Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 12:32 - ಕನ್ನಡ ಸತ್ಯವೇದವು C.L. Bible (BSI)

32 ಅವನು ಎಂಟನೆಯ ತಿಂಗಳ ಹದಿನೈದನೆಯ ದಿವಸ, ನಾಡಿನ ಜಾತ್ರೆಗೆ ಸಮನಾದ ಜಾತ್ರೆ ಬೇತೇಲಿನಲ್ಲಿ ನಡೆಯಬೇಕೆಂದು ಅಪ್ಪಣೆ ಮಾಡಿದನು. ತಾನೂ ಅಲ್ಲಿಗೆ ಹೋಗಿ ಅಲ್ಲಿ ನಿಲ್ಲಿಸಿದ್ದ ಹೋರಿಕರುಗಳ ಮೂರ್ತಿಗಳಿಗೆ, ಪೀಠದ ಮೇಲೆ ಬಲಿ ಅರ್ಪಿಸಿದನು. ತಾನು ಏರ್ಪಡಿಸಿದ ಪೂಜಾಸ್ಥಳಗಳ ಯಾಜಕರನ್ನು ಬೇತೇಲಿನ ದೇವಸ್ಥಾನದ ಸೇವೆಗೆ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅವನು ಎಂಟನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ, “ಬೇತೇಲಿನಲ್ಲಿ ಯೆಹೂದ ದೇಶದ ಜಾತ್ರೆಗೆ ಸರಿಯಾದ ಜಾತ್ರೆಯು ನಡೆಯಬೇಕು” ಎಂದು ಅಪ್ಪಣೆ ಮಾಡಿ, ತಾನು ಅಲ್ಲಿಗೆ ಹೋಗಿ ಅಲ್ಲಿ ನಿಲ್ಲಿಸಿದ ಬಸವನ ಮೂರ್ತಿಗಳಿಗೋಸ್ಕರ ಯಜ್ಞವೇದಿಯ ಮೇಲೆ ಯಜ್ಞ ಮಾಡಿದನು. ತಾನು ಏರ್ಪಡಿಸಿದ ಪೂಜಾಸ್ಥಳಗಳ ಯಾಜಕರನ್ನು ಬೇತೇಲಿನ ದೇವಸ್ಥಾನದ ಸೇವೆಗೆ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅವನು ಎಂಟನೆಯ ತಿಂಗಳ ಹದಿನೈದನೆಯ ದಿವಸ ಬೇತೇಲಿನಲ್ಲಿ ಯೆಹೂದದೇಶದ ಜಾತ್ರೆಗೆ ಸರಿಯಾದ ಜಾತ್ರೆಯು ನಡೆಯಬೇಕೆಂದು ಅಪ್ಪಣೆಮಾಡಿ ತಾನೂ ಅಲ್ಲಿಗೆ ಹೋಗಿ ಅಲ್ಲಿ ನಿಲ್ಲಿಸಿದ ಬಸವನ ಮೂರ್ತಿಗಳಿಗೋಸ್ಕರ ವೇದಿಯ ಮೇಲೆ ಯಜ್ಞಮಾಡಿದನು. ತಾನು ಏರ್ಪಡಿಸಿದ ಪೂಜಾಸ್ಥಳಗಳ ಯಾಜಕರನ್ನು ಬೇತೇಲಿನ ದೇವಸ್ಥಾನದ ಸೇವೆಗೆ ನೇವಿುಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ರಾಜನಾದ ಯಾರೊಬ್ಬಾಮನು ಹೊಸಹಬ್ಬದ ದಿನವನ್ನು ಆರಂಭಿಸಿದನು. ಈ ಹಬ್ಬವು ಯೆಹೂದ್ಯರ ಪಸ್ಕಹಬ್ಬದಂತಿತ್ತು. ಆದರೆ ಈ ಹಬ್ಬವು ಎಂಟನೆಯ ತಿಂಗಳ ಹದಿನೈದನೆಯ ದಿವಸವಾಗಿತ್ತು. ಆ ಸಂದರ್ಭದಲ್ಲಿ ರಾಜನು ಬೇತೇಲ್ ನಗರದಲ್ಲಿ ಯಜ್ಞವೇದಿಕೆಯ ಮೇಲೆ ಯಜ್ಞಗಳನ್ನು ಅರ್ಪಿಸಿದನು. ಅವನು ತಾನೇ ನಿರ್ಮಿಸಿದ ಕರುಗಳಿಗೆ ಯಜ್ಞಗಳನ್ನು ಅರ್ಪಿಸಿದನು. ರಾಜನಾದ ಯಾರೊಬ್ಬಾಮನು ತಾನು ನಿರ್ಮಿಸಿದ ಎತ್ತರದ ಸ್ಥಳಗಳಲ್ಲಿ ಸೇವೆಮಾಡಲು ಯಾಜಕರನ್ನು ಬೇತೇಲ್‌ನಲ್ಲಿಯೇ ಆರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಯಾರೊಬ್ಬಾಮನು ಎಂಟನೆಯ ತಿಂಗಳ ಹದಿನೈದನೆಯ ದಿವಸದಲ್ಲಿ ಯೆಹೂದದಲ್ಲಿರುವ ಹಬ್ಬದ ಪ್ರಕಾರ ಹಬ್ಬವನ್ನು ನೇಮಿಸಿ, ಪೀಠದ ಮೇಲೆ ಬಲಿಗಳನ್ನು ಅರ್ಪಿಸಿದನು. ಈ ಪ್ರಕಾರ ಅವನು ಬೇತೇಲಿನಲ್ಲಿ ಮಾಡಿ, ಅವನು ರೂಪಿಸಿದ ಕರುಗಳ ವಿಗ್ರಹಗಳಿಗೆ ಬಲಿಗಳನ್ನು ಅರ್ಪಿಸಲು ಬೇತೇಲಿನಲ್ಲಿ ತಾನು ನೇಮಿಸಿದ ಉನ್ನತ ಸ್ಥಳಗಳ ಯಾಜಕರನ್ನೇ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 12:32
11 ತಿಳಿವುಗಳ ಹೋಲಿಕೆ  

ಅರಸ ಸೊಲೊಮೋನನು ಹಾಗು ಅಲ್ಲಿ ಕೂಡಿಬಂದಿದ್ದ ಎಲ್ಲ ಇಸ್ರಯೇಲರೂ ಮಂಜೂಷದ ಮುಂದೇ ಅಸಂಖ್ಯವಾದ ಕುರಿದನಗಳನ್ನು ಬಲಿದಾನಮಾಡಿದರು.


ಅಂತೆಯೇ ಆ ಇಸ್ರಯೇಲರೆಲ್ಲರು ಏಳನೆಯ ತಿಂಗಳಾದ ಅಶ್ವಯುಜ ಮಾಸದಲ್ಲಿ ಜಾತ್ರೆಯಾಗಿ ಅರಸ ಸೊಲೊಮೋನನ ಬಳಿಗೆ ಕೂಡಿಬಂದರು.


ನನ್ನ ಹೊಸ್ತಲನಿಲವುಗಳ ಪಕ್ಕದಲ್ಲಿ ತಮ್ಮ ಹೊಸ್ತಲುನಿಲವುಗಳನ್ನು ಹಾಕಿಕೊಂಡು, ನನ್ನ ಮನೆಗೂ ತಮ್ಮ ಮನೆಗೂ ಒಂದೇ ಗೋಡೆಯಾಗುವಂತೆ ಮಾಡಿಕೊಳ್ಳುವುದರಿಂದ ಇನ್ನು ನನ್ನ ಪವಿತ್ರನಾಮವನ್ನು ಅಶುದ್ಧಗೊಳಿಸರು. ಹೌದು, ಹಿಂದೆ ತಾವು ನಡೆಸಿದ ದುರಾಚಾರಗಳಿಂದ ನನ್ನ ಪವಿತ್ರನಾಮವನ್ನು ಹೊಲೆಗೆಡಿಸಿದರು; ಆದಕಾರಣ ನಾನು ಕೋಪಗೊಂಡು ಅವರನ್ನು ನಾಶಮಾಡಿದೆ.


ಇಷ್ಟಾದರೂ ಯಾರೊಬ್ಬಾಮನು ತನ್ನ ದುರ್ಮಾರ್ಗವನ್ನು ಬಿಡದೆ ಪದೇ ಪದೇ ಜನಸಾಮಾನ್ಯರನ್ನು ಉನ್ನತಸ್ಥಾನಗಳಿಗೆ ನೇಮಿಸಿದನು; ಮನಸ್ಸಿಗೆ ಬಂದವರನ್ನು ಪೂಜಾಸ್ಥಳಗಳ ಯಾಜಕರನ್ನಾಗಿ ಪ್ರತಿಷ್ಠಿಸಿದನು.


ಆರೋನನು ಇದನ್ನು ನೋಡಿ ಆ ಹೋರಿಕರುವಿನ ಮುಂದೆ ಒಂದು ಬಲಿಪೀಠವನ್ನು ಕಟ್ಟಿಸಿ, “ನಾಳೆ ಸರ್ವೇಶ್ವರ ಸ್ವಾಮಿಯ ಗೌರವಾರ್ಥ ಹಬ್ಬವನ್ನು ಆಚರಿಸಬೇಕು,” ಎಂದು ಪ್ರಕಟಿಸಿದನು.


ಈ ಮೀಕನು ‘ಏಫೋದ’ನ್ನೂ ವಿಗ್ರಹಗಳನ್ನೂ ಮಾಡಿಸಿ ಅವುಗಳನ್ನು ತಾನು ಕಟ್ಟಿಸಿದ ದೇವಸ್ಥಾನದಲ್ಲಿಟ್ಟು ತನ್ನ ಕುಮಾರರಲ್ಲೊಬ್ಬನನ್ನು ಅರ್ಚಕ ಸೇವೆಗೆ ಪ್ರತಿಷ್ಠಿಸಿದನು.


ಜುದೇಯ ನಾಡಿನವನಾದ ಒಬ್ಬ ದೈವಭಕ್ತನು ಸರ್ವೇಶ್ವರನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪಾರತಿ ಎತ್ತಲು ಪೀಠದ ಹತ್ತಿರ ನಿಂತುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು