1 ಅರಸುಗಳು 12:9 - ಕನ್ನಡ ಸತ್ಯವೇದವು C.L. Bible (BSI)9 ನನ್ನ ತಂದೆ ಹೇರಿದ ನೊಗವನ್ನು ಹಗುರ ಮಾಡಬೇಕೆಂದು ಬೇಡಿಕೊಳ್ಳುವ ಈ ಜನರಿಗೆ ಯಾವ ಉತ್ತರವನ್ನು ಕೊಡಬೇಕು? ಈ ವಿಷಯದಲ್ಲಿ ನಿಮ್ಮ ಆಲೋಚನೆ ಏನು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 “ನನ್ನ ತಂದೆಯು ಹೇರಿದ ನೊಗವನ್ನು ಹಗುರಮಾಡಬೇಕೆಂದು ಬೇಡಿಕೊಳ್ಳುವ ಈ ಜನರಿಗೆ ಯಾವ ಉತ್ತರವನ್ನು ಕೊಡಬೇಕು, ಈ ವಿಷಯದಲ್ಲಿ ನಿಮ್ಮ ಆಲೋಚನೆ ಏನು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನನ್ನ ತಂದೆಯು ಹೇರಿದ ನೊಗವನ್ನು ಹಗುರ ಮಾಡಬೇಕೆಂದು ಬೇಡಿಕೊಳ್ಳುವ ಈ ಜನರಿಗೆ ಯಾವ ಉತ್ತರವನ್ನು ಕೊಡತಕ್ಕದ್ದು? ಈ ವಿಷಯದಲ್ಲಿ ನಿಮ್ಮ ಆಲೋಚನೆ ಏನು ಎಂದು ಕೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 “ಈ ಜನರು, ‘ನಿನ್ನ ತಂದೆ ಕೊಟ್ಟ ಕೆಲಸಕ್ಕಿಂತಲೂ ಸುಲಭವಾದ ಕೆಲಸವನ್ನು ನಮಗೆ ಕೊಡು’ ಎಂದು ಕೇಳುತ್ತಿದ್ದಾರೆ. ಈ ಜನರಿಗೆ ನಾನು ಉತ್ತರವನ್ನು ಹೇಳಲೇಬೇಕು. ಈ ವಿಷಯದಲ್ಲಿ ನಿಮ್ಮ ಆಲೋಚನೆಯೇನು? ನಾನು ಅವರಿಗೆ ಏನು ಹೇಳಬೇಕು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವನು ಅವರಿಗೆ, “ನಿನ್ನ ತಂದೆಯು ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಈ ಜನರಿಗೆ ಉತ್ತರ ಕೊಡಲು ನಿಮ್ಮ ಆಲೋಚನೆ ಏನು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿ |