Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 13:18 - ಕನ್ನಡ ಸತ್ಯವೇದವು C.L. Bible (BSI)

18 ಆಗ ಆ ಮುದುಕನು, “ನಾನೂ ನಿನ್ನಂತೆ ಪ್ರವಾದಿಯಾಗಿದ್ದೇನೆ; ಒಬ್ಬ ದೇವದೂತನು ನನಗೆ ಕಾಣಿಸಿಕೊಂಡು ನಿನ್ನನ್ನು ಕರೆದುಕೊಂಡು ಬರಬೇಕೆಂದು ಸರ್ವೆಶ್ವರನ ಹೆಸರಿನಲ್ಲಿ ಆಜ್ಞಾಪಿಸಿದ್ದಾನೆ,” ಎಂದು ಹೇಳಿದನು. ಆದರೆ ಈ ಮಾತು ಸುಳ್ಳಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆಗ ಆ ಮುದುಕನು, “ನಾನು ನಿನ್ನಂತೆ ಪ್ರವಾದಿಯಾಗಿದ್ದೇನೆ. ಒಬ್ಬ ದೇವದೂತನು ನನಗೆ ಕಾಣಿಸಿಕೊಂಡು, ನಿನ್ನನ್ನು ಕರೆದುಕೊಂಡು ಬರಬೇಕೆಂದೂ ನಿನಗೆ ಅನ್ನಪಾನಗಳನ್ನು ಕೊಡಬೇಕೆಂದೂ ಯೆಹೋವನ ಹೆಸರಿನಲ್ಲಿ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಆದರೆ ದೇವರ ಮನುಷ್ಯನಿಗೆ ಪ್ರವಾದಿ ಹೇಳಿದ ಮಾತು ಸುಳ್ಳಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆಗ ಮುದುಕನು - ನಾನೂ ನಿನ್ನಂತೆ ಪ್ರವಾದಿಯಾಗಿದ್ದೇನೆ; ಒಬ್ಬ ದೇವದೂತನು ನನಗೆ ಕಾಣಿಸಿಕೊಂಡು ನಿನ್ನನ್ನು ಕರಕೊಂಡು ಬರಬೇಕೆಂದೂ ನಿನಗೆ ಅನ್ನಪಾನಗಳನ್ನು ಕೊಡಬೇಕೆಂದೂ ಯೆಹೋವನ ಹೆಸರಿನಲ್ಲಿ ಆಜ್ಞಾಪಿಸಿದ್ದಾನೆ ಎಂದು ಹೇಳಿದನು; ಆದರೆ ಈ ಮಾತು ಸುಳ್ಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆಗ ಆ ಪ್ರವಾದಿಯು, “ಆದರೆ ನಾನೂ ನಿನ್ನಂತೆಯೇ ಒಬ್ಬ ಪ್ರವಾದಿ” ಎಂದು ಹೇಳಿದನು. ನಂತರ ವಯಸ್ಸಾದ ಪ್ರವಾದಿಯು ಅವನಿಗೆ “ಯೆಹೋವನಿಂದ ಒಬ್ಬ ದೇವದೂತನು ನನ್ನ ಬಳಿಗೆ ಬಂದಿದ್ದನು. ಆ ದೂತನು ನಿನ್ನನ್ನು ನನ್ನ ಮನೆಗೆ ಕರೆತರಲು ನಿನ್ನೊಂದಿಗೆ ಅನ್ನಪಾನಗಳನ್ನು ತೆಗೆದುಕೊಳ್ಳಲು ನನಗೆ ತಿಳಿಸಿದನು” ಎಂದು ಸುಳ್ಳು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ವೃದ್ಧನು, “ನಾನು ನಿನ್ನ ಹಾಗೆಯೇ ಪ್ರವಾದಿಯಾಗಿದ್ದೇನೆ. ಒಬ್ಬ ದೇವದೂತನ ಮುಖಾಂತರ ನನಗೆ ಯೆಹೋವ ದೇವರ ವಾಕ್ಯವು ಉಂಟಾಗಿ, ನಿನ್ನನ್ನು ಹಿಂದಕ್ಕೆ ಕರಕೊಂಡು ಬರಬೇಕೆಂದೂ ನಿನಗೆ ಅನ್ನಪಾನಗಳನ್ನು ಕೊಡಬೇಕೆಂದೂ ಆಜ್ಞೆಯಾಗಿದೆ ಎಂದು ಹೇಳಿದನು.” ಆದರೆ ವೃದ್ಧನು ಅವನಿಗೆ ಸುಳ್ಳು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 13:18
36 ತಿಳಿವುಗಳ ಹೋಲಿಕೆ  

ಪ್ರಿಯರೇ, “ನಾವು ಪವಿತ್ರಾತ್ಮ ಪ್ರೇರಿತರು” ಎಂದು ಹೇಳುವ ಎಲ್ಲರನ್ನೂ ನಂಬಬಾರದು. ಆ ಪ್ರೇರಣೆ ದೇವರಿಂದ ಬಂದಿದೆಯೇ ಎಂದು ಪರೀಕ್ಷಿಸಿ ನೋಡಬೇಕು. ಏಕೆಂದರೆ, ಎಷ್ಟೋ ಮಂದಿ ಕಪಟ ಪ್ರವಾದಿಗಳು ಎಲ್ಲೆಡೆಯಲ್ಲೂ ಹರಡಿದ್ದಾರೆ.


“ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆಯಿಂದಿರಿ. ಹೊರಗೆ ಕುರಿಯ ವೇಷದಲ್ಲಿ ಬಂದರೂ ಒಳಗೆ ಅವರು ಕಿತ್ತುತಿನ್ನುವ ತೋಳಗಳು.


ಇಸ್ರಯೇಲ್ ಜನರಲ್ಲೇ ಕಪಟ ಪ್ರವಾದಿಗಳು ಕಾಣಿಸಿಕೊಂಡರು. ಅಂತೆಯೇ, ನಿಮ್ಮಲ್ಲೂ ಸುಳ್ಳುಬೋಧಕರು ಕಾಣಿಸಿಕೊಳ್ಳುವರು. ಹಾನಿಕರವಾದ ದುರ್ಬೋಧನೆಗಳನ್ನು ಗೋಪ್ಯವಾಗಿ ಪ್ರಸರಿಸುವರು. ಒತ್ತೆಯಿಟ್ಟು ತಮ್ಮನ್ನು ರಕ್ಷಿಸಿದ ಒಡೆಯನನ್ನೇ ಅರಿಯೆವೆಂದು ನಿರಾಕರಿಸುವರು. ಹೀಗೆ ತಮ್ಮ ವಿನಾಶವನ್ನು ತಾವೇ ಬೇಗನೆ ಬರಮಾಡಿಕೊಳ್ಳುವರು.


ಆಗ ಸರ್ವೇಶ್ವರನ ದೂತನು, “ಆ ವ್ಯಕ್ತಿಗಳ ಸಂಗಡ ಹೋಗು. ಆದರೆ ನಾನು ನಿನಗೆ ಹೇಳುವುದನ್ನೇ ಹೊರತು ಬೇರೆ ಏನನ್ನೂ ಹೇಳಬೇಡ,” ಎಂದು ತಿಳಿಸಿದನು. ಬಿಳಾಮನು ಬಾಲಾಕನ ಮುಂದಾಳುಗಳ ಜೊತೆ ಹೊರಟನು.


ಆದರೂ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿ ಮೋಸಹೋದಂತೆ ನೀವೂ ಕೂಡ ಕ್ರಿಸ್ತಯೇಸುವಿನ ವಿಷಯದಲ್ಲಿ ಇರಬೇಕಾದ ಶುದ್ಧ ಪಾತಿವ್ರತ್ಯವನ್ನು ಕಳೆದುಕೊಂಡು ಕೆಟ್ಟುಹೋದೀರಿ ಎಂಬ ಭಯ ನನಗುಂಟು.


ಅಂಥವರು ಮಾಡುವುದು ತಮ್ಮ ಉದರಸೇವೆಯನ್ನೇ ಹೊರತು ಪ್ರಭುವಿನ ಸೇವೆಯನ್ನಲ್ಲ, ತಮ್ಮ ನಯನಾಜೂಕಿನ ನುಡಿಗಳಿಂದಲೂ ಮುಖಸ್ತುತಿಯ ಮಾತುಗಳಿಂದಲೂ ನಿಷ್ಕಪಟ ಮನಸ್ಕರನ್ನು ಮರುಳುಗೊಳಿಸುತ್ತಾರೆ.


“ನಾನು ಎದೆಗುಂದಿಸದ ಶಿಷ್ಯನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನನ್ನು ಪ್ರೋತ್ಸಾಹಿಸಿದ್ದೀರಿ.


ಸುಳ್ಳು ಕನಸುಗಳನ್ನು ಪ್ರಕಟಿಸುತ್ತಾ ಹಾಗು ವಿವರಿಸುತ್ತಾ ತಮ್ಮ ಅಬದ್ಧ ಮಾತುಗಳಿಂದಲೂ ಕಚ್ಚಾಟದಿಂದಲೂ ನನ್ನ ಜನರಿಗೆ ದಾರಿ ತಪ್ಪಿಸುವ ಪ್ರವಾದಿಗಳನ್ನು ನಾನು ಖಂಡಿಸುತ್ತೇನೆ. ನಾನು ಅವರನ್ನು ಕಳುಹಿಸಲಿಲ್ಲ, ಅಥವಾ ಅವರಿಗೆ ಆಜ್ಞಾಪಿಸಲಿಲ್ಲ. ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಇಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”


ನನ್ನನ್ನು ಅಸಡ್ಡೆಮಾಡುವವರಿಗೆ, ‘ನಿಮಗೆ ಶುಭವಾಗುವುದು ಎಂದು ಸರ್ವೇಶ್ವರನೇ ನುಡಿದಿದ್ದಾರೆ’ ಎಂದು ಹೇಳುತ್ತಲೇ ಇದ್ದಾರೆ. ಹಟಮಾರಿ ಹೃದಯಿಗಳೆಲ್ಲರಿಗೆ, ‘ನಿಮಗೆ ಯಾವ ಕೇಡೂ ಸಂಭವಿಸದು’ ಎಂದು ನುಡಿಯುತ್ತಾರೆ.”


ಪ್ರವಾದಿಗಳೇ ಸುಳ್ಳು ಪ್ರವಾದನೆಮಾಡುತ್ತಾರೆ. ಯಾಜಕರು ಅಂಥವರಿಂದ ಅಧಿಕಾರ ಪಡೆದು ದೊರೆತನಮಾಡುತ್ತಾರೆ. ನನ್ನ ಜನರಿಗೆ ಚೆನ್ನಾಗಿ ಹಿಡಿಸುವುದು ಇಂಥದ್ದೇ. ಆದರೆ ಅಂತ್ಯ ಬಂದಾಗ ಏನು ಮಾಡುವರು?”


ಆ ಜನರು ಸರ್ವೇಶ್ವರ ಸ್ವಾಮಿಯನ್ನು ಅಲ್ಲಗಳೆದಿದ್ದಾರೆ. “ಆತ ಏನು ಮಾಡಿಯಾನು? ನಮಗೆ ಕೇಡು ಬರುವುದೂ ಇಲ್ಲ, ಖಡ್ಗವಾಗಲಿ, ಕ್ಷಾಮವಾಗಲಿ ನಮ್ಮ ಕಣ್ಣಿಗೆ ಬೀಳುವುದೂ ಇಲ್ಲ.


ಮೃಗವನ್ನು ಸೆರೆಹಿಡಿಯಲಾಯಿತು. ಅದರ ಜೊತೆಯಲ್ಲಿ ಕಪಟ ಪ್ರವಾದಿಯೂ ಸೆರೆಸಿಕ್ಕಿಬಿದ್ದನು. ಮೃಗದ ಮುಂದೆ ಪವಾಡ ಕಾರ್ಯಗಳನ್ನೆಸಗಿ ಅದರ ಮುದ್ರೆ ಒತ್ತಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಪೂಜೆ ಮಾಡಿದವರನ್ನು ಮರುಳುಗೊಳಿಸಿದವನು ಇವನೇ. ಇವರಿಬ್ಬರನ್ನೂ ಜೀವಸಹಿತ ಹಿಡಿದು ಗಂಧಕದಿಂದ ಉರಿಯುವ ಅಗ್ನಿಸರೋವರಕ್ಕೆ ಎಸೆಯಲಾಯಿತು.


ಏಕೆಂದರೆ ಕಪಟ ಉದ್ಧಾರಕರೂ ವಂಚಕ ಪ್ರವಾದಿಗಳೂ ತಲೆಯೆತ್ತಿಕೊಳ್ಳುವರು. ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನೂ ಮೋಸಗೊಳಿಸುವಂತಹ ಮಹತ್ಕಾರ್ಯಗಳನ್ನೂ ಪವಾಡಗಳನ್ನೂ ಮಾಡಿತೋರಿಸುವರು.


ಜೆರುಸಲೇಮಿನ ಪ್ರವಾದಿಗಳಲ್ಲೂ ಭೀಕರವಾದುವನ್ನು ನೋಡಿರುವೆನು ವ್ಯಭಿಚಾರ ಮಾಡುತ್ತಾರೆ, ಸುಳ್ಳು ಹಾದಿಯನ್ನು ಹಿಡಿಯುತ್ತಾರೆ ದುರುಳರು ದುರಾಚಾರವನ್ನು ಬಿಡದಂತೆ ದೃಢಪಡಿಸುತ್ತಾರೆ. ನನ್ನ ದೃಷ್ಟಿಗೆ ಅವರೆಲ್ಲರು ಸೊದೋಮಿನಂತೆ, ಆ ಪುರನಿವಾಸಿಗಳು ನನ್ನ ಕಣ್ಣಿಗೆ ಗೊಮೋರದಂತೆ.”


ಒಂದಾನೊಂದು ದಿನ ಸರ್ವೇಶ್ವರನ ದೂತ ಆಕೆಗೆ ಪ್ರತ್ಯಕ್ಷನಾಗಿ, “ಇಗೋ, ಬಂಜೆಯಾಗಿ ಮಕ್ಕಳಿಲ್ಲದಿರುವ ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ.


ನಾವು ನಿಮಗೆ ಬೋಧಿಸಿದ ಶುಭಸಂದೇಶಕ್ಕೆ ವಿರುದ್ಧವಾದ ಸಂದೇಶವನ್ನು ನಾವೇ ಆಗಲಿ, ಸ್ವರ್ಗದಿಂದ ಇಳಿದ ದೇವದೂತನೇ ಆಗಲಿ, ಯಾರೇ ಆಗಲಿ ಬೋಧಿಸಿದರೆ ಅವನು ಶಾಪಗ್ರಸ್ತನಾಗಲಿ!


ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೆ ಬಲಿಬಿದ್ದು, ದುರಾತ್ಮಗಳ ದುರುಪದೇಶಗಳಿಗೆ ಕಿವಿಗೊಟ್ಟು ವಿಶ್ವಾಸಭ್ರಷ್ಟರಾಗುವರೆಂದು ಪವಿತ್ರಾತ್ಮ ಸ್ಪಷ್ಟವಾಗಿ ತಿಳಿಸಿದ್ದಾರೆ.


ಕಪಟಿಗಳು ದುರ್ಬೋಧನೆಗಳನ್ನು ಪ್ರಸರಿಸುತ್ತಾರೆ. ಬರೆಹಾಕಿದ ಚರ್ಮದಂತೆ ಅವರ ಮನಸ್ಸಾಕ್ಷಿಯು ಸುಟ್ಟುಹೋಗಿದೆ.


ದೈವಭಕ್ತನು ಹಿಂದಿರುಗಿ ಅವನ ಮನೆಗೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡನು.


ಪ್ರವಾದಿಮಂಡಲಿಯವರಲ್ಲಿ ಒಬ್ಬನು, ಸರ್ವೇಶ್ವರನಿಂದ ಪ್ರೇರಿತನಾಗಿ ತನ್ನ ಜೊತೆಗಾರನೊಬ್ಬನಿಗೆ, “ನನ್ನನ್ನು ಹೊಡೆ,” ಎಂದು ಹೇಳಿದನು. ಅದಕ್ಕೆ ಅವನು ಒಪ್ಪಲಿಲ್ಲ.


ಸತ್ಯವಾದಿಯ ಮಾತು ಶಾಶ್ವತ; ಮಿಥ್ಯವಾದಿಯ ಮಾತು ಕ್ಷಣಿಕ.


ಮಿಥ್ಯವಾದಿಗಳು ಸರ್ವೇಶ್ವರನಿಗೆ ಹೇಸು; ಸತ್ಯವಾದಿಗಳು ಆತನಿಗೆ ಲೇಸು.


ಕಳ್ಳಸಾಕ್ಷಿ ದಂಡನೆಯನ್ನು ಪಡೆಯದಿರನು; ಸುಳ್ಳಾಡುವವನು ಅದನ್ನು ತಪ್ಪಿಸಿಕೊಳ್ಳಲಾರನು.


ಈ ನಾಡನ್ನು ಹಾಳುಮಾಡುವುದಕ್ಕೆ ಸರ್ವೇಶ್ವರ ಸ್ವಾಮಿಯ ಒಪ್ಪಿಗೆಯಿಲ್ಲದೆ ಇಲ್ಲಿಗೆ ನಾನು ಬಂದೆನೆಂದು ನೆನಸುತ್ತೀಯೋ? ‘ಇಲ್ಲಿಗೆ ಬಂದು ಇದನ್ನು ಹಾಳುಮಾಡಿಬಿಡು’ ಎಂದು ಆ ಸರ್ವೇಶ್ವರ ಸ್ವಾಮಿಯೇ ನಿನಗೆ ಆಜ್ಞೆಮಾಡಿದ್ದಾರೆ,’ ಎಂಬ ಈ ಮಾತುಗಳು ಅರಸನ ಮಾತುಗಳೆಂದು ಹೋಗಿ ತಿಳಿಸಿರಿ” ಎಂದನು.


‘ಸೆರೆಯಲ್ಲಿ ಇರುವ ಎಲ್ಲರಿಗೆ ಹೀಗೆಂದು ಹೇಳಿಕಳಿಸು - ನೆಹೆಲಾಮ್ಯನಾದ ಶೆಮಾಯನ ವಿಷಯದಲ್ಲಿ ಸರ್ವೇಶ್ವರ ಇಂತೆನ್ನುತ್ತಾರೆ: ನಾನು ಕಳಿಸದೆ ಇದ್ದರೂ ಶೆಮಾಯನು ನಿಮಗೆ ಪ್ರವಾದನೆಮಾಡಿ ಸುಳ್ಳನ್ನು ನಂಬುವಂತೆ ಮಾಡಿದ್ದಾನೆ.


ಈ ಕಾರಣ, ಇಗೋ, ನಾನು ಆ ನೆಹೆಲಾಮ್ಯನಾದ ಶೆಮಾಯನನ್ನು ಮತ್ತು ಅವನ ಸಂತತಿಯವರನ್ನು ದಂಡಿಸುವೆನು. ಈ ಜನರ ಮಧ್ಯೆ ಅವನಿಗೆ ಯಾವ ಸಂತಾನವೂ ಇರದು. ಜನರಿಗೆ ‘ನಾನು ಮಾಡಬೇಕೆಂದಿರುವ ಒಳಿತನ್ನು ಅವನು ನೋಡದೆಹೋಗುವನು. ಏಕೆಂದರೆ ಅವನು ನನಗೆ ವಿರುದ್ಧ ಪ್ರಚೋದನೆಯ ಮಾತನ್ನು ಆಡಿದ್ದಾನೆ. ಇದು ಸರ್ವೇಶ್ವರನಾದ ನನ್ನ ನುಡಿ’.”


ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನೀವು ವ್ಯರ್ಥವಾದುದನ್ನು ನುಡಿದು ಸುಳ್ಳಾದುದನ್ನು ಕಂಡದ್ದರಿಂದ ಇಗೋ, ನಿಮಗೆ ವಿರುದ್ಧವಾಗಿದ್ದೇನೆ, ಇದು ಸರ್ವೇಶ್ವರನಾದ ದೇವರೆಂಬ ನನ್ನ ನುಡಿ.


ಸರ್ವೇಶ್ವರನಾದ ದೇವರು ಆ ಮಹಿಳೆಯನ್ನು, “ಇದೇನು ನೀನು ಮಾಡಿದ್ದು?” ಎಂದು ಕೇಳಲು ಆಕೆ, “ಸರ್ಪವು ನನ್ನನ್ನು ವಂಚಿಸಿ ತಿನ್ನುವಂತೆ ಮಾಡಿತು,” ಎಂದು ಉತ್ತರಕೊಟ್ಟಳು.


ಆದರೂ ಮರಳಿ, “ನೀನು ನಿಶ್ಚಯವಾಗಿ ನನ್ನ ಮಗ ಏಸಾವನೋ” ಎಂದು ಕೇಳಿದನು. ಯಕೋಬನು “ಹೌದು,” ಎಂದು ಉತ್ತರಕೊಟ್ಟನು.


‘ಹೇಗೆ ಪ್ರೇರಿಸುವೆ?’ ಎಂದು ಸರ್ವೇಶ್ವರ ಕೇಳಿದರು. ಅದು, ‘ನಾನು ಅಸತ್ಯವಾಡುವ ಆತ್ಮವಾಗಿ ಅವನ ಎಲ್ಲ ಪ್ರವಾದಿಗಳಲ್ಲಿ ಸೇರುವೆನು,’ ಎಂದು ಉತ್ತರಕೊಟ್ಟಿತು. ಆಗ ಸರ್ವೇಶ್ವರ, ‘ಹೋಗಿ ಅದರ ಅಂತೆಯೇ ಮಾಡು; ಅವನನ್ನು ಪ್ರೇರಿಸಿ ಸಫಲನಾಗುವೆ,’ ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು