Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 12:28 - ಕನ್ನಡ ಸತ್ಯವೇದವು C.L. Bible (BSI)

28 ಬಹಳವಾಗಿ ಆಲೋಚಿಸಿ, ಕಡೆಗೆ ಬಂಗಾರದ ಎರಡು ಹೋರಿಕರುಗಳ ಮೂರ್ತಿಗಳನ್ನು ಮಾಡಿಸಿ, ಇಸ್ರಯೇಲರಿಗೆ, “ನೀವು ಜಾತ್ರೆಗಾಗಿ ಜೆರುಸಲೇಮಿಗೆ ಹೋದದ್ದು ಇನ್ನು ಸಾಕು. ಇಗೋ, ನಿಮ್ಮನ್ನು ಈಜಿಪ್ಟಿನಿಂದ ಕರೆದುತಂದ ದೇವರುಗಳು ಇಲ್ಲಿರುತ್ತವೆ,” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವನು ಬಹಳವಾಗಿ ಆಲೋಚಿಸಿ, ಕಡೆಯಲ್ಲಿ ಬಂಗಾರದ ಎರಡು ಬಸವನ ಮೂರ್ತಿಗಳನ್ನು ಮಾಡಿಸಿ ಇಸ್ರಾಯೇಲರಿಗೆ, “ನೀವು ಜಾತ್ರೆಗಾಗಿ ಯೆರೂಸಲೇಮಿಗೆ ಹೋದದ್ದು ಸಾಕಾಯಿತು, ಇಗೋ, ನಿಮ್ಮನ್ನು ಐಗುಪ್ತದಿಂದ ಕರೆತಂದ ದೇವರುಗಳು ಇಲ್ಲಿರುತ್ತವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಬಹಳವಾಗಿ ಆಲೋಚಿಸಿ ಕಡೆಯಲ್ಲಿ ಬಂಗಾರದ ಎರಡು ಬಸವ ಮೂರ್ತಿಗಳನ್ನು ಮಾಡಿಸಿ ಇಸ್ರಾಯೇಲ್ಯರಿಗೆ - ನೀವು ಜಾತ್ರೆಗಾಗಿ ಯೆರೂಸಲೇವಿುಗೆ ಹೋದದ್ದು ಸಾಕಾಯಿತು; ಇಗೋ, ನಿಮ್ಮನ್ನು ಐಗುಪ್ತದಿಂದ ಕರತಂದ ದೇವರುಗಳು ಇಲ್ಲಿರುತ್ತವೆ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಬಳಿಕ ರಾಜನು ಈಗ ತಾನೇನು ಮಾಡಬೇಕೆಂದು ತನ್ನ ಸಲಹೆಗಾರರನ್ನು ಕೇಳಿದನು. ಅವರು ತಮ್ಮ ಸಲಹೆಯನ್ನು ಅವನಿಗೆ ನೀಡಿದರು. ಯಾರೊಬ್ಬಾಮನು ಎರಡು ಬಂಗಾರದ ಕರುಗಳನ್ನು ಮಾಡಿಸಿ ಜನರಿಗೆ, “ನೀವು ಆರಾಧಿಸಲು ಜೆರುಸಲೇಮಿಗೆ ಹೋಗಲೇಬಾರದು. ಇಸ್ರೇಲರೇ, ನಿಮ್ಮನ್ನು ಈಜಿಪ್ಟಿನಿಂದ ಹೊರತಂದ ದೇವರುಗಳು ಇಲ್ಲಿವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅರಸನು ತನ್ನ ಸಲಹೆಗಾರರನ್ನು ಕೇಳಿ, ಎರಡು ಬಂಗಾರದ ಕರುಗಳನ್ನು ಮಾಡಿಸಿ ಜನರಿಗೆ, “ಯೆರೂಸಲೇಮಿನವರೆಗೂ ಜಾತ್ರೆಗೆ ಹೋಗುವುದು ನಿಮಗೆ ಕಷ್ಟವಾಗಿದೆ. ಇಸ್ರಾಯೇಲರೇ, ಇಗೋ ಈಜಿಪ್ಟಿನಿಂದ ನಿಮ್ಮನ್ನು ಬರಮಾಡಿದ ನಿಮ್ಮ ದೇವರುಗಳು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 12:28
34 ತಿಳಿವುಗಳ ಹೋಲಿಕೆ  

ತಮ್ಮ ದೇವರಾದ ಸರ್ವೇಶ್ವರನ ಆಜ್ಞೆಗಳನ್ನೆಲ್ಲಾ ಮೀರಿ, ಎರಡು ಎರಕದ ಹೋರಿಕರುಗಳ ಮೂರ್ತಿಗಳನ್ನು ಮಾಡಿಕೊಂಡರು; ಅಶೇರ ವಿಗ್ರಹಸ್ಥಂಭಗಳನ್ನು ನಿಲ್ಲಿಸಿಕೊಂಡರು; ಆಕಾಶಸೈನ್ಯ ಹಾಗು ಬಾಳ್ ದೇವತೆಗಳನ್ನು ಪೂಜಿಸಿದರು;


ಆದರೂ ಅವನು ಇಸ್ರಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗ ಯಾರೊಬ್ಬಾಮನ ಮಾರ್ಗವನ್ನು ಕೈಬಿಡದೆ, ಬೇತೇಲ್, ದಾನ್ ಎಂಬ ಊರುಗಳಲ್ಲಿದ್ದ ಚಿನ್ನದ ಹೋರಿಕರುಗಳನ್ನು ಪೂಜಿಸುತ್ತಿದ್ದನು.


ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಇಷ್ಟು ಬೇಗನೆ ತೊರೆದುಬಿಟ್ಟು ತಮಗೇ ಲೋಹದ ಹೋರಿಕರುವನ್ನು ಮಾಡಿಸಿಕೊಂಡು, ಅದಕ್ಕೆ ಅಡ್ಡಬಿದ್ದು, ಬಲಿಗಳನ್ನರ್ಪಿಸಿ, ‘ಇಸ್ರಯೇಲರೇ ನೋಡಿ, ನಿಮ್ಮನ್ನು ಈಜಿಪ್ಟಿನಿಂದ ಕರೆದುತಂದ ದೇವರು’ ಎಂದು ಹೇಳಿಕೊಳ್ಳುತ್ತಿದ್ದಾರೆ.


ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು, ಹೋರಿಕರುವಿನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯಿಸಿದನು. ಆಗ ಜನರು, “ಇಸ್ರಯೇಲರೇ ನೋಡಿ, ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರು ಇದೇ” ಎಂದು ಹೇಳಿದರು.


ತಾವೇ ಏರ್ಪಡಿಸಿದ್ದ ಪೂಜಾಸ್ಥಳಗಳಿಗಾಗಿ ಹಾಗೂ ಅಜದೇವತೆ, ಹೋರಿಕರುಗಳ ಮೂರ್ತಿಪೂಜೆಗಾಗಿ ಬೇರೆ ಪೂಜಾರಿಗಳನ್ನು ನೇಮಿಸಿಕೊಂಡಿದ್ದರು. ಆದುದರಿಂದ ಅವರು ಗೋಮಾಳಗಳಿದ್ದ ತಮ್ಮ ಸೊತ್ತುಗಳನ್ನು ಬಿಟ್ಟು ಜುದೇಯನಾಡಿಗೂ ಜೆರುಸಲೇಮಿಗೂ ಬಂದರು.


ತಾವೇ ದುರಭ್ಯಾಸಗಳಿಗೆ ಗುಲಾಮರಾಗಿದ್ದರೂ ತಾವು ವಶಪಡಿಸಿಕೊಂಡವರಿಗೆ ಸ್ವಾತಂತ್ರ್ಯವನ್ನು ತರುವ ಮಾತುಕೊಡುತ್ತಾರೆ. ಒಬ್ಬನು ಯಾವುದಕ್ಕೆ ಸೋಲುತ್ತಾನೋ ಅದಕ್ಕೆ ಅವನು ಗುಲಾಮನಾಗುತ್ತಾನೆ.


ಇವರು ದಿವ್ಯದರ್ಶಿಗಳನ್ನು ನೋಡಿ : “ನಿಮಗೆ ದರ್ಶನವಾಗದಿರಲಿ,” ಎನ್ನುತ್ತಾರೆ. ಪ್ರವಾದಿಗಳಿಗೆ : “ನಯವಾದುದ್ದನ್ನು ನಮಗೆ ನುಡಿಯಿರಿ. ಮಾಯವಾದವುಗಳನ್ನೇ ಪ್ರವಾದನೆ ಮಾಡಿರಿ.


ಸರ್ವೇಶ್ವರ ಸ್ವಾಮಿಯ ನುಡಿಯಿದು : “ದ್ರೋಹಿಗಳಾದ ಈ ಪೀಳಿಗೆಗೆ ಧಿಕ್ಕಾರ ! ಇವರು ನನ್ನನ್ನು ಕೇಳದೆ ತಮ್ಮದೇ ಆದ ಯೋಜನೆಯನ್ನು ಸಾಧಿಸುತ್ತಾರೆ. ನನ್ನಾತ್ಮಪ್ರೇರಣೆಯಿಲ್ಲದೆ ತಂತ್ರೋಪಾಯಗಳನ್ನು ಹೂಡುತ್ತಾರೆ. ಪಾಪದ ಮೇಲೆ ಪಾಪವನ್ನು ಸೇರಿಸಿಕೊಳ್ಳುತ್ತಾರೆ.


ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಿನ ನೀರಿನಲ್ಲಾಗಲಿ, ಇರುವ ಯಾವುದರ ರೂಪವನ್ನು ಅಥವಾ ವಿಗ್ರಹವನ್ನು ಮಾಡಿಕೊಳ್ಳಬೇಡ.


ಯುದ್ಧವೇನಾದರು ಸಂಭವಿಸಿದರೆ ಅವರು ನಮ್ಮ ಶತ್ರುಗಳೊಂದಿಗೆ ಕೂಡಿಕೊಂಡು ನಮಗೆ ವಿರೋಧವಾಗಿ ಕಾದಾಡಿ ನಾಡನ್ನು ಬಿಟ್ಟು ಪಲಾಯನ ಗೈಯಬಹುದು. ಆದ್ದರಿಂದ ಅವರು ವೃದ್ಧಿಯಾಗದಂತೆ ನಾವು ಉಪಾಯ ಹೂಡಬೇಕು,” ಎಂದು ಎಚ್ಚರಿಸಿದನು.


ಇಸ್ರಯೇಲರು ಅಂಕೆಮೀರಿ ಇಷ್ಟಬಂದಂತೆ ನಡೆದುಕೊಳ್ಳಲು ಆರೋನನು ಬಿಟ್ಟುಬಿಟ್ಟಿದ್ದನು. ಈ ಕಾರಣ ಅವರು ವಿರೋಧಿಗಳ ಅಪಹಾಸ್ಯಕ್ಕೆ ಗುರಿಯಾಗಿದ್ದರು.


ನೀನು ನಿನ್ನ ಎಲ್ಲಾ ಪೂರ್ವಾಧಿಕಾರಿಗಳಿಗಿಂತಲೂ ದುಷ್ಟನಾದೆ; ನನ್ನನ್ನು ತಿರಸ್ಕರಿಸಿ ಅನ್ಯದೇವತೆಗಳನ್ನೂ ಎರಕದ ವಿಗ್ರಹಗಳನ್ನೂ ಪೂಜಿಸಿ ನನಗೆ ಕೋಪವನ್ನೆಬ್ಬಿಸಿದೆ.


ಇವನು ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ತನ್ನ ತಂದೆಯ ಮಾರ್ಗದಲ್ಲಿ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.


ಅವನು ಯಾರೊಬ್ಬಾಮನಂತೆ ತಾನು ಪಾಪಮಾಡಿದ್ದಲ್ಲದೆ ಇಸ್ರಯೇಲರ ಪಾಪಕ್ಕೆ ಕಾರಣವಾಗಿದ್ದನು. ಹೀಗೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದುದರಿಂದ ಈ ದುರ್ಗತಿ ಸಂಭವಿಸಿತು.


ಲೇವಿಯರು ಸರ್ವೇಶ್ವರನಿಗೆ ಯಾಜಕ ಸೇವೆಮಾಡದಂತೆ ಯಾರೊಬ್ಬಾಮನು ಮತ್ತು ಅವನ ಮಕ್ಕಳು ಅವರನ್ನು ಬಹಿಷ್ಕರಿಸಿ ಇದ್ದರು.


ಈಗ ನೀವು ದೊಡ್ಡ ಗುಂಪಾಗಿ ಇರುವುದರಿಂದ ಹಾಗು ಯಾರೊಬ್ಬಾಮನು ನಿಮಗೆ ದೇವರುಗಳೆಂದು ಮಾಡಿಕೊಟ್ಟ ಬಂಗಾರದ ಹೋರಿಕರುಗಳ ಮೂರ್ತಿಗಳು ನಿಮ್ಮಲ್ಲಿರುವುದರಿಂದ, ದಾವೀದನ ಸಂತಾನದವರ ಕೈಯಲ್ಲಿರುವ ಸರ್ವೇಶ್ವರನ ರಾಜ್ಯಕ್ಕೆ ವಿರುದ್ಧ ದಂಗೆಯೆದ್ದು ಗೆಲ್ಲಬಹುದೆಂದು ನೆನಸುತ್ತೀರೋ?


ಇಸ್ರಯೇಲರಿಗೆ ಬಹುಕಾಲದವರೆಗೆ ನಿಜವಾದ ದೇವರು, ಬೋಧಿಸುವ ಯಾಜಕರು ಹಾಗೂ ಧರ್ಮಶಾಸ್ತ್ರ ಇರಲಿಲ್ಲ.


ಇವನು ಇಸ್ರಯೇಲರಂತೆ ನಡೆಯದೆ, ತನ್ನ ಪಿತೃವಿನ ದೇವರಲ್ಲಿ ಭಕ್ತಿಯಿಟ್ಟು ಅವರ ಆಜ್ಞೆಗಳನ್ನು ಅನುಸರಿಸಿದನು.


ಅಹಾಬನ ಮಗಳನ್ನು ಇವನು ಮದುವೆಮಾಡಿಕೊಂಡದ್ದರಿಂದ ಅಹಾಬನ ಕುಟುಂಬದವರಾದ ಇಸ್ರಯೇಲ್ ಅರಸರ ಹೆಜ್ಜೆಯಲ್ಲೇ ನಡೆದು ಸರ್ವೇಶ್ವರನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.


ಅವಳು ಈಜಿಪ್ಟಿನಲ್ಲಿ ಇದ್ದಂದಿನಿಂದಲೂ ತನ್ನ ಸೂಳೆತನವನ್ನು ಬಿಡಲಿಲ್ಲ; ಬಾಲ್ಯದಲ್ಲಿಯೇ ಅಲ್ಲಿಯವರು ಅವಳೊಂದಿಗೆ ಮಲಗಿ, ಅವಳ ಎಳೆಯ ತೊಟ್ಟುಗಳನ್ನು ನಸುಕಿ, ಅವಳ ಸಂಗಡ ಸೂಳೆಗಾರಿಕೆಯನ್ನು ಹೆಚ್ಚೆಚ್ಚಾಗಿ ಮಾಡಿದರು.


ರಾಜ ನೆಬೂಕದ್ನೆಚ್ಚರನು 27 ಮೀಟರ್ ಎತ್ತರದ 3 ಮೀಟರ್ ಅಗಲದ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ ಬಾಬಿಲೋನ್ ಸಂಸ್ಥಾನದ ‘ದೂರಾ’ ಎಂಬ ಬಯಲಿನಲ್ಲಿ ನಿಲ್ಲಿಸಿದನು.


ಇಸ್ರಯೇಲಿನ ಪಾಪಕ್ಕೆ ಆಸ್ಪದ ಆಗಿದ್ದ ಆವೆನಿನ ಪೂಜಾಸ್ಥಾನಗಳು ನಾಶವಾಗುವುವು. ಪಾಳುಬಿದ್ದ ಬಲಿಪೀಠಗಳ ಮೇಲೆ ಮುಳ್ಳುಕಳ್ಳಿಗಳು ಹುಟ್ಟಿಕೊಳ್ಳುವುವು. ಅಲ್ಲಿನ ಜನರು: ‘ಪರ್ವತವೇ, ನಮ್ಮನ್ನು ತುಳಿದುಬಿಡಿ; ಗುಡ್ಡಗಳೇ ನಮ್ಮನ್ನು ನುಂಗಿಬಿಡಿ’ ಎಂದು ಕೂಗಿಕೊಳ್ಳುವರು.”


ಬೇತೇಲಿಗೆ ಹೋಗಬೇಡಿ, ಗಿಲ್ಗಾಲಿಗೆ ಸೇರಬೇಡಿ. ಬೆರ್ಷೆಬಾಗೆ ಯಾತ್ರೆ ಹೋಗಬೇಡಿ. ಗಿಲ್ಗಾಲ್ ಗಡೀಪಾರಾಗುವುದು. ಬೇತೇಲ್ ಬಯಲಾಗುವುದು.”


ದಾನೇ, ನಿನ್ನ ದೇವರ ಜೀವದಾಣೆ’ ಎಂದೂ, ‘ಬೇರ್ಷೆಬಾ ಯಾತ್ರೆಯ ಜೀವದಾಣೆ’ ಎಂದೂ ಸಮಾ‍ರ್ಯದ ವಿಗ್ರಹಗಳ ಮೇಲೆ ಪ್ರಮಾಣ ಮಾಡುವವರು ಮತ್ತೆ ಏಳದಂತೆ ಬಿದ್ದುಹೋಗುವರು.”


ದಾವೀದನು ತನ್ನ ಮನಸ್ಸಿನಲ್ಲೇ, “ನಾನು ಇಲ್ಲಿದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಮಡಿಯಲೇ ಬೇಕು. ಆದುದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವುದೇ ಉತ್ತಮ. ಆಮೇಲೆ ಸೌಲನು ಇಸ್ರಯೇಲ್ ಪ್ರಾಂತ್ಯಗಳಲ್ಲಿ ನನ್ನನ್ನು ಹುಡುಕುವುದನ್ನು ಬಿಟ್ಟುಬಿಡುವನು. ನಾನು ಅವನ ಕೈಯಿಂದ ತಪ್ಪಿಸಿಕೊಂಡು ಸುರಕ್ಷಿತನಾಗಿರುವೆನು,” ಎಂದುಕೊಂಡನು.


ತಮ್ಮ ನಾಡಿನಿಂದ ಸರ್ವೇಶ್ವರ ಹೊರಡಿಸಿಬಿಟ್ಟಿದ್ದ ಜನಾಂಗಗಳ ಮತ್ತು ಇಸ್ರಯೇಲ್ ರಾಜರ ದುರಾಚಾರಗಳನ್ನು ಅವರು ಅನುಸರಿಸಿದರು.


ತಾನು ಮಾಡಿಸಿದ್ದ ವಿಗ್ರಹಸ್ತಂಭವನ್ನು ದೇವಾಲಯದಲ್ಲಿಡಿಸಿದನು; ಸರ್ವೇಶ್ವರ ಆ ಆಲಯದ ವಿಷಯದಲ್ಲಿ ದಾವೀದನಿಗೂ ಅವನ ಮಗ ಸೊಲೊಮೋನನಿಗೂ, “ಇಸ್ರಯೇಲರು, ತಮಗೆ ಮೋಶೆಯ ಮುಖಾಂತರ ಕೊಡಲಾದ, ನನ್ನ ಎಲ್ಲ ಧರ್ಮಶಾಸ್ತ್ರವಿಧಿನ್ಯಾಯಗಳನ್ನು ಅನುಸರಿಸಿ ನಡೆಯುವುದಾದರೆ, ನನ್ನ ನಾಮ ಮಹತ್ತು ಈ ದೇವಾಲಯದಲ್ಲಿ, ಇಸ್ರಯೇಲರ ಎಲ್ಲ ಊರುಗಳಲ್ಲಿ ಹಾಗು ನನಗೆ ಪ್ರಿಯವಾದ ಜೆರುಸಲೇಮಿನಲ್ಲಿ ಸದಾಕಾಲ ಇರುವುದು;


ಒಂದು ಮಾರ್ಗ ಒಬ್ಬನಿಗೆ ನೇರವೆಂದು ತೋರಬಹುದು; ಕೊನೆಗೆ ಅದು ಮರಣಕ್ಕೊಯ್ಯುವ ಹಾದಿಯಾಗಬಹುದು.


ನಿನ್ನ ನೆರೆಯವರೂ ಅತಿಕಾಮಿಗಳೂ ಆದ ಈಜಿಪ್ಟರೊಂದಿಗೆ ಸಹ ನೀನು ಕಲೆತು ಹೆಚ್ಚಾಗಿ ಹಾದರಮಾಡಿ ನನ್ನನ್ನು ಕೆರಳಿಸಿರುವೆ.


ಸಕಾಲದಲ್ಲಿ ನಾನು ಅವರನ್ನು ದಂಡಿಸುವೆನು; ಅವರ ಇಮ್ಮಡಿ ಅಪರಾಧಕ್ಕೆ ತಕ್ಕ ಶಾಸ್ತಿ ಆಗುವುದು; ಆಗ ಇತರ ರಾಷ್ಟ್ರಗಳು ಅವರಿಗೆ ವಿರುದ್ಧವಾಗಿ ಒಂದುಗೂಡುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು