Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 13:11 - ಕನ್ನಡ ಸತ್ಯವೇದವು C.L. Bible (BSI)

11 ಬೇತೇಲಿನಲ್ಲಿ ಒಬ್ಬ ಮುದುಕ ಪ್ರವಾದಿ ವಾಸವಾಗಿದ್ದನು. ಅವನ ಮಕ್ಕಳು ಬಂದು ಆ ದೈವಭಕ್ತನು ಆ ದಿನ ಬೇತೇಲಿನಲ್ಲಿ ಮಾಡಿದ್ದನ್ನೂ ಅವನು ಅರಸನಿಗೆ ಹೇಳಿದ್ದನ್ನೂ ತಂದೆಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಬೇತೇಲಿನಲ್ಲಿ ಒಬ್ಬ ವೃದ್ಧ ಪ್ರವಾದಿಯು ವಾಸವಾಗಿದ್ದನು. ಅವನ ಮಕ್ಕಳು ಬಂದು ದೇವರ ಮನುಷ್ಯನು ಆ ದಿನ ಬೇತೇಲಿನಲ್ಲಿ ಮಾಡಿದ್ದನ್ನೂ ಮತ್ತು ಅವನು ಅರಸನಿಗೆ ಹೇಳಿದ್ದನ್ನೂ ತಮ್ಮ ತಂದೆಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಬೇತೇಲಿನಲ್ಲಿ ಒಬ್ಬ ಮುದುಕನಾದ ಪ್ರವಾದಿಯು ವಾಸವಾಗಿದ್ದನು. ಅವನ ಮಕ್ಕಳು ಬಂದು ದೇವರ ಮನುಷ್ಯನು ಆ ದಿವಸ ಬೇತೇಲಿನಲ್ಲಿ ಮಾಡಿದ್ದನ್ನೂ ಅವನು ಅರಸನಿಗೆ ಅಂದದ್ದನ್ನೂ ತಂದೆಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಬೇತೇಲಿನಲ್ಲಿ ಒಬ್ಬ ವಯಸ್ಸಾದ ಪ್ರವಾದಿಯು ನೆಲೆಸಿದ್ದನು. ಬೇತೇಲಿನಲ್ಲಿ ದೇವಮನುಷ್ಯನು ಮಾಡಿದ್ದನ್ನು ಅವನ ಮಕ್ಕಳು ಬಂದು ಅವನಿಗೆ ಹೇಳಿದರು. ದೇವಮನುಷ್ಯನು ರಾಜನಾದ ಯಾರೊಬ್ಬಾಮನಿಗೆ ಹೇಳಿದುದ್ದನ್ನು ಅವರು ತಮ್ಮ ತಂದೆಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಬೇತೇಲಿನಲ್ಲಿ ಒಬ್ಬ ವೃದ್ಧ ಪ್ರವಾದಿಯು ವಾಸವಾಗಿದ್ದನು. ಅವನ ಮಕ್ಕಳು ಬಂದು ಆ ದಿನದಲ್ಲಿ ಬೇತೇಲಿನಲ್ಲಿ ದೇವರ ಮನುಷ್ಯನು ಮಾಡಿದ ಸಮಸ್ತ ಕ್ರಿಯೆಗಳನ್ನು ಮತ್ತು ಅರಸನಿಗೆ ಹೇಳಿದ ಮಾತುಗಳನ್ನು ತಮ್ಮ ತಂದೆಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 13:11
13 ತಿಳಿವುಗಳ ಹೋಲಿಕೆ  

ಆಗ ಅವನು, “ಬಿಡಿ, ಆ ಪುರುಷನ ಎಲುಬುಗಳನ್ನು ಯಾರೂ ಮುಟ್ಟಬಾರದು,” ಎಂದು ಹೇಳಿದನು. ಆದುದರಿಂದ ಅವರು ಅವನ ಮತ್ತು ಸಮಾರಿಯ ನಾಡಿನ ಪ್ರವಾದಿಯ ಎಲುಬುಗಳನ್ನು ಮುಟ್ಟಲಿಲ್ಲ.


ಬಿಳಾಮನು ಅನೀತಿಯಿಂದ ಹಣಗಳಿಸಿದ ಲಾಭಕೋರ; ತನ್ನ ಅಕ್ರಮಕ್ಕೆ ತಕ್ಕ ದಂಡನೆಯನ್ನು ಅನುಭವಿಸಿದವನು. ಮೂಕ ಹೇಸರಗತ್ತೆಯೊಂದು ಮಾನವನಂತೆ ಮಾತಾಡಿ ಈ ಪ್ರವಾದಿಯ ಮೂರ್ಖತನಕ್ಕೆ ತಡೆಹಾಕಿತು.


ತನ್ನ ಕುಟುಂಬವನ್ನೇ ಜವಾಬ್ದಾರಿಯುತವಾಗಿ ನಡೆಸಲು ತಿಳಿಯದವನು ದೇವರ ಸಭೆಯನ್ನು ಹೇಗೆ ತಾನೇ ಪರಿಶೀಲಿಸಿಯಾನು?


ತೀರ್ಪಿನ ದಿನದಂದು, ‘ಸ್ವಾಮೀ, ಸ್ವಾಮೀ, ನಿಮ್ಮ ಹೆಸರಿನಲ್ಲಿ ನಾವು ಪ್ರವಾದನೆ ಮಾಡಲಿಲ್ಲವೇ? ನಿಮ್ಮ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೆ? ನಿಮ್ಮ ಹೆಸರಿನಲ್ಲಿ ಹಲವಾರು ಮಹತ್ಕಾರ್ಯಗಳನ್ನು ಮಾಡಲಿಲ್ಲವೇ?’ ಎಂದು ಅನೇಕರು ನನಗೆ ಹೇಳುವರು.


‘ಇಸ್ರಯೇಲಿನ ಪ್ರವಾದಿಗಳೇ, ಅಶಾಂತಿಯಿದ್ದರೂ ಶಾಂತಿಯ ದರ್ಶನಗಳನ್ನು ನೀವು ಕಂಡು ಜೆರುಸಲೇಮಿನ ಬಗ್ಗೆ ಪ್ರವಾದಿಸಿದ್ದೀರಲ್ಲವೆ? ಗೋಡೆ ಇಲ್ಲವಾಯಿತು, ಅದಕ್ಕೆ ಸುಣ್ಣ ಬಳಿದವರೂ ಇಲ್ಲವಾದರು; ಇದು ಸರ್ವೇಶ್ವರನಾದ ದೇವರ ನುಡಿ.’


“ನರಪುತ್ರನೇ, ಪ್ರವಾದನೆ ಮಾಡಿ ಸ್ವಕಲ್ಪಿತವಾದುದನ್ನೇ ಸಾರುತ್ತಲಿರುವ ಇಸ್ರಯೇಲಿನ ಪ್ರವಾದಿಗಳಿಗೆ ಖಂಡನೆಯಾಗಿ ನೀನು ಪ್ರವಾದಿಸುತ್ತ ಹೀಗೆ ಹೇಳು: “ಸರ್ವೇಶ್ವರನ ವಾಕ್ಯವನ್ನು ಕೇಳಿರಿ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ:


ಹಾದುಹೋಗುವವರು ಆ ಶವವು ದಾರಿಯಲ್ಲಿ ಬಿದ್ದು ಇರುವುದನ್ನೂ ಸಿಂಹವು ಅದರ ಬಳಿಯಲ್ಲೆ ನಿಂತಿರುವುದನ್ನೂ ಕಂಡು ಮುದುಕ ಪ್ರವಾದಿಯ ಊರಿಗೆ ಬಂದು ಅದನ್ನು ತಿಳಿಸಿದರು.


ಅವನು ಪರವಶನಾಗಿ ಮಾತಾಡುವುದನ್ನು ಪರಿಚಿತರು ಕಂಡು ತಮ್ಮತಮ್ಮೊಳಗೆ, “ಕೀಷನ ಮಗನಿಗೆ ಏನಾಯಿತು? ಸೌಲನೂ ಪ್ರವಾದಿಗಳಲ್ಲಿ ಒಬ್ಬನೆ?” ಎಂದು ಮಾತಾಡಿಕೊಳ್ಳುತ್ತಿದ್ದರು.


ಕುಲಗಳ ಅನುಸಾರ ಡೇರೆಗಳನ್ನು ಹಾಕಿಕೊಂಡಿದ್ದ ಇಸ್ರಯೇಲರು ಅವನಿಗೆ ಕಾಣಿಸಿದರು.


ಅನಂತರ ಅವನು ಆ ದಾರಿಯನ್ನು ಬಿಟ್ಟು ಇನ್ನೊಂದು ದಾರಿಯನ್ನು ಹಿಡಿದು ಹೊರಟನು.


“ಅವನು ಯಾವ ದಾರಿಯಿಂದ ಹೋದ?” ಎಂದು ತಂದೆ ಅವರನ್ನು ಕೇಳಲು, ಅವರು ಜುದೇಯ ನಾಡಿನ ಆ ದೈವಭಕ್ತ ಹೋದ ದಾರಿಯನ್ನು ತೋರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು