬೇಕು. ಆದುದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವುದೇ ಉತ್ತಮ. ಆಮೇಲೆ ಸೌಲನು ಇಸ್ರಯೇಲ್ ಪ್ರಾಂತ್ಯಗಳಲ್ಲಿ ನನ್ನನ್ನು ಹುಡುಕುವುದನ್ನು ಬಿಟ್ಟುಬಿಡುವನು. ನಾನು ಅವನ ಕೈಯಿಂದ ತಪ್ಪಿಸಿಕೊಂಡು ಸುರಕ್ಷಿತನಾಗಿರುವೆನು,” ಎಂದುಕೊಂಡನು.


ಯಾರೊಬ್ಬಾಮನು ಎಫ್ರಯಿಮ್ ಮಲೆನಾಡಿನ ಶೆಕೆಮ್ ಪಟ್ಟಣವನ್ನು ಭದ್ರಪಡಿಸಿ ಅಲ್ಲಿ ವಾಸಿಸಿದನು. ಅಲ್ಲಿಂದ ಪೆನೂವೇಲಿಗೆ ಹೋಗಿ ಅದನ್ನೂ ಭದ್ರಪಡಿಸಿದನು.


ಜನರು ಜೆರುಸಲೇಮಿನಲ್ಲಿರುವ ಸರ್ವೇಶ್ವರನ ಆಲಯಕ್ಕೆ ಬಲಿಯರ್ಪಣೆಗಾಗಿ ಹೋದರೆ ಅವರ ಮನಸ್ಸು ಅವರ ಒಡೆಯನೂ ಯೆಹೂದದ ಅರಸನೂ ಆದ ರೆಹಬ್ಬಾಮನ ಕಡೆಗೆ ತಿರುಗಬಹುದು; ಅವರು ನನ್ನನ್ನು ಕೊಂದು ಅವನ ಬಳಿಗೆ ಹೋಗಬಹುದು,” ಎಂದುಕೊಂಡನು.


ಇಸ್ರಯೇಲರ ಅರಸ ಬಾಷನು ಯೆಹೂದ್ಯರಿಗೆ ವಿರುದ್ಧ ಯುದ್ಧಮಾಡಿ ಯಾರೂ ಯೆಹೂದ್ಯರ ಅರಸ ಆಸನ ಬಳಿಗೆ ಹೋಗಿ ಬರುವುದಕ್ಕಾಗದಂತೆ ‘ರಾಮ್’ ಎಂಬ ಕೋಟೆಯನ್ನು ಕಟ್ಟಿಸಿದನು.


ಅವನು ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗ ಯಾರೊಬ್ಬಾಮನ ದುರ್ಮಾರ್ಗವನ್ನು ಕೈಬಿಡದೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.


ಒಂದು ಮಾರ್ಗ ಒಬ್ಬನಿಗೆ ನೇರವೆಂದು ತೋರಬಹುದು; ಕೊನೆಗೆ ಅದು ಮರಣಕ್ಕೊಯ್ಯುವ ಹಾದಿಯಾಗಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು